ಮಡಿಕೇರಿ ಅ.29 : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕೊಡಗಿನ ಕೆ.ಕೆ.ಮಂಜುನಾಥ್ ಕುಮಾರ್ ಅವರನ್ನು ಕಾಂಗ್ರೆಸ್ ಅಧಿಕೃತಗೊಳಿಸಿದೆ. ಜನಸೇವೆಗಾಗಿ ಶಿಕ್ಷಕ ವೃತ್ತಿಯನ್ನು ತೊರೆದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡ ಮಂಜುನಾಥ್ ಕುಮಾರ್, 2012 ರಲ್ಲಿ ಬಿಜೆಪಿಯ ಗಣೇಶ್ ಕಾರ್ಣಿಕ್ ಅವರ ವಿರುದ್ಧ ಸ್ಪರ್ಧಿಸಿ ಅಲ್ಪಮತಗಳಿಂದ ಸೋಲು ಅನುಭವಿಸಿದ್ದರು. ಶಿಕ್ಷಕ ಸಂಘಟನೆಗಳ ಅಧ್ಯಕ್ಷರಾಗಿ, ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದ ಸ್ಪರ್ಧಾಕಾಂಕ್ಷಿಯೂ ಆಗಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ 2024 ಜೂನ್ ನಲ್ಲಿ ನಡೆಯಲಿರುವ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮಂಜುನಾಥ್ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ನೈರುತ್ಯ ಶಿಕ್ಷಕರ ಕ್ಷೇತ್ರವು ಸುಮಾರು 30 ಸಾವಿರ ಶಿಕ್ಷಕ ಮತದಾರರನ್ನು ಹೊಂದಿದೆ.
ಲೇಖಕ: admin
ಮಡಿಕೇರಿ ಅ.29 : ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲದಂತೆ ಆಗಿದೆ. ಗ್ರೀನ್ ಎನರ್ಜಿ ಬಗ್ಗೆ ಹೇಳುವ ಕೇಂದ್ರ ಸರ್ಕಾರ ರೈತರ ಪಂಪ್ ಸೆಟ್ ಗೆ ಸಬ್ಸಿಡಿ ನೀಡದೆ ಅನ್ಯಾಯ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ. ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರ ಸೋಲಾರ್ ಪಂಪ್ ಸೆಟ್ ಗೆ ಶೇ.50 ಸಬ್ಸಿಡಿ ನೀಡಲು ಎಎಪಿ ಪಕ್ಷ ಒತ್ತಾಯಿಸಿದೆ. ಈ ವರ್ಷ ಮಳೆ ಕಡಿಮೆ ಇರುವುದರಿಂದ ಕಾಫಿ ಬೆಳೆಗಾರರು ಬಹಳ ಸಂಕಟದಲ್ಲಿ ಇದ್ದಾರೆ. ತಮ್ಮ ಫಸಲು ಉಳಿಸಿಕೊಳ್ಳಲು ನೀರು ಪಂಪ್ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ. ಕೇಂದ್ರ ಸರ್ಕಾರದಿಂದ ಯಾವುದೇ ಸಹಾಯಧನ ನೀಡಿಲ್ಲ. ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು ಯಾವುದೇ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು. ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಪ್ರತಿವರ್ಷ 6,900 ಕೋಟಿ ರೂ. ಖರ್ಚು ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು…
