ಸೋಮವಾರಪೇಟೆ ನ.30 : ಸೋಮವಾರಪೇಟೆ ಸೃಷ್ಟಿಯ ಚಿಗುರು ಕವಿಬಳಗ, ವಿದ್ಯಾ ನರ್ಸಿಂಗ್ ತರಬೇತಿ ಕೇಂದ್ರ ವತಿಯಿಂದ ಕವಯತ್ರಿ ಸುಮತಿ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಕೆ.ಎನ್.ದೀಪಕ್ ಅವರನ್ನು ಸನ್ಮಾನಿಸಲಾಯಿತು. ಮಾನಸ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಬಳಗದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಬಳಗದ ಅಧ್ಯಕ್ಷ ನ.ಲ.ವಿಜಯ, ಕನ್ನಡಸಿರಿ ಬಳಗದ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ನರ್ಸಿಂಗ್ ತರಬೇತಿ ಕೇಂದ್ರದ ವ್ಯವಸ್ಥಾಪಕ ಸುಲೈಮಾನ್ ಮತ್ತು ಬಳಗದ ಪದಾಧಿಕಾರಿಗಳು ಹಾಜರಿದ್ದರು.
ಲೇಖಕ: admin
ಬೆಂಗಳೂರು ನ 30: ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ವೈದ್ಯರಿಗೆ ಹೃದಯಸ್ಪರ್ಷಿ ಕಿವಿಮಾತು ಹೇಳಿದರು. ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ…
ಬೆಂಗಳೂರು ನ.30 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ “ಸಂತ ಶ್ರೇಷ್ಠ ಕನಕದಾಸ ಜಯಂತಿ”ಯ ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಮಡಿಕೇರಿ ನ.30 : ಸೋಮವಾರಪೇಟೆ – ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಐಗೂರು ಸಮೀಪದ ಸೇತುವೆ (ಕಬ್ಬಿಣ ಸೇತುವೆ) ಹಾನಿಗೊಳಗಾದ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ಬಾಳೆಲೆ ನ.30 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪುಷ್ಪರ್ಚನೆ ಮಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಯನ್.ಕೆ.ಪ್ರಭು ಪ್ರಾಸ್ತಾವಿಕ ಮಾತನಾಡಿ, ಕನಕದಾಸರಿಗೆ ಶ್ರೀ ಶ್ರೀ ಕೃಷ್ಣನ ಮೇಲೆ ಇದ್ದ ಅಪಾರ ಭಕ್ತಿ ಮತ್ತು ಪ್ರೀತಿಯ ಬಗ್ಗೆ ವಿವರಿಸಿ, ಉಡುಪಿ ಶ್ರೀಕೃಷ್ಣ ದೇವಾಲಯದ ಕಥೆಯನ್ನು ಹೇಳಿದರು. ನಂತರ ಪ್ರೌಢಶಾಲಾ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಮಾತನಾಡಿ, ದಾಸ ಸಾಹಿತ್ಯ ದ ಮೂಲಕ ಜಾತಿ, ಮತ, ಕುಲಗಳ ಬೇಧ, ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ, ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್ ಸಂತ ಕನಕದಾಸರೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಶಿಕ್ಷಕರಾದ ಪಡಿಞರಂಡ ಪ್ರಭು ಕುಮಾರ್, ಸುಬ್ಬಯ್ಯ, ಬೆಂಡಿಕ್ಟಪರ್ನಾಡಿಸ್, ಉಪನ್ಯಾಸಕರಾದ ಪವಿ ಬೋಧಕೇತರ ಸಿಬ್ಬಂದಿಗಳಾದ ಮಮತಾ, ಸುರೇಶ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕರಾದ ತಿಮ್ಮರಾಜು ಸ್ವಾಗತಿಸಿ, ನಿರೂಪಿಸಿದರು.
