ವಿರಾಜಪೇಟೆ ಡಿ.11 : ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಐಎಂಐಟಿ ಘಟಕದ ವತಿಯಿಂದ ವಿರಾಜಪೇಟೆ ಸೆಂಟ್ ಆನ್ಸ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಮಸ್ಟರಿಂಗ್ ಮೆಷಿನ್ ಲರ್ನಿಂಗ್, ಪ್ರಾಕ್ಟಿಕಲ್ ಅಪ್ರೋಚ್ ಬಗ್ಗೆ ಕಾರ್ಯಾಗಾರ ನಡೆಯಿತು. ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಡಾ. ಶ್ರೀನಿವಾಸ್ ಬಿ. ಎಲ್. ಹಾಗೂ ಎಂ.ಎಸ್.ಸಿ ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಜಾಹ್ನವಿ, ದೃತಿ, ದಿಶಾ, ಭೂಮಿಕಾ, ರಿಯೋನ, ಅಲರೊಯ್ ಮಾಹಿತಿಯನ್ನು ನೀಡಿದರು. ಕಾರ್ಯಾಗಾರದಲ್ಲಿ ಯಂತ್ರ ಕಲಿಕೆ ಮತ್ತು ಕೃತಕ ಬುದ್ದಿಮತ್ತೆ ವಿಷಯದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಲಾಯಿತು. ಯಂತ್ರ ಕಲಿಕೆ ಅಪ್ಲಿಕೇಶನ್, ಪರಿಕಲ್ಪನೆಗಳ ಬಗ್ಗೆ ವಿದ್ಯಾರ್ಥಿಗಳು ಅರಿತರು. ಮಾತ್ರವಲ್ಲದೆ ಪ್ರಸ್ತುತದಲ್ಲಿ ಎ.ಐ.ನ ಪಾತ್ರದ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಲಾಯಿತು. ಮತ್ತು ತಂತ್ರಜ್ಞಾನದಲ್ಲಾಗುತ್ತಿರುವ ಬದಲಾವಣೆ ಬಗ್ಗೆ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಸೌಮ್ಯ ಸೋಮರಾಜ್, ಉಪನ್ಯಾಸಕರು ಹಾಜರಿದ್ದರು.
ಲೇಖಕ: admin
ಮೂರ್ನಾಡು ಡಿ.11 : ಓದುವುದರ ಜೊತೆಗೆ ಇತರೆ ಚಟುವಟಿಕೆಗಳು ಇದ್ದಾಗ ಮಾತ್ರ ದೈಹಿಕ ಮತ್ತು ಮಾನಸಿಕವಾಗಿ ಉತ್ಸುಕತೆಯಿಂದ ಇರಲು ಸಾಧ್ಯ ಎಂದು ಕೊಡಗು ಜಿಲ್ಲಾವರಿಷ್ಠಾಧಿಕಾರಿ ಕೆ. ರಾಮರಾಜನ್ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜ್ಞಾನ ಜ್ಯೋತಿ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಮಟ್ಟದಲ್ಲಿರುವ ಈ ಶಾಲೆಯ ಶೈಕ್ಷಣಿಕ ವ್ಯವಸ್ಥೆಯನ್ನು ನಗರಗಳಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವ್ಯವಸ್ಥೆಯನ್ನು ಮೀರಿಸುವಂತಿದೆ. ಕ್ರೀಡೆಯು ಜೀವನದಲ್ಲಿ ಹೆಚ್ಚು ಚಟುವಟಿಕೆಯಿಂದರಲು ಸಹಾಯಮಾಡುತ್ತದೆ. ಹಾಗಾಗಿ ಶಾಲೆಗಳಲ್ಲಿ ಕ್ರೀಡೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದರು. ಕ್ರೀಡೆಗಳಲ್ಲಿ ಸೋಲು ಧೈರ್ಯ ತುಂಬುತ್ತದೆ. ತರಗತಿಗಳಲ್ಲಿ ಹೆಚ್ಚು ಅಂಕಗಳನ್ನು ಪಡೆಯುವುದು ಮಾತ್ರ ಶಾಲಾ ಜೀವನವಾಗದೆ, ಅದಕ್ಕೂ ಮೀರಿ ಸಮುದಾಯದ ಬಗ್ಗೆ ಅರಿವು ಮೂಡಿಸುವ ವ್ಯವಸ್ಥೆಯನ್ನು ಶಾಲಾ ಶಿಕ್ಷಣವು ಒಳಗೊಂಡಿರಬೇಕು. ಈ ಶಾಲೆಯಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಮಕ್ಕಳಿಗೆ ಉತ್ತಮ ರೀತಿಯ ಪ್ರೋತ್ಸಾಹ ನೀಡುತ್ತಿದೆ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮುಕ್ಕಾಟೀರರ…
ಮಡಿಕೇರಿ ಡಿ.10 : ಪೊನ್ನಂಪೇಟೆ ತಾಲ್ಲೂಕಿನ ದೇವರಪುರದಲ್ಲಿ ನಡೆದ ಕೇರಳದ ವ್ಯಕ್ತಿಗಳ ವಾಹನ ಅಡ್ಡಗಟ್ಟಿ ಸುಮಾರು 50 ಲಕ್ಷ ರೂ. ನಗದು ಹಾಗೂ ವಾಹನವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ, ದರೋಡೆ ಮಾಡಿದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ, ಇದರ ಜೊತೆಯಲ್ಲೇ ಹಣ ಕಳೆದುಕೊಂಡಿರುವುದಾಗಿ ದೂರು ನೀಡಿರುವ ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ತಿರುವರಾಂಗದಿ ತಾಲ್ಲೂಕಿನ ಕೊಡಕಾಡ್ ನಿವಾಸಿ ಗುತ್ತಿಗೆದಾರ ಶಮ್ಜದ್ ಕೆ. ಅವರನ್ನು ಕೂಡ ವಿಚಾರಣೆಗೊಳಪಡಿಸಲಾಗಿದೆ. ಮಾರಾಟ ಮಾಡಲು ಚಿನ್ನಾಭರಣ ಎಲ್ಲಿಂದ ಬಂತು, ಯಾರಿಗೆ ಮಾರಾಟ ಮಾಡಲಾಗಿದೆ, 50 ಲಕ್ಷ ರೂ.ಗಳಷ್ಟು ದೊಡ್ಡ ಮೊತ್ತವನ್ನು ರಾತ್ರಿ ವೇಳೆ ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಕಾರಣವೇನು ಎಂಬಿತ್ಯಾದಿ ಪ್ರಶ್ನೆಗಳ ನಡುವೆ ವಿಚಾರಣೆ ನಡೆಯುತ್ತಿದೆ ಎಂದರು. ಚಿನ್ನಾಭರಣ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದೂರುದಾರರ ಬಳಿ ಯಾವುದೇ ದಾಖಲೆಗಳಿಲ್ಲ, ತೆರಿಗೆ ಪಾವತಿಸಿದ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ…
