ಲೇಖಕ: admin

ಮಡಿಕೇರಿ ನ.1 : ಭಾರತ ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿ ಮತ್ತು ಉಕ್ಕಿನ ಮಹಿಳೆ ಎಂದು ಹೆಸರಾಗಿದ್ದ ದಿ.ಮಾಜೀ ಪ್ರಧಾನಿ ಇಂದಿರಾಗಾಂಧಿ ಅವರ 39ನೇ ಪುಣ್ಯತಿಥಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸೇರಿದಂತೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭ ದೇಶದ ಗೃಹ ಸಚಿವರಾಗಿದ್ದ ಮತ್ತು 550 ಸಣ್ಣ ಸಣ್ಣ ರಾಜ್ಯಗಳನ್ನು ಒಗ್ಗೂಡಿಸಿ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾಗಿದ್ದ ಸರದಾರ್ ವಲ್ಲಭಾಯಿ ಪಟೇಲ್ ಅವರ 148ನೇ ಜನ್ಮದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ 186ನೇ ಪುಣ್ಯತಿಥಿಯನ್ನು ಆಚರಿಸಲಾಯಿತು. ದೇಶದ ಅಪ್ರತಿಮ ಮಹಿಳೆ ಎಸಿಕೊಂಡ ಹಾಗೂ ಸುಮಾರು 16 ವರ್ಷಗಳ ಕಾಲ ದೇಶವನ್ನು ಆಳಿದ ಇಂದಿರಾಗಾಂಧಿ ಅವರ ವ್ಯಕ್ತಿತ್ವ, ಸಾಧನೆ, ಹಿರಿಮೆ ಮತ್ತು ಬಡ ಹಾಗೂ ಶೋಷಿತ…

Read More

ಮಡಿಕೇರಿ ನ.1 : ಡಿವೈನ್ ಪಾರ್ಕ್ ಸಂಸ್ಥೆಯ ಅಂಗಸಂಸ್ಥೆಯಾದ ಮೂರ್ನಾಡು ವಿವೇಕ ಜಾಗೃತ ಬಳಗದ ವತಿಯಿಂದ ವಿವೇಕ ಸಂಪದ ಓದುಗರ ಸಮಾವೇಶ ನಡೆಯಿತು. ಸಿದ್ದಾಪುರದ ಕರಡಿಗೋಡು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದ ಡಿವೈನ್ ಪಾರ್ಕ್‍ನ ಅಧಿಕಾರಿ ಗುರುಪ್ರಸಾದ್ ಓದುಗರ ಸಮಾವೇಶದ ಕುರಿತು ವಿವರಿಸಿದರು. ವಿವೇಕವನ್ನೇ ಸಂಪದವಾಗಿಸಿಕೊಂಡಿರುವ ಪುಸ್ತಕ, ಸ್ವಾಮಿ ವಿವೇಕಾನಂದರ ಜಾಗೃತ ಚೇತನವೇ ಪುಸ್ತಕದ ಸಂಪಾದಕೀಯದ ಜವಾಬ್ದಾರಿ ಹೊತ್ತು ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಅನೇಕ ವಿಚಾರವನ್ನು ಹೊತ್ತ ಚಾತುರ್ಮಾಸಿಕ ಪತ್ರಿಕೆ. ಭಗವಂತನಿಗೆ ಮೊದಲ ಆದ್ಯತೆ ನೀಡಿದೆ. ಆದರೆ ಬದುಕು ಜಟಕಾಬಂಡಿಯಾಗದೆ, ಭಗವಂತನ ಕೃಪಾಬಂಡಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮೂರ್ನಾಡು ವಿವೇಕ ಜಾಗೃತ ಬಗಳಗದ ಅಧ್ಯಕ್ಷೆ ದಿವ್ಯ ತೇಜಕುಮಾರ್, ಉಪಾಧ್ಯಕ್ಷ ಯಶವಂತ್ ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಶೃತಿ ಸ್ವಾಗತಿಸಿದರು. ಬಿ.ಜಿ.ಸೌಮ್ಯ ನಿರೂಪಿಸಿದರು. ಸಿ.ಜಿ.ಲೀಲಾವತಿ ವಂದಿಸಿದರು. ಸುಮಾರು ನೂರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Read More

