ಮಡಿಕೇರಿ ನ.30 : 2022-23ನೇ ಸಾಲಿನಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಿ.1 ರಂದು ಸನ್ಮಾನಿಸಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ. ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ 21 ಉಪನ್ಯಾಸಕರು ಹಾಗೂ 9 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ. ಕೊಡಗು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ ಅವರು ಅಧ್ಯಕ್ಷತೆ ವಹಿಸಿಲಿದ್ದಾರೆ. ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಸಮಾಜ ಸೇವಕ ಟಿ.ಆರ್.ವಾಸುದೇವ್, ಇವೆಂಟ್ಸ್ ಟೆಕ್ ಮಾಲೀಕ ಹೆಚ್.ಪಿ.ಅವಿನ್ ಕುಮಾರ್, ಪ್ರಾಂಶುಪಾಲ ಪಿ.ಕೆ.ವೆಂಕಟೇಶ್ ಪ್ರಸನ್ನ, ದಲಿತ…
ಲೇಖಕ: admin
ಕುಶಾಲನಗರ, ನ.30: ಕುಶಾಲನಗರ ಗಣಪತಿ ರಥೋತ್ಸವ ಅಂಗವಾಗಿ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲತಾಂಬುಲದೊಂದಿಗೆ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ದೇವಾಲಯದ ಪ್ರಧಾನ ಅರ್ಚಕ ಆರ್.ಕೆ.ನಾಗೇಂದ್ರ ಬಾಬು ಅವರ ನೇತೃತ್ವದಲ್ಲಿ ಅರ್ಚಕರಾದ ರಾಘವೇಂದ್ರ ಭಟ್ ಮತ್ತಿತರರು ವಿಶೇಷ ಪೂಜೆ ಸಲ್ಲಿಸಿ, ದೇವಾಲಯದ ರಥೋತ್ಸವ ಮತ್ತು ಉತ್ಸವದಿಗಳು ಸಾಂಗವಾಗಿ ನೆರವೇರಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಗಣಪತಿ ದೇವಾಲಯ ಸಮಿತಿ ಗೌರವ ಅಧ್ಯಕ್ಷರಾದ ವಿ.ಎನ್.ವಸಂತಕುಮಾರ್, ಪಟ್ಟಣದ ವಿವಿಧ ದೇವಾಲಯಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಡಿ.1 ರಂದು ರಥೋತ್ಸವ :: ಕುಶಾಲನಗರ ಶ್ರೀ ಗಣಪತಿ ದೇವಸ್ಥಾನದ ರಥೋತ್ಸವ ಇಂದು ನಡೆಯಲಿದೆ. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಗಣಪತಿ ರುದ್ರಾಭಿಷೇಕ ಪುಷ್ಪಾಲಂಕಾರ ರಥಪೂಜೆ ರಥ ಬಲಿ ನಂತರ ಮಧ್ಯಾಹ್ನ 12 ಗಂಟೆಗೆ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ರಥ ಬೀದಿಯಲ್ಲಿ ರಥ ಸಾಗಲಿದೆ.
