ನಾಪೋಕ್ಲು ನ.4 : ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಕ್ತ ಕನಕದಾಸರ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಸಮೀಪದ ಕಕ್ಕಬ್ಬೆಯ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು, ಶಿಕ್ಷಕಿ ಕವಿತಾ ಮಾತನಾಡಿ ದಾಸರಲ್ಲಿಯೇ ಕನಕದಾಸರು ಅತ್ಯಂತ ಶ್ರೇಷ್ಠರು. ಉಳಿದ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ಇಂತಹ ಸಂತರ ಜೀವನ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಕನಕದಾಸರ ಕೀರ್ತನೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಪಾಲ್ಗೊಂಡಿದ್ದರು ವರದಿ : ದುಗ್ಗಳ ಸದಾನಂದ
ಲೇಖಕ: admin
ಕುಶಾಲನಗರ ಡಿ.3 : ನಮ್ರತೆ, ಪ್ರೀತಿ, ಸಮಾನತೆ, ಆತ್ಮೀಯತೆ ಮೂಲಕ ಭಗವಂತನನ್ನು ಕಾಣಲು ಸಾಧ್ಯ ಎಂದು ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷ ಬಿ.ಜಿ.ಅನಂತಶಯನ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರದ ಶ್ರೀಗಣಪತಿ ದೇವಸ್ಥಾನ ಜಾತ್ರೋತ್ಸವ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಜಾನಪದ ಪರಿಷತ್ ನ ಕೊಡಗು ಜಿಲ್ಲಾ ಘಟಕ ಮತ್ತು ಕುಶಾಲನಗರ ತಾಲ್ಲೂಕು ಘಟಕದ ಸಹಯೋಗದೊಂದಿಗೆ ನಡೆದ ಜಾನಪದ ಜಾತ್ರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಸಂಬಂಧಗಳ ಕೊರತೆ ಎದ್ದು ಕಾಣುತ್ತಿದೆ. ಪ್ರತಿಯೊಬ್ಬರೂ ಮಾನವೀಯತೆ, ಪ್ರೀತಿ ವಿಶ್ವಾಸ ಬೆಳೆಸಿಕೊಳ್ಳಬೇಕು. ಪ್ರಕೃತಿಯ ಆರಾಧನೆ ಮೂಲಕ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಎಂದ ಅವರು ಪ್ರಸಕ್ತ ಸ್ಥಿತಿಯಲ್ಲಿ ಜನಪದದ ಮೂಲಕ ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ ಅಗತ್ಯವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಾತ್ರೋತ್ಸವ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಜಾನಪದ ಪರಿಷತ್ತಿನ ಕಾರ್ಯ ಚಟುವಟಿಕೆ ಇತರರಿಗೆ ಪ್ರೇರಣೆಯಾಗಿದೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಲರವವನ್ನು ಶ್ರೀಮಂತ…
ಮಡಿಕೇರಿ ಡಿ.3 : ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಮತ್ತು ಸಂಘ, ಸಂಸ್ಥೆಗಳು ನೀಡುವ ನೆರವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಹಿರಿಯ ಪತ್ರಕರ್ತ ಹಾಗೂ ಕೊಡಗು ಚಾನಲ್ ಸಂಪಾದಕ ಜಿ.ವಿ.ರವಿಕುಮಾರ್ ಕರೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾದ ಅಧ್ಯಾಪಕರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಯಶಸ್ಸು ಸಾಧಿಸುವ ಮೂಲಕ ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಪೋಷಕರಂತೆ ಶಿಕ್ಷಕರು ಕೂಡ ಹೆಚ್ಚು ಶ್ರಮ ವಹಿಸುತ್ತಾರೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಶಿಕ್ಷಕರನ್ನು ಸನ್ಮಾನಿಸುವುದು ಕೂಡ ಅತಿಮುಖ್ಯ ಎಂದರು. ಶಿಕ್ಷಣಕ್ಕೆ ಆದ್ಯತೆ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದಲಿತ ಸಂಘರ್ಷ ಸಮಿತಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ರವಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ…
ಮಡಿಕೇರಿ ಡಿ.3 : ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಪುತ್ರಿಯರ ಶವ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಶ್ವಿನಿ (48), ಇವರ ಪುತ್ರಿಯರಾದ ಗೋಣಿಕೊಪ್ಪಲು ಕಾವೇರಿ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ನಿಕಿತಾ(21) ಹಾಗೂ ಕಂಪ್ಯೂಟರ್ ತರಬೇತಿ ಪಡೆಯುತ್ತಿರುವ ಆಕೆಯ ತಂಗಿ ನವ್ಯ(18) ಮೃತ ದುರ್ದೈವಿಗಳು. ಹುದಿಕೇರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮೂವರು ಐಗುಂದದಲ್ಲಿರುವ ತಮ್ಮ ಕಾಫಿ ತೋಟಕ್ಕೆ ಶನಿವಾರ ತೆರಳಿದ್ದರು. ಆದರೆ ರಾತ್ರಿಯಾದರೂ ಮರಳಿರಲಿಲ್ಲ ಎಂದು ಹೇಳಲಾಗಿದೆ. ಇಂದು ಮೂವರ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ. ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುಂಟಿಕೊಪ್ಪ ಡಿ.3 : ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ 3 ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆ ಕೊಡಗು ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಜಯಘೋಷಗಳೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ ಜಯಕಾರ ಹಾಕಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಕೆದಕಲ್ ಗ್ರಾ.ಪಂ ಅಧ್ಯಕ್ಷ ಆನಂದ, ಪಂಚಾಯಿತಿ ಸದಸ್ಯ ಬಿ.ಎಂ.ಸುರೇಶ್, ಸುಂಟಿಕೊಪ್ಪ ಶಕ್ತಿ ಕೇಂದ್ರದ ಅಧ್ಯಕ್ಷ ಬಿ.ಕೆ.ಪ್ರಶಾಂತ್, ವಿಶ್ವ ಹಿಂದೂ ಪರಿಷದ್ ಮಾಜಿ ಕಾರ್ಯದರ್ಶಿ ಡಿ.ನರಸಿಂಹ, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಡಿ.3 : ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಉನ್ನತ ಶಿಕ್ಷಣ ನೀಡುವ ಮೂಲಕ ಅವರನ್ನೇ ಸಮಾಜದ ಆಸ್ತಿಯನ್ನಾಗಿ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀನಾರಾಯಣ ಗುರುಗಳ ಜಯಂತ್ಯೋತ್ಸವ, ಗೌರವ ಸಮರ್ಪಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಾಸಂತ ನಾರಾಯಣ ಗುರುಗಳ ಸಾಧನೆ ಮತ್ತು ಜೀವನದ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕು. ನಾರಾಯಣ ಗುರುಗಳು ಬಿಲ್ಲವ ಸಮುದಾಯಕ್ಕೆ ಮಾತ್ರ ಗುರುಗಳಾಗದೆ ಸಮಾಜದ ಎಲ್ಲಾ ಸಮುದಾಯಕ್ಕೂ ಮಾದರಿಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಮಾಜವನ್ನು ಶೈಕ್ಷಣಿಕ ಮತ್ತು ಅರ್ಥಿಕವಾಗಿ ಸಬಲಗೊಳಿಸಬೇಕೆಂದು ಕರೆ ನೀಡಿದರು. 12ನೇ ಶತಮಾನದಲ್ಲಿ ಬಸವಣ್ಣನವರು ಮಾಡಿದ ಸಮಾಜ ಸುಧಾರಣೆ ಮತ್ತು ಅನುಭವ…
