ಲೇಖಕ: admin

ಮಡಿಕೇರಿ ಡಿ.11 :  ಗ್ರಾಮ ಪಂಚಾಯಿತಿಗಳ ಸರ್ವತೋಮುಖ ಅಭಿವೃದ್ದಿಗಳಿಗೆ ಸಹಕರಿಸಿ ಪ್ರಗತಿ ಸಾಧಿಸಿ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ವರ್ಣೀತ್ ನೇಗಿ ತಿಳಿಸಿದ್ದಾರೆ‌. ಪೊನ್ನಂಪೇಟೆ ತಾಲ್ಲೂಕಿನ ಸಾಮರ್ಥ್ಯ ಸೌಧದಲ್ಲಿ ಗ್ರಾ.ಪಂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಪ್ರಗತಿ ಸಾಧಿಸಲು ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ ಕುಂಠಿತವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಗತಿ ಸಾಧಿಸಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಶೌಚಾಲಯಗಳು ನಿರ್ಮಾಣವಾಗುತ್ತಿದ್ದು , ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. ಈಗಾಗಲೇ ಕೂಸಿನ ಮನೆ ಆರೈಕೆದಾರರಿಗೆ ತರಬೇತಿ ನೀಡಲಾಗಿದ್ದು , 3 ವರ್ಷದೊಳಗಿನ ನರೇಗಾ ಕೂಲಿ ಕಾರ್ಮಿಕರ ಮಕ್ಕಳನ್ನು ಕೂಸಿನ ಮನೆಯಲ್ಲಿ ಆರೈಕೆ ಮಾಡಬಹುದಾಗಿದೆ‌ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಪ್ರಚಾರ ಕೈಗೊಂಡು ನೋಂದಣಿ ಮಾಡಿಸುವಂತೆ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು. PM- ವಿಶ್ವಕರ್ಮ ಯೋಜನೆಯ ಬಗ್ಗೆ ವ್ಯಾಪಕ…

Read More

ಮಡಿಕೇರಿ ಡಿ.11 : ಬಿಲ್ಲವ ಸಮುದಾಯದ ತಂಡಗಳ ನಡುವೆ ನಡೆದ ಪೂಜಾರಿ ಪ್ರೀಮಿಯರ್ ಲೀಗ್ ಪ್ರಥಮ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಪೂಜಾರಿ ಕೊಡಗು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮರಗೋಡುವಿನ ಭಾರತಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಿಲ್ಲವ ಟೈಗರ್ಸ್ ಅಮ್ಮತ್ತಿ ತಂಡವನ್ನು 26 ರನ್‍ನಿಂದ ಮಣಿಸಿ ಪ್ರಶಸ್ತಿ ಗೆದ್ದಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಯಲ್ ಪೂಜಾರಿ ಕೊಡಗು ತಂಡ ನಿಗದಿತ 5 ಓವರ್‍ನಲ್ಲಿ 3 ವಿಕೆಟ್ ಕಳೆದುಕೊಂಡು 78 ರನ್ ಗಳಿಸಿತು. ಶ್ರೀನಾಥ್ ಪೂಜಾರಿ 29, ವಿನು ಪೂಜಾರಿ 18, ತ್ರಿಲೇಶ್ 17, ಬಬಿತ್ ಪೂಜಾರಿ 12 ರನ್ ಗಳಿಸಿದರು. ಗೆಲುವಿನ ಗುರಿ ಬೆನ್ನತ್ತಿದ ಬಿಲ್ಲವಟೈಗರ್ಸ್ ಅಮ್ಮತ್ತಿತಂಡ 5 ಓವರ್‍ನಲ್ಲಿ 5 ವಿಕೆಟ್ ಕಳೆದುಕೊಂಡು 52 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ತಂಡದ ಪರ ಶರಣ್ 21 ರನ್ ದಾಖಲಿಸಿದರು. ರಾಯಲ್ ಪೂಜಾರಿ ತಂಡದ ಬಬಿತ್ ಪೂಜಾರಿ 2 ವಿಕೆಟ್ ಕಬಳಿಸಿದರು. ಇದಕ್ಕೂ…

