ಮಡಿಕೇರಿ ನ.29 : ಮಡಿಕೇರಿ ನಗರಸಭೆ ಆಡಳಿತ ವೈಫಲ್ಯವನ್ನು ಎದುರಿಸುತ್ತಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ವ್ಯವಸ್ಥೆಯನ್ನು ಸರಿ ಪಡಿಸಬೇಕೆಂದು ನಗರಸಭೆಯ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರಸಭೆಯಲ್ಲಿ 16 ಸ್ಥಾನಗಳ ಮೂಲಕ ಬಿಜೆಪಿ ಬಹುಮತದಿಂದ ಅಧಿಕಾರ ನಡೆಸುತ್ತಿದ್ದರೂ ನಾಗರೀಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲವೆಂದು ಟೀಕಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಆಡಳಿತ ವ್ಯವಸ್ಥೆ ನಿಂತ ನೀರಾಗಿದೆ, ನಗರದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ರಸ್ತೆಗಳು ಹೊಂಡ, ಗುಂಡಿಗಳಾಗಿವೆ, ಅಶುಚಿತ್ವದ ವಾತಾವರಣ ಮಿತಿ ಮೀರಿದೆ. ನಗರಸಭೆಯ ಕಚೇರಿಗಳಲ್ಲಿ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಳೆದ ಒಂದು ವರ್ಷದಿಂದ ಸರ್ವರ್ ಸಮಸ್ಯೆ ಅತಿಯಾಗಿ ಕಾಡುತ್ತಿದ್ದರೂ ಇಲ್ಲಿಯವರೆಗೆ ಆಡಳಿತ ಮಂಡಳಿ ತಾಂತ್ರಿಕವಾಗಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಕಾಳಜಿಯನ್ನು ತೋರುತ್ತಿಲ್ಲ. ಸಿಬ್ಬಂದಿಗಳ ಕೊರತೆಯ ನಡುವೆ ಇರುವ ಸಿಬ್ಬಂದಿಗಳ ವಿಶ್ವಾಸವನ್ನು ಗಳಿಸುವಲ್ಲಿ ಆಡಳಿತ ನಡೆಸುತ್ತಿರುವವರು ವಿಫಲರಾಗಿದ್ದಾರೆ. ಅಧಿಕಾರಿಗಳು ಹಾಗೂ ಸದಸ್ಯರುಗಳ ನಡುವೆ ಹೊಂದಾಣಿಕೆ ಇಲ್ಲದೆ ಇರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿದೆ. ಅಧ್ಯಕ್ಷರು…
ಲೇಖಕ: admin
ಮಡಿಕೇರಿ ನ.29 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗ ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಸ್ವಾಮಿ ಅವರ ಪರವಾಗಿ ವಕೀಲ ಕೀರನ್ ನಾರಾಯಣ್ ಅವರು ನ್ಯಾಯಾಲಯದ ಮುಂದೆ ವಿಷಯ ಮಂಡಿಸಿದರು. ಕೇಂದ್ರ ಸರ್ಕಾರದ ಪ್ರತಿನಿಧಿಗಳು ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡಿದ ಕೋರ್ಟ್, ವಿಚಾರಣೆಯನ್ನು 2024 ಜ.25 ಕ್ಕೆ ಮುಂದೂಡಿತು. ಇದೇ ಸಂದರ್ಭ ಕರ್ನಾಟಕ ಸರ್ಕಾರಕ್ಕೂ ಸೂಚನೆ ನೀಡಿದ ನ್ಯಾಯಾಲಯ ಇಂದಿನಿಂದ ಮೂರು ವಾರಗಳಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿತು. ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು ಉಲ್ಲೇಖಿಸಲಾಗಿದೆ. ::: ಹೋರಾಟಕ್ಕೆ ಜಯ :::…
