ಮಡಿಕೇರಿ ಅ.28 : ವಿರಾಜಪೇಟೆ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟ ನಿವಾಸಿಗಳಾದ ಮಹಮ್ಮದ್ ಆಲಿ ಕಲ್ಲುಬಾಣೆ(54), ಸಂದೀಪ ಜಂಗ್ಲಿ ಅರಸುನಗರ (28), ಅಶೋಕ ಬಿಳುಗುಂದ (50) ಹಾಗೂ ಮಹೇಶ ಸುಂಕದಕಟ್ಟೆ (35) ಇವರುಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಳಿಯಿಂದ 1.12 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಹಿನ್ನೆಲೆ ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ವಿರಾಜಪೇಟೆ ವೃತ್ತದ ಬಿ.ಎಸ್.ಶಿವರುದ್ರಪ್ಪ, ಪಿಎಸ್‌ಐಗಳಾದ ರವೀಂದ್ರ, ಗಣಪತಿ.ಪಿ.ಕೆ ಹಾಗೂ ಸಿಬ್ಬಂದಿಗಳ ತಂಡ ತನಿಖೆ ಕೈಗೊಂಡು ದಾಳಿ ನಡೆಸಿದರು. ದಕ್ಷತೆ ಮೆರೆದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಲೇಖಕ: admin
ಮಡಿಕೇರಿ ಅ.28 : ಕೊಡಗು ಜಿಲ್ಲಾ ಸಮಥ೯ ಕನ್ನಡಿಗರು ಸಂಸ್ಥೆ ವತಿಯಿಂದ ನೀಡಲಾಗುವ ವಾಷಿ೯ಕ ಸಾಧಕರ ಪ್ರಶಸ್ತಿಗೆ ಈ ಬಾರಿ ಮಾಧ್ಯಮ ಕ್ಷೇತ್ರದಿಂದ ಛಾಯಗ್ರಾಹಕ ಲಕ್ಷ್ಮೀಶ್ ಆಯ್ಕೆಯಾಗಿದ್ದಾರೆ. ನ.5 ರಂದು ಮಡಿಕೇರಿಯ ಓಂಕಾರ ಸದನದಲ್ಲಿ ಸಂಜೆ 3.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮಡಿಕೇರಿ ಅ.28 : ಶ್ರದ್ಧೆ-ಭಕ್ತಿ, ಶಿಸ್ತು ಹಾಗೂ ಸಂಯಮ ವಿದ್ಯಾರ್ಥಿಗಳಲ್ಲಿ ಹಾಸು ಹೊಕ್ಕಾಗಿರಬೇಕಾದ ಪ್ರಮುಖ ಗುಣಗಳಾಗಿದ್ದು, ಇವುಗಳನ್ನು ಮೈಗೂಡಿಸಿಕೊಂಡವರು ಸಮಾಜದಲ್ಲಿ ಆದರ್ಶ ಪ್ರಾಯರಾಗಿ ಹೊರ ಹೊಮ್ಮುತ್ತಾರೆ ಎಂದು ತಹಶೀಲ್ದಾರ್ ಜಯಕುಮಾರ್ ಹೇಳಿದರು. ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಕಾಲೇಜು ಕ್ರೀಡೋತ್ಸವದ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಕ್ರೀಡೆ ಎಂಬುದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಬೇಕಾದ ಬೆಳಕಿದ್ದಂತೆ ಎಂದು ವಿಶ್ಲೇಷಿಸಿದರು. ವಿದ್ಯಾರ್ಥಿಗಳು ಹೆತ್ತವರು, ಶಿಕ್ಷಕರು ಹಾಗೂ ನಮ್ಮನ್ನು ಹೊತ್ತು ನಿಂತಂತಹ ಭೂಮಿ ತಾಯಿಗೆ ಸದಾ ಋಣಿಯಾಗಿರಬೇಕೆಂದು ವಿದ್ಯಾರ್ಥಿಗಳಿಗೆ ಇದೇ ಸಂದರ್ಭ ಜಯಕುಮಾರ್ ಕರೆ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಪ್ರಾಂಶುಪಾಲೆ ಟಿ.ಎ.ಲಿಖಿತಾ, ಉಪನ್ಯಾಸಕರಾದ ಮಂಜೇಶ್, ಬಿಂದು, ಶರಣ್, ಕ್ರೀಡಾ ವಿಭಾಗದ ಉಪನ್ಯಾಸಕ ದಿನೇಶ್, ಕಛೇರಿ ಅಧೀಕ್ಷಕ ಮಹೇಶ್ ಹಾಜರಿದ್ದರು. ಉಪನ್ಯಾಸಕರಾದ ಅಶ್ವಿತಾ ಸ್ವಾಗತಿಸಿದರು. ಸುಜಾತ ನಿರೂಪಿಸಿದರು. ಮಮ್ತಾಜ್ ವಂದಿಸಿದರು.