Read More

ಸುಂಟಿಕೊಪ್ಪ ಡಿ.11 : ಸುಂಟಿಕೊಪ್ಪ ಜೆಸಿಐ ಘಟಕದ ನೂತನ ಅಧ್ಯಕ್ಷರಾಗಿ ಸಂಪತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ. ದ್ವಾರಕ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಜ.4 ರಂದು ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.11 : ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ರೋಟರಿ ಜಿಲ್ಲೆ 3181 ರ ಕ್ರೀಡಾಕೂಟದಲ್ಲಿ ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ನ ಸದಸ್ಯ ಕುಲ್ಲೇಟಿರ ಅಜಿತ್ ನಾಣಯ್ಯ ಅವರು ದಾಖಲೆಯ ಐದು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. 50ವರ್ಷ ಮೇಲ್ಪಟ್ಟವರಿಗಾಗಿ ನಡೆದ ಸ್ಪರ್ಧೆಯಲ್ಲಿ 100, 200, 400 ಮೀಟರ್ ಓಟ, ಭಾರದ ಗುಂಡು ಎಸೆತ ಮತ್ತು 400 ಮೀಟರ್ ನಡಿಗೆಯಲ್ಲಿ ಪ್ರಥಮ ಬಹುಮಾನ ಗಳಿಸುವ ಮೂಲಕ ಅಜಿತ್ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. ರೋಟರಿ ಜಿಲ್ಲೆ 3181ರ ಕೊಡಗು, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರದ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಮೂಡಬಿದ್ರೆ ಆಳ್ವಾಸ್ ಕಾಲೇಜ್ ನ ಅಥ್ಲೆಟಿಕ್ಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜಿತ್ ನಾಣಯ್ಯ ಬಹುಮಾನ ಪಡೆದರು.

Read More

ಮಡಿಕೇರಿ ಡಿ.11 : . ಪೊನ್ನಂಪೇಟೆ ತಾಲೂಕು ಬಾಳಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ  ಪಿ.ಜಿ ಜಾನಕಿ  ಮತ್ತು ಗೌರವ ಕೋಶಾಧಿಕಾರಿಯಾಗಿ ಚಂದ್ರಕಲಾ ವಿಷ್ಣುಮೂರ್ತಿ ಆಯ್ಕೆಯಾಗಿದ್ದಾರೆ. ಹೋಬಳಿ ಅಧ್ಯಕ್ಷರಾದ ಪಡಿಞಾರಂಡ ಪ್ರಭು ಮತ್ತು ತಾಲೂಕು ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಅವರ ಶಿಫಾರಸ್ಸು ಮೇರೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ನೇಮಕ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.11 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವು ಡಿಸೆಂಬರ್, 12 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮ್ ಪ್ರಸಾದ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಜೆ.ಜವರಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಚಾಲಕರಾದ ಎಚ್.ಪಿ.ನಿರ್ಮಲ ಇತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಕೆ.ಆರ್.ವಿದ್ಯಾಧರ ಗೌಡ ಅವರು ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ…

Read More

ಮಡಿಕೇರಿ ಡಿ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಪಬ್ಲಿಕ್ ಶಾಲೆ, ಪೊನ್ನಂಪೇಟೆ ಇವರ ಸಯುಕ್ತ ಆಶ್ರಯದಲ್ಲಿ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ದತ್ತಿನಿಧಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ ಕಾರ್ಯಕ್ರಮವು ಡಿ.12 ರಂದು ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆಯ ಪದವಿಪೂರ್ವ ಕಾಲೇಜು ಕೆಪಿಎಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಮೇಶ್, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ದತ್ತಿದಾನಿಗಳಾದ ಬೆಂಗಳೂರಿನ ಆರ್.ನಾಗೇಂದ್ರ ಕಾಮತ್, ಆರ್.ರಾಜಾರಾವ್ ಮತ್ತು ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ…

Read More

ಮಡಿಕೇರಿ ಡಿ.11 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಡಿ.16 ರಿಂದ ಡಿ.19 ರವರೆಗೆ ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಡಿ.16 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ. ಭಗಂಡೇಶ್ವರ ದೇವಾಲಯದಲ್ಲಿ ಡಿ.17 ರಂದು ಬೆಳಗ್ಗೆ 7.30 ಗಂಟೆಗೆ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನಡೆಯಲಿದೆ. ಡಿ.18 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.19 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ ಶ್ರೀ ಮಹಾವಿಷ್ಣು…

Read More

ಮಡಿಕೇರಿ, ಡಿ. 11 : ಯುವ ಜನಾಂಗ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತೆ ಮೂಟೇರ ಪುಷ್ಪಾವತಿ ಕಿವಿಮಾತು ಹೇಳಿದರು. ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ವಿದ್ಯಾಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆ ವಿದ್ಯಾಭ್ಯಾಸಕ್ಕೆ ಒತ್ತು ನೀಡುವ ಮೂಲಕ ಉನ್ನತ ಸ್ಥಾನಗಳನ್ನು ಅಲಂಕರಿಸುವಂತಾಗಬೇಕು ಎಂದು ನುಡಿದರು. ಆಧುನಿಕತೆ ಬೆಳೆಯುತ್ತಿದ್ದು, ಗೌಡ ವಿದ್ಯಾಸಂಘವನ್ನು ಕೂಡ ಆಧುನೀಕರಣಗೊಳಿಸುವತ್ತ ಗಮನ ಹರಿಸಬೇಕೆಂದು ಪುಷ್ಪಾವತಿ ಸಲಹೆ ನೀಡಿದರು. ಮೈಸೂರು ರಂಗಾಯಣದ ಹಿರಿಯ ಕಲಾವಿದೆ ದೇವಜನ ಗೀತಾ ಮೋಂಟಡ್ಕ ಮಾತನಾಡಿ, ಮಕ್ಕಳನ್ನು ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹಿಸಬೇಕು. ಪ್ರತಿಯೊಬ್ಬರು ಗುರುಹಿರಿಯರನ್ನು ಗೌರವಿಸಬೇಕು ಎಂದು ಕಿವಿಮಾತು ಹೇಳಿದರು. ವಿದ್ಯಾನಿಧಿ ದಾನಿಗಳಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಮಂಞಂಡ್ರ ರೇಖಾ ಉಲ್ಲಾಸ್ ಮಾತನಾಡಿ, ಮಕ್ಕಳು ಸದಾ ಹಸನ್ಮುಖರಾಗಿರಬೇಕು. ಸಾಧಿಸುವ ಛಲವನ್ನು ಹೊಂದಿರಬೇಕು ಎಂದು ಹೇಳಿದರು. ಕೆ.ಎಂ.ಟಿ. ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷ, ಕೊಡಗು ಗೌಡ…

Read More

ಮಡಿಕೇರಿ ಡಿ.11 : ಕೊಡಗು ಮೊಗೇರ ಫುಟ್ಬಾಲ್ ಕ್ಲಬ್ ವತಿಯಿಂದ ಪ್ರಥಮ ಬಾರಿಗೆ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಸೀಸನ್-1 ರ ಪಂದ್ಯಾವಳಿಯಲ್ಲಿ ಫಿಯೋನೆಕ್ಸ್ ಎಫ್‍ಸಿ ಸೋಮವಾರಪೇಟೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ 6 ಆಟಗಾರರನ್ನೊಳಗೊಂಡಂತೆ 8 ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಿತು. ಫೈನಲ್ ಪಂದ್ಯದಲ್ಲಿ ಫಿಯೋನೆಕ್ಸ್ ಎಫ್‍ಸಿ ಸೋಮವಾರಪೇಟೆ ಮತ್ತು ಮೊಗೇರ ಎಫ್‍ಸಿ ಪಾಲಿಬೆಟ್ಟ ತಂಡಗಳು ಪೂರ್ಣಾವಧಿಯಲ್ಲಿ ಯಾವುದೇ ಗೋಲು ದಾಖಲಿಸದೇ ಸಮಬಲ ಸಾಧಿಸಿತು. ನಂತರ ನಡೆದ ಪೆನಾಲ್ಟಿ ಶೂಟೌಟ್‍ನಲ್ಲಿ 2-0 ಗೋಲುಗಳ ಅಂತರದಲ್ಲಿ ಫಿಯೋನೆಕ್ಸ್ ಎಫ್‍ಸಿ ತಂಡ ಗೆಲುವು ಸಾಧಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದರೆ, ಮೊಗೇರ ಎಫ್‍ಸಿ ಪಾಲಿಬೆಟ್ಟ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫಿಯೋನೆಕ್ಸ್ ಎಫ್‍ಸಿ ಸೋಮವಾರಪೇಟೆ ತಂಡ ಮಾನ್ವಿಕ್ ಎಫ್‍ಸಿ ತಂಡವನ್ನು 3-0 ಗೋಲುಗಳಿಂದ ಮಣಿಸಿತು. ಫಿಯೋನೆಕ್ಸ್ ಎಫ್‍ಸಿ ಪರ ಪ್ರಶಾಂತ್ 3 ಹ್ಯಾಟ್ರಿಕ್ ಗೋಲು ದಾಖಲಿಸಿದ…

Read More