ಮಡಿಕೇರಿ ನ.29 : ಬರದ ಪರಿಸ್ಥಿತಿ ಇರುವ ಕಾರಣ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಸದರಾದ ಪ್ರತಾಪ್ ಸಿಂಹ ಅವರು ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯ 5 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಬರ ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 35 ಕೋಟಿ ರೂ. ಇದ್ದು, ಇತ್ತೀಚೆಗೆ ಸರ್ಕಾರ 7.50 ಕೋಟಿ ರೂ. ಬಿಡುಗಡೆ ಮಾಡಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲಾಗುವುದು. ಹಾಗೆಯೇ…
ಮಡಿಕೇರಿ ನ.29 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಓಡಿಪಿ-ಸ್ನೇಹಾಶ್ರಯ, ಆಶೋದಯ ಸಂಸ್ಥೆ ಹಾಗೂ ವಿಹಾನ್ ಆರೈಕೆ ಮತ್ತು ಬೆಂಬಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಡಿ.1 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮುದಾಯ ಮುನ್ನಡೆಸಲಿ ಎಂಬ ಘೋಷವಾಕ್ಯದೊಂದಿಗೆ ‘ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಾಥಾಗೆ…
ಮಡಿಕೇರಿ ನ.29 : ವಿ ಬಾಡಗದಲ್ಲಿ ನಡೆಯುತ್ತಿರುವ ಹೈ ಫ್ಲೈಯರ್ಸ್ ಹಾಕಿ ಕಪ್ ಪಂದ್ಯಾವಳಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದರು.
ಮಡಿಕೇರಿ ನ.29 : ಕ್ರೀಡೆಯಲ್ಲಿರುವ ಅಂಶಗಳನ್ನು ವೃತ್ತಿಯಲ್ಲಿಯೂ ಸೇರಿಸಿಕೊಂಡರೆ ಉತ್ತಮ ಕೆಲಸಗಳನ್ನು ನಮ್ಮಿಂದ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಮತ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ನಡೆದ ಪೊಲೀಸರ ವಾರ್ಷಿಕ ಕ್ರೀಡಾಕೂಟವನ್ನು ಪಾರಿವಾಳ ಹಾರಿ ಬಿಡುವ ಮೂಲಕ ಉದ್ಘಾಟಿಸಿ, ಮಾತನಾಡಿದರು. ಪೊಲೀಸರಿಗೆ ಕ್ರೀಡೆ ಎಂಬುದು ಅವಿಭಾಜ್ಯ ಅಂಗದಂತೆ. ಕ್ರೀಡೆಯಿಂದ ಶಿಸ್ತು, ಸಂಯಮ ಜೊತೆಗೆ ಬದ್ಧತೆ, ಸಮಸ್ವಯತೆಯೂ ಇರುತ್ತದೆ. ಪೊಲೀಸರು ಕ್ರೀಡಾಸ್ಫೂರ್ತಿಯನ್ನು ಮೈಗೂಡಿಸಿಕೊಳ್ಳುವುದರಿಂದ ಕೆಲಸಗಳು ಪರಿಣಾಮಕಾರಿಯಾಗಿ ಮಾಡಬಹುದು ಎಂದು ಹೇಳಿದರು. ಕ್ರೀಡಾಕೂಟಗಳ ಆಯೋಜನೆಯಿಂದ ನಮ್ಮ ನಡುವೆ ಒಗ್ಗಟ್ಟು ಮೂಡಿ ಸಮನ್ವಯತೆಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್ ವೃತ್ತಿ ತಂಡವಾಗಿ ಮಾಡುವ ಕೆಲಸವಾಗಿದ್ದು, ಇದನ್ನು ಅರಿತು ಸಿಬ್ಬಂದಿಗಳು ಪರಸ್ಪರ ಕೈಜೋಡಿಸಿ ಕಾರ್ಯೋನ್ಮುಖಗೊಳ್ಳಬೇಕು. ಕ್ರೀಡಾ ಜಿಲ್ಲೆಯಾಗಿರುವ ಕೊಡಗಿನಲ್ಲಿ ನಿತ್ಯ ಕ್ರೀಡಾಚಟುವಟಿಕೆಯಲ್ಲಿರುತ್ತದೆ. ಪೊಲೀಸರು ಕೂಡ ದಿನದ ಕೆಲಸಮಯ ಕ್ರೀಡೆಗೆಂದು ಮೀಸಲಿಡಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಪ್ರತಿವರ್ಷ ಪೊಲೀಸ್ ಕ್ರೀಡಾಕೂಟದ ಮೂಲಕ…