ಸುಂಟಿಕೊಪ್ಪ ಅ.29 : ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣಪ್ರಾಂತ್ಯದ ಸುಂಟಿಕೊಪ್ಪದಲ್ಲಿರುವ ಇಮ್ಯಾನ್‌ವೆಲ್ ಚರ್ಚ್ ನಲ್ಲಿ ವಾರ್ಷಿಕ “ಬೆಳೆ ಹಬ್ಬ” ಶೃದ್ಧಾಭಕ್ತಿಯಿಂದ ಭಾನುವಾರ ನಡೆಯಿತು. ಕಬ್ಬು, ಭತ್ತದ ಪೈರು, ಬಾಳೆಗೊನೆ, ಇನ್ನಿತರ ಫಲ ಪುಷ್ಪಗಳಿಂದ ಚರ್ಚ್ ನ್ನು ಅಲಂಕರಿಸಲಾಗಿತ್ತು. ಮೈಸೂರು ವಲಯದ ಸಭಾಪಾಲಕ ರೆ.ಫಾ.ಡೆನ್ನಿಯಲ್ ಕೌಡಿನ್ಯ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಕೊಡಗು ವಲಯಾಧ್ಯಕ್ಷ ಮತ್ತು ಸಭಾಪಾಲಕ ರೆ.ಫಾ.ಜೈಸನ್‌ಗೌಡರ್ ಅವರು ಮಾತನಾಡಿ ನಮ್ಮ ದೇವಾಲಯಗಳ ವಾರ್ಷಿಕ ವಿಧಿವಿಧಾನಗಳಲ್ಲಿ ಬೆಳೆ ಹಬ್ಬವು ಪ್ರಮುಖವಾಗಿದೆ. ಸತ್ಯವೇದ ಅಥವಾ ಬೈಬಲಿನ ಪ್ರಕಾರ ಭಕ್ತರು ತಾವು ಬೆಳೆದ ಕೃಷಿ ಫಸಲನ್ನು ಮೊದಲ ಕಾಣಿಕೆಯಾಗಿ ದೇವರಿಗೆ ಸರ್ಮಪಿಸುವುದು ಪದ್ಧತಿಯಾಗಿದೆ. ಇದರ ಮೂಲಕ ನಮ್ಮನ್ನು ನಾವು ದೇವರಿಗೆ ಪುನಾರವರ್ತಿ ಕಾಣಿಕೆಯಾಗಿ ಸಮರ್ಪಿಸಿಕೊಳ್ಳುವುದಾಗಿದೆ ಎಂದು ಹೇಳಿದರು. ಭಾನುವಾರದ ಬೆಳೆಹಬ್ಬವು ಪ್ರಾರ್ಥನೆ ಮತ್ತು ಪೂಜಾ ವಿಧಿ ವಿಧಾನಗಳಿಂದ ಪ್ರಾರಂಭವಾಗಿ ಆನಂತರ ವಿವಿಧ ಫಲ ವಸ್ತುಗಳ ಹರಾಜು ಪ್ರಕ್ರಿಯೆ ನಡೆಯಿತು. ಸಾಮೂಹಿಕ ಭೋಜನದ ಬಳಿಕ ಸಂಜೆಯವರೆಗೆ ಆಟೋಟ ಸ್ಪರ್ಧೆಗಳು ನಡೆದವು, ವಿಜೇತರಿಗೆ ಬಹುಮಾನ…
ಚೆಟ್ಟಳ್ಳಿ ಅ.29 : ಕೊಡಗಿನ ಬಹುಭಾಷಾ ಸಾಹಿತಿ ಉಳುವಂಗಡ ಕಾವೇರಿ ಉದಯ ಅವರಿಗೆ ಏಷ್ಯ ಇಂಟರ್ ನ್ಯಾಷನಲ್ ಕಲ್ಚರ್ ಅಕಾಡೆಮಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ತಮಿಳುನಾಡಿನ ಹೊಸೂರಿನಲ್ಲಿ ನಡೆದ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಯಿತು. ಕಾವೇರಿ ಅವರು ರಚಿಸಿರುವ 25 ಪುಸ್ತಕಗಳು ಪ್ರಕಟಗೊಂಡಿದ್ದು, ಕಾದಂಬರಿ, ಕಥಾಸಂಕಲನ, ಕವನಮಾಲೆ, ಅದ್ಯಯನ ಗ್ರಂಥ, ನಾಟಕ, ಭಕ್ತಿ ಪ್ರಧಾನ ಕೃತಿ, ಪ್ರಬಂಧಗಳನ್ನು ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಮತ್ತು ಮಲಯಾಳಂ ನಲ್ಲಿ ಬರೆದಿದ್ದಾರೆ. ರಂಗ ಕಲಾವಿದೆ, ಸಮಾಜ ಸೇವಕಿ, ಚಿತ್ರಕಲಾವಿದೆಯಾಗಿರುವ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಉಳುವಂಗಡ ಕಾವೇರಿ ಉದಯ್ ಸಂಭ್ರಮ ಮಹಿಳಾ ಸಂಸ್ಥೆಯ ಸ್ಥಾಪಕ ಸದಸ್ಯೆ ಮತ್ತು ಕಾರ್ಯದರ್ಶಿಯಾಗಿ ಹತ್ತು ವರ್ಷ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲ್ಲೂಕಿನ ಮಹಿಳಾ ಸಾಹಿತ್ಯ ಪ್ರತಿನಿಧಿ, ಗುರುಕುಲ ಕಲಾ ಪ್ರತಿಷ್ಠಾನದ ಕೊಡಗು ಜಿಲ್ಲಾ ಘಟಕದ ಗೌರವಾಧ್ಯಕ್ಷೆ, ಕೊಡಗು ಲೇಖಕಿಯರ ಸಂಘದ ಸಹ ಕಾರ್ಯದರ್ಶಿ, ಕೊಡಗು ಸಿರಿಗನ್ನಡ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿರುವರು. ಇವರ…
