ಲೇಖಕ: admin

ಸೋಮವಾರಪೇಟೆ, NEWS DESK ಸೆ.24: ಕಸ್ತೂರಿ ರಂಗನ್ ವರದಿ ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಗ್ರಾಮಸ್ಥರು ವಿಶೇಷ ಗ್ರಾಮಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ತಮ್ಮ ತಕರಾರು ಅರ್ಜಿಗಳನ್ನು ಸಲ್ಲಿಸಿದರು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ಹಾಗೂ ಬಿಇಒ ಕೃಷ್ಣಪ್ಪ ವಹಿಸಿದ್ದರು. ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದ ಗ್ರಾಮಸ್ಥರು, ವರದಿ ಜಾರಿಗೊಂಡರೆ ಕೊಡಗಿನ ಕೃಷಿಕರು ಹಾಗೂ ಗ್ರಾಮೀಣ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟರು. ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಜಿ.ಎಂ. ಹೂವಯ್ಯ ಮಾತನಾಡಿ, ಕೊಡಗಿನ ರೈತರು ತಲೆತಲಾಂತರಗಳಿಂದ ಕೃಷಿಯೊಂದಿಗೆ ಪರಿಸರ ಸಂರಕ್ಷಣೆಯನ್ನೂ ಮಾಡಿಕೊಂಡು ಬಂದಿದ್ದಾರೆ. ಪರಿಸರ ರಕ್ಷಣೆಯ ಹೆಸರಿನಲ್ಲಿ ಕೃಷಿ ಭೂಮಿ, ಕಾಫಿ ತೋಟಗಳು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಗೆ ತರುವ ಕ್ರಮವನ್ನು…

Read More

ಸೋಮವಾರಪೇಟೆ, NEWS DESK ಸೆ.24: ತಾಲೂಕಿನ ಬೆಟ್ಟದಳ್ಳಿ ಹಾಗೂ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಪ್ರಸ್ತಾಪವನ್ನು ತಿರಸ್ಕರಿಸಿ ನಿರ್ಣಯ ಕೈಗೊಳ್ಳಲಾಯಿತು. ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷ ಗ್ರಾಮಸಭೆ ಬೆಟ್ಟದಳ್ಳಿ ಸಮುದಾಯ ಭವನದಲ್ಲಿ ಆಡಳಿತಾಧಿಕಾರಿ ಎ.ಬಿ. ನವೀನ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ, ವರದಿ ಅನುಷ್ಠಾನವನ್ನು ತಿರಸ್ಕರಿಸುವಂತೆ ನಿರ್ಣಯ ಕೈಗೊಂಡರು. ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಾರಳ್ಳಿ ಗ್ರಾಮವನ್ನು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಇದು ಜನವಸತಿ ಪ್ರದೇಶವಾಗಿದೆ. ಯಾವುದೇ ಕಾರಣಕ್ಕೂ ವರದಿಯನ್ನು ಅನುಷ್ಠಾನಗೊಳಿಸಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಒತ್ತಾಯಿಸಿದರು. 1978ರಿಂದ ಅಧಿಕಾರಿಗಳು ಮಾಡಿದ ತಪ್ಪಿನಿಂದಾಗಿ ಜನರು ಇದೀಗ ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಮಾಡಿಕೊಂಡಿರುವ ಭೂಮಿಯನ್ನು ಸೆಕ್ಷನ್-4, ಸಿ ಮತ್ತು ಡಿ ಹಾಗೂ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಯತ್ನಗಳು ನಡೆಯುತ್ತಿವೆ…

Read More

ಮಡಿಕೇರಿ, NEWS DESK ಸೆ.24: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸೋಮವಾರಪೇಟೆ ಬಿಜೆಪಿ ಮಂಡಲ ಅಧ್ಯಕ್ಷ ಎಂ.ಎಲ್. ಗೌತಮ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಗ್ಯಾರಂಟಿ ಯೋಜನೆಗಳ ಹಿನ್ನೆಲೆಯಲ್ಲಿ ರಾಜ್ಯದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾಮಗಾರಿಗಳು ಹಾಗೂ ರೈತರಿಗೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಆರೋಪಿಸಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಬಜೆಟ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಕೊರತೆ ಇದ್ದರೂ ಸರ್ಕಾರ ಪೊಳ್ಳು ಘೋಷಣೆಗಳನ್ನು ಮಾಡುತ್ತಿದೆ ಎಂದು ಟೀಕಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಿದ್ದಾಂತ ಟ್ರಸ್ಟ್‌ಗೆ ಸಂಬಂಧಿಸಿದ ಭೂಮಿ ವಿಚಾರದಲ್ಲಿಯೂ ಅವರು ಆರೋಪಗಳನ್ನು ಮಾಡಿದರು. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿಡಬೇಕಾದ ಶೇ.18ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಲಾಗುತ್ತಿಲ್ಲ ಎಂದು ಆರೋಪಿಸಿದ ಅವರು,…

