ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ಲಾಲ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾದವ್ ಅವರಿಗೆ ರಾಜ್ಯಪಾಲ ಮಂಗುಭಾಯ್ ಪಟೇಲ್ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭ ಶಾಸಕರಾದ ರಾಜೇಂದ್ರ ಶುಕ್ಲ ಹಾಗೂ ಜಗದೀಶ್ ದೇವ್ಡ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಲೇಖಕ: admin
ಕುಶಾಲನಗರ ಡಿ.13 : ಕೂಡುಮಂಗಳೂರು ಮತ್ತು ವಾಲ್ನೂರು-ತ್ಯಾಗತೂರು ಗ್ರಾ.ಪಂ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಗ್ರಾಮಗಳಿಗೆ ಜಿಲ್ಲಾ ಸಮಾಲೋಚಕರು ಭೇಟಿ ನೀಡಿ, ನದಿ ಪಾತ್ರದ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದರು.
ಮಡಿಕೇರಿ ಡಿ.13 : ಕೆದಕಲ್ ಗ್ರಾಮದ ಶ್ರೀ ಭದ್ರಕಾಳೇಶ್ವರಿ ದೇವಾಲಯದಲ್ಲಿ ಡಿ.18 ರಂದು ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಉತ್ಸವ ನಡೆಯಲಿದೆ. ಶ್ರೀ ಭದ್ರಕಾಳೇಶ್ವರಿ ದೇವಾಲಯದ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಯಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ನವಕಳಶ ಪೂಜೆ, ನಾಗರಕಟ್ಟೆಯಲ್ಲಿ ಷಷ್ಠಿ ಪೂಜೆ, ಮಹಾಬಲಿ ಪೀಠಕ್ಕೆ ಅಭಿಷೇಕ, ಮಹಾಮಂಗಳಾರತಿ ನೆರವೇರಲಿದ್ದು, ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ತಕ್ಕ ಮುಖ್ಯಸ್ಥರು, ಅಧ್ಯಕ್ಷ ಹಾಗೂ ಆಡಳಿತ ಮಂಡಳಿ ಸದಸ್ಯರು ಕೋರಿದ್ದಾರೆ.
ಮಡಿಕೇರಿ ಡಿ.13 : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಡಿ.18 ರಂದು “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವ” ನಡೆಯಲಿದೆ. ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಬೆಳಿಗ್ಗೆ 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 10 ಗಂಟೆಗೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಗಂಟೆಗೆ ಶ್ರೀ ಪೋದಿ ದೇವರ ವೆಳ್ಳಾಟಂ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯ ದೇವರ ಶ್ರೀ ಬೂತ ಬಲಿ, 12.20 ಗಂಟೆಗೆ ಮಹಾಮಂಗಳಾರತಿ ಜರುಗಲಿದ್ದು, ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯ ದೇವಾಲಯ ಸಮಿತಿ, ಉತ್ಸವ ಸಮಿತಿ ಹಾಗೂ ಮಹಿಳಾ ವೇದಿಕೆ ಕೋರಿದೆ.…
ಮಡಿಕೇರಿ ಡಿ.13 : ವಿರಾಜಪೇಟೆ ತಾಲೂಕು ಅಮ್ಮತಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಕಣ್ಣಂಗಾಲ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ “ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ಹಾಗೂ ಒಕ್ಕೂಟ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಂಜನಗೂಡು ಧಾರ್ಮಿಕ ಉಪನ್ಯಾಸಕ ಯೋಗಾನಂದ ಸ್ವಾಮಿ ಮಾತನಾಡಿ ನಮ್ಮ ಸಂಸ್ಕೃತಿ ಹಿರಿಮೆ ಹಾಗೂ ಧರ್ಮದ ಬಗ್ಗೆ ಉಪನ್ಯಾಸ ನೀಡಿದರು. ಲೀಲಾವತಿ ಮಾತನಾಡಿ, ಗ್ರಾಮ ಅಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು ವಿಮಾ ಕಾರ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಹೊಸದಾಗಿ ಜವಾಬ್ದಾರಿ ಪಡೆದುಕೊಂಡ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಕಣ್ಣಂಗಾಲ ಸಾಮೂಹಿಕ ಸತ್ಯನಾರಾಯಣ ಪೂಜೆ ಸಮಿತಿ ಅಧ್ಯಕ್ಷರಾದ ಬಿ.ಎಸ್.ರೇಖಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಣ್ಣಂಗಾಲ ಗ್ರಾ.ಪಂ ಅಧ್ಯಕ್ಷ ಗ್ರೀಷ್ಮ ರಂಜನ್ ಕುಮಾರ್, ಹಚ್ಚಿನಾಡು ಪ್ರಗತಿಪರ ಕೃಷಿಕ…