ಮಡಿಕೇರಿ ಅ.28 : ರಾಮಾಯಣದ ಅಧ್ಯಯನ ಹಾಗೂ ಅದರಲ್ಲಿರುವ ತತ್ವಗಳ ಅಳವಡಿಕೆಯಿಂದ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಲು ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿ ಸಂಘದ ಸಲಹೆಗಾರ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥ ಬಿ.ಹೆಚ್.ತಳವಾರ್ ಅಭಿಪ್ರಾಯ ಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಆದಿಕವಿ ಮಹರ್ಷಿ ವಾಲ್ಮೀಕಿ ಮತ್ತು ಅವರ ವಿರಚಿತ ರಾಮಾಯಣದ ಪ್ರಸ್ತುತೆಯ ಬಗ್ಗೆ ಸಮಗ್ರವಾಗಿ ವಿವರಿಸಿದರು. ಭಾರತದಾದ್ಯಂತ ಪ್ರತಿವರ್ಷ ಸೀಗೆ ಹುಣ್ಣಿಮೆಯಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ, ಭಾರತೀಯ ಸಂಸ್ಕೃತಿಗೆ ಆದಿಕವಿಯ ಮಹಾನ್ ರಾಮಾಯಣ ಗ್ರಂಥವೇ ಆಧಾರ ಎಂದು ಅಭಿಪ್ರಾಯಪಟ್ಟರು. ಇಂಗ್ಲೀಷ್ ಸಹ ಪ್ರಾಧ್ಯಾಪಕಿ ಡಾ.ನಯನಾ ಕಶ್ಯಪ್ ಮಾತನಾಡಿ, ರಾಮಾಯಣದಲ್ಲಿ ರಾಮನ ಪಾತ್ರವನ್ನು ಮಹರ್ಷಿ ವಾಲ್ಮೀಕಿ ಅಧ್ಭುತವಾಗಿ ಚಿತ್ರಿಸಿದ್ದಾರೆ, ರಾಮ ಎಂದರೆ ಒಂದು ಜೀವನ ತತ್ವ ಮತ್ತು ಜೀವನ ಕ್ರಮ, ರಾಮನ ಪೂರ್ವಭಾಷಿಕ ಗುಣ ಆದರ್ಶವಾದದ್ದು ಎಂದರು. ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ತಿಪ್ಪೇಸ್ವಾಮಿ ಮಾತನಾಡಿ, ಬೇಟೆಗಾರನಾಗಿದ್ದವನ…
ಮಡಿಕೇರಿ ಅ.28 : ಕೊಡವ ಮಕ್ಕಡ ಕೂಟದ ವತಿಯಿಂದ ನ.2 ರಂದು ಲೇಖಕಿ ತೆನ್ನೀರ ಟೀನಾ ಚಂಗಪ್ಪ ಬರೆದಿರುವ “ಮರ್‍ಂಜ ಪಾಳೆ” ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 2 ಗಂಟೆಗೆ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬ್ರಹ್ಮಗಿರಿ ವಾರಪತ್ರಿಕೆಯ ಸಂಪಾದಕ ಡಾ.ಉಳ್ಳಿಯಡ ಎಂ.ಪೂವಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಸಾಹಿತಿ ಉಳ್ಳಿಯಡ ಡಾಟಿ ಪೂವಯ್ಯ, ಮರ್‍ಂಜ ಪಾಳೆ ಪುಸ್ತಕದ ಬರಹಗಾರ್ತಿ ತೆನ್ನೀರ ಟೀನಾ ಚಂಗಪ್ಪ, ಸಮಾಜ ಸೇವಕರಾದ ಚಿಲ್ಲವಂಡ ಕಾವೇರಪ್ಪ, ಕುಳುವಂಡ ಮಣಿ ಜೋಯಪ್ಪ, ಮುಕೋಡ್ಲು ವ್ಯಾಲಿ ಡ್ಯೂನ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ.