Read More

ವಿರಾಜಪೇಟೆ, NEWS DESK ಸೆ.24: ಕಾವೇರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (ಎನ್‌ಎಸ್‌ಎಸ್) ಘಟಕದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ. ಪದ್ಮ ಮಾತನಾಡಿ, ಎನ್‌ಎಸ್‌ಎಸ್ ಸ್ವಯಂಸೇವಕರು ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಸೇವಾ ಮನೋಭಾವ, ಮಾನವೀಯ ಮೌಲ್ಯಗಳು ಹಾಗೂ ನಿಸ್ವಾರ್ಥ ಸೇವಾ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾವೇರಿ ಪದವಿಪೂರ್ವ ಕಾಲೇಜಿನ ನಿಕಟಪೂರ್ವ ಎನ್‌ಎಸ್‌ಎಸ್ ಅಧಿಕಾರಿ ಕೆ.ಪಿ. ಗಾಯತ್ರಿ ತಿಮ್ಮಯ್ಯ ಅವರು ರಾಷ್ಟ್ರೀಯ ಸೇವಾ ಯೋಜನಾ ದಿನದ ಮಹತ್ವವನ್ನು ವಿವರಿಸಿದರು. ಸ್ವಯಂಸೇವಕರು ನಿಸ್ವಾರ್ಥ ಸೇವೆಯ ಮೂಲಕ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಎನ್‌ಎಸ್‌ಎಸ್ ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆಯನ್ನು ಕಲ್ಪಿಸುತ್ತದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಪ್ರಾರ್ಥನಾ ಗೀತೆಯನ್ನು ಪ್ರಸ್ತುತಪಡಿಸಿ, ರಾಷ್ಟ್ರೀಯ ಸೇವಾ ಯೋಜನೆಯ ಗುರಿ ಮತ್ತು ಉದ್ದೇಶಗಳನ್ನು ವಿವರಿಸಿದರು. ನಂತರ ಸ್ವಯಂಸೇವಕರು ಕಾಲೇಜು ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.…

Read More

ಸುಂಟಿಕೊಪ್ಪ, NEWS DESK ಸೆ.24: ವಿಶ್ವ ಹಿಂದೂ ಪರಿಷತ್ ಹಾಗೂ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿದ್ದ 62ನೇ ವರ್ಷದ ಶ್ರೀ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಮೆರವಣಿಗೆಯು ಬುಧವಾರ ಸಂಜೆ ಅದ್ಧೂರಿಯಾಗಿ ನೆರವೇರಿತು. ಬೆಳಗ್ಗಿನಿಂದಲೇ ಗಣಹೋಮ, ಹೂವಿನ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸುತ್ತಮುತ್ತಲಿನ ನೂರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಕೊನೆಯ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ನಂತರ ಪ್ರಧಾನ ಅರ್ಚಕರಾದ ಹಾ.ಮಾ. ಗಣೇಶ್ ಶರ್ಮಾ ಹಾಗೂ ಮಂಜುನಾಥ್ ಶರ್ಮಾ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಮತ್ತು ಮಹಾಪೂಜೆ ನೆರವೇರಿಸಲಾಯಿತು. ಬಳಿಕ ಗೌರಿ ಗಣೇಶನ ಉತ್ಸವ ಮೂರ್ತಿಗೆ ಕೊನೆಯ ಮಹಾ ಆರತಿ ಬೆಳಗಿಸಿ, ಜಯಘೋಷಗಳೊಂದಿಗೆ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ನಾದಸ್ವರ ಹಾಗೂ ಡಿಜೆ ಸಂಗೀತದೊಂದಿಗೆ ಆರಂಭವಾದ ಬೃಹತ್ ಶೋಭಾಯಾತ್ರೆಯಲ್ಲಿ ಯುವಕ-ಯುವತಿಯರು ಸಂಭ್ರಮದಿಂದ ಹೆಜ್ಜೆ ಹಾಕಿದರು. ಸಮಿತಿಯ ಪದಾಧಿಕಾರಿಗಳು 10 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ ಹಾಗೂ…