ಮಡಿಕೇರಿ ಡಿ.12 : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸಲು ಒತ್ತಾಯಿಸಿ ವಜಾಗೊಂಡ ಬೋಧಕೇತರ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದ ಅಳುವಾರ ಸ್ನಾತಕೋತ್ತರ ಕೇಂದ್ರ ಆರಂಭದಿಂದಲೇ ಸೇವೆಯಲ್ಲಿದ್ದ 24 ಮಂದಿ ಸಿಬ್ಬಂದಿಗಳನ್ನು ಸೇವೆಯಿಂದ ಕೈಬಿಡಲಾಗಿದೆ. ಇದರಿಂದಾಗಿ ತಮ್ಮ ಜೀವನ ಅತಂತ್ರವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. 44. ಮಂದಿ ಬೋಧಕೇತರ ಸಿಬ್ಬಂದಿಗಳ ಪೈಕಿ 18 ಮಂದಿಯನ್ನು ಮಾತ್ರ ಸೇವೆಯಲ್ಲಿ ಮುಂದುವರೆಸಿದ್ದು ಕಳೆದ ಹಲವು ವರ್ಷಗಳಿಂದ ಕೇಂದ್ರದ ಅಭಿವೃದ್ಧಿಗೆ ಶ್ರಮಿಸಿದ, ಎಲ್ಲಾ ಅರ್ಹತೆ ಹೊಂದಿರುವ ಸಿಬ್ಬಂದಿಗಳನ್ನು ಕೈಬಿಡಲಾಗಿದೆ. ಅತ್ತ ಮಂಗಳೂರು ವಿಶ್ವವಿದ್ಯಾನಿಲಯ, ಇತ್ತ ಕೊಡಗು ವಿಶ್ವವಿದ್ಯಾಲಯ ನಮ್ಮನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು,ಸೇವಾ ಅನುಭವ, ಮಾನದಂಡಗಳನ್ನು ಪರಿಗಣಿಸದೆ ಇತ್ತೀಚೆಗೆ ನೇಮಕಗೊಂಡ ಸಿಬ್ಬಂದಿಗಳನ್ನು ಸೇವೆಯಲ್ಲಿ ಮುಂದುವರೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರಾದ ಸವಿತಾ ರಾಣಿ, ಕೆ.ಜೆ.ಹರೀಶ್, ಎ.ಆರ್.ಗಣೇಶ್, ಯೋಗೇಶ್…
ಮಡಿಕೇರಿ ಡಿ.12 : ದೇವಟ್ ಪರಂಬುವಿನಲ್ಲಿ ಕೊಡವರ ನರಮೇಧ ನಡೆದು 238 ವರ್ಷಗಳು ತುಂಬಿದ ಹಿನ್ನೆಲೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಹಿರಿಯರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿತು. ಸಮಾಧಿ ಬಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಅವರು 1785 ಡಿ.12 ರಂದು ಷಡ್ಯಂತ್ರದಿಂದ ಸಾವಿರಾರು ಕೊಡವರ ಹತ್ಯೆಯಾಗಿದೆ ಎಂದರು. ಮೈಸೂರು ಸೈನ್ಯವನ್ನು ವಿಶ್ವದ ಅತ್ಯಂತ ಬಲಿಷ್ಠ ಸೇನಾ ಶಕ್ತಿ ಎಂದು ಪರಿಗಣಿಸಲಾಗಿತ್ತು ಮತ್ತು ಯುರೋಪಿಯನ್ ಸೈನ್ಯಕ್ಕಿಂತ ಹೆಚ್ಚು ಶಕ್ತಿಶಾಲಿ ಸೈನ್ಯವಾಗಿತ್ತು. ಅಂತಹ ಪ್ರಬಲ ಸೈನ್ಯವು ಕೊಡವ ಯೋಧ ಜನಾಂಗವನ್ನು ಸೋಲಿಸಲು ಸಾಧ್ಯವಾಗಲಿಲ್ಲ. (“ಮೇಕಿಂಗ್ ಹಿಸ್ಟರಿ ಆಫ್ ಕರ್ನಾಟಕ” ನಲ್ಲಿ ದಾಖಲಿಸಲಾಗಿದೆ) ಕೊಡವ ಬುಡಕಟ್ಟುಗಳು ಅಂತಹ ನುರಿತ ಮತ್ತು ಅತ್ಯುತ್ತಮ ಗೆರಿಲ್ಲಾ ಯೋಧರು. ಆದರೆ ಅವರ ಮಿಲಿಟರಿ ಕೌಶಲ್ಯ ಮತ್ತು ಕುರುಡು ನಿಷ್ಠೆಯನ್ನು ಕೃತಘ್ನ ರಾಜ ಪರಿವಾರವು ವ್ಯರ್ಥಮಾಡಿತು ಮತ್ತು ದುರುಪಯೋಗಪಡಿಸಿಕೊಂಡಿತು. ಕೆಳದಿಯ ಸೈನ್ಯದ…
