ಬೆಂಗಳೂರು ಡಿ.6 : ಡಾ. ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿ, ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರಾಂಡ್ ರಾಯಭಾರಿಯಾಗಿ ಘೋಷಣೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಡಿ.6 : ಪ್ರಸಕ್ತ (2023-24) ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಾದ ಪ್ಲಿಪ್‍ಕಾರ್ಟ್, ಅರ್ಬನ್ ಕಂಪನಿ, ಓಲಾ, ಓಬರ್, ಸ್ವಿಗ್ಗಿ, ಜೊಮೆಟೋ, ಅಮೆಜಾನ್, ಗಿಗ್ ವರ್ಕರ್ ಗಳಲ್ಲಿ ಲಭ್ಯವಿರುವ ಉದ್ಯೋಗಗಳ ತರಬೇತಿ ಹಾಗೂ ಫ್ರೀ ಲ್ಯಾನ್ಸರ್(ಖಾಸಗಿ ಕ್ಷೇತ್ರ) ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಾದ ಪ್ಲಿಪ್‍ಕಾರ್ಟ್, ಅರ್ಬನ್ ಕಂಪನಿ, ಓಲಾ, ಓಬರ್, ಸ್ವಿಗ್ಗಿ, ಜೊಮೆಟೋ, ಅಮೆಜಾನ್, ಗಿಗ್ ವರ್ಕರ್ ಗಳಲ್ಲಿ ಲಭ್ಯವಿರುವ ಉದ್ಯೋಗಗಳಿಗೆ ಹಾಗೂ ಫ್ರೀ ಲ್ಯಾನ್ಸರ್(ಖಾಸಗಿ ಕ್ಷೇತ್ರ)ಗಳಿಗೆ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ಆಸಕ್ತ ಎಲ್ಲಾ ಪುರುಷ, ಮಹಿಳೆ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2 ದಿನ ಓರಿಯೇಂಟೇಷನ್ ತರಬೇತಿ, 18 ರಿಂದ 45 ವರ್ಷದೊಳಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…
ಮಡಿಕೇರಿ ಡಿ.6 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಡಿ.8 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಾಗೂ ಡಿ.13 ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಸುಂಟಿಕೊಪ್ಪ ಡಿ.6 : ಸುಂಟಿಕೊಪ್ಪ ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಅಧ್ಯಕ್ಷರಾಗಿ ಬಿ.ಎಂ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೇವಾಲಯದ ಆವರಣದಲ್ಲಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ನೇಮಕಗೊಳಿಸಲಾಯಿತು. ಗೌರವಾಧ್ಯಕ್ಷರಾಗಿ ಕೆ.ಎ.ಬಾಲಕೃಷ್ಣ, ಮುತ್ತಯ್ಯ, ಸುರೇಶ್‍ಗೋಪಿ, ಟಿ.ಜಿ.ರಾಧಾಕೃಷ್ಣ, ಉಪಾಧ್ಯಕ್ಷರಾಗಿ ಎಂ.ಮಂಜುನಾಥ್, ಬಿ.ಎ.ಪುನೀತ್, ಬಿ.ಕೆ.ಪ್ರಶಾಂತ್‍ಕುಮಾರ್, ಕೆ.ರವಿ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಚಂದ್ರ ನೇಮಕೊಂಡಿದ್ದಾರೆ. ಖಜಾಂಜಿಯಾಗಿ ಎಂ.