ಲೇಖಕ: admin

ಕುಶಾಲನಗರ, NEWS DESK ಏ೧೨: ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರ ಗ್ರಾಮದ ವೃಂದಾ ಬಡಾವಣೆಯಲ್ಲಿ‌‌ ಅಪಾಯದಂಚಿನಲ್ಲಿದ್ದ ಟ್ರಾನ್ಸ್ ಫಾರ್ಮರನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳಾಂತರಿಸಲಾಯಿತು. ಕೆಲವು ತಿಂಗಳ ಹಿಂದೆ ವೃಂದಾ ಬಡಾವಣೆಯಲ್ಲಿ ಹಸಿವೊಂದು ಟಿಸಿಗೆ ಸಿಲುಕಿ ಪ್ರಾಣ ಕಳೆದುಕೊಂಡಿತ್ತು. ಅನಾಹುತಗಳನ್ನು ತಪ್ಪಿಸುವ ದೃಷ್ಟಿಯಿಂದ ರಸ್ತೆ ಬದಿಯಿದ್ದ ಟಿ.ಸಿ ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಶಾಸಕರ ಬಳಿ ಮನವಿ‌ ಮಾಡಿದ್ದರು. ಇದಕ್ಕೆ‌ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಚೆಸ್ಲಾಂ ಅಧಿಕಾರಿಗಳಿಗೆ ಟಿಸಿ ಸ್ಥಳಾಂತರಿಸಲು ಸೂಚನೆ ನೀಡಿದ್ದರು. ಅದರಂತೆ ಚೆಸ್ಕಾಂ ಸಿಬ್ಬಂದಿಗಳು ಟಿಸಿ ಸ್ಥಳಾಂತರಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಮಾಜಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ವೃಂದಾ ಬಡಾವಣೆಯಲ್ಲಿ ಹಸುವೊಂದು ವಿದ್ಯುತ್ ಅವಘಡದಿಂದ ಸಾವಿಗೀಡಾಗಿತ್ತು. ಪಕ್ಕದಲ್ಲಿಯೇ ಗಣೇಶೋತ್ಸವ ಹಾಗೂ ಊಟ ಹಬ್ಬ, ಇನ್ನಿತರ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಈ ಹಿನ್ನಲೆ ಸಾರ್ವಜನಿಕರ ಹಿತದೃಷ್ಟಿಯಿಂದ ಅನಾಹುತಗಳನ್ನು ಕೈತಪ್ಪಿಸಲು ಶಾಸಕರ ಬಳಿ ಟಿಸಿ‌ ಸ್ಥಳಾಂತರಕ್ಕೆ ಮನವಿ ಮಾಡಿದ್ದೆವು. ಅದರಂತೆ ಇಂದು ಸಹಕರಿಸಿದ ಶಾಸಕರಿಗೆ, ಕುಶಾಲನಗರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್…

Read More

ಕೊಪ್ಪಾದ ನಳಂದ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಎನ್.ಐಶ್ವರ್ಯ ಶೇ.95 ಫಲಿತಾಂಶ ದೊಂದಿಗೆ ಸಾಧನೆ ತೋರಿದ್ದಾರೆ. ಶ್ರೀನಗರದಲ್ಲಿ ಸೇನಾ ಯೋಧರಾಗಿ ಕರ್ತವ್ಯದಲ್ಲಿರುವ ಕುಶಾಲ ನಗರ ಸಮೀಪದ ಹುಲುಸೆ ಗ್ರಾಮದ ನಿಂಗಪ್ಪ ಹಾಗೂ ವಿದ್ಯಾ ದಂಪತಿಗಳ ಪುತ್ರಿ ಐಶ್ವರ್ಯ ವೈದ್ಯಕೀಯ ವ್ಯಾಸಂಗದತ್ತ ಒಲವು ತೋರಿದ್ದಾರೆ.