ಮಡಿಕೇರಿ ಡಿ.10 : ಮಾನವ ಹಕ್ಕುಗಳ ದಿನಾಚರಣೆಯ ಪ್ರಮುಖ ಉದ್ದೇಶ ಮಾನವ ಹಕ್ಕುಗಳ ರಕ್ಷಣೆ, ಅರಿವು ಮತ್ತು ನೆರವು ಎಂದು ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಿದ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಯಶಸ್ವಿಯಾಗಬೇಕೆ ಹೊರತು ಮಾನವ ಹಕ್ಕನ್ನು ಉಲ್ಲಂಘಿಸಬಾರದು ಎಂದರು. ರಾಜ್ಯ ಸರ್ಕಾರದ ಮಾನವ ಹಕ್ಕುಗಳ ಆಯೋಗವು ನಿತ್ಯ ದೈನಂದಿನ ಚಟುವಟಿಕೆಗಳಲ್ಲಿ ಯಾವುದು ಮಾನವ ಹಕ್ಕು ಉಲ್ಲಂಘನೆಯಾಗುವುದು ಹಾಗೂ ಸರಿ-ತಪ್ಪು ಗಳನ್ನು ವಿವರವಾಗಿ ತಿಳಿಸುತ್ತದೆ. ನಮ್ಮ ಬದುಕನ್ನು ಅರ್ಥಪೂರ್ಣವನ್ನಾಗಿಸಿ ತೃಪ್ತಿದಾಯಕವಾಗುವಂತೆ ಮಾಡುವಂತಹ ಮೂಲಭೂತ ಅರ್ಹತೆಗಳು ಹಾಗೂ ಸ್ವಾತಂತ್ರ್ಯಗಳನ್ನು ಮಾನವ ಹಕ್ಕುಗಳೆಂದು ಕರೆಯಲಾಗುತ್ತದೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು “ಮಾನವ ಹಕ್ಕು ರಕ್ಷಣೆ” ಎಂಬ ಆಪ್ ಬಿಡುಗಡೆಗೊಳಿಸಿದೆ ಸರ್ಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬರು ಈ ಆಪ್ ಅನ್ನು ಬಳಸಲು ಉಪ ವಿಭಾಗಾಧಿಕಾರಿ ಸೂಚಿಸಿದರು. ಮಾನವ ಹಕ್ಕುಗಳ ಪರಿಧಿ ವ್ಯಾಪಕ…
ಮಡಿಕೇರಿ ಡಿ.10 :NEWSDESK ಅವಿವಾಹಿತ 64 ವರ್ಷದ ಮಾಜಿ ಯೋಧರೊಬ್ಬರಿಗೆ ಮದುವೆಯ ಆಸೆ ತೋರಿಸಿ, ಬೆದರಿಕೆಯೊಡ್ಡಿ ನಗದು ಮತ್ತು ಚೆಕ್ ನ್ನು ಅಪಹರಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.NEWSDESK ಭಾರತೀಯ ಸೇನೆಯ ನಿವೃತ್ತ ಯೋಧ, ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ನಿವಾಸಿ ಜಾನ್ ಮ್ಯಾಥ್ಯು(64) ಎಂಬುವವರೇ ವಂಚನೆಗೊಳಗಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಷೀರ್ (29) ಕಡಬದ ನಿವಾಸಿ ಸಾದೀಕ್ (30) ನನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿ ಫೈಝಲ್ ಈಗಾಗಲೇ ಮೈಸೂರು ನಗರದಲ್ಲಿ ನಡೆದ ಅಪರಾಧ ಪ್ರಕರಣವೊಂದರ ಬಂಧಿಯಾಗಿದ್ದಾನೆ. ತಲೆ ಮರೆಸಿಕೊಂಡಿರುವ ಆರೋಪಿ ಅಮೀರ್ ಎಂಬಾತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ 3 ಮೊಬೈಲ್‌ಗಳು, ರೂ.1,05,000 ನಗದು ಮತ್ತು ರೂ.2,10,000 ಮೌಲ್ಯದ ಚೆಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.NEWSDESK ::: ಮದುವೆ ನಾಟಕ ::: ಅವಿವಾಹಿತರಾಗಿದ್ದ ನಿವೃತ್ತ ಯೋಧ ಜಾನ್ ಮ್ಯಾಥ್ಯು ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಫೈಝಲ್…
ಮಡಿಕೇರಿ ಡಿ.9 : ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಹೇಗೆ ಮೂಲ ನಿವಾಸಿಗಳೋ ಹಾಗೇ ಕೊಡವ ಪ್ರಾಂತ್ಯಕ್ಕೆ ಕೊಡವರು ಮಾತ್ರ ಆದಿಮಸಂಜಾತರಾಗಿದ್ದಾರೆ. ಇಲ್ಲಿಗೆ ಬಂದು ನೆಲೆಸಿದವರು ಈ ನೆಲದ ನಾಗರಿಕರೇ ಹೊರತು ಸ್ಥಳೀಯರಲ್ಲ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಅರೆಕಾಡು ಹೊಸ್ಕೇರಿ ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಂವಿಧಾನದ ಆರ್ಟಿಕಲ್ 244ಆರ್/ಡಬ್ಲ್ಯೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಪಡೆದುಕೊಳ್ಳುವುದು ನಮ್ಮ ಪ್ರಾಚೀನ ಭೂಮಿಯನ್ನು ಉಳಿಸಿಕೊಳ್ಳಲು ಮತ್ತು ರಕ್ಷಿಸಲು ಸಹಕಾರಿಯಾಗಿದೆ ಎಂದರು. ಕೊಡವರು ಕೊಡವ ಪ್ರದೇಶದ ಸ್ಥಳೀಯರು, ಕೊಡವರನ್ನು ಹೊರತುಪಡಿಸಿ ಇಲ್ಲಿಗೆ ಬಂದು ನೆಲೆಸಿದವರು ಈ ನೆಲದ ನಾಗರಿಕರೇ ಹೊರತು ಸ್ಥಳೀಯರಲ್ಲ. ಮತದಾರರ ಪಟ್ಟಿಯಲ್ಲಿ ನಮೂದಿಸಿದವರನ್ನು ನಾಗರೀಕರೆಂದು ಪರಿಗಣಿಸಲಾಗುತ್ತದೆ. ಆದರೆ ಅವರು ಕೊಡವ ನೆಲದ ಮೂಲನಿವಾಸಿಗಳಾಗಲು ಸಾಧ್ಯವಿಲ್ಲ. ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಹೇಗೆ ಸ್ಥಳೀಯರೋ ಹಾಗೇ ಕೊಡವರು ಕೊಡವ ಪ್ರಾಂತ್ಯಕ್ಕೆ…
ಮಡಿಕೇರಿ ಡಿ.9 : ಕೇರಳದ ವ್ಯಕ್ತಿಗಳ ವಾಹನ ಅಡ್ಡಗಟ್ಟಿ ಸುಮಾರು 50 ಲಕ್ಷ ರೂ. ನಗದು ಹಾಗೂ ವಾಹನವನ್ನು ಅಪಹರಿಸಿದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ದೇವರಪುರದಲ್ಲಿ ನಡೆದಿದೆ. ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ತಿರುವರಾಂಗದಿ ತಾಲ್ಲೂಕಿನ ಕೊಡಕಾಡ್ ನಿವಾಸಿ ಗುತ್ತಿಗೆದಾರ ಶಮ್ಜದ್ ಕೆ. (38) ಅವರು ನೀಡಿರುವ ದೂರನ್ನು ಆಧರಿಸಿ ಕೊಡಗು ಪೊಲೀಸರು ತನಿಖೆ ಕೈಗೊಂಡಿದ್ದಾರೆ.NEWSDESK ಶಮ್ಜದ್ ಅವರು ಕೇರಳದ ಕೋಯಿಕೋಡ್ ನ ಅಡರೂರು ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿ ಅಫ್ನು (22) ಅವರೊಂದಿಗೆ ಡಿ.8 ರಂದು ತಮ್ಮ ಕಾರಿನಲ್ಲಿ ಮೈಸೂರಿಗೆ ತೆರಳಿದ್ದರು. ಚಿನ್ನಾಭರಣಗಳನ್ನು ಮಾರಾಟ ಮಾಡಿ ಕೇರಳಕ್ಕೆ ಮರಳುತ್ತಿದ್ದಾಗ ಡಿ.9 ರ ನಸುಕು ಸುಮಾರು 3 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.NEWSDESK ಕಾರಿನಲ್ಲಿ ಬರುತ್ತಿದ್ದಾಗ ದೇವರಪುರ ವ್ಯಾಪ್ತಿಯ ರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಇದರ ಬಳಿ ಕಾರು ನಿಲ್ಲಿಸಿದಾಗ ಕೆಲವು ವಾಹನಗಳಲ್ಲಿ ಬಂದ 10 ರಿಂದ 15 ಮಂದಿ ಇದ್ದ ತಂಡ ಮಲೆಯಾಳಂ ಭಾಷೆಯಲ್ಲಿ ಹಣ…
ಸೋಮವಾರಪೇಟೆ ಡಿ.9 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಮವಾರಪೇಟೆ ವತಿಯಿಂದ ಶಾಂತಳ್ಳಿ ವಲಯದ ಕಿಬ್ಬೆಟ್ಟ ಕಾರ್ಯಕ್ಷೇತ್ರದಲ್ಲಿ ಕೃಷಿಯೇತರ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ನಡೆಯಿತು. ಕೂಡಿಗೆ ಯೂನಿಯನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಕೆ.ಪ್ರಕಾಶ್ ಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮೇಣದಬತ್ತಿ ತಯಾರಿಕೆ, ಕಂಪ್ಯೂಟರ್ ಕಲಿಕೆ, ಬೇಕರಿ, ತಿಂಡಿ ತಯಾರಿಕೆ, ಗೃಹ ಉಪಯೋಗಿ ವಸ್ತುಗಳ ತಯಾರಿಕೆ ಸೇರಿದಂತೆ 32 ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಭವಾನಿ ರಾಮಣ್ಣ, ಕಿಬ್ಬೆಟ್ಟ ಒಕ್ಕೂಟದ ಅಧ್ಯಕ್ಷರಾದ ರೇಷ್ಮ ಉಪನ್ಯಾಸಕರಾದ ಸುರೇಶ್, ಶಾಂತಳ್ಳಿ ವಲಯದ ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾ ಪ್ರತಿನಿಧಿ ನಿಖಿತ, ಸ್ವಸಹಾಯ ಹಾಗು ಪ್ರಗತಿ ಬಂದು ಸಂಘದ ಸದಸ್ಯರು, ಊರಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಡಿಕೇರಿ ಡಿ.9 : ಕೆ.ಎಂ.ಎಫ್. ಫ್ರೆಂಡ್ಸ್ ವತಿಯಿಂದ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೊಗೇರ ಸೇವಾ ಸಮಾಜದ ಅಧ್ಯಕ್ಷ ಜನಾರ್ಧನ್ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಈ ಸಂದರ್ಭ ಸಮಾಜದ ಮಾಜಿ ಅಧ್ಯಕ್ಷ ಹಾಗೂ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ಪಿ.ಎಂ.