ಮಡಿಕೇರಿ ನ.4 : ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಪ್ರತೀ ತಿಂಗಳಿಗೆ 500 ಯೂನಿಟ್ ರಕ್ತದ ಅಗತ್ಯವಿದ್ದು, ಹೀಗಾಗಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಜಿಲ್ಲೆಯಲ್ಲಿ ಅಗತ್ಯ ಇರುವವರಿಗೆ ರಕ್ತದ ಕೊರತೆ ಉಂಟಾಗದಂತೆ ಗಮನ ಹರಿಸಬೇಕು ಎಂದು ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಸಿ.ಕರುಂಬಯ್ಯ ಹೇಳಿದ್ದಾರೆ. ಮಡಿಕೇರಿ ಸಕಾ೯ರಿ ಪ್ರಥಮ ದಜೆ೯ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಘ, ಮಡಿಕೇರಿಯ ಭೋದಕ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಕೊಡಗು ಘಟಕಧ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು. ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೆಂಪು ರಕ್ತಕಣಗಳ ಅಗತ್ಯತೆ ಹಿಂದೆಂದಿಗಿಂತ ಹೆಚ್ಚಾಗಿದೆ. ಅಂತೆಯೇ ಪ್ರಸವ ಸಂದಭ೯ದಲ್ಲಿಯೂ ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ರಕ್ತದ ಬೇಡಿಕೆ ಕಂಡುಬರುತ್ತಿದೆ. ಪ್ರಸ್ತುತ ರಕ್ತನಿಧಿ ಕೇಂದ್ರದಲ್ಲಿ 200 ಯೂನಿಟ್ ಗಳಷ್ಟು ರಕ್ತ ಲಭ್ಯವಿದೆಯಾದರೂ ತುತು೯ ಸಂದಭ೯ದಲ್ಲಿ ರೋಗಿಗಳಿಗೆ ನೀಡಲು ರಕ್ತದ ಸಂಗ್ರಹ ಮತ್ತಷ್ಟು ಪ್ರಮಾಣದಲ್ಲಿ…
ಲೇಖಕ: admin
ಪುತ್ತೂರು ನ.4 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು.ಎಸ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು SIT ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ನವೆಂಬರ್ 9 ರಿಂದ 12 ರವರೆಗೆ ಆಂಧ್ರಪ್ರದೇಶ ಕಾಕಿನಾಡದ ಜವಾಹರ್‌ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸುರಂಪಲೆಮ್ ಆದಿತ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ದಕ್ಷಿಣವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರಫುಲ್ ಪ್ರತಿನಿಧಿಸಲಿದ್ದಾರೆ. ಸತತ ಎರಡನೇ ಬಾರಿ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ನ.4 : ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ನ.9 ರಂದು ಕಲಾ ಸ್ಮೃತಿ ವೇದಿಕೆಯಲ್ಲಿ ಸಾಂಸ್ಕೃತಿಕ ಸಂಭ್ರಮ ನಡೆಯಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಕೊಡಗು ವೈದ್ಯಕೀಯ ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳು ಎ.ಎಸ್.ಪೊನ್ನಣ್ಣ ಅವರ ಗೃಹ ಕಛೇರಿಗೆ ತೆರಳಿ ಸಾಂಪ್ರದಾಯಿಕ ಆಹ್ವಾನ ನೀಡಿದರು. ಇದೇ ಸಂದರ್ಭ ವೈದ್ಯಕೀಯ ವಿದ್ಯಾರ್ಥಿ ರಚಿಸಿದ ಪೊನ್ನಣ್ಣ ಅವರ ಚಿತ್ರ ಪಟವನ್ನು ನೀಡಲಾಯಿತು. ಸಂಘದ ಕಾರ್ಯದರ್ಶಿ ಹಾಗೂ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ಮಂಜುನಾಥ್, ವಿದ್ಯಾರ್ಥಿ ಪ್ರತಿನಿಧಿಗಳಾದ ಎನ್.ಕೃಪಾ, ಎಂ.ಜಿ.ಶಶಾಂಕ್ ಹಾಗೂ ಕಲಾವಿದ ಯಶಸ್ಸ್, ಮಹಿಳಾ ಸಂಚಾಲಕಿ ಡಾ.ದಿವ್ಯ ಜ್ಯೋತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಪ್ರಧಾನ ಸಂಚಾಲಕ ತೆನ್ನಿರ ಮೈನಾ ನಿಯೋಗಲ್ಲಿ ಹಾಜರಿದ್ದರು.