ಆರ್.ಶಶಿಕುಮಾರ್, ಸಹ ಕಾರ್ಯದರ್ಶಿಯಾಗಿ ವಿ.ಕೆ.ರಾಜು, ಕೆ.ಕನಿಸ್, ಮಣಿಕಂಠ, ಸಂಘಟನಾ ಕಾರ್ಯದರ್ಶಿಯಾಗಿ ಪೃಥ್ವಿರಾಜ್, ಶೇಖರ್ (ಅಣ್ಣು), ಕೆ.ಕೆ.ವಾಸುದೇವ, ಡಿ.ಕೆ.ರಾಕೇಶ್, ಎಂ.ಉದಯ, ಸಿ.ಸಿ.ಸುನಿಲ್, ಸಲಹಾ ಸಮಿತಿ ಸದಸ್ಯರುಗಳಾಗಿ ವಿ.ಎ.ಸಂತೋಷ್, ಧನುಕಾವೇರಪ್ಪ, ದೀನು ದೇವಯ್ಯ, ಪಿ.ಲೋಕೇಶ್, ಎ.ಶ್ರೀಧರ್ ಕುಮಾರ್, ಅನೂಪ್, ಎ.ಶ್ರೀಧರ್, ಸಿ.ಬಿ.ಚಂದ್ರಶೇಖರ್, ಎಂ.ಆರ್.ಶಿವಮಣಿ (ಶಿವರಾಂ) ನೇಮಕಗೊಂಡಿದ್ದು, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಬಿ.ಸಿ.ಪರುಷೋತ್ತಮ್, ಬಿ.ವಿ.ಸಜಿತ್, ಉಮೇಶ್, ಬಿ.ಆರ್.ಸತೀಶ್, ಬಸವರಾಜ್, ದೊರೆ, ಆರ್.ವಿಜಯ, ಚಂದ್ರ ಹಾಗೂ ಬಿ.ಕೆ.ದಿನೇಶ್ ಅವರನ್ನು ಆಯ್ಕೆ ಮಾಡಲಾಗಿದೆ.
ನಾಪೋಕ್ಲು ಡಿ.6 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಸಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕಿನ ಚೆಟ್ಟಿಮಾನಿಯಲ್ಲಿ ಗ್ರಾಮ ಸಿರಿ ಕಾರ್ಯಕ್ರಮ ನಡೆಸುವ ಸಲುವಾಗಿ ಚೆಟ್ಟಿಮಾನಿ ಶಾದಿ ಮಹಲ್ ನಲ್ಲಿ ಪಂಚಾಯತ್ ಅಧ್ಯಕ್ಷ ಪೊಡನೋಳನ ದಿನೇಶ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಗ್ರಾಮ ಸಿರಿ ಕಾರ್ಯಕ್ರಮ ಒಂದು ಹೋಬಳಿಯ ಮೂರು ಗ್ರಾ.ಪಂ ಗಳಿಗೆ ಒಳಪಟ್ಟ ಶಾಲಾ-ಕಾಲೇಜುಗಳು, ಅಂಗನವಾಡಿ, ಸಂಜೀವಿನಿ ಒಕ್ಕೂಟ, ಸ್ವಸಹಾಯ ಸ್ತ್ರೀಶಕ್ತಿ ಸಂಘಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಇವರೆಲ್ಲರ ಸಹಭಾಗಿತ್ವದಲ್ಲಿ ಗ್ರಾಮೀಣ ಕ್ರೀಡಾಕೂಟ, ಜನಪದ ಸಾಹಿತ್ಯ ಕ್ಷೇತ್ರದ ಸಾಧಕರ ಪರಿಚಯ, ಸಾಂಸ್ಕೃತಿಕ ಕಾರ್ಯಕ್ರಮಗಳನೊಳಗೊಂಡ ಒಂದು ದಿನದ ಕಾರ್ಯಕ್ರಮನ್ನು ಗ್ರಾಮಸ್ಥರೇ ಸೇರಿಕೊಂಡು ಗ್ರಾಮದಲ್ಲಿ ನಡೆಸುವ ಎಂದ ಟಿ.ಪಿ.ರಮೇಶ್ ಮಾಹಿತಿಗಳನ್ನು ಕ್ರೋಢೀಕರಿಸಿ ಸ್ವಾಗತ ಸಮಿತಿಯ ಗಮನಕ್ಕೆ ತಂದು ಕಿರು ಸಂಚಿಕೆ ಹೊರ ತರುವಂತೆ ಸೂಚನೆ…
ನಾಪೋಕ್ಲು ಡಿ.6 : ಮೈಸೂರಿನಲ್ಲಿ ನಡೆದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ ನ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಮಡಿಕೇರಿ ಕ್ರೀಡಾ ಶಾಲೆಯ ವಿದ್ಯಾರ್ಥಿನಿ ಪಿ.ಡಿ.