ಮಡಿಕೇರಿ ಡಿ.3 : ಮಡಿಕೇರಿಯಲ್ಲಿ ಆಯೋಜಿತವಾಗಿದ್ದ ಇನ್ನರ್ ವೀಲ್ ಜಿಲ್ಲಾ ಸಮ್ಮೇಳನದ ಅಂಗವಾಗಿ ಇನ್ನರ್ ವೀಲ್ ಸಂಸ್ಥೆಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮಗಳು ಆಕಷ೯ಕವಾಗಿ ನಡೆದವು. ನಗರದ ಕ್ರಿಸ್ಟಲ್ ಕೋಟ್೯ ಸಭಾಂಗಣದಲ್ಲಿ ಮಹಿಳೆಯರ ಸಾಂಸ್ಕೖತಿಕ ನೖತ್ಯಗಳ ವೈಭವ ಮೇಳೈಸಿತ್ತು. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಸದಸ್ಯೆಯರಿಂದ ಗಣಪತಿ ಸ್ತುತಿ ಗೀತ ನೖತ್ಯ, ಜೀವನದಿ ಕಾವೇರಿ ನೖತ್ಯ, ಕೊಡವ ನೖತ್ಯ, ಬುಡಕಟ್ಟು ನೖತ್ಯಗಳು ಗಮನ ಸೆಳೆದವು. ಕುಶಾಲನಗರ ಇನ್ನರ್ ವೀಲ್ ಸದಸ್ಯೆಯರಿಂದ ರೀಲ್ಸ್ ಡಾನ್ಸ್, ಸೋಮವಾರಪೇಟೆ ಇನ್ನರ್ ವೀಲ್ ಸದಸ್ಯೆಯರಿಂದ ಸುಗ್ಗಿ ಕುಣಿತ, ಮಲ್ಯೇಷಿಯ ತಂಡದಿಂದ ಮಲ್ಯೇಷಿಯನ್ ಜಿಗ್ ನೖತ್ಯ, ಮನ ಸೆಳೆದವು. ಇನ್ನರ್ ವೀಲ್ ಸಂಸ್ಥೆಯ ಮಾಜಿ ಜಿಲ್ಲಾ ಅಧ್ಯಕ್ಷರು ತಮ್ಮ ಆಡಳಿತ ವಷ೯ದ ಸಂದೇಶ ಸಾರುವ ಕಾಯ೯ಕ್ರಮ ಪ್ರಸ್ತುತ ಪಡಿಸಿದರು. ಅಂತೆಯೇ ಇನ್ನರ್ ವೀಲ್ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ವೈವಿಧ್ಯಮಯ ಸಾಂಪ್ರದಾಯಿಕ ಸೀರೆಗಳ ಫ್ಯಾಷನ್ ಶೋದಲ್ಲಿ ಪಾಲ್ಗೊಂಡು ಮೆಚ್ಚುಗೆಗೆ ಪಾತ್ರರಾದರು. ರಾಜ್ಯದ 8 ಕಂದಾಯ ಜಿಲ್ಲೆಗಳಿಂದ 600 ಕ್ಕೂ ಅಧಿಕ ಸದಸ್ಯೆಯರು…
ಮಡಿಕೇರಿ. ಡಿ.3 : ಜನರು ಮತ್ತು ನ್ಯಾಯಾಲಯಗಳ ಮಧ್ಯೆ ಸೌಹಾಧ೯ದ ಸೇತುವೆಗಳಂತೆ ಕಾಯ೯ನಿವ೯ಹಿಸುವ ಮಹತ್ವದ ಹೊಣೆಗಾರಿಕೆ ಹೊಂದಿರುವ ವಕೀಲರು ಸಮಾಜದಲ್ಲಿ ಗುರುತರ ಬದಲಾವಣೆ ತರುವಲ್ಲಿಯೂ ಪ್ರಮುಖ ಪಾತ್ರ ವಹಿಸಬೇಕೆಂದು ರಾಜ್ಯ ಸಕಾ೯ರದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಕರೆ ನೀಡಿದ್ದಾರೆ. ನಗರದ ಹೊರವಲಯದಲ್ಲಿನ ಕ್ಯಾಪಿಟಲ್ ವಿಲೇಜ್ ರೆಸಾಟ್೯ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿತವಾದ ವಕೀಲರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಇತರ ವೖತ್ತಿಗಳಿಗೆ ಹೋಲಿಸಿದರೆ ವಕೀಲ ವೖತ್ತಿಯು ಅತ್ಯಂತ ಘನತೆ, ಗೌರವ ಹೊಂದಿರುವ ಮಹತ್ವದ ವೖತ್ತಿಯಾಗಿದೆ. ವಕೀಲ ವೖತ್ತಿಯಲ್ಲಿ ಇರುವವರು ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಿಂದಲೂ ಸಾಮಾಜಿಕ ವಿಚಾರಗಳಲ್ಲಿನ ಹೋರಾಟಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಈಗಲೂ ಕೂಡ ವಕೀಲರು ಸಾಮಾಜಿಕವಾಗಿ ಬದಲಾವಣೆ ತರುವಂಥ ಹೋರಾಟಗಳಲ್ಲಿ ಕಾನೂನಾತ್ಮಕವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು. ಭಾರತದಲ್ಲಿ ಕಾನೂನು ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾರಂಭವಾಗುತ್ತಿರುವುದು ಕೂಡ ವಕೀಲ ವೖತ್ತಿಯನ್ನು ಅತೀ ಹೆಚ್ಚು ಯುವಕ, ಯುವತಿಯರು ಆಯ್ಕೆ…
