ಲೇಖಕ: admin

ಮಡಿಕೇರಿ ನ.27 :  ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ  ಸೋಮವಾರಪೇಟೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ತಮ್ಮ ಅಹವಾಲುಗಳನ್ನು ಶಾಸಕರಿಗೆ ನೇರವಾಗಿ ಸಲ್ಲಿಸಿದರು.  ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಶಾಸಕರು, ಸರಕಾರೀ ಮಟ್ಟದ ಮನವಿಗಳನ್ನು ಬಗೆಹರಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More

ಮಡಿಕೇರಿ ನ.27 : ವಿಶಿಷ್ಟ ಸಂಸ್ಕೃತಿಯ ಕೊಡವ ಜನಾಂಗದ ಪ್ರಧಾನ ಹಬ್ಬಗಳಲ್ಲಿ ಒಂದಾದ ಪುತ್ತರಿಯನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದಕ್ಷಿಣ ಕೊಡಗಿನ ಬಾಳೆಲೆ ಬಳಿಯ ಆರ್ಕೇರಿನಾಡಿನ ಬಿಳೂರು ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಿತು. ಹುಣ್ಣಿಮೆಯ ದಿನವಾದ ಇಂದು ಬೆಳಗ್ಗೆ ಬಿಳೂರು ಗ್ರಾಮದ ಕಾಂಡೇರ ಸುರೇಶ್ ಅವರ ಭತ್ತದ ಗದ್ದೆಯಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂಪ್ರದಾಯಿಕವಾಗಿ ನವ ಧಾನ್ಯ ಭತ್ತದ ಕದಿರು ಕೊಯ್ಯುವ ಮೂಲಕ ಹಬ್ಬವನ್ನು ಅರ್ಥಪೂರ್ಣಗೊಳಿಸಿದರು. ತೆನೆ ತುಂಬಿದ ಕದಿರುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಕೃತಿ ದೇವಿಗೆ ನಮಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಪುತ್ತರಿಯ ಆಚಾರ, ವಿಚಾರಗಳನ್ನು ಆರಂಭಿಸಿದರು. ಕೊಯ್ದ ಕದಿರನ್ನು “ಪೊಲಿಯೇ ಬಾ, ಪೊಲಿ ಪೊಲಿಯೇ ಬಾ” ಎಂದು ಧಾನ್ಯಲಕ್ಷ್ಮಿಯನ್ನು ಘೋಷವಾಕ್ಯದ ಮೂಲಕ ಆಹ್ವಾನಿಸುತ್ತಾ ಮನೆ ತುಂಬಿಕೊಂಡರು. ನಂತರ ನವ ಧಾನ್ಯವನ್ನು ಪೂಜ್ಯಸ್ಥಾನದಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಿ ಕೊಡವ ಜನಾಂಗ ಹಾಗೂ ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಸಿಎನ್‍ಸಿ ಸಂಘಟನೆ ಆಚರಿಸಿದ 30ನೇ ವರ್ಷದ ಸಾರ್ವತ್ರಿಕ ಪುತ್ತರಿ ಹಬ್ಬಕ್ಕೆ…