Read More

ಮಡಿಕೇರಿ ಏ.12 : ಈಜಲೆಂದು ಕೆರೆಗೆ ಇಳಿದ ಬಾಲಕ ಹಾಗೂ ಯುವಕ ನೀರು ಪಾಲಾದ ಘಟನೆ ಶನಿವಾರ ಸಂಜೆ ದಕ್ಷಿಣ ಕೊಡಗಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳಲೆ ನಿವಾಸಿ ಪ್ರಕಾಶ ಹಾಗೂ ಚಂದ್ರಿಕ ದಂಪತಿಗಳ ಪುತ್ರ, ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಗೌತಮ್(12) ಮತ್ತು ಮಂಜುಳಾ ಹಾಗೂ ದಿ.ರಾಜು ಎಂಬುವವರ ಪುತ್ರ ಕೃಷ್ಣ(22) ಮೃತ ದುರ್ದೈವಿಗಳಾಗಿದ್ದಾರೆ. ಶನಿವಾರ ಸಂಜೆ ಇಬ್ಬರು ಬಾಳಲೆ ಗ್ರಾಮದ ಕೊಟ್ಟಕೇರಿ ಮಾರಿಗುಡಿ ಎಂಬಲ್ಲಿರುವ ಕೆರೆಗೆ ಈಜಲು ತೆರಳಿದ್ದು, ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ಗೋಣಿಕೊಪ್ಪ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಇಬ್ಬರ ಮೃತದೇಹಗಳನ್ನು ಹೊರ ತೆಗೆದರು. ಘಟನೆ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಗೋಣಿಕೊಪ್ಪ ಅಗ್ನಿ ಶಾಮಕ ದಳದ ಪ್ರಬಾರ ಠಾಣಾಧಿಕಾರಿ ಸುನಿಲ್ ಕುಮಾರ್, ಪ್ರಮುಖ ಅಗ್ನಿ ಶಾಮಕ ಜಗದೀಶ್, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದರು.

Read More

ಮಡಿಕೇರಿ NEWS DESK ಏ.12 : ಚಲನಚಿತ್ರ ಮತ್ತು ಕಿರುತೆರೆಯ ನಟ ಕೊಡಗಿನ 7ನೇ ಹೊಸಕೋಟೆಯ ಕಲ್ಲೂರು ನಿವಾಸಿ ಹರೀಶ್(42) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಕುಶಾಲನಗರ ಮಾರ್ಗವಾಗಿ ಕಲ್ಲೂರಿಗೆ ತೆರಳುತ್ತಿದ್ದ ಸಂದರ್ಭ ಆನೆಕಾಡಿನ 275 ರಾಷ್ಟ್ರೀಯ ಹೆದ್ದಾರಿಯಲ್ಲಿ ಹರೀಶ್ ಸಂಚರಿಸುತ್ತಿದ್ದ ಕಾರು ನಿಂತಿದ್ದ ಗೊಬ್ಬರ ತುಂಬಿದ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊoಡಿದ್ದು, ಗಂಭೀರವಾಗಿ ಗಾಯಗೊಂಡ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಏ.11 NEWS DESK :  ಚೇರಂಬಾಣೆ ವ್ಯಾಪ್ತಿಯ ಬೇಂಗೂರು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪುನರ್ ಪ್ರತಿಷ್ಟಾ ಹಾಗೂ ಬ್ರಹ್ಮಕಲಶೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಚೇರಂಬಾಣೆಯಲ್ಲಿನ ಪಟ್ಟಮಾಡ ಕುಟುಂಬದ ಬೇಂಗೂರು ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪುನರ್ ನಿಮಾ೯ಣವಾದ ನೂತನ ಪ್ರಾಸಾದದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಪಂಚಲೋಹ ಬಿಂಬ ಪುನರ್ ಪ್ರತಿಷ್ಟೆ ಹಾಗೂ ಬ್ರಹ್ಮ ಕಲಶಾಭಿಷೇಕವು ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೖತ್ವದಲ್ಲಿ ಪಟ್ಟಮಾಡ ಕುಟುಂಬದ ಮುಂದಾಳತ್ವದಲ್ಲಿ ಆಯೋಜಿತವಾಗಿತ್ತು. ಶ್ರೀ ಸುಬ್ರಹ್ಮಣ್ಯ ದೇವರ ಬಿಂಬ ಪ್ರತಿಷ್ಟೆ, ಜೀವಕಲಶಾಭಿಷೇಕ, ಪ್ರಾಣ ಪ್ರತಿಷ್ಟೆ, ಹೋಮಕಲಶಾಭಷೇಕ, ತತ್ವ ಕಲಶಾಭಿಷೇಕ ,ಬ್ರಹ್ಮ ಕಲಶಾಭಿಷೇಕ, ಮಹಾಪೂಜೆಗಳು ನೆರವೇರಿದವು. ಕಾಯ೯ಕ್ರಮಕ್ಕೆ ಆಗಮಿಸಿದ್ದ ನೂರಾರು ಭಕ್ದಾಧಿಗಳಿಗೆ ಮಂತ್ರಾಕ್ಷತೆ, ಪ್ರಸಾದ ವಿತರಣೆ ಜರುಗಿತು. ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಮಡಿಕೇರಿಯ ಶ್ರೀ ಕುಂದುರುಮೊಟ್ಟೆ ದೇವಾಲಯದ ಟ್ರಸ್ಟಿ ಟಿ.ಪಿ. ರಮೇಶ್, ಮನು ಮೇದಪ್ಪ, ಮಡಿಕೇರಿಯ ಶ್ರೀ ವಿಜಯವಿನಾಯಕ ದೇವಾಲಯದ ಟ್ರಸ್ಟಿ ಜಿ.ಚಿದ್ವಿಲಾಸ್…

Read More

ಮಡಿಕೇರಿ ಏ.11 NEWS DESK : ಕಂದೀಲು ಕನ್ನಡ  ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಕೊಡಗಿನ  ಸಿನಿಮಾ ನಿಮಾ೯ಪಕಿ, ನಿದೇ೯ಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರ ನೂತನ ಮಕ್ಕಳ ಚಿತ್ರ ಕೋಟೆಬೆಟ್ಟದ ಚಿತ್ರೀಕರಣಕ್ಕೆ ನಗರದ ಶ್ರೀ ಆಂಜನೇಯ ದೇವಾಲಯದಲ್ಲಿ ಮುಹೂತ೯ ಪೂಜೆ ನೆರವೇರಿತು. ಕೊಡವ  ಭಾಷೆಯ ಚಿತ್ರ  ಕೋಟೆ ಬೆಟ್ಟಕ್ಕೆ ಕ್ಲಾಪ್ ನೆರವೇರಿಸಿ ಮಾತನಾಡಿದ ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಕೊಡಗಿನಲ್ಲಿ ಈಶ್ವರನ ಸನ್ನಿಧಿಯಾಗಿ ಪೌರಾಣಿಕ ಮಹತ್ವ ಹೊಂದಿರುವ ಕೋಟೆ ಬೆಟ್ಟದ ಹಿನ್ನಲೆ ಹೊಂದಿ ಮಕ್ಕಳ ಚಿತ್ರ ನಿಮಾ೯ಣ ಮಾಡುತ್ತಿರುವುದು ಉತ್ತಮ ಪ್ರಯತ್ನ ಎಂದರು. ಮಕ್ಕಳಿಗೆ ತಿಳವಳಿಕೆ ನೀಡುವ ನಿಟ್ಟಿನಲ್ಲಿ ಇಂಥ ಸಿನಿಮಾ ನಿಮಾ೯ಣ ಶ್ಲಾಘನೀಯ. ಕೋಟೆ ಬೆಟ್ಟ ಈಶ್ವರನ ಮಹತ್ವದ ಬಗ್ಗೆಯೂ ಚಿತ್ರ ಬಿಂಬಿಸಲಿ ಎಂದರು. ಹಿರಿಯ  ಪತ್ರಕತ೯ ಅನಿಲ್ ಹೆಚ್.ಟಿ. ಮಾತನಾಡಿ, ಕಂದೀಲು  ಕನ್ನಡ ಚಿತ್ರದ ಮೂಲಕ ಸಿನಿಮಾಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಕೊಡಗಿನ ಪ್ರಥಮ ಮತ್ತು ಕನಾ೯ಟಕದ ನಾಲ್ಕನೇ ಮಹಿಳೆ ಎಂಬ ಹಿರಿಮೆಯಿರುವ ಯಶೋಧ ಪ್ರಕಾಶ್ ಈಗ…