ಮಡಿಕೇರಿ ಡಿ.3 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನದ ಅಂಗವಾಗಿ ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಕಾರ್ಯಕ್ರಮ ಡಿ.6 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಆಸಕ್ತರು ಪಾಲ್ಗೊಂಡು ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಮಾಡಬಹುದು ಎಂದು ತಿಳಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ದೇವದಾಸ್ ಹೆಚ್.ವಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಉದ್ಘಾಟಿಸಲಿದ್ದಾರೆ. ಹೆಚ್.ಎಲ್.ದಿವಾಕರ್ ಪ್ರಾಸ್ತವಿಕ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ಜಿಲ್ಲಾ ಆಸ್ಪತ್ರೆಯ ಶಸ್ತç ಚಿಕಿತ್ಸಕ ಡಾ.ನಂಜುಂಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್, ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಕೆ.ಪಿ.ಕರುಂಬಯ್ಯ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ನವೀನ್…
ಮಡಿಕೇರಿ ಡಿ.2 : ಚೆಸ್ಕಾಂ, ಸರ್ವೇ, ಶಿಕ್ಷಣ ಸೇರಿದಂತೆ ಕೆಲ ಇಲಾಖೆಗಳ ಕಾರ್ಯವೈಖರಿಯಿಂದ ಜನಸಾಮಾನ್ಯರು ತೊಂದರೆಗೆ ಒಳಗಾಗುತ್ತಿದ್ದು, ಕಾರ್ಯವೈಖರಿಯನ್ನು ಬದಲಿಸಿಕೊಳ್ಳುವಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಟ್ಟುನಿಟ್ಟಿನ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿತ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕರು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪ್ರಯತ್ನಶೀಲರಾಗಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಅಧಿಕಾರಿಗಳಿಂದ ಇಲಾಖೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ಕಡಿಮೆ ಹಾಜರಾತಿ ಇರುವ ಶಾಲೆಗಳಿಗೆ ಹೆಚ್ಚಿನ ಶಿಕ್ಷಕರನ್ನು ನೇಮಿಸಿ, ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲೆಗಳಿಗೆ ಕಡಿಮೆ ಶಿಕ್ಷಕರನ್ನು ನೇಮಿಸಿಕೊಳ್ಳುವುದು, ಶಾಲಾ ಶಿಕ್ಷಕರು ಕೇಳುವ ಸ್ಥಳಕ್ಕೆ ಅವರನ್ನು ಏತಕ್ಕೆ ವರ್ಗಾಯಿಸುತ್ತೀರಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಶಾಸಕರು ಪ್ರಶ್ನಿಸಿ, ಈ ವ್ಯವಸ್ಥೆ ಮುಂದೆ ಬದಲಾಗಬೇಕು ಎಂದು ತಿಳಿಸಿದರು. ವಿದ್ಯುತ್ ಸಂಪರ್ಕ ನೀಡಿ- ನಿಟ್ಟೂರು ಗ್ರಾಮದ ಪಾಲದಳ ಹಾಡಿಯ ಹದಿನಾರು ಮನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿರುವ ಬಗ್ಗೆ ಪ್ರಶ್ನಿಸಿದ…