ಕಡಂಗ ನ.30 : ವಿರಾಜಪೇಟೆ ವಲಯದ ಎಸ್ ಎಸ್ ಎಫ್ ಸಾಹಿತ್ಯೋತ್ಸವ ಕಾರ್ಯಕ್ರಮವು ಡಿ.2 ಮತ್ತು 3 ರಂದು ವಿರಾಜಪೇಟೆಯ ಗುಂಡಿಗೆರೆಯಲ್ಲಿ ನಡೆಯಲಿದ್ದು, ಅದರ ಕರಪತ್ರವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭ ಎಸ್‍ಎಸ್‍ಎಫ್ ಪ್ರಮುಖರಾದ ಮತೀನ್, ತಿಮ್ಮಯ್ಯ,ರಾಫಿ,ಸುಫ್ಯಾನ್ ಅನ್ವಾರಿ, ಸಿಹಾಬುದ್ದೀನ್ ಜೌಹರಿ,ತ್ವಾಹಿರ್ ಹಾಜರಿದ್ದರು. ವಿರಾಜಪೇಟೆ ವಲಯಕ್ಕೆ ಒಳಗೊಂಡ ವಿದ್ಯಾರ್ಥಿಗಳಲ್ಲಿರುವ ಕಲೆಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ. ಡಿ.2 ರಂದು ರಾತ್ರಿ ಇಶಾಲ್ ನೈಟ್ ಕಾರ್ಯಕರ್ಮ ನೆಡೆಯಲಿವೆ. ದುಆ ಕಾರ್ಯಕ್ರಮ ಕ್ಕೆ ಸಯ್ಯದ್ ಸಿದಿ ಅಲ್ ಅಹಸನಿ ಮತ್ತು ಸಯ್ಯದ್ ಮಹದಿ ಲತೀಫಿ ನೇತೃತ್ವವಹಿಸಲಿದ್ದಾರೆ. ಕಾರ್ಯಕಮಕ್ಕೆ ಅತಿಥಿಗಳಾಗಿ ಆಶ್ರಫ್ ಅಹಸನಿ , ಗುಂಡಿಗೆರೆ ಜಮಾಹತ್ ಖತೀಬ್ ಇಲ್ಲ್ಯಾಸ್ ಅಮ್ಜದಿ , ಮಸೀದಿ ಅಧ್ಯಕ್ಷ ಮಹಮ್ಮದ್ ಹಾಜಿ, ರಂಜಿಪೂಣಚ್ಚ , ಡಿ.ಎಚ್.ಎಸ್ ಸೂಫಿ ಹಾಜಿ, ರಾಫಿ ವಿರಾಜಪೇಟೆ , ಹನೀಫ ಚೋಕಂಡಳ್ಳಿ , ರಫೀಕ್ ಕೊಮ್ಮೆತೊಡು, ಮತೀನ್ ಭಾಗವಹಿಸಲಿದ್ದಾರೆ. ವರದಿ : ನೌಫಲ್ ಕಡಂಗ
ಮಡಿಕೇರಿ ನ.30 : ಪ್ರಣಾಮ್ ಭಾರತ ವತಿಯಿಂದ ಡಿ.3 ರಂದು ಮಡಿಕೇರಿಯಲ್ಲಿ ಹಾಸ್ಯ ಸಂಜೆ ಎಂಬ “ಸ್ಟ್ಯಾಂಡ್ ಅಪ್ ಕಾಮಿಡಿ” ವಿನೂತನ ಕಾರ್ಯಕ್ರಮ ನಡೆಯಲಿದೆ. ನಗರದ ಭಾರತೀಯ ವಿದ್ಯಾಭವನದ ಸಂಭಾಂಗಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾದಂಬರಿಕಾರ ಭಾರದ್ವಾಜ ಆನಂದತೀರ್ಥ, ಮಕ್ಕಳ ತಜ್ಞ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ರೇಡಿಯೋ ಎಫ್ ಎಮ್ ಖ್ಯಾತಿಯ ಆರ್ಜೆ ತ್ರಿಶೂಲ್ ಕಂಬಳ, ಡಿಜಿಟಲ್ ಮಾರ್ಕೆಟಿಂಗ್ ತಜ್ಞ ರಿತೇಶ್ ನೂಜಿಬೈಲು, ಕಾರ್ಯಕ್ರಮ ನಿರೂಪಕಿ ಅಕ್ಷತಾ ಶೆಟ್ಟಿ, ಯುವ ಪ್ರತಿಭೆ ಅಬ್ದುಲ್ ಕೌಸರ್ ವೀಕ್ಷಕರನ್ನು ನಗಿಸುವ ಹೊಣೆ ಹೊತ್ತಿದ್ದಾರೆ. ಇದು ಇಡೀ ಕುಟುಂಬದವರು ಒಟ್ಟಾಗಿ ಕುಳಿತು ರಂಜನೆಯನ್ನು ಪಡೆಯಬಹುದಾದ ಹಾಸ್ಯ ಕಾರ್ಯಕ್ರಮಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕ್ರಮದ ಆಯೋಜಕರು ಮನವಿ ಮಾಡಿದ್ದಾರೆ. ಟಿಕೆಟ್ ಕಾಯ್ದಿರಿಸಲು ಆಸಕ್ತರು 9380869836 ಸಂಖ್ಯೆಗೆ ಕರೆ ಮಾಡಲು ಕೋರಿಕೊಳ್ಳಲಾಗಿದೆ.
