ಮಡಿಕೇರಿ ಅ.28 : ಕೊಡಗು ಜಿಲ್ಲಾಡಳಿತ ವತಿಯಿಂದ 68 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನ.1 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
ಲೇಖಕ: admin
ಬೆಂಗಳೂರು ಅ.28 : 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದ 8 ಮಂದಿ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಸಾಧಕರಿಗೆ ಪ್ರದಾನ ಮಾಡಿದರು. ನ್ಯಾಯಾಂಗ ಕ್ಷೇತ್ರದಿಂದ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್ ವೈ ಹನುಮಂತಪ್ಪ, ಧಾರ್ಮಿಕ ಕ್ಷೇತ್ರದಿಂದ ಮಹಾದೇವಮ್ಮ, ಶಿಕ್ಷಣ ಕ್ಷೇತ್ರದಿಂದ ರಾಮಣ್ಣ ಮಹಾದೇವ ಗಸಿ, ಸಮಾಜ ಸೇವೆ ಕ್ಷೇತ್ರದಿಂದ ಜಿ ಓ ಮಹಾಂತಪ್ಪ, ಸಾಮಾಜಿಕ ಸಂಘಟನೆ ವಲಯದಿಂದ ಸೋಮಣ್ಣ, ವೈದ್ಯಕೀಯ ಕ್ಷೇತ್ರದಿಂದ ಶಾರದ ಪ್ರಭು ಹುಲಿ ನಾಯಕ, ಸಾಹಿತ್ಯ ಕ್ಷೇತ್ರದಿಂದ ಸುಕನ್ಯಾ ಮಾರುತಿ ಹಾಗೂ ರಂಗಭೂಮಿಯಿಂದ ಸುಜಾತಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ…
ಕಕ್ಕಬ್ಬೆ ಅ.28 : ಕುಂಜಿಲ ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ ನ.3 ರಂದು 108ನೇ ವಾರ್ಷಿಕ ರಾತೀಬ್ ಮಜ್ಲಿಸ್ ಹಾಗೂ ದುವಾ ಮಜ್ಲಿಸ್ ನಡೆಯಲಿದೆ. ಅಂದು ಮಗ್ರಿಬ್ ನಮಾಜಿನ ಬಳಿಕ ಕುಂಜಿಲ ಪೈನೆರಿ ಸಭಾಂಗಣದಲ್ಲಿ ನಡೆಯಲಿದ್ದು, ಬಹುಮಾನ್ಯರಾದ ನಿಝಾರ್ ಅಹ್ಸನಿ ಕಕ್ಕಡಿಪುರಮ್ ಉಸ್ತಾದ್ ದುವಾ ನೇತೃತ್ವ ವಹಿಸಲಿದ್ದಾರೆ. ಖುತುಬುಲ್ ಆರಿಫೀನ್ ರಾತೀಬ್ ಸಂಘ ಬೃಹತ್ ರಾತೀಬ್ ಮಜ್ಲಿಸ್ನಲ್ಲಿ ನೇತೃತ್ವ ನೀಡಲಿದ್ದಾರೆ. ವರದಿ:ಸಾಜಿದ್ ಪಯ್ಯಡಿ
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. 2018ರ ಪ್ಯಾರಾ ಗೇಮ್ಸ್ನಲ್ಲಿ ಭಾರತ 72 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಇದು ಈವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಹಿಂದಿನ ದಾಖಲೆಯನ್ನು ಪ್ಯಾರಾ ಅಥ್ಲೀಟ್ಗಳು ಮುರಿದಿದ್ದಾರೆ. ಕ್ರೀಡಾಕೂಟದಲ್ಲಿ ಭಾರತ 25 ಚಿನ್ನ, 30 ಬೆಳ್ಳಿ ಮತ್ತು 45 ಕಂಚಿನ ಪದಕ ಗೆಲ್ಲುವ ಮೂಲಕ 100 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಪ್ರಧಾನಿ ಮೋದಿ ಮೆಚ್ಚುಗೆ :: ಈ ಮಹತ್ತರ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್ಗಳಿಗೆ ಶುಭಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ 100 ಪದಕಗಳ ಗರಿ! ಇದು ಅಪೂರ್ವ ಆನಂದದ ಕ್ಷಣವಾಗಿದೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ. ಈ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳು,…