ಮಡಿಕೇರಿ ನ.4 : ಗ್ರಾ.ಪಂ ನೌಕರರ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ ಕೊಡಗು ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿ.ಪಂ ಕಚೇರಿ ಎದುರು ಸಮಾವೇಶಗೊಂಡ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಗ್ರಾ.ಪಂ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು, ದಿನ ನಿತ್ಯದ ಬಳಸುವ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ರೂ.31,000 ನಿಗದಿಗೊಳಿಸಬೇಕು, ಎಲ್ಲಾ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಪ್ರತಿ ತಿಂಗಳು ಕನಿಷ್ಠ 6000 ರೂ.ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು, ಈಗಾಗಲೇ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಂಡು ಮುಂದುವರಿಸಬೇಕು, ವಾಟರ್ ಮೆನ್, ಜವಾನ, ಸ್ವೀಪರ್ ಗಳಲ್ಲಿ ಕಂಪ್ಯೂಟರ್ ಜ್ಞಾನ ಹಾಗೂ…
ನಾಪೋಕ್ಲು ನ.4 : ಕ್ರೀಡೆ, ಶಿಕ್ಷಣ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾರ್ಥಕತೆ ಪಡೆಯಬೇಕಾದರೆ ನಿರಂತರ ಪರಿಶ್ರಮ ಪಡಬೇಕು. ಇದರಿಂದ ಯಶಸ್ಸು ಪಡೆಯಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2023-24ರ ಸಾಲಿನ ಸಾಂಸ್ಕೃತಿಕ ಕ್ರೀಡಾ ಮತ್ತು ವಿವಿಧ ಸಮಿತಿಗಳನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಿರ್ವಹಿಸಬೇಕು ಆಗ ಸಾರ್ಥಕತೆ ಸಿಗುತ್ತದೆ. ಭಾವನೆಗಳ ಮೂಲಕ ದೇಶ ಕಟ್ಟಲು ಸಾಧ್ಯವಿಲ್ಲ. ದುಡಿಯುವ ವರ್ಗದಿಂದ ದೇಶ ಪ್ರಗತಿ ಕಾಣಲಿದೆ. ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ರೂಪಿಸುವ ಕೆಲಸವನ್ನು ಮಾಡಬೇಕಿದೆ ಎಂದ ಅವರು ವಿದ್ಯಾರ್ಥಿಗಳು ದೂರ ದೃಷ್ಟಿ ಇರಿಸಿ ಕೆಲಸ ನಿರ್ವಹಿಸಬೇಕು. ಭವಿಷ್ಯದ ಕಡೆ ನಿಗಾವಹಿಸುವಂತಹ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದರು. ಕೊಡಗು ವಿಶ್ವ ವಿದ್ಯಾ ಲಯದ ಕುಲ ಸಚಿವ ಡಾ.ಸೀನಪ್ಪ ಮಾತನಾಡಿ, ಉತ್ತಮ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಬದಲಾವಣೆ ಆಗಬೇಕು. ವಿದ್ಯಾರ್ಥಿಗಳು ಇಷ್ಟಪಟ್ಟು ಓದಿ…
ಮಡಿಕೇರಿ ನ.4 : ಇಸ್ರೇಲ್ ಮತ್ತು ಪ್ಯಾಲೆಸ್ತೀನಿನ ನಡುವಿನ ಅಶಾಂತಿಯ ಶಮನಕ್ಕೆ ವಿಶ್ವಶಾಂತಿಯನ್ನು ಬಯಸುವ ಭಾರತ ಮಧ್ಯ ಪ್ರವೇಶ ಮಾಡಬೇಕು. ಆ ಮೂಲಕ ಕದನ ವಿರಾಮಕ್ಕೆ ಹಾದಿ ಸುಗಮಗೊಳಿಸುವ ಮರ‍್ಗೋಪಾಯಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸುನ್ನಿ ಮಹಲ್ ಒಕ್ಕೂಟದ ಕೊಡಗು ಜಿಲ್ಲಾ ಸಮಿತಿ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಜಿಲ್ಲಾಧ್ಯಕ್ಷ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಸುಂಟಿಕೊಪ್ಪ, ಇಸ್ರೇಲ್ ದಾಳಿಯಿಂದ ಸಾವಿರಾರು ಅಮಾಯಕ ಜೀವಗಳು ಬಲಿಯಾಗುತ್ತಿವೆ, ಅನೇಕರು ಗಾಯಾಳುಗಳಾಗಿ ನರಳುತ್ತಿದ್ದಾರೆ. ಆದ್ದರಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಜೊತೆಯಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ಭಾರತ ರ‍್ಕಾರ ಶಾಂತಿಯನ್ನು