ಲೇಖಕ: admin

ಮಡಿಕೇರಿ ಡಿ.12 : ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವತಿಯಿಂದ ಕುಶಾಲನಗರ ತಾಲ್ಲೂಕು ಇಲ್ಲಿ ರಾಷ್ಟ್ರೀಯ ಹೆದ್ದಾರಿ-275 ವಿಭಾಗದ ಮೈಸೂರು-ಮಂಗಳೂರು ಇಕನಾಮಿಕಲ್ ಕಾರಿಡಾರ್ ರಸ್ತೆಯನ್ನು 2 ಲೇನ್‍ಗಳಿಂದ 4/6 ಲೇನ್‍ಗಾಗಿ ಅಗಲೀಕರಣ ಮತ್ತು ಉನ್ನತ್ತೀಕರಣದ ಯೋಜನೆಗೆ ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಪರಿಸರ ವಿಮೋಚನಾ ಪತ್ರ ಪಡೆಯುವ ಸಲುವಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಡಿ.13 ರಂದು ಬೆಳಗ್ಗೆ 11 ಗಂಟೆಗೆ ‘ಸಾರ್ವಜನಿಕ ಸಭೆ’ ನಡೆಯಲಿದೆ ಎಂದು ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ರಘುರಾಮ್  ತಿಳಿಸಿದ್ದಾರೆ.  

Read More

ಮಡಿಕೇರಿ ಡಿ.7 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಡಿ.13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.12 :  ಮಂಗಳೂರಿನ ಕುದ್ರೋಳಿ ಯ ಶ್ರೀ ಕೊರಗಪ್ಪ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‍ಶಿಪ್ ನಲ್ಲಿ ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಉತ್ತಮ ಸಾಧನೆ ಮಾಡಿದ್ದಾರೆ. 14 ವರ್ಷದ ಬಾಲಕಿಯರ ವಿಭಾಗದ ಕಟಾ ವಿಭಾಗದಲ್ಲಿ ಹರಿಪ್ರಿಯಾ ದ್ವಿತೀಯ ಹಾಗೂ ಕುಮಿತೆ ವಿಭಾಗದಲ್ಲಿ ದ್ವಿತೀಯ,  14 ವರ್ಷದ ಕಟಾ ವಿಭಾಗದಲ್ಲಿ ಸಾನಿಕ ಪ್ರಥಮ, 13  ವರ್ಷದ ಕಟಾ ಹಾಗೂ ಕುಮಿತೆವಿಭಾಗದಲ್ಲಿ ದಿಗಂತ್ ದ್ವಿತೀಯ,  ವಿಷ್ಣು 11 ವರ್ಷದ  ಕಟಾ ವಿಭಾಗದಲ್ಲಿ  ಪ್ರಥಮ ಹಾಗೂ ಕುಮಿತೆ ವಿಭಾಗದಲ್ಲಿ ದ್ವಿತೀಯ, ಸ್ಥಳೀಯ ಶಾಂತಿ ನಿಕೇತನ ಶಾಲೆಯ ಮನ್ವಿತ್ ಕಥಾ ವಿಭಾಗದಲ್ಲಿ ತೃತೀಯ ಸ್ಥಾನ, ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಹಾಗೂ ಕುಮಿತೆ ವಿ ಭಾಗದಲ್ಲಿ ಅಕ್ಷಯ್  ದ್ವಿತೀಯ,  ಕಟಾ ವಿಭಾಗದಲ್ಲಿ ತೃತೀಯ, ಅಂಕಿತ್ ಕಟಾ ಹಾಗೂ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ತರಬೇತುದಾರ  ಬಿ.ಎಂ.ಮುಖೇಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Read More

ಮಡಿಕೇರಿ ಡಿ.12 : ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಜಾರ್ಖಂಡ್‍ನ ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಸಂಸದ ಧೀರಜ್ ಸಾಹು ಅವರಿಗೆ ಸೇರಿದ್ದು ಎನ್ನಲಾದ ಕೋಟ್ಯಾಂತರ ರೂ. ನಗದು ಪತ್ತೆಯಾಗಿದ್ದು, ಇದು ಭ್ರಷ್ಟಾಚಾರಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ ಐಟಿ ದಾಳಿ ಸಂದರ್ಭ ಅಪಾರ ಪ್ರಮಾಣದ ಹಣ ಸಿಕ್ಕಿದೆ, ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಲೂಟಿ ಮಾಡಿದ ಹಣವನ್ನು ಚುನಾವಣೆಗೆ ಬಳುಸುತ್ತಿದೆ. ದೇಶವನ್ನೇ ಕಾಂಗ್ರೆಸ್ ಪಕ್ಷದವರು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಭ್ರಷ್ಟಾಚಾರವನ್ನು ಬಯಲು ಮಾಡುವ ಕೆಲಸವನ್ನು ಐಟಿ, ಇಡಿಯವರು ಮಾಡುತ್ತಿದ್ದಾರೆ. ಸಂಸದ ಧೀರಜ್ ಸಾಹುಗೆ ಜೈಲು ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ…