Read More

ಮಡಿಕೇರಿ ಏ.11 NEWS DESK : ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಮೇ 7 ರಿಂದ 10 ರವರೆಗೆ ಸೋಮವಾರಪೇಟೆಯ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟದ ಲೋಗೋ ಹಾಗೂ ಟ್ರೋಫಿಗಳ ಅನಾವರಣ ಕಾರ್ಯಕ್ರಮ ಮಡಿಕೇರಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಲೋಗೋವನ್ನು ಅನಾವರಣ ಮಾಡಿ ಮಾತನಾಡಿದ ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು, ಕೊಡಗು ಜಿಲ್ಲೆ ಕ್ರೀಡೆಯ ತವರು. ಇಂತಹ ನೆಲದಲ್ಲಿ ಪ್ರತಿಷ್ಠಿತ ತಂಡಗಳ ನಡುವೆ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯನ್ನು ಆಯೋಜಿಸಿರುವುದು ಶ್ಲಾಘನೀಯ. ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಜಿಲ್ಲಾಡಳಿತದಿಂದ ಬೇಕಾಗುವ ಅಗತ್ಯ ನೆರವು ಒದಗಿಸಲಾಗುವುದು ಎಂದರು. ಟ್ರೋಫಿಗಳನ್ನು ಅನಾವರಣ ಮಾಡಿದ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಚಕ್ರವರ್ತಿ ಅವರು, ಇಲಾಖೆಯಿಂದ ಹಾಕಿ ಪಂದ್ಯಾವಳಿಗೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು. ಸೋಮವಾರಪೇಟೆಯ ಹಾಕಿ ಟರ್ಫ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸ್ಥಳೀಯ ಪ್ರತಿಭೆಗಳಿಗೆ…

Read More

ಮಡಿಕೇರಿ ಏ.11 NEWS DESK : ಕೊಡಗು ಜಿಲ್ಲಾ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025-26ನೇ ಸಾಲಿನಲ್ಲಿ ನಡೆದಿದ್ದ 9 ಕಳವು ಪ್ರಕರಣಗಳನ್ನು ಬೇಧಿಸಿ ಒಟ್ಟು 20 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದು, ಅದನ್ನು ಮಾಲೀಕರಿಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ ವಿವಿಧ ಕಳವು ಪ್ರಕರಣಗಳಲ್ಲಿ ಒಟ್ಟು 228.19 ಗ್ರಾಂ ಚಿನ್ನಾಭರಣ, 2 ಕೆ.ಜಿ. 422 ಗ್ರಾಂ ಬೆಳ್ಳಿ ಆಭರಣ, 6.97 ಲಕ್ಷ ರೂ. ನಗದು, 6495 ಕೆ.ಜಿ ಕಾಫಿ, 75 ಕೆ.ಜಿ ಕರಿಮೆಣಸು, 5 ಚೀಲ ಪಾರ್ಚ್‍ಮೆಂಟ್ ಕಾಫಿ, 2 ಕಾರು, 1 ದ್ವಿಚಕ್ರ ವಾಹನ, 5 ಮೊಬೈಲ್ ಫೋನ್ ಗಳನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಮೊಬೈಲ್ ಕಳೆದು ಹೋದ ಪ್ರಕರಣದಡಿ ಒಟ್ಟು 54 ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಲಾಗಿದೆ. ವಿವಿಧ ಕಳವು ಪ್ರಕರಣಗಳಲ್ಲಿ ಸ್ವತ್ತುಗಳನ್ನು ಕಳೆದುಕೊಂಡ ಮಾಲೀಕರಿಗೆ ಕಾನೂನಾತ್ಮಕವಾಗಿ ಹಸ್ತಾಂತರ…