ಮಡಿಕೇರಿ ಅ.29 : ಸಮರ್ಥ ಕನ್ನಡಿಗರು ಸಂಸ್ಥೆಯ ಕೊಡಗು ಘಟಕದಿಂದ ಈ ಬಾರಿ 10 ಮಂದಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ. ಮಡಿಕೇರಿಯ ಓಂಕಾರ ಸದನದಲ್ಲಿ ನ.5 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಮರ್ಥ ಕನ್ನಡಿಗರು ಸಂಸ್ಥೆಯಿಂದ ವೈವಿಧ್ಯಮಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಜೆ 3 ಗಂಟೆಗೆ ಸಾಧಕರಿಗೆ ಸಮರ್ಥ ಕನ್ನಡಿಗರು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ::: ಪ್ರಶಸ್ತಿ ವಿಜೇತರು ::: ಡಾ.ಕೆ.ಬಿ.ಸೂರ್ಯಕುಮಾರ್ (ವೈದ್ಯಕೀಯ), ಕುಂತಿಬೋಪಯ್ಯ (ಶಿಕ್ಷಣ), ಎಂ.ಎನ್.ಚಂದ್ರಮೋಹನ್(ಪರಿಸರ), ಎಚ್.ಎಸ್.ತಿಮ್ಮಪ್ಪಯ್ಯ (ಕೃಷಿ), ಸ್ಮಿತಾ ಅಮೃತರಾಜ್ (ಸಾಹಿತ್ಯ), ಬೊಳ್ಳಜಿರ ಅಯ್ಯಪ್ಪ (ಪ್ರಕಾಶನ), ಹೆಚ್‌ಎಸ್.ಲಕ್ಷ್ಮೀಶ್ (ಮಾಧ್ಯಮ ಛಾಯಾಗ್ರಹಣ), ಪ್ರೀತು ಕೃಷ್ಣ (ನೃತ್ಯ) ಲಕ್ಷ್ಮಿ ಬೆಂಗಳೂರು (ಸಮಾಜಸೇವೆ), ಧೃತಿ ಪೂಜಾರಿ (ಬಾಲ ಪ್ರತಿಭೆ) ಇವರುಗಳಿಗೆ ನ.5 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ::: ಗಾನ ಹೊನಲು ಹಾಗೂ ಕುಣಿಯೋಣು ಬಾರಾ ಸ್ಪರ್ಧೆಯ ವಿಜೇತರು ::: ಸಮರ್ಥ ಕನ್ನಡಿಗರು ಸಂಸ್ಥೆ ನಡೆಸಿದ ಆನ್ ಲೈನ್ ವೈಯುಕ್ತಿಕ…
ಮಡಿಕೇರಿ ಅ.29 : ಬೊಟ್ಟೋಳಂಡ ಮಿಟ್ಟು ಚೆಂಗಪ್ಪ ಹಾಗೂ ಬೊಟ್ಟೋಳಂಡ ವಾಸು ಮುತ್ತಪ್ಪ ಅವರ ಪ್ರಾಯೋಜಕತ್ವದಲ್ಲಿ ಬೊಟ್ಟೋಳಂಡ ಕಪ್ ರೇಸ್ ಮೈಸೂರು ರೇಸ್ ಕೋರ್ಸ್ನಲ್ಲಿ ನಡೆಯಿತು. ವಿಜೇತರಿಗೆ ಮಿಟ್ಟು ಚೆಂಗಪ್ಪ ಅವರ ಪುತ್ರಿ ಕೃತಿ ಪ್ರದೀಪ್ ಹಾಗೂ ಅಳಿಯ, ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸಿ.ಎಸ್.ಪ್ರದೀಪ್ ಅವರು ಬೊಟ್ಟೋಳಂಡ ಕಪ್ ನ್ನು ವಿತರಿಸಿದರು. ಮೈಸೂರು ರೇಸ್ ಕ್ಲಬ್ ನ ಅಧ್ಯಕ್ಷ ಚಂದ್ರೇಗೌಡ, ಬೊಟ್ಟೋಳಂಡ ಅಪ್ಪಣ್ಣ, ಬೊಟ್ಟೋಳಂಡ ಪೊನ್ನಣ್ಣ, ಕವಿತಾ ಮುತ್ತಪ್ಪ, ಕ್ಲಬ್ ನ ಉಸ್ತುವಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ತಮ್ಮ ಪ್ರಾಯೋಜಕತ್ವದಲ್ಲಿ ಕಳೆದ 20 ವರ್ಷಗಳಿಂದ ರೇಸ್ ನ್ನು ನಡೆಸಿಕೊಂಡು ಬರುತ್ತಿರುವುದಾಗಿ ಮಿಟ್ಟು ಚೆಂಗಪ್ಪ ತಿಳಿಸಿದರು.