ಮಡಿಕೇರಿ ಡಿ.12 : ಇತ್ತೀಚಿನ ದಿನಗಳಲ್ಲಿ ಮಾನವೀಯ ಮೌಲ್ಯ ಕಡಿಮೆಯಾಗುತ್ತಿದ್ದು, ಸ್ವಾರ್ಥ ಹೆಚ್ಚಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಪೂರಕವಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್.ಸಿ.ಶಾಮ್ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಸಹ ಇತರರಂತೆ ಬದುಕಬೇಕೆಂಬುದು ಎಲ್ಲರಲ್ಲಿಯೂ ಬರಬೇಕು. ಆದರೆ ನಾನು ಬದುಕಿದರೆ ಸಾಕು, ಇತರರು ಹೇಗಿದ್ದಾರೋ ಹಾಗೆಯೇ ಇರಲಿ ಎಂಬುದು ಹೆಚ್ಚಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಒಳ್ಳೆಯದಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಪ್ರತಿಪಾದಿಸಿದರು. ಮಾನವ ಹಕ್ಕು ಉಲ್ಲಂಘನೆಯು ಸುಸಂಸ್ಕøತರಲ್ಲಿ ಹೆಚ್ಚಾಗುತ್ತಿದೆ. ದೌರ್ಜನ್ಯಗಳು ಹೆಚ್ಚು…
ಮಡಿಕೇರಿ ಡಿ.12 : 18 ವರ್ಷ ಮೇಲ್ಪಟ್ಟ ಯುವಜನರನ್ನು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವಲ್ಲಿ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವಂತಾಗಬೇಕು ಎಂದು ರಾಜ್ಯ ಸ್ವೀಪ್ ಸಮಿತಿ ಅಧಿಕಾರಿ ಪಿ.ಎಸ್.ವಸ್ತ್ರದ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಗೆ ಯುವ ಜನರನ್ನು ಹೆಸರು ಸೇರ್ಪಡೆ ಬಗ್ಗೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು. ಕಾಲೇಜುಗಳಿಗೆ ಭೆಟಿ ನೀಡಿ 18 ವರ್ಷ ಮೇಲ್ಪಟ್ಟ ಯುವ ಜನರನ್ನು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವಲ್ಲಿ ಕ್ರಮವಹಿಸಲಾಗಿದೆ. ಹಾಗೆಯೇ ಮನೆ ಮನೆಗೆ ಭೇಟಿ ನೀಟಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಮುಂದಾಗಬೇಕು ಎಂದು ಸಲಹೆ ಮಾಡಿದರು. ವಲಸಿಗರು, ಆದಿವಾಸಿಗಳು, ಕಾರ್ಮಿಕರು, ವಿಶೇಷಚೇತನರು ಹೀಗೆ ಎಲ್ಲಾ ಯುವ ಮತದಾರರ ಬಗ್ಗೆ ಗಮನಹರಿಸಬೇಕು ಎಂದು ಪಿ.ಎಸ್.ವಸ್ತ್ರದ್ ಅವರು ತಿಳಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಜಿಲ್ಲೆಯ ಎಲ್ಲೆಡೆ 18 ವರ್ಷ ಮೇಲ್ಪಟ್ಟವರನ್ನು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು…
ಮಡಿಕೇರಿ ಡಿ.12 : ಬೆಳಗಾವಿ ಅಧಿವೇಶನದಲ್ಲಿ ಕೊಡಗಿನ ಸಮಸ್ಯೆಗಳ ಬಗ್ಗೆ ಬಿಜೆಪಿ ನಾಯಕಿ ಡಾ.ತೇಜಸ್ವಿನಿ ಗೌಡ ಬೆಳಕು ಚೆಲ್ಲಿದ್ದರು. ಫೀಲ್ಡ್ ಮಾರ್ಷಲ್ ಕೊಡಂದೇರ ಎಂ.ಕಾರ್ಯಪ್ಪ ಅವರಿಗೆ ಭಾರತರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದು, ಕಾವೇರಿ ತುಲಾ ಸಂಕ್ರಮಣದಂದು ಸಾರ್ವತ್ರಿಕ ರಜೆ ಬದಲು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಬೇಕು, ತಿತಿಮತಿ ಆನೆಚೌಕೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸುಮಾರು 8ಕಿ.ಮಿ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದರು. ಡಾ.ತೇಜಸ್ವಿನಿ ಗೌಡ ಅವರು ಜಿಲ್ಲೆಗೆ ಆಗಮಿಸಿದ ಸಂದರ್ಭ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಫೀ ಮಾ ಕೊಡಂದೇರ ಕಾರ್ಯಪ್ಪ ಅವರಿಗೆ ಭಾರತರತ್ನ ನೀಡಬೇಕು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವದಂದು ರಾಜ್ಯಾದ್ಯಂತ ರಜೆ ನೀಡಬೇಕು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮನವಿ ನೀಡಿದ್ದರು. ಇದಕ್ಕೆ ಸ್ಪಂದಿಸಿದ ಡಾ.ತೇಜಸ್ವಿನಿ ಗೌಡ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಗಮನ ಸೆಳೆದರು.