ಮಡಿಕೇರಿ ನ.1 : ಕರ್ನಾಟಕದ ಜೀವನದಿ ಕಾವೇರಿ ಉಗಮತಾಣವಾದ ತಲಕಾವೇರಿಯಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ ಹಾಗು ಬೇಬಿಗ್ರಾಮ ಶ್ರೀರಂಗಪಟ್ಟಣ ಚಂದ್ರವನ ಆಶ್ರಮದ ಶ್ರೀ ಮ ನಿ ಪ್ರ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿ 68 ನೇ ರಾಜ್ಯೋತ್ಸವ ಹಾಗೂ ಕರ್ನಾಟಕ ಎಂದು ನಾಮಕರಣ ಆಗಿ 50 ವರ್ಷ ಸಂದ ಪ್ರಯುಕ್ತ ಕನ್ನಡ ಧ್ವಜವನ್ನು ಹಾರಿಸುವ ಮೂಲಕ ವಿಶೇಷವಾಗಿ ರಾಜ್ಯೋತ್ಸವವನ್ನು ಆಚರಿಸಿದರು. ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ನೂರಾರು ಭಕ್ತರಿಗೆ ಸಿಹಿ ವಿತರಿಸಿ ಕನ್ನಡವನ್ನು ಉಳಿಸಿ ಬೆಳಿಸಿ ಎಂದು ಕಿವಿಮಾತನ್ನು ಉಭಯ ಶ್ರೀಗಳು ಹೇಳಿದರು. ಈ ಸಂದರ್ಭ ಮಾತನಾಡಿದ ಬೇಬಿ ಗ್ರಾಮ ಚಂದ್ರವನ ಆಶ್ರಮದ ಶ್ರೀ ಮ ನಿ ಪ್ರ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿ, ಕನ್ನಡ ಉಳಿಯಬೇಕು ಬೆಳೆಯಬೇಕು ಎಂದರೆ ನಾವೆಲ್ಲರೂ ಕೂಡಾ ಒಮ್ಮನಸ್ಸಿನಿಂದ ಒಟ್ಟಾರೆಯಾಗಿ ಇರಬೇಕು. ಇವತ್ತು ಕನ್ನಡನಾಡಿನ ಗಡಿ ಸಮಸ್ಯೆ , ಜಲ ಸಮಸ್ಯೆ ಈ ಎಲ್ಲಾ ಸಮಸ್ಯೆಗಳಿಗೆ…

Read More

ಮಡಿಕೇರಿ ನ.1 : ರಾಜ್ಯಗಳ ಮರು-ಸಂಘಟನಾ ಕಾಯಿದೆ 1956 ರ ಒಪ್ಪಂದಗಳಿಗೆ ಕರ್ನಾಟಕ ರಾಜ್ಯ ಬದ್ಧವಾಗಿಲ್ಲ, ಇದರಿಂದ ಕೊಡವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆ ಬೇಡಿಕೆಯನ್ವಯ 2ನೇ ರಾಜ್ಯ ಮರು ಸಂಘಟನೆ ಆಯೋಗ ರಚಿಸಬೇಕೆಂದು ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದರು. ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ 9 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ ಅವರು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಿ ಕೊಡವ ಲ್ಯಾಂಡ್ ಪರವಾಗಿ ಆಯೋಗವನ್ನು ರಚಿಸಬೇಕೆಂದು ಪ್ರತಿಪಾದಿಸಿದ್ದಾರೆ. ಸರ್ಕಾರಗಳು ಈ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತ್ಯಂತ ಸೂಕ್ಷ್ಮ ಬುಡಕಟ್ಟು…

Read More

ಕುಶಾಲನಗರ/ಕೂಡಿಗೆ, ನ.1  :  ಕನ್ನಡ ನಾಡಿನ ನಾಡು- ನುಡಿ, ಭಾಷೆ, ಸಂಸ್ಕೃತಿ, ಸಾಹಿತ್ಯ, ಪರಂಪರೆಯನ್ನು ಉಳಿಸಿ ಬೆಳೆಸುವುದಕ್ಕೆ ಸರ್ಕಾರದ ಜತೆಗೆ ನಾಡಿನ ಜನರು ಸಹಕರಿಸುವ ಮೂಲಕ ಕೈಜೋಡಿಸಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಮುಖ್ಯ ವ್ಯವಸ್ಥಾಪಕರು ಹಾಗೂ  ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಸೂದನ ರತ್ನಾವತಿ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಹಾಗೂ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ  ರಾಷ್ಟ್ರಕವಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ  ಏರ್ಪಡಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: 50 ರ ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ ಸಂರಕ್ಷಣೆ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: 50 ರ ಮಹತ್ವ ಕುರಿತು ಪ್ರಧಾನ ಭಾಷಣ ಮಾಡಿದರು. ಕನ್ನಡ…