ಮಡಿಕೇರಿ ಅ.29 : ಮಾದಾಪುರದ ಡಿ.ಚೆನ್ನಮ್ಮ ಕಾಲೇಜಿನಲ್ಲಿ 2023- 24 ನೇ ಸಾಲಿನ ವಾರ್ಷಿಕ ಎನ್ ಎಸ್ ಎಸ್ ಶಿಬಿರದ ಪ್ರಯುಕ್ತ ಕಾನೂನು ಅರಿವು ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಹಿರಿಯ ವಕೀಲ ರತನ್ ತಮ್ಮಯ್ಯ ಶಿಬಿರಾರ್ಥಿಗಳಿಗೆ ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ಕಾಯಿದೆ ಹಾಗೂ ಮೋಟಾರು ವಾಹನ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಉಪನ್ಯಾಸಕರಾದ ಸವಿತ ಬಿ.ಕೆ, ಲಕ್ಷ್ಮಿ, ಶಿಬಿರಾಧಿಕಾರಿ ಎನ್.ಎನ್.ಮನೋಹರ್ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಮಡಿಕೇರಿ ಅ.29 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆ ಬೇಡಿಕೆಯನ್ವಯ 2ನೇ ರಾಜ್ಯ ಮರು ಸಂಘಟನೆ ಆಯೋಗ ರಚಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.1 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಗ್ಗೆ 10.30 ಗಂಟೆಯಿಂದ ಒಂದು ಗಂಟೆ ಕಾಲ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ 9 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸುವ ಮೂಲಕ ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವ ಲ್ಯಾಂಡ್ ಪರವಾಗಿ ಆಯೋಗವೊಂದನ್ನು ರಚಿಸಬೇಕೆಂದು ಪ್ರತಿಪಾದಿಸಿದ್ದಾರೆ. ಸರ್ಕಾರಗಳು ಈ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರಿಗೆ ಸಾಂವಿಧಾನಿಕ ಭದ್ರತೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಸಂವಿಧಾನದ…
ನಾಪೋಕ್ಲು ಅ.28 : ನಾಪೋಕ್ಲು ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಕೋಮು ಸೌಹಾರ್ದತೆಗೆ ದಕ್ಕೆ ತರುವ ಯತ್ನ ಮಾಡುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ವ್ಯಾಟ್ಸಪ್, ಇನ್‌ಸ್ಟಾಗ್ರಾಮ್, ಫೇಸ್ ಬುಕ್ ಮತ್ತು ಟ್ವಿಟರ್ ಮೂಲಕ ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಹರಡಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. (ವರದಿ : ದುಗ್ಗಳ ಸದಾನಂದ)
ಮಡಿಕೇರಿ ಅ.28 : ವಿರಾಜಪೇಟೆ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟ ನಿವಾಸಿಗಳಾದ ಮಹಮ್ಮದ್ ಆಲಿ ಕಲ್ಲುಬಾಣೆ(54), ಸಂದೀಪ ಜಂಗ್ಲಿ ಅರಸುನಗರ (28), ಅಶೋಕ ಬಿಳುಗುಂದ (50) ಹಾಗೂ ಮಹೇಶ ಸುಂಕದಕಟ್ಟೆ (35) ಇವರುಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಳಿಯಿಂದ 1.12 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಹಿನ್ನೆಲೆ ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ವಿರಾಜಪೇಟೆ ವೃತ್ತದ ಬಿ.ಎಸ್.ಶಿವರುದ್ರಪ್ಪ, ಪಿಎಸ್‌ಐಗಳಾದ ರವೀಂದ್ರ, ಗಣಪತಿ.ಪಿ.ಕೆ ಹಾಗೂ ಸಿಬ್ಬಂದಿಗಳ ತಂಡ ತನಿಖೆ ಕೈಗೊಂಡು ದಾಳಿ ನಡೆಸಿದರು. ದಕ್ಷತೆ ಮೆರೆದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.






