ಲೇಖಕ: admin

ಮಡಿಕೇರಿ ಅ.30 :  ಕೊಡವ ಕುಟುಂಬ ತಂಡಗಳ ನಡುವಿನ ಮೂರನೇ ವರ್ಷದ ಕೌಟುಂಬಿಕ ಹಗ್ಗ ಜಗ್ಗಾಟ ಸ್ಪರ್ಧೆ ಬೊಟ್ಟೋಳಂಡ ಕಪ್ ಲೋಗೋ ಅನಾವಣಗೊಳಿಸಲಾಯಿತು. ಮಡಿಕೇರಿ ಹೊರ ವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಲಾಂಛನ ಅನಾವರಣ ಮಾಡಿದರು. ಇಂಧನ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ತೀತೀರ ರೋಷನ್ ಅಪ್ಪಚ್ಚು, ಟಗ್ ಆಫ್‌ವಾರ್‌ ಅಕಾಡೆಮಿ ಅಧ್ಯಕ್ಷ ಪೊನ್ನೋಳತಂಡ ಕಿರಣ್ ಸೊನ್ನಪ್ಪ ಮತ್ತಿತರರು ಇದ್ದರು. ಪ್ರಥಮ ವರ್ಷ ಪೊನ್ನೋಳತಂಡ ಕಪ್‌, ದ್ವಿತೀಯ ವರ್ಷ ಚೆಟ್ಟಂಗಡ ಕಪ್ ನಡೆದಿತ್ತು.

Read More

ನಾಪೋಕ್ಲು ಅ.30 : ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶ್ರೀ ಇಗ್ಗುತ್ತಪ್ಪ ದೇವರ ಪರದಂಡ ಆರಾಧನೆ ಎಂದೇ ಪ್ರಸಿದ್ಧವಾಗಿರುವ ಪತ್ತಾಲೋದಿ ಉತ್ಸವ ಶ್ರದ್ಧಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ತುಲಾಭಾರ ಸೇವೆ ಹಾಗೂ ವಿವಿಧ ಪೂಜಾ ಕಾರ್ಯಗಳ ನಂತರ ವಿಶೇಷ ಮಹಾಪ ಪೂಜೆ ನೆರವೇರಿತು. ಈ ಸಂದರ್ಭ ಸರ್ವ ಸಮುದಾಯದ ಭಕ್ತ ಜನರ ಶ್ರೇಯೋಭಿವೃದ್ಧಿಗೆ ಹಾಗೂ ಕೊಡಗಿನಲ್ಲಿ ಹಸಿರು ನೆಲೆಸಿ ಸುಭಿಕ್ಷೆ ಸಮೃದ್ಧಿಯಿಂದ ಕೂಡಿರುವಂತೆ ದೇವತಕ್ಕರಿಂದ ಪ್ರಾರ್ಥನೆ ಹಾಗೂ ತೀರ್ಥ ಪ್ರಸಾದ ವಿತರಿಸಲಾಯಿತು. ನಂತರ ಸಂಪ್ರದಾಯದಂತೆ ದೇವರ ನೃತ್ಯ ಬಲಿ ನೆರವೇರಿತು. ಉತ್ಸವದ ಅಂಗವಾಗಿ ದೇವಾಲಯದ ನಮಸ್ಕಾರ ಮಂಟಪ, ಗರ್ಭಗುಡಿ ಸೇರಿದಂತೆ ಸನ್ನಿಧಿಯ ಆವರಣದಲ್ಲಿ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಈ ಸಂದರ್ಭ ದೇವಾಲಯದ ದೇವತಕ್ಕರಾದ ಪರದಂಡ ಕುಟುಂಬಸ್ಥರು ಸೇರಿದಂತೆ ಊರ ಪರ ಊರಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ

Read More

ನಾಪೋಕ್ಲು ಅ.30 : ಪುರಾತನ ಕಾಲದಿಂದ ಸಾಂಪ್ರದಾಯಿಕವಾಗಿ ಸಂರಕ್ಷಿಸಲ್ಪಟ್ಟ ಉಪಯೋಗಿಸಲ್ಪಟ್ಟ ವನ್ಯಜೀವಿಗಳ ಉತ್ಪನ್ನಗಳ ವಿಷಯದಲ್ಲಿ ಆತಂಕ ಮತ್ತು ಗೊಂದಲ ಏರ್ಪಟ್ಟಿದೆ. ಇದು ಕೊಡಗಿನ ಜನರಿಗೂ ಸಮಸ್ಯೆಯಾಗಲಿದೆ. ಈ ಬಗ್ಗೆ ಶಾಸಕರು ಜನರಿಗೆ ಸ್ಪಂದಿಸುವಂತೆ ಅಖಿಲ ಕೊಡವ ಸಮಾಜ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದೆ. ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಕಾವೇರಿಯಪ್ಪ, ಗೌರವ ಕಾರ್ಯದರ್ಶಿ ಕೀತಿಯಂಡ ವಿಜಯ ಕುಮಾರ್ ಮಾತನಾಡಿ, ನೆಲಜಿ ಗ್ರಾಮದ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಂದರ್ಭದಲ್ಲಿ ಶಾಸಕರನ್ನು ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಕಾವೇರಿಯಪ್ಪ , ಗೌರವ ಕಾರ್ಯದರ್ಶಿ ಕೀತಿಯಂಡ ವಿಜಯ ಕುಮಾರ್ ಅವರು ಭೇಟಿಯಾಗಿ ಚರ್ಚಿಸಿದರು. ರಾಜ್ಯದ ಜನಸಾಮಾನ್ಯರಲ್ಲಿ ಬೆಂಗಳೂರಿನ ಅರಣ್ಯಾಧಿಕಾರಿಗಳು ಸೃಷ್ಟಿಸಿದ ಆತಂಕದ ಪರಿಸ್ಥಿತಿಯನ್ನು ವಿವರಿಸಿ, ಜನಸಾಮಾನ್ಯರಲ್ಲಿ ಗೊಂದಲದ ವಾತಾವರಣವನ್ನುಂಟು ಮಾಡಿರುವ ವಿಷಯವನ್ನು ಪ್ರಸ್ತಾಪಿಸಿದರು. ಶಾಸಕ ಪೊನ್ನಣ್ಣ ಅವರು ಬೆಂಗಳೂರಿನಲ್ಲಿ ನಡೆದ ಘಟನೆಗಳ ಹಿನ್ನಲೆಯನ್ನು ಸಂಕ್ಷಿಪ್ತವಾಗಿ ವಿವರಿಸಿ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಇನ್ನೆರಡು ದಿವಸಗಳೊಳಗೆ ಜನತೆಯ ಮುಂದಿಡುವುದಾಗಿ ತಿಳಿಸಿದರು.…

Read More

ಕುಶಾಲನಗರ, ಅ.30 :  ವೀರಶೈವ , ಲಿಂಗಾಯತ ಅಂತಾ ಪ್ರತ್ಯೇಕ ಧರ್ಮ ಅಥವಾ ಒಂದು ಜಾತಿಯಿಲ್ಲ. ವೀರಶೈವ, ಲಿಂಗಾಯತ ಎರಡೂ ಒಂದೇ ಅಂತಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ  ಹಾಗೂ  ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಮಹದೇವ ಬಿದಿರಿ  ಹೇಳಿದರು. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆದ  ಹಾನಗಲ್ ಶ್ರೀ ಕುಮಾರಸ್ವಾಮಿಗಳ 156 ನೇ ಜಯಂತಿ, ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಸ್ಮರಣೋತ್ಸವ ಹಾಗೂ ವೀರಶೈವ ಧಾರ್ಮಿಕ ಜನಜಾಗೃತಿ ಸಭೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವೀರಶೈವ ಲಿಂಗಾಯತ ಸಮಾಜವು ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಅಭಿವೃದ್ಧಿ ಹೊಂದಲು ಪ್ರಯತ್ನಿಸಬೇಕಿದೆ. ಎಲ್ಲರ ಒಗ್ಗಟ್ಟಿನಿಂದ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಅವರು ಸಲಹೆ ನೀಡಿದರು. ಪ್ರತಿಯೊಬ್ಬರೂ ಸಮಾಜದ ಸುಧಾರಣೆಗೆ ಕಂಕಣಬದ್ಧರಾಗಿ ದುಡಿಯುವ ಮೂಲಕ ದುರ್ಲರ ಸಮಾಜದ ಅಭಿವೃದ್ಧಿಗೆ ಎಲ್ಲರೂ ಸಂಘಟಿತರಾಗಿ ಶ್ರಮಿಸಬೇಕು ಎಂದು…