Read More

ವಿರಾಜಪೇಟೆ ನ.1 :  68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಅಧ್ಯಕ್ಷ ಮಾಳೇಟಿರ ಎಂ.ಬೆಲ್ಲು ಬೋಪಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.3ರಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕನ್ನಡಕ್ಕೆ ಸಂಬಂದಪಟ್ಟ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಅಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ. ಹಾಗೂ ಕಾರ್ಯಕ್ರಮದಲ್ಲಿ ಶಾಸಕರು ಸೇರಿದಂತೆ ಇತರ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಬೆಲ್ಲು ಬೋಪಯ್ಯ ಹೇಳಿದರು. ಕರ್ನಾಟಕ ಸಂಘದ ಕಾರ್ಯದರ್ಶಿ ಮುಂಡ್ಯೋಳಂಡ ಕುಸುಮ ಸೋಮಣ್ಣ, ಕೋಶಾಧಿಕಾರಿ ಕೆ.ಯು.ಗಣೇಶ್ ತಮ್ಮಯ್ಯ, ಆಡಳಿತ ಮಂಡಳಿ ನಿದೇಶಕರಾದ ಸಿ.ಪಿ. ಕಾವೇರಪ್ಪ, ಸಿ.ಎಂ.ಸುರೇಶ್ ನಾಣಯ್ಯ, ಎ.ಎಂ.ಜೋಯಪ್ಪ, ಪುಗ್ಗೇರ ನಂದ, ರಾಣು ಮಂದಣ್ಣ, ಬಿ. ಎಂ. ಸುರೇಶ್, ಎಂ.ಜಿ. ಪೂಣಚ್ಚ, ಬಿ.ಆರ್ ಗಣೇಶ್, ಕೆ.ಎಂ. ಮೊಣ್ಣಪ್ಪ, ಎಂ.ಬಿ. ದೇವಯ್ಯ, ಕಚೇರಿ ಕಾರ್ಯದರ್ಶೀ ರಾಧ ಎಂ.ಪಿ. ಮತ್ತಿತರರು  ಹಾಜರಿದ್ದರು.

Read More

ಮಡಿಕೇರಿ ನ.1 : ಎಲ್ಲಾ ಭಾಷೆಗಳನ್ನು ಗೌರವಯುತವಾಗಿ ಕಾಣುವ ಸ್ವೀಕೃತಿಯ ಮನೋಭಾವ ಪ್ರತಿಯೊಬ್ಬ ರೂಪಿಸಿಕೊಳ್ಳಬೇಕು. ಪ್ರಸ್ತುತ ಸಂದರ್ಭದಲ್ಲಿ ಪ್ರಾದೇಶಿಕ ಭಾಷೆಗೂ ಸಾಹಿತ್ಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಭಾಷಿಕ ಎಚ್ಚರವೊಂದು ಒಡಮೂಡಿದೆ. ಆದರೂ ಸಹ ನಮ್ಮ ನಡುವೆ ಪ್ರತ್ಯೇಕತ ಕೂಗು ಮೂಡುತ್ತಲೇ ಇದೆ. ನಾವು ಎಚ್ಚರಿಕೆಯಿಂದ ಭಾಷೆಯನ್ನು ಒಳಗೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಮಾತ್ರವಲ್ಲ ಮಕ್ಕಳು ಕನ್ನಡದ ಜೊತೆಯಲ್ಲಿ ತಮ್ಮ ಮಾತೃ ಭಾಷೆಯಲ್ಲಿ ಕಲಿಕೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಕಾಲೇಜಿನ ಉಪನ್ಯಾಸಕ ಡಾ. ಎನ್.ವಿ. ಕರುಣಾಕರ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗ, ಎನ್ ಎಸ್ ಎಸ್, ಎನ್ ಸಿ.ಸಿ, ಇಸಿ/ಸಿಸಿ, ಕ್ರೀಡಾ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ “ಹೆಸರಾಯಿತು ಕರ್ನಾಟಕ-50 ರಾಜ್ಯೋತ್ಸವ ಸಂಭ್ರಮ” ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಸಂದರ್ಭದಲ್ಲಿ ಭ್ರಷ್ಟಾಚಾರ ಮುಕ್ತ ಕರ್ನಾಟಕ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪಠ್ಯ ಪುಸ್ತಕಗಳಲ್ಲಿ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ಕಲ್ಪಿಸಲಾಗಿತ್ತು. ಆ ಬಗೆಯಲ್ಲಿ ಕನ್ನಡ ತನ್ನ…