ಕಾಪಾಡಲು ಮರ‍್ಗರ‍್ಶನ ಮಾಡಬೇಕೆಂದು ತಿಳಿಸಿದ್ದಾರೆ. ಎಲ್ಲಾ ರೀತಿಯ ದಾಳಿಗಳನ್ನು ತಕ್ಷಣ ನಿಲ್ಲಿಸಿ ಶಾಂತಿಯನ್ನು ಕಾಪಾಡಬೇಕು, ಅಮಾಯಕರ ಜೀವವನ್ನು ಉಳಿಸಬೇಕು. ಭಾರತ ರ‍್ಕಾರ ಮುಂದೆ ಬಂದು ಕದನ ವಿರಾಮ ಘೋಷಿಸುವಂತಹ ಕರ‍್ಯಕ್ಕೆ ಪ್ರಯತ್ನಿಸಬೇಕು. ಇಡೀ ಜಗತ್ತಿಗೇ ಮಾರಕವಾಗಿರುವ ಯುದ್ಧ ಯಾವುದಕ್ಕೂ ಪರಿಹಾರವಲ್ಲ, ಯುದ್ಧ ಮನುಕುಲದ ಮಾರಣಹೋಮಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಭಾರತ ಇಸ್ರೇಲ್ ನ…
ನಾಪೋಕ್ಲು ನ.4 : ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ನಾಪೋಕ್ಲುವಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ನಾಪೋಕ್ಲುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣವದಲ್ಲಿ ಘಟಕದ ಪದಾಧಿಕಾರಿಗಳು ಕಾಡು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕಾವೇರಿ ಹಾಗೂ ಪ್ರಾಧ್ಯಾಪಕ ವರ್ಗ ಶೌರ್ಯ ವಿಪತ್ತು ನಿರ್ವಹಣ ಘಟಕದ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು. ಶ್ರಮದಾನದಲ್ಲಿ ಘಟಕದ ಸಂಯೋಜಕಿ ಬಾಳೆಯಡ ದಿವ್ಯ, ಗೀತಾ, ಶಂಕರ್, ಸೀನ ಮಾಧವನ್, ದಿಲೀಶ್, ಮಾಯಿಲಪ್ಪ, ಚೇತನ್, ಸುದೀಪ್, ರವಿ, ಶರವಣ, ಚಂದ್ರಕಲ, ಉಮಾಲಕ್ಷ್ಮಿ, ದಮಯಂತಿ, ಶ್ಯಾಮಲಾ, ಸರಸ್ವತಿ, ಆಶಾ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಬೆಂಗಳೂರು ನ.4 : ಬರ ಪರಿಸ್ಥಿತಿಯ ಸಂಪೂರ್ಣ ವಸ್ತುಸ್ಥಿತಿ ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ ಪ್ರತಿ ತಾಲ್ಲೂಕುಗಳಲ್ಲಿ ಮಾಧ್ಯಮಗಳಿಗೆ ವಿವರಿಸಿ, ನ.15ರೊಳಗೆ ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ರಾಜ್ಯದ 236 ತಾಲೂಕುಗಳ ಪೈಕಿ ಇದುವರೆಗೆ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ಕೃಷಿ-ಕೈಗಾರಿಕೆಗಳಿಗೆ ನೀರು, ಬೆಳೆಹಾನಿ, ಜನರ ಉದ್ಯೋಗದ ಸ್ಥಿತಿ, ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗಿದೆ. ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಹಲವು ಬಾರಿ ನಿರ್ದೇಶನ ನೀಡಲಾಗಿದೆ. ಆದರಿಂದ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮುಂದಿನ ಎರಡು ವಾರಗಳಲ್ಲಿ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಿ, ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ…
ಮಡಿಕೇರಿ ನ.4 : ಮಾಜಿ ಸಚಿವ ಹಾಗೂ ಹಿರಿಯ ಮುತ್ಸದ್ದಿ ಎಂ.ಸಿ ನಾಣಯ್ಯ ಅವರ ನಿವಾಸಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೌಹಾರ್ದ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ , ಮಂಡ್ಯ ಶಾಸಕ ಪಿ.ರವಿಕುಮಾರ್ ಹಾಜರಿದ್ದರು.
ಗದಗ ನ.4 : ಗದಗದ ಶ್ರೀ ತೋಂಟದಾರ್ಯ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪೀಠಾಧಿಪತಿಗಳಾದ ಡಾ. ಶ್ರೀ ಸಿದ್ಧರಾಮ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಕೆ.ಪಾಟೀಲ್ ಸೇರಿ ಹಲವರು ಹಾಜರಿದ್ದರು.