Read More

ಮಡಿಕೇರಿ ಡಿ.12 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯನ್ನು ನಡೆಸದೆ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗಧಿ ಪಡಿಸಿದ್ದು, ಇದು ನಿಯಮ ಬಾಹಿರ ಕ್ರಮವೆಂದು ಆರೋಪಿಸಿ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ.ಪಂ ಸದಸ್ಯರುಗಳು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ.ಪಂ ಯ 11 ಸದಸ್ಯರುಗಳ ಸಹಿ ಇರುವ ಮನವಿ ಪತ್ರವನ್ನು ಸದಸ್ಯರುಗಳಾದ ಪಿ.ಕೆ.ಚಂದ್ರು, ಬಿ.ಆರ್.ಶುಭಕರ, ಬಿ.ಆರ್.ಮಹೇಶ್ ಹಾಗೂ ಬಿ.ಆರ್.ಮೃತ್ಯುಂಜಯ ನೀಡಿದರು. 2023 ಸೆ.13 ರಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆ ಆಡಳಿತಾಧಿಕಾರಿಗಳಾದ ತಾಲ್ಲೂಕು ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಪ.ಪಂ ಸಭಾಂಗಣದಲ್ಲಿ ನಡೆದಿತ್ತು. ಈ ಸಭೆಯಲ್ಲಿ ಪಟ್ಟಣದ ವಾಣಿಜ್ಯ ಮಳಿಗೆಗಳ ಹರಾಜಿಗೆ ಸಂಬಂಧಿಸಿದಂತೆ ಸುಧೀರ್ಘ ಚರ್ಚೆ ನಡೆಸಲಾಯಿತು. ಸದ್ರಿ ವ್ಯಾಪಾರಸ್ಥರ ಹಾಗೂ ಪಟ್ಟಣದ ಅಭಿವೃದ್ಧಿಯ ದೃಷ್ಟಿಯಿಂದ ಹಾಲಿ ವ್ಯಾಪಾರ ಮಾಡುತ್ತಿರುವವರನ್ನೇ ಕೆಲವೊಂದು ಷರತ್ತುಗಳನ್ನು ವಿಧಿಸಿ ಮುಂದುವರೆಸುವ ಸರ್ಕಾರಕ್ಕೆ ಪತ್ರ ಬರೆದು ಅಭಿಪ್ರಾಯ ಕೋರುವಂತೆ ತೀರ್ಮಾನಿಸಲಾಗಿತ್ತು. ಈ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚೆ ನಡೆಸುವಂತೆ ನಿರ್ಧಾರ…

Read More

ಮಡಿಕೇರಿ ಡಿ.12 : ‘ಪಿಂಚಣಿ’ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ಕೊಡಗು ಜಿಲ್ಲೆಯಾದ್ಯಂತ ಕೆಲಸ ಸ್ಥಗಿತಗೊಳಿಸಿ ನಗರದ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಪಿ.ಎಸ್.ಕುರಿಯನ್ ಹಾಗೂ ಎನ್‍ಯುಜಿಡಿಎಸ್ (ನ್ಯಾಷನಲ್ ಯೂನಿಯನ್ ಆಫ್ ಗ್ರಾಮೀಣ ಡಾಕ್ ಸೇವಕ್ಸ್) ಸಂಘಟನೆಯ ಅಧ್ಯಕ್ಷ ಪಿ.ಇ.ಸುಶೀಲ ಅವರ ನೇತೃತ್ವದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರಕ್ಕೂ ಹೆಚ್ಚಿನ ಗ್ರಾಮೀಣ ಅಂಚೆ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಘೋಷಣೆಗಳನ್ನು ಕೂಗಿದರು. ಜಂಟಿ ಕ್ರಿಯಾ ಸಮಿತಿಯ ಕಾರ್ಯದರ್ಶಿ ಬಿ.ಎಂ.ಮಂಜುನಾಥ್ ಮಾತನಾಡಿ, ಕಮಲೇಶ್ ಚಂದ್ರ ಅವರ ವರದಿಯಂತೆ, ಗ್ರಾಮೀಣ ಅಂಚೆ ಸೇವಕರಿಗೆ ನಿವೃತ್ತಿಯ ಬಳಿಕ ಪಿಂಚಣಿ ಸೌಲಭ್ಯವನ್ನು ಮತ್ತು ಅಗತ್ಯ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಅನಿರ್ದಿಷ್ಟ ಕಾಲದ ಮುಷ್ಕರಕ್ಕೆ ಮುಂದಾಗುವುದಾಗಿ ಸ್ಪಷ್ಟಪಡಿಸಿದರು. ::: ಕೆಲಸ ಸ್ಥಗಿತ :::…