ನಾಪೋಕ್ಲು ಅ.28 : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಪೋಕ್ಲುವಿನ 9ನೇ ತರಗತಿ ವಿದ್ಯಾರ್ಥಿನಿ ಅರೆಪ್ರಜ್ಞಾವಸ್ಥೆಯಲ್ಲಿ ಮನೆ ಸಮೀಪದ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದ್ದಾಳೆ. ಮರಂದೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅರೆಪ್ರಜ್ಞಾವಸ್ಥೆಯಲ್ಲಿದ್ದ ವಿದ್ಯಾರ್ಥಿನಿಯನ್ನು ನೋಡಿದ್ದಾರೆ. ಆಕೆಯನ್ನು ಮನೆಗೆ ಕರೆತಂದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.28 : ಜೀವನದಲ್ಲಿ ಯಾವುದೇ ನಕಾರಾತ್ಮಕ ಹಿನ್ನಲೆಯಿದ್ದರೂ ಕೂಡ ಸಕಾರಾತ್ಮಕದೆಡೆಗೆ ತೆರಳಿ ಮಾನಸಿಕವಾಗಿ ಪರಿವರ್ತನೆ ಹೊಂದಿ ಬದುಕನ್ನು ವಿಕಾಸಗೊಳಿಸಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ನೈಜ ಉದಾಹರಣೆ ಎಂದು ಸೈಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಹೇಮ ಅಭಿಪ್ರಾಯಪಟ್ಟರು. ವಾಲ್ಮೀಕಿ ಜಯಂತಿಯ ಪ್ರಯುಕ್ತ ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ, ಕನ್ನಡ ಭಾಷಾ ವಿಭಾಗ ಹಾಗೂ ಇತರ ಭಾಷಾ ವಿಭಾಗದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆ ಪ್ರಯುಕ್ತ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಕುರಿತು ಹಾಗೂ ಪ್ರಸ್ತುತ ದಿನಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಏಕೆ ಅಗತ್ಯ ಎಂಬುದನ್ನು ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಪ್ರತಿಮಾ ರೈ ಪ್ರಾಸ್ತಾವಿಕ ನುಡಿಯ ಮುಖಾಂತರ ಕಾರ್ಯಕ್ರಮದ ಸ್ವರೂಪದ ಉದ್ದೇಶ ಮನದಟ್ಟು ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ ಮಾತನಾಡಿ, ವಾಲ್ಮೀಕಿ ಜೀವನ ಹಿನ್ನೆಲೆ ಹಾಗೂ ಭಾರತೀಯ ಸಾಹಿತ್ಯದಲ್ಲಿ ಅವರ ಕೊಡುಗೆ…
ಮಡಿಕೇರಿ ಅ.28 : ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ನೀಡಿದರು. ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ಸ್ಥಳಾಂತರ ಮತ್ತಿತರ ಸಂಬಂಧಿಸಿದಂತೆ ಮೊಬೈಲ್ ಅಪ್ಲಿಕೇಷನ್‍ನಲ್ಲಿ ಮತದಾರರ ಸಹಾಯವಾಣಿ (ವೋಟರ್ ಹೆಲ್ಫ್ ಲೈನ್)ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ. ಇಲ್ಲದಿದ್ದಲ್ಲಿ ತಹಶೀಲ್ದಾರರ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೋಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಆನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ಆಧಾರ್ ಲಿಂಕ್ ಮಾಡಲಾಗಿದ್ದು, ಯಾವುದಾದರೂ ಒಂದು ಮತಗಟ್ಟೆಯಲ್ಲಿ ಮಾತ್ರ ಹೆಸರು…
ಮಡಿಕೇರಿ ಅ.28 : ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆಯನ್ನು ನಡೆಸಲು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ತಯಾರಿಸಲು ನಿರ್ದೇಶನ ನೀಡಿರುತ್ತದೆ. ಅರ್ಹತಾ 2023 ರ ನ.1 ಕ್ಕೆ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ. ಭಾರತ ಚುನಾವಣಾ ಆಯೋಗದ 2023 ರ ಆ.9 ರ ಪತ್ರದನ್ವಯ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದ ಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ಮತ್ತು ನಮುನೆ-19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ನಮೂನೆ-18 ಮತ್ತು ನಮೂನೆ-19 ರ ಅರ್ಜಿಗಳನ್ನು ಸ್ವೀಕರಿಸಲು 2023 ರ ನ.6 ಕೊನೆಯ ದಿನವಾಗಿದೆ. ಕರ್ನಾಟಕ ನೈರುತ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹತೆಗಳು: ಭಾರತದ ಪ್ರಜೆಯಾಗಿರುವ ಮತ್ತು…