ಮಡಿಕೇರಿ ಅ.28 : ಪೊನ್ನಂಪೇಟೆ ತಾಲ್ಲೂಕಿನ ರುದ್ರಬೀಡು ಗ್ರಾಮ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಮೂಡಿಸಿದೆ. ಹೊನ್ನಿಕೊಪ್ಪಲಿನ ಪ್ರಶಾಂತ್ ಎಂಬುವವರ ಕಾಫಿ ತೋಟದಲ್ಲಿ ಇಂದು ಹುಲಿ ಪ್ರತ್ಯಕ್ಷವಾಗಿದ್ದು, ಕಳೆದ ಮೂರು ದಿನಗಳಿಂದ ಇಲ್ಲೇ ಸುತ್ತಾಡುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ತೋಟದಲ್ಲಿ ಕಾಡುಹಂದಿಯ ಕಳೇಬರ ಬಿದ್ದಿದ್ದು, ಇದೇ ಹುಲಿ ಬೇಟೆಯಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕಾಡುಹಂದಿಯನ್ನು ಎರಡು ದಿನಗಳ ಹಿಂದೆ ಬೇಟೆಯಾಡಿದ್ದು, ಮಾಂಸವನ್ನು ಭಕ್ಷಿಸಿದ ಕುರುಹುಗಳಿವೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಅ.28 : ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಶಾಲನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಗಣ್ಯರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಪ್ರತಿಯೊಬ್ಬರು ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅಂದು 3ನೇ ಶತಮಾದಲ್ಲಿ ಬರೆದ ರಾಮಾಯಣವನ್ನು ನಾವು ಆಗಿನಿಂದ ಈಗಿನ ವರೆಗೂ ಅಳವಡಿಸಿಕೊಡು ಬಂದಿದ್ದೇವೆ. ವಾಲ್ಮೀಕಿ ಅವರು ಬರೆದಿರುವ ರಾಮಾಯಣದಲ್ಲಿ 24000 ಶ್ಲೋಕಗಳು, 7 ಕ್ಯಾಂಟೋಗಳು ಮತ್ತು 4 ಲಕ್ಷಕ್ಕೂ ಹೆಚ್ಚು ಪದಗಳನ್ನು ಒಳಗೊಂಡಿದೆ ಎಂದು ಮಾಹಿತಿ ನೀಡಿದರು. ಸುಮಾರು 10 ವರ್ಷಗಳಿಂದ ಕುಶಾಲನಗರ ವಾಲ್ಮೀಕಿ ಸಮುದಾಯ ಭವನ ಪಾಳುಬಿದ್ದಿದ್ದು ಇದರ ದುರಸ್ತಿಗೆ ಬೇಕಾದ ಸೌಲಭ್ಯಗಳನ್ನು…
ಸುಂಟಿಕೊಪ್ಪ ಅ.28: ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಆದಿಕವಿ ವಾಲ್ಮೀಕಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಮಹರ್ಷಿ ವಾಲ್ಮೀಕಿಯು ಮಹರ್ಷಿಯಾಗಿ ಪರಿವರ್ತನೆಗೊಂಡು ಮನೆ ಮನೆಗಳಲ್ಲಿ ಪಾರಾಯಣ ಮಾಡುವಂತಹ ರಾಮಾಯಾಣ ಗ್ರಂಥವನ್ನು ಬರೆದ ಕಥಾನಾಕವನ್ನು ವಿವರಿಸದರು. ಕಾಲೇಜಿನ ಉಪನ್ಯಾಸಕಿ ಸುನೀತ ಗಿರೀಶ್ ಮತಾನಾಡಿ, ಮಹಾಕವಿ ವಾಲ್ಮೀಕಿ ಜೀವನ ಮತ್ತು ಸಂದೇಶವನ್ನು ವಿವರವಾಗಿ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಪಾಲ್ಗೊಂಡಿದ್ದರು.
ಮಡಿಕೇರಿ ಅ.28 : ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ನ.1 ರಿಂದ ವರ್ಷವಿಡೀ ಕಾರ್ಯಕ್ರಮಕ್ಕೆ ಸಜ್ಜಾಗಿದ್ದು, ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯ ಎಲ್ಲಾ ಜನತೆಯ ಸಹಕಾರದಿಂದ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ನ.1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯುವಂತೆ ಅವರು ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ನ.1 ರ ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ(ರೇಡಿಯೋ) ನಾಡಗೀತೆ ಪ್ರಸಾರವಾಗಲಿದ್ದು, ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ. ಸಂಜೆ…
ಮಡಿಕೇರಿ ಅ.28 : ವಿಶ್ವದ ಗುರುವಾದ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹರ್ಷಿ ವಾಲ್ಮೀಕಿ ಅವರು ಸಾವಿರಾರು ವರ್ಷಗಳ ಹಿಂದೆಯೇ ರಾಮಾಯಣ ಬರೆಯುವ ಮೂಲಕ ಬುದ್ದಿವಂತಿಕೆ ಪ್ರದರ್ಶನ ಮಾಡಿದ್ದಾರೆ. ಮಹರ್ಷಿ ವಾಲ್ಮೀಕಿ ಅವರು ತೋರಿರುವ ದಾರಿಯಲ್ಲಿ ನಡೆಯಬೇಕು. ಇಡೀ ದಕ್ಷಿಣ ಏಷ್ಯಾದಲ್ಲಿಯೇ ವಾಲ್ಮೀಕಿ ರಾಮಾಯಣ ಕಥೆಗಳನ್ನು ಅಧ್ಯಯನ ಮಾಡಬಹುದಾಗಿದೆ ಎಂದು ಕೆ.ರಾಮರಾಜನ್ ನುಡಿದರು. ‘ಬುದ್ದಿವಂತಿಕೆ ಯಾರ ಸೊತ್ತಲ್ಲ. ಅವಕಾಶಗಳು ಒಂದೊಂದು ರೀತಿ ಸಿಕ್ಕಿರುತ್ತವೆ. ಅದರಂತೆ ಅವರು ಮೇಲೆ ಬಂದಿರುತ್ತಾರೆ. ಅವಕಾಶ ವಂಚಿತರಿಗೆ ಅವಕಾಶಗಳೇ ಲಭ್ಯವಾಗುವುದಿಲ್ಲ. ಸಮಾಜದಲ್ಲಿ ಎಲ್ಲರಿಗೂ ಅವಕಾಶಗಳು ಸಿಗುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಪ್ರತಿಪಾದಿಸಿದರು.’ ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ…