Read More

ಮಡಿಕೇರಿ ಅ.30 :  ಅಖಿಲ ಕೊಡವ ಸಮಾಜ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಸಮಾಜ ಸೇವೆ ಮಾಡಿ, ಇತ್ತೀಚಿಗೆ ಅಗಲಿದ ದೇಶತಕ್ಕ ಮಾತಂಡ ಮೊಣ್ಣಪ್ಪ ಅವರ ನೆನಪಿಗಾಗಿ, ಕೊಡವಾಮೆರ ಕೊಂಡಾಟ ಸಂಘಟನೆ ಪ್ರಬಂಧ ಸ್ಪರ್ಧೆ ಏರ್ಪಡಿಸಿದೆ ಎಂದು ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ಯಾವುದೇ ಜಾತಿ, ಧರ್ಮದ ಮಿತಿ ಇಲ್ಲದೆ, ಬರಹಗಾರರು 2,500 ವಾಕ್ಯಗಳಿಗೆ ಮೀರದಂತೆ ಕೊಡವ ಭಾಷೆಯಲ್ಲಿ ಮಾತಂಡ ಮೊಣ್ಣಪ್ಪ ಅವರ ಬಗ್ಗೆ ಟೈಪ್ ಮಾಡಿ ಪೋಸ್ಟ್    ತೀತಿಮಾಡ ಸೋಮಣ್ಣ, ಮುಳಿಯ ಜ್ಯುವೆಲರಿ, ಮಹಾದೇವಪೇಟೆ    ಅಥವಾ ವಾಟ್ಸಪ್  ಸಂಖ್ಯೆ +91 94822 46336  ಮೂಲಕ ಸ್ಪರ್ಧಾ ಸಂಚಾಲಕ ಕೊಡವಾಮೆರ ಕೊಂಡಾಟ ಸಂಘಟನೆಯ ಸಂಘಟನಾ ಕಾರ್ಯದರ್ಶಿ ತೀತಿಮಾಡ ಸೋಮಣ್ಣ  ಅವರಿಗೆ  ದಿನಾಂಕ 15/11/2013 ರ ಒಳಗೆ ಕಳುಹಿಸುವಂತೆ ಮನವಿ ಮಾಡಿದರು. ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದವರಿಗೆ ಪ್ರಥಮ 4,000, ದ್ವಿತೀಯ 3,000,  ತೃತೀಯ 2,000 ನಗದು ಹಾಗೂ ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯ…