Read More

ವಿರಾಜಪೇಟೆ ಸೆ.23 NEWS DESK : ಶಾಲಾ ಶಿಕ್ಷಣವನ್ನು ಕೇವಲ ಪುಸ್ತಕಗಳಿಗೆ ಸೀಮಿತಗೊಳಿಸದೆ, ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಕೃಷಿ ಸಂಸ್ಕೃತಿಯ ಪರಿಚಯಕ್ಕಾಗಿ ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆ ವಿನೂತನ ಹೆಜ್ಜೆಯೊಂದನ್ನು ಇಟ್ಟಿದೆ. ಕೊಡಗಿನಲ್ಲಿ ಪ್ರಥಮ ಬಾರಿಗೆ ಪ್ಲೇಹೋಮ್‌ನಿಂದ 7ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಕಾಕೋಟುಪರಂಬುವಿನಲ್ಲಿ ನಡೆದ ‘ವೆಟ್‌ಲ್ಯಾಂಡ್ ಸ್ಪೋರ್ಟ್ಸ್’ ಕಾರ್ಯಕ್ರಮಕ್ಕೆ ಕರೆದೊಯ್ದು, ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಲಾಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಶಾಲೆಯ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರ ಹಾಗೂ ಪ್ರೋತ್ಸಾಹದೊಂದಿಗೆ ಆಯೋಜಿಸಲಾದ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಭತ್ತದ ಕೃಷಿ, ನಾಟಿ ವಿಧಾನ ಹಾಗೂ ಕೃಷಿಯ ಮಹತ್ವದ ಕುರಿತು ಪ್ರಾಯೋಗಿಕ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮುಲ್ಲೇರಾ ಮಧು ಮಂಜುನಾಥ್ ಅವರು ಮಕ್ಕಳೊಂದಿಗೆ ಬೆರೆತು, ಭತ್ತದ ನಾಟಿ ಮಾಡುವ ವಿಧಾನ ಸೇರಿದಂತೆ ಕೃಷಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಆಸಕ್ತಿದಾಯಕವಾಗಿ ಹಾಗೂ ವಿವರವಾಗಿ ಮಾಹಿತಿ ನೀಡಿದರು. ಮಣ್ಣಿನಲ್ಲಿ ಕಾಲಿಟ್ಟು, ನೇಗಿಲು-ನಾಟಿ…

Read More

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಪ.ಜಾತಿ, ಪ.ಪಂಗಡದ ಮತ್ತು ಸಾಮಾನ್ಯ ವರ್ಗದ ಮೀನು ಹಿಡಿಯುವ ಸಲಕರಣೆಗಳ ವಿತರಣೆ” ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡದ ಮತ್ತು ಸಮಗ್ರ ಮೀನುಗಾರಿಕೆ ಅಭಿವೃದ್ದಿ ಯೋಜನೆಯಡಿ ಸಾಮಾನ್ಯ ವರ್ಗ ದ ಮೀನು ಕೃಷಿಕರಿಗೆ ಮೀನು ಹಿಡಿಯುವ ಸಲಕರಣೆಯನ್ನು ಉಚಿತವಾಗಿ ವಿತರಿಸಲು “ಸೇವಾ ಸಿಂಧು” ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮೀನುಗಾರರಿಗೆ/ ಮೀನು ಕೃಷಿಕರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್, 9 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಇಲಾಖೆಯ ತಾಲ್ಲೂಕು ಕಚೇರಿಗಳನ್ನು ಸಂಪರ್ಕಿಸಲು ಕೋರಿದೆ. ಲಿಂಕ್: https://sevaone.karnataka.gov.in/services/directApply.do?serviceId=2763 ನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸಚಿನ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.23 NEWS DESK : ಆಯುರ್ವೇದವು ಕೇವಲ ಕಾಯಿಲೆ ಬಂದ ನಂತರ ಚಿಕಿತ್ಸೆ ನೀಡುವ ಪದ್ಧತಿಯಲ್ಲ, ಆರೋಗ್ಯ ಕಾಪಾಡಿಕೊಂಡು ಕಾಯಿಲೆ ತಡೆಗಟ್ಟುವ ಜೀವನ ವಿಜ್ಞಾನವಾಗಿದೆ ಎಂದು ಕುಶಾಲನಗರ ಯೋಗಕ್ಷೇಮ ಆಸ್ಪತ್ರೆಯ ಆಯುರ್ವೇದ ವೈದ್ಯರಾದ ಡಾ.ಶ್ಯಾಮ್ ಪ್ರಸಾದ್ ಅವರು ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ‘ಆರೋಗ್ಯಕರ ನಾಳೆಗಾಗಿ ಆಯುರ್ವೇದ’ ಎಂಬ ಘೋಷವಾಕ್ಯದೊಂದಿಗೆ ನಗರದ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ 11 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು. ‘ಆಯು’ ಎಂದರೆ ಜೀವನ ಅಥವಾ ಆಯಸ್ಸು ಹಾಗೂ ‘ವೇದ’ ಎಂದರೆ ವಿಜ್ಞಾನ. ಜೀವನ ಹೇಗೆ ಆರೋಗ್ಯಕರವಾಗಿ ನಡೆಸಬೇಕು ಎಂಬುದನ್ನು ತಿಳಿಸಿಕೊಡುವುದೇ ಆಯುರ್ವೇದದ ಪ್ರಮುಖ ಉದ್ದೇಶವಾಗಿದೆ. ನಮ್ಮ ಹಿರಿಯರು ಅನುಭವದ ಮೂಲಕ ತಿಳಿದುಕೊಂಡು, ಪೀಳಿಗೆಯಿಂದ ಪೀಳಿಗೆಗೆ ಅನುಸರಿಸಿಕೊಂಡು ಬಂದಿರುವ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಮನೆ ಮದ್ದುಗಳಲ್ಲಿಯೂ ಆಯುರ್ವೇದದ ತತ್ವಗಳು ಅಡಕವಾಗಿವೆ ಎಂದು ವಿವರಿಸಿದರು. ಪ್ರಸ್ತುತ ಜೀವನಶೈಲಿಯಿಂದಾಗಿ ಮಧುಮೇಹ, ಬೊಜ್ಜು…