ವಿರಾಜಪೇಟೆ ನ.30 : ಸಮೀಪದ ಆರ್ಜಿ ಗ್ರಾಮದ ಕಲ್ಲುಬಾಣೆ ಬದ್ರಿಯಾ ಶಾಲೆಯಲ್ಲಿ, ಮಕ್ಕಳ ಸಂತೆ ನಡೆಯಿತು. ತಾಜಾ ಸೊಪ್ಪು, ಮನೆಯಲ್ಲಿ ಬೆಳಸಿದ ತರಕಾರಿ, ಹಣ್ಣುಗಳು, ಮಕ್ಕಳಿಂದಲೇ ತಯಾರಿಸಲ್ಪಟ್ಟ ಐಸ್‍ಕ್ರೀಂ, ಬೋಂಡ, ಬಜ್ಜಿ, ಫ್ರೂಟ್ ಸಲಾಡ್ ಆಕರ್ಷಣೀಯವಾಗಿತ್ತು. ಮಕ್ಕಳಲ್ಲಿ ಕಂಡು ಬಂದ ಸ್ಪರ್ಧಾತ್ಮಕ ಮನೋಭಾವ ಗ್ರಾಹಕರ ಗಮನ ಸೆಳೆಯಿತು. ಮಕ್ಕಳಲ್ಲಿ ಕುಶಲತೆ, ಸಂವಹನ ಕಲೆ, ಸಾಮಾಜಿಕ ಬದುಕಿನೊಂದಿಗೆ ಒಡನಾಟದ ಕೌಶಲ್ಯವನ್ನು ಕಲಿಸುವುದರೊಂದಿಗೆ, ಅವರಲ್ಲಿ ಸೃಜನಶೀಲತೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ, ಈ ವಿಭಿನ್ನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಚಿಣ್ಣರು, ಗ್ರಾಹಕರ ಬಳಿ ಹಣ ಪಡೆದು ವ್ಯಾಪಾರ-ವಹಿವಾಟು ನಡೆಸಿದ್ದು, ಮಕ್ಕಳು ವ್ಯಾಪಾರ ಮಾಡಿ ಖುಷಿಪಟ್ಟರು. ಈ ಸಂದರ್ಭ ಮಾತನಾಡಿದ ಮುಖ್ಯೋಪದ್ಯಾಯರಾದ ಮಹದೇವ್, ವಿದ್ಯಾರ್ಥಿಗಳಿಗೆ ಲಾಭ ನಷ್ಟದ ಪರಿಚಯ, ವ್ಯವಹಾರ ಜ್ಞಾನ, ಸ್ವಚ್ಛತೆಯ ಪರಿಕಲ್ಪನೆ ಮೂಡಿಸಲು ಮಕ್ಕಳ ಸಂತೆ ಉಪಯುಕ್ತವಾಗುತ್ತದೆ. ಶಾಲೆಗಳಲ್ಲಿ ಆಟ-ಪಾಠದ ಜೊತೆಗೆ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಮಕ್ಕಳಿಗೆ ಮುಂಬರುವ ದಿನಗಳಲ್ಲಿ ತಮ್ಮ ಬದುಕು ಹೇಗೆ ಕಟ್ಟಿಕೊಳ್ಳಬೇಕೆಂಬುವುದು ಅನುಭವ ದೊರೆತಂತಾಗುತ್ತದೆ ಎಂದು ಹೇಳಿದರು. ಗ್ರಾ.ಪಂ ಸದಸ್ಯ ಶಹಧೀರ್…
ಮಡಿಕೇರಿ ನ.30 : ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಭಕ್ತ ಕನಕದಾಸರ ಕೊಡುಗೆ ಅಪಾರವಾಗಿದ್ದು, ಕನಕದಾಸರ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಕುರುಬ ಸಮಾಜದ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಕನಕದಾಸರ ಜಯಂತ್ಯುತ್ಸವ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದಿನ ಮೊಬೈಲ್ ತಂತ್ರಜ್ಞಾನ ಯುಗದಲ್ಲಿಯೇ ಸಮಾಜದಲ್ಲಿ ಹಲವು ತಾರತಮ್ಯಗಳನ್ನು ನೋಡುತ್ತೇವೆ. ಆ ನಿಟ್ಟಿನಲ್ಲಿ ಹಲವು ಶತಮಾನಗಳ ಹಿಂದೆ ಬಸವಣ್ಣ, ಅಲ್ಲಮಪ್ರಭು ಸೇರಿದಂತೆ ಹಲವು ವಚನಕಾರರು, ಹಾಗೆಯೇ ದಾಸ ಶ್ರೇಷ್ಠ ಕನಕದಾಸರು ಸೇರಿದಂತೆ ಹಲವರು ಸಾಮಾಜಿಕ ನ್ಯೂನತೆಗಳನ್ನು ಸರಿಪಡಿಸಲು ಶ್ರಮಿಸಿರುವುದು ಶ್ಲಾಘನೀಯ ಕಾರ್ಯ. ಆ ನಿಟ್ಟಿನಲ್ಲಿ ಸಾಹಿತ್ಯ, ಕೀರ್ತನೆಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ ಎಂದು ಡಾ.ಮಂತರ್ ಗೌಡ ಹೇಳಿದರು. ಶರಣರು, ದಾಸರ ವಿಚಾರ ಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ದಾಸರ ಕೀರ್ತನೆಗಳು ಸಮಾಜದಲ್ಲಿನ…