ಮಡಿಕೇರಿ ನ.30 : ಮಡಿಕೇರಿ ನಗರದ ವಿವಿಧ ಬಡಾವಣೆಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿದರು. ವಾರ್ಡ್ ನಂಬರ್ 6 ಮತ್ತು ಇಂದಿರಾ ನಗರ, ಚಾಮುಂಡೇಶ್ವರಿ ನಗರಗಳಿಗೆ ಭೇಟಿ ನೀಡಿ ರಸ್ತೆ ಕಾಮಗಾರಿಗಳು ಮತ್ತು ಚರಂಡಿ ತಡೆಗೋಡೆ, ಫಾರಂ 3 ಸಮಸ್ಯೆ, ಪಟ್ಟೆ, ಅಂಗನವಾಡಿಗೆ ಬೇಕಾದ ಸೂಕ್ತ ಜಾಗವನ್ನು ಪರಿಶೀಲಿಸಿದರು. ಈ ಸಂದರ್ಭ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮತ್ತು ನಗರಸಭೆ ಸದಸ್ಯ ಬಿ.ವೈ.ರಾಜೇಶ್, ನಗರ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಕೆ.ಯು. ರಜಾಕ್, ಪ್ರಕಾಶ್ ಆಚಾರ್ಯ, ಜಿ.ಸಿ.ಜಗದೀಶ್, ಚುಮ್ಮಿ ದೇವಯ್ಯ, ಎಸ್.ಐ.ಮುನೀರ್ ಅಹಮದ್, ಕವನ್ ಕೋತೊಳಿ, ಜುಲೆಕಾಬಿ, ಮುದ್ದುರಾಜ್, ಕೆ.ಜಿ.ಪೀಟರ್ , ರಿಯಾಜುದ್ದಿನ್, ಪಾಪು ರವಿ, ಮಡಿಕೇರಿ ನಗರ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ ಹಾಜರಿದ್ದರು.
ಮಡಿಕೇರಿ ನ.30 : ಮಂದ್ ಮಾನಿಗಳನ್ನು ಉಳಿಸಿ ಬೆಳೆಸಿ ಸಂರಕ್ಷಿಸಲು ಹಾಗೂ ಹಬ್ಬಹರಿದಿನಗಳಲ್ಲಿ ಜನಾಂಗ ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಪುಗಳನ್ನು ತೊಡಲು ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಕರೆ ನೀಡಿದರು. ಪೊನ್ನಂಪೇಟೆ ಸಮೀಪದ ಬೊಟ್ಟಿಯತ್ ನಾಡ್ ದೇವಮಕ್ಕಡ ಬಾಣೆ ಪುತ್ತರಿ ಕೋಲ್ ಮಂದ್ ಸಂದರ್ಭ ಮಂದ್’ಗಳ ಅಧ್ಯಯನಕ್ಕಾಗಿ ಭೇಟಿ ನೀಡಿ ಮಾತನಾಡಿದ ಅವರು, ಗೌಡ ಕೊಡವ ಜನಾಂಗ ಈ ದೇಶದಲ್ಲಿಯೇ ಒಂದು ವಿಶಿಷ್ಟ ಜನಾಂಗವಾಗಿದ್ದು, ನಶಿಸಿ ಹೋಗುತ್ತಿರುವ ಶ್ರೀಮಂತ ಸಂಸ್ಕೃತಿಯನ್ನು ಉಳಿಸುವ ಬೆಳೆಸುವಲ್ಲಿ ಯುವಜನಾಂಗ ಮುಂದಾಗಬೇಕಿದೆ ಎಂದು ಹೇಳಿದರು. ಕೊಡಗಿನ ಮಂದ್’ಗಳ ಬಗ್ಗೆ ಸಂಶೋಧನೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮಂದ್’ಗಳ ಬೆಳವಣಿಗೆಗೆ ಸರ್ಕಾರದ ಮಟ್ಟದಲ್ಲಿ ತನ್ನ ಕೈಲಾದ ಸಹಾಯ ಮಾಡುವುದಾಗಿ ತಿಳಿಸಿದರು. ನಮ್ಮ ಸಂಸ್ಕೃತಿ ಉಡುಗೆ ತೊಡುಗೆಗಳ ಬಗ್ಗೆ ನಮಗೆ ಕೀಳರಿಮೆ ಇರಬಾರದು. ಮೊದಲು ನಾವು ಅದನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು. ಹಾಗಾದರೆ ಮಾತ್ರ ಒಂದು ಜನಾಂಗದ ಉಳಿವು ಸಾಧ್ಯ ಎಂದರು. ಈ ಸಂದರ್ಭದಲ್ಲಿ ಹುದೂರುವಿನ ತಕ್ಕ ಹಾಗೂ ಅಬೊಟ್ಟಿಯತ್ ನಾಡ್ ತಕ್ಕರಾದ…
ಮಡಿಕೇರಿ ನ.29 : ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರ ಉಳಿದು ಪುಸ್ತಕ ಓದುವ ಹವ್ಯಾಸವನ್ನು ರೂಢಿಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯ ಜಗತ್ತನ್ನು ಬೆಳಗಿಸಬೇಕು. ಮಾತ್ರವಲ್ಲದೆ ಕನ್ನಡ ಸಂಘಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯಕ ಮೌಲ್ಯಗಳನ್ನು ರೂಪಿಸಿ ಸಾಹಿತ್ಯ ಸೃಷ್ಟಿಗೆ ಪೂರಕ ವಾತಾವರಣವನ್ನು ನಿರ್ಮಿಸಬೇಕು. ಬರಹಗಾರರರಂತೆ ಓದುಗರ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗ ಆಯೋಸಿದ ಕನ್ನಡ ಸಂಘದ ಉದ್ಘಾಟನೆ, “ಅಕ್ಷರ ಬಿತ್ತಿ” ಗೋಡೆ ಪತ್ರಿಕೆಯ ಬಿಡುಗಡೆ ಹಾಗೂ ನನ್ನ ನೆಚ್ಚಿನ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡಿ, ನಾಡು, ನುಡಿ, ಸಂಕಥನದ ಕುರಿತು ಮಾತನಾಡಿದರು. ಅಕ್ಷರ ಬಿತ್ತಿ ವಿದ್ಯಾರ್ಥಿ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಪ್ರಜಾವಾಣಿ ಜಿಲ್ಲಾ ವರದಿಗಾರ ಕೆ.ಎಸ್.ಗಿರೀಶ್ ಬರವಣಿಗೆಯ ಸಾಧ್ಯತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್…
ಕುಶಾಲನಗರ ನ.29 : ಜಮ್ಮು ಮತ್ತು ರಜೌರಿಯಲ್ಲಿ ಉಗ್ರರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಕ್ಯಾ. ಪ್ರಾಂಜಲ್ ಅವರಿಗೆ ಕುಶಾಲನಗರದ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ, ಸ್ಕೌಟ್ಸ್ ನ ಶಾಲೆಯ ಘಟಕ ಹಾಗೂ ಶಾಲೆಯ ಎನ್.ಎಸ್.ಎಸ್.ಘಟಕದ ವತಿಯಿಂದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಗೆ ನಮನ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಎಸ್‍ಡಿಎಂಸಿ ಅಧ್ಯಕ್ಷ ಎ.ಎಂ.ಜವರಯ್ಯ, ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸಿ.ಎಂ.ಸುಲೋಚನ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ಸಲ್ಲಿಸಲಾಯಿತು. ಹುತಾತ್ಮ ಯೋಧ ಎಂ.ವಿ.ಪ್ರಾಂಜಲ್ ಅವರ ಕರ್ತವ್ಯ ನಿಷ್ಠೆ, ದೇಶ ಪ್ರೇಮ ಹಾಗೂ ತ್ಯಾಗ ಬಲಿದಾನದ ಕುರಿತು ಮಾತನಾಡಿದ ಗೈಡ್ಸ್ ಸಂಸ್ಥೆಯ ಸಹಾಯಕ ಕಮೀಷನರ್ ಸಿ.ಎಂ.ಸುಲೋಚನ ಮಾತನಾಡಿ, ಈ ನುಡಿ ನಮನ ಕಾರ್ಯಕ್ರಮದಿಂದ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಸಾಧ್ಯವಾಗುತ್ತದೆ ಎಂದರು. ನಿವೃತ್ತ ಮುಖ್ಯೋಪಾಧ್ಯಾಯ ಎಂ.ಎಚ್.ನಜೀರ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು,…
ಮಡಿಕೇರಿ, ನ.29 : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‍ಕೌಂಟರ್‍ನಲ್ಲಿ ಹುತಾತ್ಮರಾದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಕ್ಯಾ.ಎಂ.ವಿ.ಪ್ರಾಂಜಲ್ ಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗೌರವ ನಮನ ಸಲ್ಲಿಸಲಾಯಿತು. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿ, ಎಂ.ವಿ.ಪ್ರಾಂಜಲ್ ಅವರ ದೇಶ ಸೇವೆ ಹಾಗೂ ಕರ್ತವ್ಯ ನಿಷ್ಠೆ ಕುರಿತು ಗುಣಗಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಬಾಲ್ಯದಿಂದಲೂ ಅವರು ಸೈನ್ಯಕ್ಕೆ ಸೇರುವ ಕನಸು ಕಂಡಿದ್ದರು, ತಮ್ಮ ಗುರಿಗೆ ಸಮರ್ಪಿತರಾಗಿದ್ದರು. ಸ್ಕೌಟ್ ಆಗಿ, ಅವರ ಬದ್ಧತೆ ಅಚಲವಾಗಿತ್ತು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಹೆಮ್ಮೆಪಡುತ್ತಿದ್ದರು ಎಂದರು. ಪ್ರಾಂಜಲ್ ನಿಜವಾಗಿಯೂ ಅಸಾಧಾರಣ ಮತ್ತು ಅವರ ನಿಧನವು ಅಪಾರ ನಷ್ಟವಾಗಿದೆ, ಡಿಪಿಎಸ್…