ಶ್ರಾವ್ಯ ಪ್ರಥಮ ಮತ್ತು ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಇವಳು ಮಡಿಕೇರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಸೆನ್ ಸೈ ಚಂದನ್ ಅವರಲ್ಲಿ ತರಬೇತಿ ಪಡೆಯುತ್ತಿದಾಳೆ. ಶ್ರಾವ್ಯ ಕುಂಜಿಲ ಗ್ರಾಮದ ದೇವಯ್ಯ ಮತ್ತು ಚಿತ್ರ ದಂಪತಿಯ ಪುತ್ರಿ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಡಿ.6 : ಶಾಲೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಗೋಣಿಕೊಪ್ಪಲು- ಪೊನ್ನಂಪೇಟೆ ಮುಖ್ಯರಸ್ತೆಯ ಅರುವತೋಕ್ಲುವಿನಲ್ಲಿ ನಡೆದಿದೆ. ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಂಡಿದ್ದು, ಗೋಣಿಕೊಪ್ಪಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ ಡಿ.6 : ವಿಶ್ವ ವಿಶೇಷ ಚೇತನರ ದಿನಾಚರಣೆಯ ಕಾರ್ಯಕ್ರಮವು ನಗರದ ಕಾವೇರಿ ಕಲಾಕ್ಷೇತ್ರ ಸಭಾಂಗಣದಲ್ಲಿ ನಡೆಯಿತು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿಶೇಷ ಚೇತನರಿಗಾಗಿ ಎಲ್ಲಾ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯಲ್ಲಿನ ಶೇ.5 ರಷ್ಟು ಅನುದಾನವನ್ನು ಮೀಸಲಿರಿಸಲಾಗಿದ್ದು, ಈ ಅನುದಾನದ ಉಪಯೋಗ ಪಡೆದುಕೊಳ್ಳುವಂತೆ ಹಾಗೂ ಸರ್ಕಾರದಿಂದ ದೊರೆಯುವ ಸಾಧನ ಸಲಕರಣೆಗಳು, ಪಿಂಚಣಿ ಇತ್ಯಾದಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ಮಾಡಿದರು. ಹಾಗೆಯೇ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಲೈಬ್ರರಿಯ ವ್ಯವಸ್ಥೆ ಕೂಡ ವಿಶೇಷ ಚೇತನರಿಗೆ ಮಾಡಲಾಗಿದೆ ಎಂದರು. ವೋಟರ್ ಹೆಲ್ಪ್‍ಲೈನ್‍ನಲ್ಲಿ ಆಧಾರ್ ಕಾರ್ಡನ್ನು ನೋಂದಣಿ ಮಾಡಿಕೊಂಡಲ್ಲಿ ಚುನಾವಣೆಗಳಲ್ಲಿ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಮಾಡಿಕೊಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ವಕೀಲರಾದ ವೈಧ್ಯನಾಥ್ ಮಾತನಾಡಿ 1981 ರ ಡಿಸೆಂಬರ್ 3 ನ್ನೂ ವಿಶ್ವ ವಿಶೇಷಚೇತನ ದಿನಾಚರಣೆ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದೆ ಎಂದು ತಿಳಿಸಿದರು. ವಿಶೇಷ ಚೇತನರಿಗಾಗಿ ಕಾನೂನು ರೂಪಿಸುವ ಸಲುವಾಗಿ ವಿಶೇಷ ಚೇತನರ ಕಾಯಿದೆ ಜಾರಿಗೆ…
