ಮಡಿಕೇರಿ ಡಿ.1 : ಪಾಠ-ಪ್ರವಚನಗಳೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರಮುಖರು ಕರೆ ನೀಡಿದರು. ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡಿನ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪುಟಾಣಿ ಮಕ್ಕಳೊಂದಿಗೆ ಉದ್ಘಾಟಿಸಿ ಮಾಡಿದ ಶಕ್ತಿ ದಿನಪತ್ರಿಕೆ ಹಿರಿಯ ಉಪ ಸಂಪಾದಕ ಕುಡೆಕಲ್ ಸಂತೋಷ್, ಮಕ್ಕಳಲ್ಲಿ ಸಾಧಿಸುವ ಛಲ ಇರಬೇಕು, ಜೀವನದಲ್ಲಿ ಮುಂದೆ ಬರಬೇಕಾದರೆ ವಿದ್ಯೆಯೊಂದಿಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಪ್ರತಿಯೋರ್ವರಲ್ಲೂ ಪ್ರತಿಭೆ ಇರುತ್ತದೆ, ಅದನ್ನು ಹೊರ ಹಾಕುವದರ ಮೂಲಕ ಸಾಧನೆ ಮಾಡಬೇಕು. ಮಕ್ಕಳೆಂದ ಮೇಲೆ ತುಂಟಾಟ ಇದ್ದೇ ಇರುತ್ತದೆ, ಅದನ್ನೆಲ್ಲ ಮೆಟ್ಟಿ ನಿಂತು ಮುಂದೆ ಬರಬೇಕು ಎಂದು ಹೇಳಿದರು. ಗುರಿಯ ಹಿಂದೆ ಗುರುಗಳಿದ್ದಾರೆ ಎಂಬ ಮಾತಿನಂತೆ ಶಿಕ್ಷಣ ನೀಡಿದ ಗುರುಗಳನ್ನು ಗೌರವಿಸಬೇಕು, ಪ್ರಸ್ತುತ ಮೊಬೈಲ್ ಅನಿವಾರ್ಯವಾಗಿದ್ದು, ಅದರಲ್ಲಿನ ಉತ್ತಮ ಮಾಹಿತಿಗಳನ್ನು ಪಡೆದುಕೊಂಡು ಕ್ರಿಯಾತ್ಮಕ ಚಟುವಟಿಕೆಗಳತ್ತ ಆಸಕ್ತಿ ತೋರುವದರೊಂದಿಗೆ ವಿದ್ಯೆ ನೀಡಿದ…
ಲೇಖಕ: admin
ಮಡಿಕೇರಿ ಡಿ.1 : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವರ್ಷಂಪ್ರತೀ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ಏರ್ಪಡಿಸುತ್ತದೆ. ಅಂತೆಯೇ ಈ ಸಾಲಿನಲ್ಲಿ ಡಿಸೆಂಬರ್, 07 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ರಾಷ್ಟ್ರದ ಅರ್ಥವ್ಯವಸ್ಥೆಯ ಬೆಳವಣಿಗೆಗಳಲ್ಲಿ ಸಹಕಾರಿ ವಲಯದ ಪಾತ್ರ’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ. ಅಲ್ಲದೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಬಡತನ ನಿರ್ಮೂಲನೆ, ಉದ್ಯೋಗ ಸೃಷ್ಠಿ, ಸಾಮಾಜಿಕ ನ್ಯಾಯ ವಿತರಣೆಗಳು ಸಹಕಾರಿ ವಲಯದಿಂದ ಮಾತ್ರವೇ ಜಾರಿಗೊಳಿಸಲು ಸಾಧ್ಯ’ ವಿಷಯದ ಕುರಿತು ಚರ್ಚಾ ಸ್ಪರ್ಧೆಯು ಡಿ.7 ರಂದು ಬೆಳಗ್ಗೆ 11 ಗಂಟೆಗೆ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪ್ರಬಂದ ಸ್ಪರ್ಧೆಗೆ ಒಂದು ಶಾಲೆಯಿಂದ ಒಬ್ಬ ವಿದ್ಯಾರ್ಥಿ ಹಾಗೂ ಚರ್ಚಾ ಸ್ಪರ್ಧೆಗೆ ಒಂದು ಶಾಲೆಯಿಂದ ವಿಷಯದ ಪರವಾಗಿ ಒಬ್ಬರು ಮತ್ತು ವಿರುದ್ಧವಾಗಿ ಒಬ್ಬರನ್ನು ಆಯ್ಕೆ ಮಾಡಿ ಕಳುಹಿಸತಕ್ಕದ್ದು. ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯಾಣ ದರ…
ಮಡಿಕೇರಿ ಡಿ.1 : ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೂಡಿಗೆ ಸೈನಿಕ ಶಾಲೆಯ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್‍ಸಿಂಗ್ ಅವರು ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲೆಯ ಮಾಜಿ ಯೋಧರು ಅವರ ಕುಟುಂಬದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯ ಕೋರಿದ್ದಾರೆ.