ರವಿ, ಬಹುಮಾನ ದಾನಿ ರವಿ, ಶಕ್ತಿ ದಿನ ಪತ್ರಿಕೆಯ ಹಿರಿಯ ಉಪ ಸಂಪಾದಕ ಕುಡೇಕಲ್ ಸಂತೋಷ್, ಜಿಲ್ಲಾ ಸಮಿತಿ ಸದಸ್ಯರಾದ ಚಂದ್ರ, ಪೊಡಿಯ, ಸೋಮವಾರಪೇಟೆ ಪ.ಪಂ ಸದಸ್ಯ ಪಿ.ಕೆ.ಚಂದ್ರು ಹಾಜರಿದ್ದರು. ಕ್ರೀಡಾ ಕೂಟದಲ್ಲಿ ಸಮಾಜದ ಮಹಿಳೆಯರ, ಆಯೋಜಕರು ಹಾಗೂ ಕೊಡಗು ಪತ್ರಕರ್ತರ ನಡುವೆ ಪ್ರದರ್ಶನ ಪಂದ್ಯ ನಡೆಯಿತು. ಇಶಾನಿ. ಎಫ್. ಸಿ., ಗೋಣಿಕೊಪ್ಪ. ಜನನಿ. ಎಫ್, ಸಿ, ಮಡಿಕೇರಿ. ಮಾನ್ವಿಕ್. ಎಫ್. ಸಿ.ಅಮ್ಮತಿ, ಟೀಮ್ ಹಂಟರ್ಸ್ ಮರಗೋಡು, ಮೊಗೇರ ಎಫ್. ಸಿ, ಪಾಲಿಬೆಟ್ಟ, ಫಿಯೋನೆಕ್ಸ್ ಎಫ್. ಸಿ. ಸೋಮವಾರಪೇಟೆ, ಎ.ಎಂ. ಎಫ್. ಸಿದ್ದಾಪುರ, ಹಾಗೂ ಭಗವತಿ,…
ಮಡಿಕೇರಿ ಡಿ.9 : ಯುವತಿಯರು ಆತ್ಮರಕ್ಷಣೆಗಾಗಿ ಮಾಷ೯ಲ್ ಕಲೆಯನ್ನು ಕಲಿಯುವ ಅಗತ್ಯವಿದ್ದು, ಈ ಮೂಲಕ ಸ್ವರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯುವಪೀಳಿಗೆ ಮುಂದಾಗಬೇಕೆಂದು ನಿವೃತ್ತ ಏರ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಕರೆ ನೀಡಿದ್ದಾರೆ. ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಶಿಕ್ಷಣ ಸಂಸ್ಥೆಯ 40ನೇ ಕ್ರೀಡಾದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಭ೯ತಿಯಿಂದ ಜೀವನ ಸಾಗಿಸಲು ಇಂದಿನ ದಿನಗಳಲ್ಲಿ ಸ್ವರಕ್ಷಣೆಗಾಗಿ ಮಾಷ೯ಲ್ ಕಲೆಯನ್ನು ತಿಳಿದುಕೊಳ್ಳುವ ಅನಿವಾಯ೯ತೆಯಿದೆ. ಈ ನಿಟ್ಟಿನಲ್ಲಿ ಯುವತಿಯರು ಮಾಷ೯ಲ್ ಆಟ್೯ನಲ್ಲಿ ತರಬೇತಿ ಪಡೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಮಡಿಕೇರಿ ಸೇರಿದಂತೆ ಕೊಡಗಿನ ಪರಿಸರವು ಇತ್ತೀಚಿನ ವಷ೯ಗಳಲ್ಲಿ ಮಾಲಿನ್ಯದಿಂದ ಹಾಳಾಗುತ್ತಿದೆ. ನಿಸಗ೯ಸೌಂದಯ೯ಕ್ಕೆ ಹೆಸರಾದ ಮಡಿಕೇರಿ ಕಾಂಕ್ರೀಟ್ ಕಾಡಾಗುತ್ತಿದೆ. ಯುವಜನಾಂಗ ಈ ನಿಟ್ಟಿನಲ್ಲಿ ಗಂಭೀರವಾಗಿ ಚಿಂತನೆ ಹರಿಸಿ ಪರಿಸರ ಸಂರಕ್ಷಣೆಗೆ ಮುಂದಾಗುವಂತೆ ಕರೆ ನೀಡಿದ ನಿವೖತ್ತ ಏರ್ ಮಾಷ೯ಲ್, 2018 ರಲ್ಲಿ ಸಂಭವಿಸಿದ ಭೂಕುಸಿತ ಖಂಡಿತವಾಗಿಯೂ ದೇವರ ಅಥವಾ ವಿಧಿಯ ಸೖಷ್ಟಿಯಲ್ಲ. ಇದು ಮಾನವನ ದುರಾಸೆಯಿಂದ ಸಂಭವಿಸಿದ ಪ್ರಾಕೖತ್ತಿಕ ವಿಕೋಪವಾಗಿದ್ದು ಆ ದುರಂತದಿಂದ ನಾವೆಲ್ಲರೂ ಎಚ್ಚರಿಕೆಯ ಪಾಠ ಕಲಿತು…






