ಮಡಿಕೇರಿ ಡಿ.4 : ಕುಶಾಲನಗರದ ಸಂತ ಸೆಬಾಸ್ಟಿಯನ್ನರ ದೇವಾಲಯದಲ್ಲಿ ಕ್ರಿಸ್ಮಸ್ ಹಬ್ಬದ ಪೂರ್ವ ಸಿದ್ಧತೆಯಾಗಿ ಪ್ರಾರಂಭಿಸಲಾಗುವ ಕ್ರಿಸ್ಮಸ್ ಕಾರೋಲ್ಸ್ ಗೆ ಧರ್ಮ ಕೇಂದ್ರದ ಗುರು ಫಾದರ್ ಮಾರ್ಟಿನ್ ಚಾಲನೆ ನೀಡಿದರು. ಕ್ರೈಸ್ತ ಬಾಂಧವರು ಮನೆ ಮನೆಗೆ ತೆರಳಿ ಕ್ರಿಸ್ಮಸ್ ಸಂದೇಶ ಸಾರುವ ಗೀತೆಗಳನ್ನು ಹಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಕಾನ್ವೆಂಟ್ ಸಿಸ್ಟರ್ಸ್ ತೆರೇಸಾ, ಸಲಹಾ ಸಮಿತಿಯ ಕಾರ್ಯದರ್ಶಿ ಸೆವ್ರಿನ್ ಡಿಸೋಜ, ಸಲಹಾ ಸಮಿತಿ ಸದಸ್ಯರಾದ ಶಾಜನ್ , ಯುವಕ ಸಂಘದ ಅಧ್ಯಕ್ಷ ರಾಬಿನ್, ಖಜಾಂಚಿ ರೋಷನ್ ವಿ. ಪಿ , ಕಾರ್ಯದರ್ಶಿ ರಾಕೇಶ್, ಐಸಾಕ್ ಸಾಲಿ, ಡೇರನ್, ಆಕಾಶ್, ರೋಷನ್ ಪೌಲ್ ಸಂತೋಷ್ ಮೆಲ್ವಿನ್ ಹಾಗೂ ಮಕ್ಕಳೂ ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ, ಡಿ.4 : ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಎಂ.ಚಂದ್ರಕಾಂತ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಡಿಕೇರಿ ನಗರದ ಸಂತ ಮೈಕಲ್ಲರ ಶಾಲೆಯಲ್ಲಿ ಕೊಡಗು ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಏರ್ಪಡಿಸಿದ್ದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರೇಪಣೆ ಮೂಡಿಸಬೇಕು ಎಂದರು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಹೆಜ್ಜೆ ಹಾಕುವ ಮೊದಲ ಪ್ರಮುಖ ಘಟ್ಟವಾಗಿದ್ದು, ಇಲ್ಲಿನ ಸಾಧನೆ ಜೀವನದ ಎಲ್ಲ ಹಂತಗಳಲ್ಲೂ ಪ್ರಭಾವ ಬೀರುತ್ತದೆ ಎಂದರು. ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ…
ಮಡಿಕೇರಿ ಡಿ.4 : ಕೊಡವ ಅಭಿವೃದ್ಧಿ ನಿಗಮಕ್ಕೆ ಹಿಂದಿನ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲವೆಂದು ವಿನಾಕಾರಣ ಟೀಕೆ ಮಾಡುವ ಬದಲು ಈಗ ಇರುವ ತಮ್ಮದೇ ಸರ್ಕಾರದಿಂದ ತಕ್ಷಣ ಹಣ ಬಿಡುಗಡೆ ಮಾಡಿಸಲು ಕಾಂಗ್ರೆಸ್ಸಿಗರು ಕ್ರಮ ಕೈಗೊಳ್ಳಲಿ ಎಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಕೊಡಗು ಕಾಂಗ್ರೆಸ್ಸಿಗರು ಕೊಡವ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹಿಂದಿನ ಬಸವರಾಜು ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದೆ. ಆದರೆ ಆ ಸಂದರ್ಭ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆ ಹಣವನ್ನು ನಿಗಮಕ್ಕೆ ನೀಡಲು ಸಾಧ್ಯವಾಗಿಲ್ಲ. 2022-23 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ 10 ಕೋಟಿ ರೂ. ಅನುದಾನದಲ್ಲಿ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ರೂಪಿಸಲು ಕ್ರಿಯಾಯೋಜನೆಗೆ ಅನುಮೋದನೆ…