Read More

ಮಡಿಕೇರಿ ನ.1 : ಕರಿಕೆ ಗ್ರಾ.ಪಂ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಡಿ ಗ್ರಾಮ ಕರಿಕೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಳ್ಳುಕೊಚ್ಚಿ ಯಲ್ಲಿ ಪಂಚಾಯತಿ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಧ್ವಜಾರೋಹಣ ನೆರವೇರಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಪ್ರೌಢ ಶಾಲೆಯಿಂದ ಎಳ್ಳು ಕೊಚ್ಚಿ ಪಟ್ಟಣದ ವರೆಗೆ ಕನ್ನಡ ಘೋಷಣೆಗಳೊಂದಿಗೆ ಮೆರವಣಿಗೆ ನಡೆಯಿತು. ನಂತರ ಸಿಹಿ ಹಂಚಿ ಸಂಭ್ರಮಿಸಿದರು. ಪಂಚಾಯತಿ ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಸದಸ್ಯರುಗಳಾದ ಕಟ್ಟ ಕೋಡಿ ದೇವದತ್ತ, ಆಯಿಷಾ, ಜಯಶ್ರೀ ಜನಾರ್ಧನ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು, ಕರಿಕೆ ಪ್ರೌಢ ಶಾಲೆಯ ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಎಸ್‍ಡಿಎಂಸಿ ಪದಾಧಿಕಾರಿಗಳು, ಸಹಕಾರ ಸಂಘದ ಉಪಾಧ್ಯಕ್ಷ ಎಂ.ಎಂ.ರೆಲಸನ್, ನಿರ್ದೇಶಕರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತಿ ಸಿಬ್ಬಂದಿ ವರ್ಗ, ಸಾರ್ವಜನಿಕರು ಹಾಜರಿದ್ದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ ಎಲ್ಲರನ್ನು ಸ್ವಾಗತಿಸಿ, ವಂದಿಸಿದರು.

Read More

ಸೋಮವಾರಪೇಟೆ ನ.1 : ಕನ್ನಡನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ, ಕನ್ನಡ ನಮ್ಮ ಮಾತೃಭಾಷೆ. ನಮ್ಮ ಆತ್ಮಗೌರವ ಭಾಷೆ ಬೆಳೆಯಲು ನಾವೆಲ್ಲಾ ಪಣತೊಡಬೇಕು ಎಂದು ತಶೀಲ್ದಾರ್ ಎಸ್.ಎನ್.ನರಗುಂದ ಹೇಳಿದರು. ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಾವು ಕೇವಲ ನವೆಂಬರ್ ಕನ್ನಡಿಗರಾಗದೇ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರದಲ್ಲಿ ಕನ್ನಡ ಬಳಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟ್ಟಿಬದ್ಧರಾಗಿರುತ್ತೇನೆ ಎಂದು ಪ್ರತಿಜ್ಞೆ ಮಾಡಬೇಕಾಗಿದೆ ಎಂದು ಹೇಳಿದರು. ಉದಯವಾದ ಕನ್ನಡ ನಾಡಿನ ಮುಂದೆ ಸಾಕಷ್ಟು ಸಮಸ್ಯೆಗಳು ಹಿಂದಿನಿಂದಲೂ ಹಸಿರಾಗಿಯೇ ಉಳಿದುಕೊಂಡಿವೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ. ಶಾಲೆಗಳ ಮೇಲೆ ಪೋಷಕರ ಆಸಕ್ತಿ ಕಡಿಮೆಯಾಗುತ್ತಿವೆ. ಅಂತಾರಾಜ್ಯ ನದಿ ವಿವಾದ, ಗಡಿಸಮಸ್ಯೆ, ಪ್ರಾದೇಶಿಕ ಅಸಮಾತೋಲನ, ಉದ್ಯೋಗದಲ್ಲಿ ಕನ್ನಡಗರಿಗೆ ಮೀಸಲಾತಿ ವಿಚಾರವಾಗಿ ಬಂದ ವರದಿಗಳು ಕಾರ್ಯಗತಗೊಳ್ಳಬೇಕಿದೆ.…

Read More

ಬೆಂಗಳೂರುನ.1- ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ…

Read More