ಮಡಿಕೇರಿ ಡಿ.5 : ಕುಶಾಲನಗರ ಗ್ರಾಮಾಂತರ ವ್ಯಾಪ್ತಿಯ ಬಾಳಗೋಡು ಗ್ರಾಮದ ಮನೆಯೊಂದರಿಂದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ರಂಗಸಮುದ್ರ ಗ್ರಾಮದಲ್ಲಿ ವಾಸವಿದ್ದ, ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ(33) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಲ್ಲಿದ್ದ 1 ಸಾವಿರ ರೂ. ನಗದು, 47 ಗ್ರಾಂ ಚಿನ್ನಾಭರಣ ಹಾಗೂ 200 ಗ್ರಾಂ ಬೆಳ್ಳಿಯ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಳಗೋಡು ಗ್ರಾಮದ ಶರೀಫ್ ಎಂಬುವವರ ಮನೆಯಿಂದ ಇದೇ ಡಿ.2 ರ ರಾತ್ರಿ ಗಾದ್ರೇೀಜ್‍ನಲ್ಲಿದ್ದ 5ಸಾವಿರ ರೂ. ನಗದು, 47 ಗ್ರಾಂ ಚಿನ್ನಾಭರಣ ಹಾಗೂ 200ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸರು, ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಸೈಫುಲ್ ಇಸ್ಲಾಂ, ಅಸ್ಸಾಂನ ಬುರಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣ ಹಾಗೂ ಮರಿಗಾಂವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಳವು, ನಿಷೇಧಿತ ಮಾದಕ ವಸ್ತುಗಳ ಸರಬರಾಜು…
ಮಡಿಕೇರಿ ಡಿ.5 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಂಡಿಸಿದ ಹಕ್ಕೊತ್ತಾಯದ ಹಿನ್ನೆಲೆಯಲ್ಲಿ ಡಾ.ದ್ವಾರಕನಾಥ್ ಆಯೋಗದ ವರದಿ ಮತ್ತು ಕರ್ನಾಟಕ ರಾಜ್ಯ ಶ್ರೇಷ್ಠ ನ್ಯಾಯಾಲಯದ ಸ್ಪಷ್ಟ ನಿರ್ದೇಶನವಿದ್ದರೂ ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು “ಕೊಡವ” ಎಂದು ನಮೂದಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಎರಡು ತಿಂಗಳೇ ಕಳೆದಿದ್ದರೂ ಸರ್ಕಾರದ ಸಾಫ್ಟ್ ವೇರ್‍ನಲ್ಲಿ ಈ ಬದಲಾವಣೆಯನ್ನು ಅಪ್‍ಲೋಡ್ ಮಾಡಿಲ್ಲ. ಇದರಿಂದ ಕೊಡವರಿಗೆ ದಾಖಲೆಗಳನ್ನು ಪಡೆಯುವ ಸಂದರ್ಭ ಅನ್ಯಾಯವಾಗುತ್ತಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಈ ವಿಚಾರದಲ್ಲಿ ಆಡಳಿತಾಂಗ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಮಾಜ ವಿಜ್ಞಾನಿ ಡಾ.ಸಿ.ಎಸ್.ದ್ವಾರಕನಾಥ್ ಅವರನ್ನು ಸಿಎನ್‍ಸಿ ಕೊಡಗಿಗೆ ಆಹ್ವಾನಿಸಿ, ಕೊಡವರ ಸಮಗ್ರ ಸಾಮಾಜಿಕ, ಚಾರಿತ್ರಿಕ ಹಿನ್ನೆಲೆ ಮತ್ತು ದಾಖಲೆಗಳನ್ನು ಒದಗಿಸುವುದರೊಂದಿಗೆ ಆಯೋಗದ ಕರೆಯಂತೆ ಬೆಂಗಳೂರಿನ ಆಯೋಗದ ನ್ಯಾಯಾಲಯದಲ್ಲಿ ಈ ಸಂಬಂಧ…