ಕಡಂಗ ಡಿ.4 : ಬೆಂಗೂರು ಗ್ರಾ.ಪಂ ವ್ಯಾಪ್ತಿಯ ಚೇರಂಬಾಣೆ ಯ ವಿವಿಧ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಚೇರಂಬಾಣೆಯ ಅರುಣಾ ಪದವಿ ಪೂರ್ವ ಕಾಲೇಜಿನ ದ್ವಾರದ ಮುಂಭಾಗದಿಂದ ತೋಮಸ್ ಮನೆಯವರೆಗಿನ ರಸ್ತೆ, ಮಸೀದಿ ರಸ್ತೆ, ಪಟ್ಟಮಾಡ ಸತ್ಯ ಮನೆಯ ಮುಂಭಾಗದ ರಸ್ತೆ ಸೇರಿಸಿ ಒಟ್ಟು 10 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ವಿಜೇತರಿಗೆ ಬಹುಮಾನ ವಿತರಣೆ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಹಕರಿಸುವುದಾಗಿ ಶಾಸಕರು ಭರವಸೆ ನೀಡಿದರು. ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಪಂಚಾಯಿತಿ ಅಧ್ಯಕ್ಷೆ ಮಿಲನ್ ಮುತ್ತಣ್ಣ, ವಾರ್ಡಿನ ಸದಸ್ಯರುಗಳಾದ ಕೆ.ಎಂ. ಬಶೀರ್, ಕೆ.ಕೆ.ಬಿಂದು, ಬಿ.ಜಿ.ಸೋಮಣ್ಣ , ವಲಯ ಅಧ್ಯಕ್ಷ ಕುಂಚೆಟ್ಟಿರ ರಮೇಶ್, ಪಕ್ಷದ ಹಿರಿಯರು, ಸ್ಥಳೀಯ ನಿವಾಸಿಗಳು ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಡಿ.4 : ಕೆ.ಎಂ.ಎಫ್. ಫ್ರೆಂಡ್ಸ್ ವತಿಯಿಂದ ಡಿ.9 ಮತ್ತು 10 ರಂದು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ನಡೆಯಲಿದೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಒಟ್ಟು ಎಂಟು ತಂಡಗಳು ಪಾಲ್ಗೊಳ್ಳಲಿದ್ದು, ಇಶಾನಿ. ಎಫ್. ಸಿ., ಗೋಣಿಕೊಪ್ಪ. ಜನನಿ. ಎಫ್, ಸಿ, ಮಡಿಕೇರಿ. ಮಾನ್ವಿಕ್. ಎಫ್. ಸಿ.ಅಮ್ಮತಿ, ಟೀಮ್ ಹಂಟರ್ಸ್ ಮರಗೋಡು, ಮೊಗೇರ ಎಫ್. ಸಿ, ಪಾಲಿಬೆಟ್ಟ, ಫಿಯೋನೆಕ್ಸ್ ಎಫ್. ಸಿ. ಸೋಮವಾರಪೇಟೆ, ಎ.ಎಂ. ಎಫ್. ಸಿದ್ದಾಪುರ, ಹಾಗೂ ಭಗವತಿ, ಎಫ್. ಸಿ, ಹಾಲುಗುಂದ, ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ. ಪಂದ್ಯಾವಳಿಯಲ್ಲಿ ವಿಜೇತವಾಗುವ ತಂಡಕ್ಕೆ 25 ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 15 ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ ಸೇರಿದಂತೆ ವೈಯಕ್ತಿಕ ಟ್ರೊಫಿಗಳು ನೀಡಲಾಗುವುದು. ಮೊಗೇರ ಸೇವಾ ಸಮಾಜದ ಅಧ್ಯಕ್ಷ ಜನಾರ್ಧನ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಮಾಜದ ಮಾಜಿ ಅಧ್ಯಕ್ಷ ಹಾಗೂ ತುಳು ಸಾಹಿತ್ಯ ಅಕಾಡಮಿಯ ಸದಸ್ಯ …