Read More

ವಿರಾಜಪೇಟೆ ಅ.30 : ನಂ.371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತ ವತಿಯಿಂದ ಅ.31 ರಂದು ಸರಸ್ವತಿ ಪೂಜೆ ನಡೆಯಲಿದೆ. ಮಹಿಳಾ ಸಮಾಜದ ಕಟ್ಟಡದಲ್ಲಿ ಬೆಳಿಗ್ಗೆ 11ಗಂಟೆಗೆ ಸರಸ್ವತಿ ಪೂಜೆ ನಡೆಯಲಿದ್ದು, ಮಹಿಳಾ ಸಮಾಜದ ಎಲ್ಲಾ ಸದಸ್ಯರು ಪೂಜೆಯಲ್ಲಿ ಪಾಲ್ಗೊಳ್ಳಬೇಕೆಂದು ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸುಂಟಿಕೊಪ್ಪ ಅ.30 : ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ನ.1 ರಂದು ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ನಗರದ ಹೃದಯ ಭಾಗದಲ್ಲಿರುವ ಕನ್ನಡ ವೃತ್ತದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಂಟಿಕೊಪ್ಪ ಗೌಡ ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸೆಲ್ವರಾಜ್ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಕಾರ್ಯದರ್ಶಿ ಕೆ.ಎಸ್.ಅನಿಲ್ ತಿಳಿಸಿದ್ದಾರೆ.

Read More

ಮಡಿಕೇರಿ ಅ.29 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಇಂದು ನಗರದಲ್ಲಿ ಪಥಸಂಚಲನ ನಡೆಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ಪಥಸಂಚಲನ ಮಹದೇವಪೇಟೆ, ಬನ್ನಿ ಮಂಟಪ, ಹಳೇ ಖಾಸಗಿ ಬಸ್ ನಿಲ್ದಾಣ, ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಸಾಗಿ ಶ್ರೀ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಸಮಾರೋಪಗೊಂಡಿತು. ಜಿಲ್ಲೆಯ ವಿವಿಧ ಭಾಗಗಳಿಂದ ಮಕ್ಕಳಾದಿಯಾಗಿ ನೂರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಆಗಮಿಸಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ನಿಂತಿದ್ದ ಮಹಿಳೆಯರು ಹಾಗೂ ಸಾರ್ವಜನಿಕರು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ಗಣ ವೇಷಧಾರಿಗಳ ಮೇಲೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಿದರು.

Read More

ಮಡಿಕೇರಿ ಅ.29 : ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ನಾಡುಗುಂಡಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕಾಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಅಪಾರ ಪ್ರಮಾಣದ ಕೃಷಿ ಫಸಲು ನಾಶವಾಗಿದೆ. ಸ್ಥಳೀಯ ನಿವಾಸಿಗಳಾದ ಮಧು ಮಂದಣ್ಣ, ಕಣ್ಣೀಯರ ಪೆಮ್ಮಯ್ಯ, ಕಾಳೇಗಡ ಬೋಪಣ್ಣ ಹಾಗೂ ಬಂಟರ ರವಿ ಎಂಬುವವರ ಭತ್ತದ ಗದ್ದೆ, ಕಾಫಿ, ಅಡಿಕೆ, ಬಾಳೆ ಸಹಿತ ಇತರ ಬೆಳೆಗಳನ್ನು ತಿಂದು, ತುಳಿದು ನಾಶಪಡಿಸಿವೆ. ಅಂದಾಜು 2 ರಿಂದ 3 ಎಕರೆ ಬೆಳೆ ನಾಶವಾಗಿದ್ದು, ಸುಮಾರು 3 ರಿಂದ 4 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಭಾನುವಾರ ನಸುಕಿನ ಜಾವ ಕಾಡಾನೆಗಳ ಹಿಂಡಿನಿಂದ ದಾಳಿಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮಸ್ಥರು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಅ.29 : ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋಣಿಕೊಪ್ಪದ ನಿವಾಸಿ ಎ.ಎಂ.ಕಾವೇರಪ್ಪ (48) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಬಳಿಯಿಂದ 5 ಕೆ.ಜಿ ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಗಾಂಜಾ ಗಿಡಗಳನ್ನು ಬೆಳಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಗೋವಿಂದರಾಜು, ಪಿಎಸ್‌ಐ ರೂಪಾದೇವಿ ಬಿರಾದರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ದಕ್ಷ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More