ಕಾಗಿನೆಲೆ ನ.29 : ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ 536ನೇ ಶ್ರೀ ಕನಕ ಜಯಂತ್ಯೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರ, ಶ್ರೀ ಬೀರಲಿಂಗೇಶ್ವರ, ಶ್ರೀ ಮೈಲಾರಲಿಂಗೇಶ್ವರ, ಶ್ರೀ ಮಹಾಸಿದ್ದೇಶ್ವರಿ ದೇವರುಗಳ ಕುಂಭಾಭಿಷೇಕ ನೆರವೇರಿಸಿದರು. ಹುಬ್ಬಳ್ಳಿ, ಮೂರುಸಾವಿರ ಮಠದ ಶ್ರೀಮನ್ ಮಹಾರಾಜ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು, ಹಜರತ್ ಬೀಜಾಪುರದ ಹಾಶಿಮ್ ಪೀರ್ ದರ್ಗಾದ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಕರ್ನಾಟಕ ಧರ್ಮಪ್ರಾಂತ್ಯದ ಧರ್ಮಗುರು ಡಾ.ಫಾ.ಅಲ್ಫೋನ್ಸ್ ಫರ್ನಾಂಡೀಸ್ ಯೇಸ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಸಭೆಯ ಉಪಸಭಾಪತಿಗಳಾದ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಹೊಸದುರ್ಗ ಶಾಸಕರಾದ ಬಿ.ಜಿ.ಗೋವಿಂದಪ್ಪ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್, ರಾಣೆಬೆನ್ನೂರು ಶಾಸಕರಾದ ಪ್ರಕಾಶ್ ಕೋಳಿವಾಡ, ಹಾನಗಲ್ ಶಾಸಕರಾದ ಶ್ರೀನಿವಾಸ್ ಮಾನೆ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ಮಡಿಕೇರಿ ನ.29 : ನ್ಯಾಷನಲ್ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಮಧ್ಯ ಪ್ರದೇಶದ ಭೂಪಾಲ್‍ನಲ್ಲಿ ನಡೆಯುತ್ತಿರುವ 66ನೇ ರಾಷ್ಟ್ರಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿನಿ ಕಾನಡ್ಕ ಧನ್ವಿ ಇಂಡಿಯನ್ ಶೂಟಿಂಗ್ ಟೀಮ್ ಟ್ರಯಲ್ಸ್ ಗೆ ಆಯ್ಕೆಯಾಗಿದ್ದಾಳೆ. ಶೂಟಿಂಗ್ ಚಾಂಪಿಯನ್ ಶಿಪ್‍ನ 10 ಮೀ. ಏರ್ ಪಿಸ್ತೂಲ್ ಐಎಸ್‍ಎಸ್‍ಎಫ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವ ಕಾನಡ್ಕ ಧನ್ವಿ ಯೂತ್ (19 ವರ್ಷದೊಳಗಿನವರು) ಹಾಗೂ ಜೂನಿಯರ್ (21 ವರ್ಷದೊಳಗಿನವರ) ವಿಭಾಗದಲ್ಲಿ ಇಂಡಿಯನ್ ಶೂಟಿಂಗ್ ಟೀಮ್ ಟ್ರಯಲ್ಸ್ ಗೆ ಆಯ್ಕೆಯಾಗಿದ್ದಾಳೆ. ಈಕೆ ಮರಗೋಡಿನ ಕೃಷಿಕ ಕಾನಡ್ಕ ಹನೀಶ್ ಅಪ್ಪಾಜಿ ಹಾಗೂ ಆಶಾ ದಂಪತಿಯ ಪುತ್ರಿ.