ಮಡಿಕೇರಿ ಡಿ.4 : ಬಿಟ್ಟಂಗಾಲದ ರೋಟರಿ ಫ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿಗಳ ಪ್ರದರ್ಶನ ಸ್ಪರ್ಧೆ ನಡೆಯಿತು. ಸ್ಪರ್ಧೆಯು ಪ್ರಾಥಮಿಕ ಮತ್ತು ಪ್ರೌಢಶಾಲೆ ಎರಡು ಹಂತದಲ್ಲಿ ನಡೆಯಿತು. ಪ್ರಾಥಮಿಕ ವಿಭಾಗದಲ್ಲಿ ರೋಟರಿ ಪ್ರಾಥಮಿಕ ಶಾಲೆ ಪ್ರಥಮ, ತ್ರಿವೇಣಿ ಶಾಲೆ ದ್ವಿತೀಯ, ಕಾವೇರಿ ಶಾಲೆ ತೃತೀಯ ಬಹುಮಾನ ಪಡೆದುಕೊಂಡರೆ, ಪ್ರೌಢಶಾಲಾ ವಿಭಾಗದಲ್ಲಿ ಬ್ರೈಟ್ ಪಬ್ಲಿಕ್ ಶಾಲೆ ಪ್ರಥಮ, ರೋಟರಿ ಫ್ರೌಢಶಾಲೆ ಬಿಟ್ಟಂಗಾಲ ದ್ವಿತೀಯ, ಮೌಂಟನ್ ವ್ಯೂ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಕರೆ ನೀಡಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾದ ಗೀತಾಂಜಲಿ, ಸಂಸ್ಥೆಯ ವಿದ್ಯಾರ್ಥಿಗಳ ಶಿಸ್ತು, ಅಚ್ಚುಕಟ್ಟುತನಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಾಗಲಿ ಎಂದು ಆಶಿಸಿದರು. ತೀರ್ಪುಗಾರರಾಗಿ ಆಗಮಿಸಿದ ದೇವಣಗೇರಿ ಫ್ರೌಢಶಾಲೆಯ ಶಿಕ್ಷಕಿ ಪ್ರಮಿಳ ಮಕ್ಕಳ ಪ್ರಯತ್ನ ಮತ್ತು ಶಿಕ್ಷಕರ…
ಮಡಿಕೇರಿ ಡಿ.4 : ಕೊಡವ ಹಾಗೂ ಕೊಡವ ಭಾಷಿಕ ಜನಾಂಗ ಇಗ್ಗುತಪ್ಪ ದೇವರ ಪುತ್ತರಿ ದೇವ ಕಟ್ಟ್ ನ್ನು ತಪ್ಪದೆ ಪಾಲನೆ ಮಾಡಲು ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಕರೆ ನೀಡಿದರು. ಪೊನ್ನಂಪೇಟೆ ತಾಲ್ಲೂಕಿನ ಕುಂದಾ ಸಮೀಪದ ಬೊಟ್ಟಿಯತ್ ಮೂಂದ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್’ಗೆ ಸೇರಿದ “ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್”ನ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿವರ್ಷ ಪುತ್ತರಿ ನಮ್ಮೆಗೆ ಹದಿನೈದು ದಿವಸ ಮುಂಚಿತವಾಗಿ ಅಮಾವಾಸ್ಯೆಯ ದಿನದಂದು ಇಗ್ಗುತಪ್ಪ ದೇವರ ಮೂಲಸ್ಥಾನವಾದ “ಮಲ್ಮ” ಬೆಟ್ಟದಲ್ಲಿ ಶ್ರದ್ಧಾಭಕ್ತಿಯಿಂದ ತಕ್ಕಮುಖ್ಯಸ್ಥರು ಸೇರಿ ಪುತ್ತರಿ ಹಬ್ಬದ “ದೇವ ಕಟ್ಟ್” ಅನ್ನು ಹಾಕಲಾಗುತ್ತದೆ. ಈ ಸಂದರ್ಭದಲ್ಲಿ ಜಿಲ್ಲೆಯ ಜನರಿಗೆ ಒಂದಷ್ಟು ಕಟ್ಟುಪಾಡುಗಳನ್ನು ಕೂಡ ವಿಧಿಸಲಾಗುತ್ತದೆ ಹಾಗೂ ಅದನ್ನು ದೇವರ ಮುಂದೆ ಒಪ್ಪಿಸಲಾಗುತ್ತದೆ. ಆದರೆ ಇದನ್ನು ಜಿಲ್ಲೆಯ ಮಂದಿ ಸರಿಯಾಗಿ ಪಾಲನೆ ಮಾಡುತ್ತಿಲ್ಲ, ಇದರಿಂದ ಜಿಲ್ಲೆಯಲ್ಲಿ ಅನಾದಿಕಾಲದಿಂದಲೂ ಬದುಕು ಕಟ್ಟಿಕೊಂಡಿರುವ…
ವಿರಾಜಪೇಟೆ ಡಿ.4 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕಾನೂರು ವಲಯದ ಕುಟ್ಟ ಗ್ರಾ.