ಮಡಿಕೇರಿ ಡಿ.1 : ಪ್ರತಿಯೊಬ್ಬ ನಾಗರಿಕರಿಗೂ ಎಚ್‍ಐವಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ನಗರಸಭೆ ಅಧ್ಯಕ್ಷ ಎನ್.ಪಿ.ಅನಿತಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಓಡಿಪಿ-ಸ್ನೇಹಾಶ್ರಯ, ಆಶೋದಯ ಸಂಸ್ಥೆ ಹಾಗೂ ವಿಹಾನ್ ಆರೈಕೆ ಮತ್ತು ಬೆಂಬಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮುದಾಯ ಮುನ್ನಡೆಸಲಿ ಎಂಬ ಘೋಷವಾಕ್ಯದೊಂದಿಗೆ ನಡೆದ ‘ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುವಂತಹ ವೈರಾಣು ಎಂದರೆ…
ಮಡಿಕೇರಿ ಡಿ.1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆದಿವಾಸಿ ಜನರ ಸಂಖ್ಯೆ ಹೆಚ್ಚಿದ್ದು, ಆದಿವಾಸಿ ಜನರ ಕುಂದುಕೊರತೆ ಪರಿಹರಿಸುವ ನಿಟ್ಟಿನಲ್ಲಿ ಸದ್ಯದಲ್ಲೇ ಸಭೆ ಆಹ್ವಾನಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದ ಸಭಾಂಗಣದಲ್ಲಿ ನಡೆದ ‘ಗಿರಿಜನ ಉತ್ಸವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರಣ್ಯ ಹಕ್ಕು ಕಾಯ್ದೆಯಡಿ ಇನ್ನೂ ಸಾಕಷ್ಟು ಕುಟುಂಬಗಳಿಗೆ ಅರಣ್ಯ ಹಕ್ಕು ಪತ್ರ ಹಾಗೂ ಸಮುದಾಯ ಹಕ್ಕುಪತ್ರ ಸಹ ದೊರೆಯಬೇಕಿದೆ. ಆ ನಿಟ್ಟಿನಲ್ಲಿ ಹಲವು ಸಮಸ್ಯೆಗಳನ್ನು ಚರ್ಚಿಸಿ ಇತ್ಯರ್ಥಪಡಿಸಲು ಸಭೆ ಆಹ್ವಾನಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಈಗಾಗಲೇ ಗಿರಿಜನರ ಕುಂದುಕೊರತೆ ಆಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…
ಮಡಿಕೇರಿ ಡಿ.1 : ಪೊನ್ನಂಪೇಟೆಯ ಕೂರ್ಗ್‍ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕಾಲೇಜಿನ ಬೆಳ್ಳಿಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಅನ್ವೇಷಣೆ – 2 ಎಂಬ ಪ್ರಾಜೆಕ್ಟ್ ಪ್ರದರ್ಶನ ಸ್ಪರ್ಧೆಯನ್ನು ಡಿ.15 ರಂದು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮತ್ತು ಸಂಶೋಧನಾ ಪ್ರವೃತ್ತಿಯನ್ನು ಹಾಗೂ ವೈನೋದಿಕ ಚಿಂತನಾ ಶೀಲತೆ ,ವಿನೂತನ ದೃಷ್ಟಿಕೋನವನ್ನು ಬೆಳೆಸುವ ನಿಟ್ಟಿನಲ್ಲಿ ಈಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ಮೂರು ವಿಭಾಗದಲ್ಲಿ ಜರುಗಲಿದೆ. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಪರಿಸರ ವಿಜ್ಞಾನ ಎಂಬ ಎರಡು ಪ್ರಕಾರದಲ್ಲಿ ಸ್ಪರ್ಧೆ ನಡೆಯಲ್ಲಿದ್ದು, ಪ್ರಥಮ ಬಹುಮಾನ 8 ಸಾವಿರ ನಗದು, ದ್ವಿತೀಯ ಬಹುಮಾನ 6 ಸಾವಿರ ನಗದು ಮತ್ತು ತೃತೀಯ ಬಹುಮಾನ 4 ಸಾವಿರ ನಗದನ್ನು ಒಳಗೊಂಡಿದೆ. ಪಿ.ಯು.ಸಿ.ವಿಭಾಗದ ಸ್ಪರ್ಧೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ಮೂರು ವಿಷಯದಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರಥಮ ಬಹುಮಾನ 10,000 ನಗದು ಮತ್ತು ದ್ವಿತೀಯ ಬಹುಮಾನ 6000 ನಗದ್ದನ್ನು ಒಳಗೊಂಡಿದೆ. ಈ ಬಹುಮಾನ ಪ್ರತಿ ವಿಷಯಕ್ಕೆ ಪ್ರತ್ಯೇಕವಾಗಿರುತ್ತದೆ. ಡಿಪ್ಲೋಮೊ ವಿಭಾಗದ ಸ್ಪರ್ಧೆಯಲ್ಲಿ ಕಂಪ್ಯೂಟರ್‍ರ್ಸೈನ್ಸ್…
ಮಡಿಕೇರಿ ಡಿ.1 : ಮೈಸೂರಿನ ಹೆಸರಾಂತ ಅಪೋಲೊ ಬಿ.ಜಿ.ಎಸ್ ಆಸ್ಪತ್ರೆ ಹಾಗೂ ಗೋಣಿಕೊಪ್ಪದ ಲೋಪಾಮುದ್ರಾ ಆಸ್ಪತ್ರೆಯ ಸಹಯೋಗದಲ್ಲಿ ಕಾರ್ಯಚರಿಸಲಿರುವ ಅತ್ಯಾಧುನಿಕ ಆಂಬ್ಯುಲೆನ್ಸ್ ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಶಾಸಕ ಎ.ಎಸ್ ಪೊನ್ನಣ್ಣ, ಹೃದಯಾಘಾತವಾದ ತಕ್ಷಣ ತುರ್ತು ನೀಡಬೇಕಾದ ಪ್ರಥಮ ಹಂತದ ಜೌಷಧಿಯ ವ್ಯವಸ್ಥೆಯನ್ನು ಬಡ ರೋಗಿಗಳಿಗೆ ದಿವಂಗತ ಎ.ಕೆ.ಸುಬ್ಬಯ್ಯ ಮತ್ತು ಪೊನ್ನಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೋಣಿಕೊಪ್ಪದ ಲೋಪಾಮುದ್ರಾ ಆಸ್ಪತ್ರೆಯಲ್ಲಿ ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದರು. ಈಸಂದರ್ಭ ಗೋಣಿಕೊಪ್ಪದ ಲೋಪಾಮುದ್ರಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸೌಮ್ಯ ಗಣೇಶ್ ನಾಣಯ್ಯ, ಲೋಪಾಮುದ್ರಾ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಅಮೃತ್ ನಾಣಯ್ಯ , ಲೋಪಾಮುದ್ರಾ ಆಸ್ಪತ್ರೆ ಅಧ್ಯಕ್ಷ ಕ್ಯಾಪ್ಟನ್ ಮಾದಪ್ಪ, ಡಾ.ಅಮಾನ್ ಮೆಡಿಕಲ್ ಸುಪರಿಡೆಂಟ್ ಅಪೋಲೊ ಬಿ.ಜಿ.ಎಸ್ ಆಸ್ಪತ್ರೆ , ಸಮಾಜ ಸೇವಕ ಸಂಕೇತ್ ಪೂವಯ್ಯ , ಅಪೋಲೊ ಬಿ.ಜಿ.ಎಸ್ ಆಸ್ಪತ್ರೆ ಸೀನಿಯರ್ ಎಕ್ಸ್ ಕ್ಯೂಟಿವ್ ರಾಕೇಶ್ ಉತ್ತಪ್ಪ ಸೇರಿದಂತೆ ಲೋಪಾಮುದ್ರಾ ಆಸ್ಪತ್ರೆಯ…
