ಮಡಿಕೇರಿ ಡಿ.1 : ಮಡಿಕೇರಿಯಲ್ಲಿ ಡಿ.2 ಮತ್ತು 3 ರಂದು ಎರಡು ದಿನಗಳ ಕಾಲ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಶತಪವ೯ ಹೆಸರಿನ ಜಿಲ್ಲಾ ಸಮ್ಮೇಳನ ಆಯೋಜಿತವಾಗಿದ್ದು 8 ಕಂದಾಯ ಜಿಲ್ಲೆಗಳಿಗೆ ಸೇರಿದ ಕ್ಲಬ್ ಗಳ ಅಂದಾಜು 600 ಸದಸ್ಯೆಯರು ಪಾಲ್ಗೊಳ್ಳಲಿದ್ದಾರೆ ಎಂದು ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಪೂಣಿ೯ಮಾ ರವಿ, ಡಿ.2 ರಂದು ಸಂಜೆ 4 ಗಂಟೆಗೆ ನಗರದ ಕ್ರಿಸ್ಟಲ್ ಕೋಟ್೯ ಸಭಾಂಗಣದಲ್ಲಿ ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಯೋಜನಾ ನಿದೇ೯ಶಕಿ ಅನುರಾಧ ಪ್ರಕಾಶ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಇನ್ನರ್ ವೀಲ್ ಸಂಸ್ಥೆಯ ಮಾಜಿ ಜಿಲ್ಲಾಧ್ಯಕ್ಷೆ ಡಾ.ವಿಮಲ ರಾಧಾಕೖಷ್ಣ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇನ್ನರ್ ವೀಲ್ ಜಿಲ್ಲೆ ಕೊಡಗೂ ಸೇರಿದಂತೆ ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಜಿಲ್ಲೆಗಳನ್ನು ಒಳಗೊಂಡಿದ್ದು 51 ಕ್ಲಬ್ ಗಳಿಂದ ಈ ಜಿಲ್ಲೆಯಲ್ಲಿ1833 ಸದಸ್ಯೆಯರಿದ್ದಾರೆ ಎಂದು ತಿಳಿಸಿದರು. ಕೊಡಗು ಜಿಲ್ಲೆಯಿಂದ ಈವರೆಗೆ ವಿನ್ನಿ ಬೋಪಯ್ಯ, ಪ್ರೇಮಕಾಳಪ್ಪ…
ಲೇಖಕ: admin
ಕುಶಾಲನಗರ ಡಿ.1 : ಜಿಲ್ಲೆಯ ಐತಿಹಾಸಿಕ ರಥೋತ್ಸವ ಎಂದೇ ಹೆಸರಾಗಿರುವ ಸುಮಾರು ಇನ್ನೂರು ವರ್ಷಗಳ ಇತಿಹಾಸವಿರುವ ಕೊಡಗಿನ ಹೆಬ್ಬಾಗಿಲು ಕುಶಾಲನಗರದ ಶ್ರೀ ಗಣಪತಿ ದೇವಾಲಯದ ರಥೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಕಾರ್ತಿಕ ಬಹುಳ ತೃತೀಯ ದಿನವಾದ ಶುಕ್ರವಾರ ಮುಂಜಾನೆಯಿಂದಲೇ ಉತ್ಸವ ಮೂರ್ತಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ, ಪುಷ್ಪಾಲಂಕಾರ, ರಥ ಪೂಜೆ ಹಾಗೂ ರಥಬಲಿ ಸೇರಿದಂತೆ ವಿವಿಧ ಪೂಜಾ ವಿಧಾನಗಳೊಂದಿಗೆ ಮಧ್ಯಾಹ್ನ ೧ ಗಂಟೆಗೆ ಸರಿಯಾಗಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದಕ್ಷಿಣ ಭಾರತದಲ್ಲಿ ಎಲ್ಲಿಯೂ ಶ್ರೀ ಗಣಪತಿಗೆ ರಥೋತ್ಸವ ನಡೆದಿರುವ ಇತಿಹಾಸವಿಲ್ಲ. ಕೇವಲ ಕುಶಾಲನಗರದಲ್ಲಿ ಮಾತ್ರ ಈ ಗಣಪತಿ ರಥೋತ್ಸವ ಅದ್ದೂರಿಯಾಗಿ ವರ್ಷ ವರ್ಷ ನಡೆಯುತ್ತಿದೆ. ಹರಿದು ಬಂದ ಭಕ್ತಸಾಗರ : ರಥೋತ್ಸವದ ಸಮಯದ ಸಂದರ್ಭಕ್ಕೆ ಕುಶಾಲನಗರ ಸುತ್ತಮುತ್ತಲಿನ ಗ್ರಾಮಗಳಿಂದ ಹಾಗೂ ನೆರೆಯ ಮೈಸೂರು ಹಾಗೂ ಹಾಸನ ಜಿಲ್ಲೆಗಳಿಂದಲು ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಭಕ್ತಾಧಿಗಳು ಹೆಚ್ಚಾಗಿ ಆಗಮಿಸಿದ್ದರಿಂದ ಉತ್ಸವಕ್ಕೆ ಜನಸಾಗರವೇ ಹರಿದು ಬಂದಂತಿತ್ತು. ಅಯ್ಯಪ್ಪ ವ್ರತದಾರಿಗಳ ಹರ್ಷೊದ್ಗಾರ: ಉತ್ಸವಕ್ಕೆ ರಥವು ತಯಾರಾಗುತ್ತಿದ್ದಂತೆ…
ವಿರಾಜಪೇಟೆ ಡಿ.1 : ವಿರಾಜಪೇಟೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. 1 ರಿಂದ 4ನೇ ತರಗತಿ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಲಿಶ್ಮಿತಾ ಪ್ರಥಮ, 5 ರಿಂದ 7ನೇ ತರಗತಿ ವಿಭಾಗದಲ್ಲಿ ಪಾವನಿ ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಲ್ಲಿದ್ದಾರೆ.
ಬೆಂಗಳೂರು ಡಿ.1 : ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿ ಹನುಮಂತಯ್ಯನವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು. ಕೆಂಗಲ್ ಹನುಮಂತಯ್ಯ ಅವರ ಕುಟುಂಬಸ್ಥರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಹಾಗೂ ನಸೀರ್ ಅಹ್ಮದ್ ಮತ್ತಿತರ ಗಣ್ಯರು ಹಾಜರಿದ್ದರು.
ಮಡಿಕೇರಿ ಡಿ.30 : ಪೊಲೀಸರು ದೈಹಿಕ ಸಾಮರ್ಥ್ಯ ವನ್ನು ಕಾಪಾಡಿಕೊಳ್ಳಬೇಕೆಂದು ದಕ್ಷಿಣ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಎಂ.ಬಿ.ಬೋರಲಿಂಗಯ್ಯ ಸಲಹೆ ನೀಡಿದರು. ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಮೂರು ದಿನಗಳ ಕಾಲ ನಡೆದ ಪೊಲೀಸರ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಪೊಲೀಸರು ಕ್ರೀಡೆ, ವ್ಯಾಯಾಮಗಳ ಮೂಲಕ ತಮ್ಮ ದೈಹಿಕ ಸಾಮಥ್ರ್ಯವನ್ನು ಸದಾ ಉತ್ತಮವಾಗಿ ಇಟ್ಟುಕೊಳ್ಳಬೇಕೆಂದು ಅವರು ಹೇಳಿದರು. ಪೊಲೀಸ್ ಇಲಾಖೆಯಲ್ಲೂ ಕ್ರೀಡೆಗೆ ಪ್ರಾಮುಖ್ಯತೆ ಇದ್ದು, ಈ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟಗಳನ್ನು ಪೊಲೀಸರಿಗಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಂದರ್ ರಾಜ್ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ಪೊಲೀಸರಿಗೆ ಕಬ್ಬಡ್ಡಿ, ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ, ಥ್ರೋಬಾಲ್, ಗುಂಡು ಹಾರಿಸುವುದು, ರಿಲೇ, ಓಟ, ಉದ್ದ ಜಿಗಿತ, ಎತ್ತರ ಜಿಗಿತ ಮತ್ತಿತರ ಸ್ಪರ್ಧೆಗಳು ನಡೆದವು. ಕಬ್ಬಡ್ಡಿಯಲ್ಲಿ ಡಿಎಆರ್ ಪ್ರಥಮ, ಸೋಮವಾರಪೇಟೆ ಉಪ ವಿಭಾಗ ದ್ವಿತೀಯ,…
ಮಡಿಕೇರಿ ಡಿ.1 : ಹಾರಂಗಿ ಗ್ರಾಮದ ಹಲವು ವರ್ಷಗಳ ಬೇಡಿಕೆಯಾಗಿದ್ದ ಆಟದ ಮೈದಾನ ನಿರ್ಮಾಣ ಮತ್ತು ಸಮತಟ್ಟುಗೊಳಿಸುವ ಕಾಮಗಾರಿಗೆ ಗ್ರಾಮದ ಹಿರಿಯರಾದ ಪುಟ್ಟ ಮಾದಯ್ಯ ಚಾಲನೆ ನೀಡಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಸೂಚನೆ ಮೇರೆಗೆ ಕಾವೇರಿ ನೀರಾವರಿ ನಿಗಮದಿಂದ ಕೈಗೊಂಡಿರುವ ಹಿನ್ನೆಲೆಯಲ್ಲಿ ಹಾರಂಗಿ ನಾಗರಿಕರು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರು ಹಾಗೂ ಕೊಡಗು ಜಿ.ಪಂ ಮಾಜಿ ಸದಸ್ಯರಾದ ವಿ.ಪಿ ಶಶಿಧರ್, ಗ್ರಾ.ಪಂ ಮಾಜಿ ಸದಸ್ಯರುಗಳಾದ ದೇವರಾಜ್, ಮಂಜುನಾಥ್, ಶ್ರೀನಿವಾಸ್, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಸದಸ್ಯರಾದ ಮಣಿಕಂಠ ಪ್ರಮುಖರಾದ ಎಂ.ಬಿ. ರವಿ, ರಜಾಕ್, ಸಜನ್ ಹಾಗೂ ಪ್ರಮುಖರು ಹಾಜರಿದ್ದರು.
ನಾಪೋಕ್ಲು ಡಿ.1 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಲಮುರಿ ನೆಬ್ಬೂರು ಗೌಡ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ನೆಬ್ಬೂರು ಗೌಡ ಸಂಘದ ಅಧ್ಯಕ್ಷ ಕೊಟ್ಟಕೇರಿಯನ ಬಿ.ಲೋಕನಾಥ ಪರೆಗೆ ಭತ್ತ ತುಂಬಿಸುವ ಮೂಲಕ ಕಾರ್ಯಕ್ರವನ್ನು ಉದ್ಘಾಟಿಸಿದರು. ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ನೆಬ್ಬೂರು ಗೌಡ ಸಂಘ ನಾಲ್ಕು ತಲೆಮಾರಿನಿಂದ ನಡೆದುಕೊಂಡು ಬಂದಿದ್ದು, ಕೇವಲ ಮೂರು ಕುಟುಂಬಗಳು ಮಾತ್ರ ಸೇರಿ ಕಟ್ಟಿದ ಸಂಘವಾಗಿದೆ. ಯಾವುದೇ ಕಟ್ಟಡವಿಲ್ಲ, ಕಚೇರಿ ಇಲ್ಲದೆ ವರ್ಷಕ್ಕೊಮ್ಮೆ ಗ್ರಾಮೀಣ ಕ್ರೀಡಾಕೂಟ ನಡೆಸಿಕೊಂಡು ಹಬ್ಬ ಹರಿ ದಿನಗಳನ್ನು ಒಂದಾಗಿ ಸೇರಿ ಆಚರಿಸಿಕೊಂಡು ಬರುತ್ತಿದ್ದೇವೆ, ಹಾಗೆಯೇ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಜಾನಪದ ಸಿರಿ ಸಂಪತ್ತು ಉಳಿಯಬೇಕಾದರೆ ಹಳ್ಳಿಗಳಲ್ಲಿ ಇಂತಹ ಸಂಘ-ಸಂಸ್ಥೆಗಳಿರಬೇಕು. ಜಾನಪದ ಸೊಗಡು ಚಿಗುರಬೇಕಾದರೆ ಮಕ್ಕಳಿಗೆ ಇಂತಹ…
ನಾಪೋಕ್ಲು ಡಿ.1 : ತಲೆತಲಾಂತರಗಳಿಂದ ಉಳಿಸಿಕೊಂಡು ಬಂದಿರುವ ಸಂಸ್ಕೃತಿ ,ಸಂಪ್ರದಾಯಗಳನ್ನು ಮುಂದಿನ ತಲೆಮಾರಿಗೂ ಪರಿಚಯಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕನ್ನಡ ಜಾನಪದ ಪರಿಷತ್ ಕೊಡಗು ಜಿಲ್ಲೆ ಹಾಗೂ ಬುಡಕಟ್ಟು ಕೃಷಿಕರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸಮೀಪದ ಯವಕಪಾಡಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸುವರ್ಣ ಕನ್ನಡ ಜಾನಪದ ಸಂಭ್ರಮ ಹಾಗೂ ವಿಶ್ವ ಬುಡಕಟ್ಟು ದಿನಾಚರಣೆ, ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಾನಪದ ಪರಿಷತ್ ಜಿಲ್ಲಾಧ್ಯಕ್ಷೆ ಡಾ.ಕಾವೇರಿ ಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಿ, ಜನಪದ ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಕಲಾವಿದ ಪೊನ್ನಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ತೋರ ಗ್ರಾಮದ ಹಿರಿಯ ಜಾನಪದ ಕಲಾವಿದೆ ಗೋಪಮ್ಮ,, ದುಡಿಕೊಟ್ ಕಲಾವಿದೆ ಕೆ.ಸಿ.ದೇವಕ್ಕಿ ,ಯವಕಪಾಡಿ ಗ್ರಾಮದ ಹಿರಿಯ ಜಾನಪದ ಕಲಾವಿದ ಕೆ.ಸಿ.ಸೋಮಣ್ಣ, ಮರಂದೋಡ ಗ್ರಾಮದ ಕೊಳಲು ವಾದಕ ಕೆ.ಮಾದಪ್ಪ ಹಾಗೂ ಮರಂದೋಡ…
ನಾಪೋಕ್ಲು ಡಿ.1 : ನಾಪೋಕ್ಲುವಿನ ಬಿದ್ದಾಟಂಡ ವಾಡೆಯ ನೂರಂಬಾಡ ಮಂದ್ನಲ್ಲಿ ಗ್ರಾಮಸ್ಥರೆಲ್ಲರ ಸಮಾಗಮದೊಂದಿಗೆ ನಡೆದ ಸಾಂಪ್ರದಾಯಿಕ ಪುತ್ತರಿ ಕೋಲಾಟ ಸಂಭ್ರಮದಿಂದ ನಡೆಯಿತು. ನಾಪೋಕ್ಲು, ಬೇತು ಮತ್ತು ಕೋಕೇರಿ ಗ್ರಾಮಗಳನ್ನು ಒಳಗೊಂಡಂತೆ ನಡೆಯುವ ಐತಿಹಾಸಿಕ ನೂರಂಬಾಡ ಕೋಲ್ ಮಂದ್ನಲ್ಲಿ ಹುತ್ತರಿ ಕೋಲಾಟಕ್ಕೂ ಮುನ್ನ ಬೇತು ಮಕ್ಕಿ ಶಾಸ್ತಾವು ದೇವಾಲಯದಿಂದ ಸಂಪ್ರದಾಯದಂತೆ ತಕ್ಕ ಮುಖ್ಯಸ್ಥರು ದೇವರ ತಿರುವಾಭರಣದೊಂದಿಗೆ ಕಾಪಾಳ ಕಳಿ ವೇಷಧಾರಿಗಳು ಮತ್ತು ಕೊಂಬು ಕೊಟ್ಟ್ ವಾಲಗದೊಂದಿಗೆ ಮೆರವಣಿಗೆಯ ಮೂಲಕ ನೂರಂಬಾಡ ಮಂದ್ನತ್ತ ಹೆಜ್ಜೆ ಹಾಕಿದರು. ಅನೂಚಾನವಾಗಿ ನಡೆದುಕೊಂಡು ಬಂದ ಪದ್ಧತಿಯಂತೆ ಮೆರವಣಿಗೆಯ ನಡುವೆ ಕುರುಂಬರಾಟ್ ಬನದಲ್ಲಿ ವಿಶ್ರಾಂತಿಯನ್ನು ಪಡೆದು ಮಧ್ಯಾಹ್ನ ನೂರಂಬಾಡ ಮಂದ್ಗೆ ತಿರುವಾಭರಣದೊಂದಿಗೆ ಆಗಮಿಸಿದ ಬೇತು ಗ್ರಾಮದ ತಕ್ಕಮುಖ್ಯಸ್ಥರನ್ನು ಗ್ರಾಮದ ತಕ್ಕಮುಖ್ಯಸ್ಥರು ಶ್ರೀ ಮಹದೇವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿ, ಸ್ವಾಗತಿಸಿದ ಬಳಿಕ ಹುತ್ತರಿ ಕೋಲಾಟಕ್ಕೆ ಚಾಲನೆ ದೊರಕಿತು. ನಾದಕ್ಕೆ ತಕ್ಕಂತೆ ಮೂರು ಗ್ರಾಮದ ತಕ್ಕಮುಖ್ಯಸ್ಥರು ಗ್ರಾಮಸ್ಥರು ಮಂದ್ಗೆ ಪ್ರದಕ್ಷಿಣೆ ಬರುವುದರೊಂದಿಗೆ ಲಾಲಿತ್ಯ ಪೂರ್ಣವಾಗಿ ವೈವಿಧ್ಯತೆಗಳನ್ನು ಮಿಳಿತಗೊಳಿಸಿಕೊಂಡ ಕೋಲಾಟ್ನ ನಾದದೊಂದಿಗೆ…
ಮಡಿಕೇರಿ ನ.30 : ಇಷ್ಟು ದಿನ ಕೊಡಗಿನಲ್ಲಿ ಕಾಣಿಸಿಕೊಳ್ಳದೇ ಇದ್ದ ಸಂಸದ ಪ್ರತಾಪ್ ಸಿಂಹ ಅವರು, ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೆ ಸುಳ್ಳುಗಳನ್ನು ಹೇಳಿ ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಷ್ಟೇ ಕೊಡಗಿನ ಕಡೆ ಮುಖ ಮಾಡುವ ಪ್ರತಾಪ್ ಸಿಂಹ ಅವರು ಪ್ರಧಾನಿ ‘ಮೋದಿ’ ಕೃಪಾ ಕಟಾಕ್ಷದಲ್ಲಿ ಗೆಲ್ಲುವ ವ್ಯಕ್ತಿಯಾಗಿದ್ದಾರೆ. ಸುಳ್ಳುಗಳನ್ನು ಹೇಳುತ್ತಾ, ಭಾವನಾತ್ಮಕವಾಗಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು. ಕೊಡವ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ರೂ.ಗಳನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಂಸದರು ಮತ್ತೆ ಸುಳ್ಳುಗಳನ್ನು ಹರಿ ಬಿಟ್ಟಿದ್ದಾರೆ. ವಿಧಾನಸಭಾ ಚುನಾವಣೆಯ ಹಂತದಲ್ಲಿ ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಘೋಷಿಸಿದ ಕೊಡವ ಅಭಿವೃದ್ಧಿ ನಿಗಮಕ್ಕೆ ಯಾವುದೇ ಹಣ ಬಿಡುಗಡೆಯಾಗಿಲ್ಲವೆಂದು ಧರ್ಮಜ ಉತ್ತಪ್ಪ ಸ್ಪಷ್ಟಪಡಿಸಿದರು. ಈ ಹಿಂದಿನ ಸಮ್ಮಿಶ್ರ ಸರ್ಕಾರ ಹಾಗೂ ಬೊಮ್ಮಾಯಿ…