ಪಂ ಸಭಾಂಗಣದಲ್ಲಿ ಭದ್ರ ಮತ್ತು ಜ್ಞಾನಜ್ಯೋತಿ ಕೇಂದ್ರಗಳ ಸದಸ್ಯರುಗಳಿಗೆ “ಸ್ವ ಉದ್ಯೋಗದೊಂದಿಗೆ ಸ್ವಾವಲಂಬನೆಯ ಮೂಲಕ ಮಹಿಳೆಯರ ಬದುಕು ಹಸನಾಗಿಸಲು” ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಆತ್ಮಯೋಜನೆ ರಾಜ್ಯಮಟ್ಟದ ಸದಸ್ಯೆ ರೋಹಿಣಿ ಸುಬ್ಬಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ವ ಉದ್ಯೋಗ ತರಬೇತಿಗಳನ್ನು ನಿರಂತರವಾಗಿ ಹಮ್ಮಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಗ್ರಾಮೀಣ ಮಹಿಳೆಯರ ಪಾಲಿನ ಆಶಾಕಿರಣವಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಇಂದು ಸ್ವ ಉದ್ಯೋಗ ಅನ್ನುವುದು ಅತ್ಯಂತ ಪ್ರಚಲಿತ ಹಾಗೂ ಸರ್ವರಿಗೂ ಸಲ್ಲುವ ಉದ್ಯೋಗವಾಗಿದೆ. ಇಂದಿನ ದಿನಗಳಲ್ಲಿ ವಿಶೇಷವಾಗಿ ಮಹಿಳೆಯರು ಹಲವಾರು ವಿಧದ ಸ್ವ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ತಮ್ಮ ಸ್ವಾವಲಂಬನೆಯ ಬದುಕನ್ನು ತಾವೇ ಕಟ್ಟಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೂಡಾ ಈ ಹಾದಿಯಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.…
ವಿರಾಜಪೇಟೆ ಡಿ.4 : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾ. ಎಂ.ವಿ.ಪ್ರಾಂಜಲ್ ಅವರಿಗೆ ಎಸ್‍ಎಂಎಸ್ ವಿದ್ಯಾ ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಗೌರವ ನಮನ ಸಲ್ಲಿಸಲಾಯಿತು. ಎಸ್‍ಎಂಎಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲೆ ಕುಸುಮ್ ಟಿಟೊ, ಸ್ಕೌಟ್ ಶಿಕ್ಷಕ ಭೀಮಯ್ಯ ಕೆ.ಎಸ್, ಗೈಡ್ ಕ್ಯಾ.ಮೈಥಿಲಿ ರಾವ್, ಎನ್‍ಸಿಸಿ ಅಧಿಕಾರಿ ಲವ ಕುಮಾರ್, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕ್ಯಾ. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕ್ಯಾಂಡಲ್ ದೀಪವನ್ನು ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಎಸ್‍ಎಂಎಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲೆ ಕುಸುಮ್ ಟಿಟೊ, ಹುತಾತ್ಮರ ಕುಟುಂಬಕ್ಕೆ ದುಃಖವನ್ನ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ದೇಶಕ್ಕೋಸ್ಕರ ತನ್ನ ಪ್ರಾಣ ತ್ಯಾಗ ಮಾಡಿದಂತಹ ಇಂಥವರ ಹೆಸರು ಅಮರವಾಗಿರಲಿದೆ. ಪ್ರತಿಯೊಬ್ಬರು ದೇಶದ ಮೇಲೆ ಅಭಿಮಾನ ಶಿಸ್ತು ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ಸಾಗಬೇಕು ಎಂದು ಕರೆ ನೀಡಿದರು.
ಮೂರ್ನಾಡು ಡಿ.4 : ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭವು ಡಿ.6ರಂದು ನಡೆಯಲಿದೆ. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಅಪರಾಹ್ನ1.30ಕ್ಕೆ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿಚೀಯಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು.