Read More

ಶ್ರೀಮಂಗಲ, NEWS DESK ಸೆ.23: ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿ ವ್ಯಾಪ್ತಿಯ ನಾಗರಿಕರ ಕುಂದು-ಕೊರತೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ ಆಯೋಜಿಸಲಾಗಿದೆ. ಸೆಪ್ಟೆಂಬರ್ 26ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀಮಂಗಲದ ಕೃಷ್ಣ ಕನ್ವೆನ್ಷನ್ ಹಾಲ್ನಲ್ಲಿ ಅಭಿಯಾನ ನಡೆಯಲಿದೆ. ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ. ಶ್ರೀಮಂಗಲ ಹೋಬಳಿಯ ಎಲ್ಲಾ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಿ, ಪರಿಹಾರ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪ್ರಜಾಸೇವೆ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Read More

ಮಡಿಕೇರಿ ಸೆ.23 NEWS DESK : ಮಕ್ಕಳ ಆರೋಗ್ಯಕರ ಬೆಳವಣಿಗೆಗಾಗಿ ಸಮತೋಲಿತ ಆಹಾರ, ಸ್ವಚ್ಛತೆ ಮತ್ತು ಉತ್ತಮ ಆಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಸನತ್ ಕುಮಾರ್ ಅವರು ಸಲಹೆ ನೀಡಿದರು. ಮಕ್ಕಳಲ್ಲಿ ಪೌಷ್ಟಿಕತೆ, ಸಮತೋಲಿತ ಆಹಾರ, ಆರೋಗ್ಯಕರ ಬೆಳೆವಣಿಗೆ ಹಾಗೂ ಅಪೌಷ್ಠಿಕತೆಯ ತಡೆಗಟ್ಟುವಿಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗ ಹಾಗೂ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಮಕ್ಕಳ ಹೊರ ರೋಗಿ ವಿಭಾಗದ ಮುಂಭಾಗದಲ್ಲಿ  ನಡೆದ ‘ಪೋಷಣ ಮಾಸಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಯಂದಿರು ಮತ್ತು ಸಾರ್ವಜನಿಕರಿಗೆ ಸ್ಥಳೀಯವಾಗಿ ಲಭ್ಯವಿರುವ ಪೌಷ್ಟಿಕ ಆಹಾರ ಪದಾರ್ಥಗಳ ಬಳಕೆ, ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು. ಮಕ್ಕಳ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಡಿ.ಆರ್.ಪುರುಷೋತ್ತಮ್ ಅವರು ಮಾತನಾಡಿ, ಮಗುವಿನ ದೈಹಿಕ…

Read More