ಕಡಂಗ ಡಿ.1 : ವಿರಾಜಪೇಟೆ ತಾಲ್ಲೂಕಿನ ಕುಂಜಲಗೇರಿ ಗ್ರಾಮದ ಬೆಟ್ಲಪ್ಪ ಈಶ್ವರ ದೇವರ ವಿಶೇಷ ಪೂಜೆಯು ಡಿ.14ರ ವರೆಗೆ ನಡೆಯಲಿದೆ. ಈ ದೇವಾಲಯ ವಿಶೇಷ ಇತಿಹಾಸ ಹೊಂದಿದ್ದು, ಈಗಾಗಲೇ ನ.15 ರಿಂದ ಆರಂಭಗೊಂಡಿರುವ ಪೂಜೆಯು ಸುಮಾರು ಒಂದು ತಿಂಗಳ ಕಾಲ ನಡೆಯಲಿದ್ದು, ಡಿ.14 ರಂದು ಮಹಾದೇವನಿಗೆ ವಾರ್ಷಿಕ ಮಹಾಪೂಜೆ, ಚೆಂಡೆ, ದೇವರ ಬಲಿ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ : ನೌಫಲ್
ಕಡಂಗ ಡಿ.1 : ಕಡಂಗ ವಿಜಯ ವಿದ್ಯಾ ಸಂಸ್ಥೆಯಲ್ಲಿ ಸಂತ, ತತ್ವಜ್ಞಾನಿ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಶಿಕ್ಷಕರು ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮುಖ್ಯ ಶಿಕ್ಷಕಿ ಗೀತಾ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ವಿಜಯ ವಿದ್ಯಾ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು. ವರದಿ : ನೌಫಲ್
ಮಡಿಕೇರಿ ಡಿ.1 : ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಡಿಂಪಲ್ ಎಂಬ ವ್ಯಕ್ತಿಯ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಹಾಗೂ ಹಾಸನ ಜಿಲ್ಲಾ ದಲಿತ ಮುಖಂಡರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್, ಇದೇ ಸೆ.9 ರಂದು ಹಾನಗಲ್‍ನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಿಂಪಲ್ ಎಂಬುವವರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಕೊಡಗು ಜಿಲ್ಲಾ ಪೊಲೀಸರ ತನಿಖೆ ತೃಪ್ತಿದಾಯಕವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಬಾಚಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಡಿಂಪಲ್ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದ ಮಹಿಳೆಯೊಬ್ಬರೊಂದಿಗೆ 4 ವರ್ಷಗಳಿಂದ ಜೀವನ ಸಾಗಿಸುತ್ತಿದ್ದರು. ಸೆ.9 ರಂದು ಡಿಂಪಲ್ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ದೂರಿನ…