Read More

ಮಡಿಕೇರಿ ಡಿ.12 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ದಿನವಾದ ಜ.22 ರಂದು ಸೂರ್ಯಾಸ್ತವಾದ ನಂತರ ಪ್ರತಿ ಮನೆಯಲ್ಲಿ ದೀಪ ಬೆಳಗಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿ ದೀಪೋತ್ಸವ ಆಚರಿಸಲು ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಕ್ಷೇತ್ರ ಸತ್ಸಂಗದ ಪ್ರಮುಖ್ ಮಹಾಭಲೇಶ್ವರ ಹೆಗ್ಗಡೆ ಕರೆ ನೀಡಿದ್ದಾರೆ. ನಗರದ ಓಂಕಾರ ಸದನದಲ್ಲಿ ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾ ಘಟಕದ ವತಿಯಿಂದ ನಡೆದ ಅಯೋಧ್ಯೆಯ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಯೋಧ್ಯೆ ನಗರಿಯ ಭವ್ಯ ಶ್ರೀರಾಮ ಮಂದಿರದಲ್ಲಿ ಮುಂದಿನ ವರ್ಷ ಜನವರಿ 22 ರಂದು ಶ್ರೀರಾಮನ ಪ್ರತಿಷ್ಠಾಪನೆಯಾಗಲಿದೆ. ಈ ಹಿನ್ನೆಲೆ ಪ್ರತಿ ಮನೆಗಳಿಗೆ ತಲುಪಿಸಲು ಅಯೋಧ್ಯೆಯಿಂದ ಕರ್ನಾಟಕಕ್ಕೆ ಮಂತ್ರಾಕ್ಷತೆಯನ್ನು ತರಲಾಗಿದೆ. ಹಿಂದೂ ಕಾರ್ಯಕರ್ತರು ಕೊಡಗು ಜಿಲ್ಲೆಯ ಮನೆಮನೆಗಳಿಗೆ ರಾಮನ ಭಾವಚಿತ್ರ ಮತ್ತು ಮಂತ್ರಾಕ್ಷತೆಯನ್ನು ಹಂಚಲಿದ್ದಾರೆ ಎಂದರು. ಧರ್ಮ ಜಾಗರಣಾ ಪ್ರಾಂತ ಸಂಯೋಜಕ ಹರ್ಷವರ್ಧನ್ ಮಾತನಾಡಿ ಕೋಟಿ ಕೋಟಿ ಹಿಂದೂಗಳ ಹಲವು ವರ್ಷಗಳ…

Read More

ಪುತ್ತೂರು ಡಿ.12 : ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರವು ಸೊರಗಿದೆ ಎನ್ನುವ ಮಾತಿದೆ ಇದು ಸಂಪೂರ್ಣ ತಪ್ಪು, ಇತರ ಕ್ಶೇತ್ರಗಳ ವ್ಯಾಪಕ ಬೆಳವಣಿಗೆಯಿಂದ ಹಾಗನಿಸುತ್ತಿದೆ ಎಂದು ಬೆಂಗಳೂರಿನ ಶಂಕರನಾರಾಯಣ ಗ್ರೂಪ್‌ನ ಮುಖ್ಯಸ್ಥ ಪಿ ಆರ್ ಸೆಲ್ವ ಗಣೇಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯ ಪುತ್ತೂರು ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ನಿರ್ಮಾಣ ಕ್ಷೇತ್ರದಲ್ಲಿನ ಇತ್ತೀಚಿನ ಹೊಸತನಗಳು ಹಾಗೂ ಗುಣಮಟ್ಟದ ಮಾನದಂಡಗಳು ಎನ್ನುವ ವಿಷಯದ ಬಗ್ಗೆ 5 ದಿನಗಳ ಕೌಶಲ್ಯ ಉದ್ದೀಪನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲಿಯೂ ಸಲ್ಲುವ ಸಿವಿಲ್ ಇಂಜಿನಿಯರುಗಳ ಸೇವೆ ಮತ್ತು ತ್ಯಾಗ ಮಹತ್ತರವಾದದ್ದು ಎಂದರು. ದೇಶದ ನಿರ್ಮಾಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು ಸಿವಿಲ್ ಇಂಜಿನಿಯರುಗಳಿಗೆ ಇನ್ನೂ ಹೆಚ್ಚಿನ ಬೇಡಿಕೆ ಬರಲಿದೆ ಎಂದರು. ಸಂಪ್ರದಾಯ ಮತ್ತು…