ಮಡಿಕೇರಿ ನ.29: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಪುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಕದಿರು ತೆಗೆಯುವ ಪುರಾತನ ಪದ್ಧತಿಯನ್ನು ಕೊಡವ ಮುಸ್ಲಿಂ ಸಮುದಾಯದವರು ಐಮಂಗಲದಲ್ಲಿ (ಕೊಮ್ಮೆತೊಡು) ನೂರಾರು ಸದಸ್ಯರ ಸಹಭಾಗಿತ್ವದೊಂದಿಗೆ ಸಂಭ್ರಮದಿಂದ ಆಚರಿಸಿದರು. ಐಮಂಗಲ ಗ್ರಾಮದ ಕೋಳುಮಂಡ ಕುಟುಂಬಸ್ಥರ ಜಮ್ಮ ಗದ್ದೆಯಲ್ಲಿ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಕೆಎಂಎ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಮಂಗಲ ಗ್ರಾಮದ ಹಿರಿಯರು ಮತ್ತು ಕೆ.ಎಂ.ಎ. ಸದಸ್ಯರಾದ ಕೂತಂಬಟ್ಟೀರ ಹುಸೇನ್ ಪರಿಶುದ್ಧ ಸ್ವಲಾತ್ ನೊಂದಿಗೆ ಭತ್ತದ ತೆನೆಯನ್ನು ಕುಯ್ದು ನೆರೆದಿದ್ದವರಿಗೆಲ್ಲ ಹಂಚಿದರು. ಕಾರ್ಯಕ್ರಮದಲ್ಲಿ ಕೆ.ಎಂ.ಎ. ಉಪಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು, ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ, ಕೋಶಾಧಿಕಾರಿ ಹರಿಶ್ಚಂದ್ರ ಎ.ಹಂಸ, ಜಂಟಿ ಕಾರ್ಯದರ್ಶಿ ಕರತೋರೆರ ಕೆ ಮುಸ್ತಫ, ಸಂಘಟನಾ ಕಾರ್ಯದರ್ಶಿ ಮೀತಲತಂಡ ಎಂ. ಇಸ್ಮಾಯಿಲ್, ಹಿರಿಯ ನಿರ್ದೇಶಕರಾದ ಚಿಮ್ಮಿಚಿರ ಕೆ. ಇಬ್ರಾಹಿಂ(ಉಮ್ಮಣಿ), ಕೊಂಡಂಗೇರಿ ಜಮಾಅತ್ ಅಧ್ಯಕ್ಷರು ಮತ್ತು ಕೆ.ಎಂ.ಎ. ನಿರ್ದೇಶಕರಾದ ಕುಪ್ಪಂದಿರ…
ಮಡಿಕೇರಿ ನ.29 : ಮಂಗಳೂರಿನ ಕುದ್ರೋಳಿಯ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಸೋಮವಾರಪೇಟೆಯ ಕ್ರಿಯೇಟಿವ್ ಅಕಾಡೆಮಿ ಸ್ಕೂಲ್ ನ 3ನೇ ತರಗತಿ ವಿದ್ಯಾರ್ಥಿ ಬಿ.ಆರ್.ಹರ್ಷಲ್ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾನೆ. ಈತ ಸೋಮವಾರಪೇಟೆಯ ಬಿ.ಎಸ್.ರೋಹಿತ್ ಹಾಗೂ ಶಿಲ್ಪ ದಂಪತಿಯ ಪುತ್ರ. ಕೊಡಗಿನ ಟ್ರೆಡಿಷನಲ್ ಶೊಟೊಕಾನ್ ಕರಾಟೆ ಅಸೋಸಿಯೇಷನ್‍ನ ತರಬೇತುದಾರ ಎನ್.ಸಿ.ಸುದರ್ಶನ್ ಅವರ ಬಳಿ ಹರ್ಷಲ್ ತರಬೇತಿ ಪಡೆದಿದ್ದಾನೆ.