ಮಡಿಕೇರಿ ಅ.27 : ರಾಜ್ಯ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ವೃಥಾರೋಪಗಳನ್ನು ಮಾಡುವ ಮೂಲಕ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮಾಡುತ್ತಿದ್ದಾರೆ ಮತ್ತು ಸುಳ್ಳುಗಳನ್ನು ನಿಜವಾಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಸೇರಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸೆಂಟ್ರಲ್ ಗ್ರಿಡ್ ಮೂಲಕ ವಿದ್ಯುತ್ ಖರೀದಿ ಮಾಡಿದೆ. ಇದರ ಬಗ್ಗೆ ಅರಿವಿಲ್ಲದ ಅವರು ವಿದ್ಯುತ್ ಖರೀದಿಯಲ್ಲಿ ಕಮಿಷನ್ ಹೊಡೆದಿದ್ದಾರೆ ಎಂದು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಅವಧಿಯಲ್ಲಿ ರಾಜ್ಯದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಂಡಿಲ್ಲವೆಂದು ಟೀಕಿಸಿದರು. ಪ್ರಸ್ತುತ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗರ ನಾಯಕರಾಗಿ ಬೆಳೆಯುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಅವರು ನೇಪತ್ಯಕ್ಕೆ ಸರಿಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಜಾರಿ, ಜನಪರವಾದ ಕಾರ್ಯಕ್ರಮಗಳನ್ನು ಸಹಿಸದೆ ಅವರು ಆರೋಪಗಳನ್ನು…
ಮಡಿಕೇರಿ ಅ.27 : “ಪಥಲೋಧಿ” ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಇಂದು ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆ ಆವರಣದಲ್ಲಿ ಕುತಂತ್ರಕ್ಕೆ ಸಿಲುಕಿ ಜೀವ ಕಳೆದುಕೊಂಡ ಹಿರಿಯ ಕೊಡವರಿಗೆ ಮೀದಿ ಸಮರ್ಪಿಸುವ ಕಾರ್ಯವನ್ನು ನೆರವೇರಿಸಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮೌನ ಪ್ರಾರ್ಥನೆಯ ಮೂಲಕ ಹಿರಿಯರನ್ನು ಸ್ಮರಿಸಿಕೊಂಡರು. ಅರಮನೆಯ ಪಿತೂರಿಯಲ್ಲಿ ಕೊಡವ ಜನಾಂಗೀಯ ಬುಡಕಟ್ಟು ಜನಾಂಗದ ಹತ್ಯೆಗಳು ಎರಡು ಶತಮಾನಗಳಿಗೂ ಹೆಚ್ಚು ಕಾಲ ನಿರಂತರವಾಗಿ ನಡೆದಿದೆ. ಷಡ್ಯಂತ್ರದಿoದ ಪ್ರಾಣ ಕಳೆದುಕೊಂಡ ಅಮಾಯಕ ಹಿರಿಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. ಮಡಿಕೇರಿ ಕೋಟೆ ಮತ್ತು ನಾಲ್ನಾಡ್ ಅರಮನೆ ಆವರಣದಲ್ಲಿ ಅರಸರ ಕಾಲದ 201 ವರ್ಷಗಳ ಕರಾಳ ವಿಶ್ವಾಸಘಾತುಕ ಆಡಳಿತಗಾರರಿಂದ ಕೊಡವರ ದುರಂತ ಅಂತ್ಯವಾಗಿದೆ. 40 ಸಾವಿರಕ್ಕೂ ಹೆಚ್ಚು ಅಮಾಯಕ ಕೊಡವ ಜನಾಂಗೀಯ ಬುಡಕಟ್ಟು ಜನರನ್ನು ಕೋಟೆ ಆವರಣದಲ್ಲಿಯೇ ರಾಜರು ಕೊಂದು ಹಾಕಿದರು. ದೇವಟ್ ಪರಂಬುವಿನಲ್ಲಿ ನಿರಾಯುಧ ಕೊಡವ ಬುಡಕಟ್ಟು ಯೋಧರು ಟಿಪ್ಪುವಿನ ಕಾಲದಲ್ಲಿ ಕೊಲ್ಲಲ್ಪಟ್ಟರು.…