Read More

ಪುತ್ತೂರು ಡಿ.12 : ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರವು ಸೊರಗಿದೆ ಎನ್ನುವ ಮಾತಿದೆ ಇದು ಸಂಪೂರ್ಣ ತಪ್ಪು, ಇತರ ಕ್ಶೇತ್ರಗಳ ವ್ಯಾಪಕ ಬೆಳವಣಿಗೆಯಿಂದ ಹಾಗನಿಸುತ್ತಿದೆ ಎಂದು ಬೆಂಗಳೂರಿನ ಶಂಕರನಾರಾಯಣ ಗ್ರೂಪ್‌ನ ಮುಖ್ಯಸ್ಥ ಪಿ ಆರ್ ಸೆಲ್ವ ಗಣೇಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯ ಪುತ್ತೂರು ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ನಿರ್ಮಾಣ ಕ್ಷೇತ್ರದಲ್ಲಿನ ಇತ್ತೀಚಿನ ಹೊಸತನಗಳು ಹಾಗೂ ಗುಣಮಟ್ಟದ ಮಾನದಂಡಗಳು ಎನ್ನುವ ವಿಷಯದ ಬಗ್ಗೆ 5 ದಿನಗಳ ಕೌಶಲ್ಯ ಉದ್ದೀಪನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲಿಯೂ ಸಲ್ಲುವ ಸಿವಿಲ್ ಇಂಜಿನಿಯರುಗಳ ಸೇವೆ ಮತ್ತು ತ್ಯಾಗ ಮಹತ್ತರವಾದದ್ದು ಎಂದರು. ದೇಶದ ನಿರ್ಮಾಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು ಸಿವಿಲ್ ಇಂಜಿನಿಯರುಗಳಿಗೆ ಇನ್ನೂ ಹೆಚ್ಚಿನ ಬೇಡಿಕೆ ಬರಲಿದೆ ಎಂದರು. ಸಂಪ್ರದಾಯ ಮತ್ತು…

Read More

ಮಡಿಕೇರಿ ಡಿ.12 : ಪಾಲಿಬೆಟ್ಟದಲ್ಲಿ ಕೂರ್ಗ್ ಫೌಂಡೇಶನ್ ಹಾಗೂ ಬಾಲಿವುಡ್ ನಟ ಮಿಲಿಂಡ್ ಸೋಮನ್ ಅವರ ಸಹಯೋಗದಲ್ಲಿ ನಡೆದ 7ನೇ ಆವೃತ್ತಿಯ ಬರಿಗಾಲಿನ ಮ್ಯಾರಥಾನ್‍ನಲ್ಲಿ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯ 10 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮ್ಯಾರಥಾನ್‍ನಲ್ಲಿ ಯುಎಸ್‍ಎ, ನೆದಲ್ರ್ಯಾಂಡ್, ಐರ್ಲೆಂಡ್, ಸಿಂಗಾಪುರ್, ಮಲೇಷ್ಯಾ ರಾಷ್ಟ್ರಗಳು ಹಾಗೂ ಕೇರಳ, ತಮಿಳುನಾಡು, ದೆಹಲಿ, ಮುಂಬೈ, ಕೋಲ್ಕತಾ ರಾಜ್ಯಗಳು ಹಾಗೂ ಜಿಲ್ಲೆಯಿಂದ ಸೇರಿ 200ಕ್ಕೂ ಹೆಚ್ಚು ಮಂದಿ ಹಾಗೂ ಪಾಲ್ಗೊಂಡಿದ್ದರು. ಪಾಲಿಬೆಟ್ಟ, ಹೊಸಳ್ಳಿ, ಅಬ್ಬೂರು, ಚೆನ್ನಂಗಿ, ಚನ್ನಯ್ಯನಕೋಟೆ ಸುತ್ತಮುತ್ತಲ ಗ್ರಾಮಗಳ ರಸ್ತೆಗಳಲ್ಲಿ ಬರಿಗಾಲಿನ ಓಟದಲ್ಲಿ ಪಾಲ್ಗೊಂಡು ಸ್ಪರ್ಧಾಳುಗಳು ಗುರಿ ಮುಟ್ಟಿದರು.

Read More