Read More

ಮಡಿಕೇರಿ ಏ.11 NEWS DESK : ತಿಂಗಳ ಒಳಗಾಗಿ ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಸಂಬಂಧಿಸಿದಂತೆ ಸರ್ಕಾರ ಅಗತ್ಯ ತೀರ್ಮಾನಗಳನ್ನು ಕೈಗೊಂಡು ನೆಲೆ ಇಲ್ಲದವರಿಗೆ ನೆಲೆಯೊದಗಿಸದಿದ್ದಲ್ಲಿ “ಮಾಡು ಇಲ್ಲವೆ ಮಡಿ” ಚಳವಳಿಯನ್ನು ರಾಜ್ಯ ವ್ಯಾಪಿ ಹಮ್ಮಿಕೊಳ್ಳುವುದು ಮಾತ್ರವಲ್ಲ, ಮೇ1 ರಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟವನ್ನು ಆರಂಭಿಸುವುದಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಸ್ಪಷ್ಟಪಡಿಸಿದೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯ ಬಗರ್ ಹುಕುಂ ಸಾಗುವಳಿದಾರರು, ಅರಣ್ಯ ಭೂಮಿ ಹಕ್ಕು ಪ್ರದಿಪಾದಿಸುತ್ತಿರುವವರು ಹಲ ದಶಕಗಳಿಂದ ಭೂಮಿಯ ಹಕ್ಕಿಗಾಗಿ ಕಾಯುತ್ತಲೆ ಇದ್ದಾರೆ. ಇಲ್ಲಿಯವರೆಗು ಅಧಿಕಾರಕ್ಕೆ ಬಂದ ಎಲ್ಲಾ ಸರ್ಕಾರಗಳು ಹುಸಿ ಭರವಸೆಗಳನ್ನು ನೀಡಿವೆಯೇ ಹೊರತು ತಮ್ಮ ಮೂಲಬೇಡಿಕೆಗಳ ಈಡೇರಿಕೆಯತ್ತ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು. ಅರಣ್ಯದ ಅಂಚಿನ ಭಾಗಗಳು, ಗೋಮಾಳ, ಸರ್ಕಾರಿ ಜಾಗಗಳಲ್ಲಿ ಹಲವಾರು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಭೂ ಹೀನರು, ತಾವಿರುವ ಜಾಗದ ಹಕ್ಕು ಪತ್ರಕ್ಕಾಗಿ ಫಾರಂ ನಂ.50,53,57…

Read More

ಮಡಿಕೇರಿ ಏ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡಲಾಗುವ ಪ್ರತಿಷ್ಠಿತ “ವಿಜಯಾ ವಿಷ್ಣು ಭಟ್ ದತ್ತಿ ಪ್ರಶಸ್ತಿ”ಯನ್ನು ಈ ಬಾರಿ ಉಪನ್ಯಾಸಕರು ಹಾಗೂ ಲೇಖಕರಾದ ಪ್ರತಿಮಾ ಹರೀಶ್ ರೈರವರಿಗೆ ಶನಿವಾರ ಪ್ರದಾನ ಮಾಡಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಆಯೋಜಿತ ಪ್ರಶಸ್ತಿ ಪ್ರದಾನ ಮತ್ತು ಜಲಜಾ ಶೇಖರ್ ಹಾಗೂ ಜೆ.ಸಿ.ಶೇಖರ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ, ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಸ್ಥರು ಹಾಗೂ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕøತೆ ಪ್ರೊ.ನಯನ ಕಶ್ಯಪ್ ಅವರು, “ಅಂತರಗಂಗೆ” ಅಂಕಣ ಬರಹಗಳ ಪುಸ್ತಕವನ್ನು ರಚಿಸಿರುವ ಪ್ರತಿಮಾ ಹರೀಶ್ ರೈ ಅವರಿಗೆ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಮನೆ ಮನಗಳಲ್ಲಿ ಕನ್ನಡಕ್ಕಿರಲಿ ಆದ್ಯತೆ- ಕಾರ್ಯಕ್ರಮವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿದ ಪೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇಜರ್ ಡಾ. ರಾಘವ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ…

Read More