ಕುಶಾಲನಗರ ನ.30 : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ: 50 ರ ಮಹೋತ್ಸವದ ಸಂದರ್ಭದಲ್ಲಿ ಶಾಲೆಯ ಕನ್ನಡ ಭಾಷಾ ಸಂಘ, ಎನ್.ಎಸ್.ಎಸ್.ಘಟಕ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕನಕದಾಸರ ಜೀವನ ಚರಿತ್ರೆ ಹಾಗೂ ಬದುಕು ಕುರಿತು ಮಾಹಿತಿ ನೀಡಿದ ಶಾಲೆಯ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ, ದಾಸರಲ್ಲಿಯೇ ಕನಕದಾಸರು ಅತ್ಯಂತ ಶ್ರೇಷ್ಠರು. ಉಳಿದ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ವಿದ್ಯಾರ್ಥಿಗಳು ಅವರ ತತ್ತ್ವಾದರ್ಶ ಅಳವಡಿಸಿಕೊಳ್ಳಬೇಕು ಎಂದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್ ಮಾತನಾಡಿ, ಕನಕ ದಾಸರು ಸಾಮಾಜಿಕ ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಉತ್ತೇಜಿಸುವಲ್ಲಿ ಪ್ರವರ್ತಕರಾಗಿದ್ದರು ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸಂತರ ಜೀವನ ಆದರ್ಶ ಹಾಗೂ ತತ್ವಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ಶಿಕ್ಷಕಿಯರಾದ ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಶಾಲಾ ನಾಯಕಿ…
ಮಡಿಕೇರಿ ನ.30 : ಈಚೂರಿನ ಶ್ರೀ ಕ್ಷೇತ್ರ ಪಡುವೇರಿ ದಬ್ಬೆಚ್ಚಮ್ಮ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸುಂಟಿಕೊಪ್ಪ,ನ.30: ಗುಣಮಟ್ಟದ ಕಾಮಗಾರಿ ನಡೆಸz ಕಳೆಪೆ ಕಾಮಗಾರಿ ನಡೆಸಿ ಕೈತೊಳೆದುಕೊಂಡರೆ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಶಾಸಕ ಡಾ.ಮಂತರ್ ಗೌಡ ಎಚ್ಚರಿಕೆ ನೀಡಿದರು. ಮಾದಾಪುರ ಗ್ರಾ.ಪಂ ಕುಂಬೂರು ಹಾಗೂ ಮಾದಾಪುರ ರಾಜ್ಯ ಹೆದ್ದಾರಿ ಬಳಿ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತಡೆಗೋಡೆ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು ಜನರ ಆಶೋತ್ತರಗಳನ್ನು ಹಂತ ಹಂತವಾಗಿ ನೇರವೇರಿಸಲಾಗುವುದೆಂದರು. ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರು, ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಪರದಾಡುವಂತಾಗಿದ್ದು, ಜನರ ಸಮಸ್ಯೆ ಪರಿಹಾರಕ್ಕೆ ತಕ್ಷಣ ವೈದ್ಯರ ನೇಮಕ ಮಾಡಬೇಕೆಂದು ಇದೇ ಸಂದರ್ಭ ಶಾಸಕರಿಗೆ ಮನವಿ ಸಲ್ಲಿಸಿದರು. ಸ್ಥಳದಲ್ಲೇ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಕರೆ ಮಾಡಿದ ಶಾಸಕರು, ತಕ್ಷಣವೇ ವೈದ್ಯರ ನೇಮಕ ಮಾಡುವಂತೆ ಸೂಚಿಸಿದರು. ಮಾದಾಪುರ ಗ್ರಾ.ಪಂ ಗೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನೇಮಕವಾಗದೆ ಸಮಸ್ಯೆಯಾಗಿದೆ ಎಂದು ಅಧ್ಯಕ್ಷ ಮನುಬಿದ್ದಪ್ಪ ಹಾಗೂ ಸದಸ್ಯರುಗಳು ಶಾಸಕರಿಗೆ ಮನವಿ ಸಲ್ಲಿಸಿದ ಮೇರೆಗೆ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ…
ಸೋಮವಾರಪೇಟೆ ನ.30 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಶೇಷ ಚೇತನರ ಸಬಲೀಕರಣಕ್ಕೆ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳು, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್, ಆಯುಷ್ ಇಲಾಖೆಯ ಆಶ್ರಯದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಶೇಷ ಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್ ಮಾತನಾಡಿ, ವಿಶೇಷ ಚೇತನರು ತಮ್ಮ ನ್ಯೂನತೆಗಳನ್ನು ಬದಿಗೊತ್ತಿ ಸಮಾಜದೊಂದಿಗೆ ಬೆರೆಯಬೇಕು. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಡಿ.3ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸಲಾಗುತ್ತಿದೆ. ವಿಶೇಷ ಚೇತನರಿಗೂ ಅವಕಾಶ ಲಭಿಸಬೇಕು. ಹಾಗಾದಾಗ ಮಾತ್ರ ಚೈತನ್ಯದೊಂದಿಗೆ ಸಾಧನೆ ಸಾಧ್ಯ. ಈ ನಿಟ್ಟಿನಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು. ತಾಲ್ಲೂಕು ಮಟ್ಟದ ಸ್ಪರ್ಧಾ ವಿಜೇತರಿಗೆ ಮಡಿಕೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್ ಮಾತನಾಡಿ, ವಿಶೇಷಚೇತನರ ಮನೋಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ವಿಶೇಷ ಚೇತನರ ದಿನಾಚರಣೆ ಘೋಷಿಸಿದೆ. ತಮ್ಮಲ್ಲಿರುವ…