Read More

ಮಡಿಕೇರಿ ನ.27 : ವಾಣಿಜ್ಯ ಚಟುವಟಿಕೆ/ಉದ್ದಿಮೆಗಳನ್ನು ಪ್ರಾರಂಭಿಸಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕೌಶಲ್ಯಾಭಿವೃದ್ಧಿ ಇಲಾಖಾ ಮೂಲಕ ಉದ್ಯಮಶೀಲತಾ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.   www.scsptsp.karnataka.gov.in/BMS/CDOC/EDPRegistrationForm.aspx ರಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-225531 ನ್ನು ಸಂಪರ್ಕಿಸಬಹುದು. ಅರ್ಜಿದಾರರಿಗೆ ನಿಗದಿಪಡಿಸಿರುವ ವಯೋಮಿತಿ 21 ರಿಂದ 50 ವರ್ಷ. ಪಿಯುಸಿ ಮತ್ತು ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಉದ್ದಿಮೆ ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ನೀಡುತ್ತಿರುವ ತರಬೇತಿಯಾಗಿದ್ದು, ಯಾವುದೇ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಿರುವುದಿಲ್ಲ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಯಾಣ ಭತ್ಯೆಯಾಗಿ 10 ದಿನಗಳಿಗೆ ರೂ.1 ಸಾವಿರಗಳನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ಉಪಹಾರ ಮತ್ತು ಮಧ್ಯಾಹ್ನದ ಉಚಿತ ಊಟದ ವ್ಯವಸ್ಥೆ ಇರುತ್ತದೆ. ಅಗತ್ಯವಿರುವ ದಾಖಲಾತಿಗಳು-ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂಕಪಟ್ಟಿ, ಅಭ್ಯರ್ಥಿಯ ಭಾವಚಿತ್ರ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ನ.27 : ಸುವರ್ಣ ಕರ್ನಾಟಕ 50 ಪ್ರಯುಕ್ತ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೆಬ್ಬೂರು ಗೌಡ ಸಂಘ ಬಲಮುರಿ ಸಂಯುಕ್ತ ಆಶ್ರಯದಲ್ಲಿ ಜಾನಪದ ಸಿರಿ ಕಾರ್ಯಕ್ರಮವು ನ.28 ರಂದು ಬೆಳಗ್ಗೆ 10.30 ಗಂಟೆಗೆ ಬಲಮುರಿ ಕಟ್ರತನ ಮೊಟ್ಟೆಕೊಡಿ ಬಾಣೆಯಲ್ಲಿ ನಡೆಯಲಿದೆ. ಬಲಮುರಿ ಹಿರಿಯ ಕ್ರೀಡಾಪಟು ಪೊನ್ನಚನ ಕೆ.ಮಾದಪ್ಪ ಅವರು ಕ್ರೀಡಾ ಕೂಟ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಲಮುರಿ ನೆಬ್ಬೂರು ಗೌಡ ಸಂಘದ ಸಲಹಾ ಸಮಿತಿ ಸದಸ್ಯರಾದ ಕೊಟ್ಟಕೇರಿಯನ ಡಿ.ದಯಾನಂದ, ಬಲಮುರಿ ನೆಬ್ಬೂರು ಗೌಡ ಸಂಘದ ಅಧ್ಯಕ್ಷರಾದ ಕಟ್ರತನ ಬಿ.ಲೋಕನಾಥ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ…

Read More

ಮಡಿಕೇರಿ ನ.27 : ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು(ಪಿಎಂಎಫ್‍ಎಂಇ) 2020-21 ರಿಂದ ಪ್ರಾರಂಭವಾಗಿರುತ್ತದೆ. ಈ ಯೋಜನೆಯಲ್ಲಿ ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ/ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಅವುಗಳ ಸರಪಳಿಕೊಂಡಿಯೊಂದಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಹಾಗೂ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿ ಇರುವುದಿಲ್ಲ. ಅರ್ಹ ಯೋಜನಾ ವೆಚ್ಚದ ಶೇ.35 ರಷ್ಟು ಮೌಲ್ಯದ ಸಾಲ-ಸಂಪರ್ಕವಿರುವ ಸಹಾಯಧನ(ಕ್ರೆಡಿಟ್ ಬೇಸ್‍ಡ್ ಸಬ್ಸಿಡಿ) ಜೊತೆಗೆ ಹೆಚ್ಚುವರಿ ಶೇ.15 ರಷ್ಟು ರಾಜ್ಯ ಸರ್ಕಾರದಿಂದ ಸಹಾಯಧನ ಒದಗಿಸಲಾಗುವುದು(ಗರಿಷ್ಠ ಮಿತಿ 15 ಲಕ್ಷ), ಬ್ರಾಂಡಿಂಗ್…

Read More

ಮಡಿಕೇರಿ ನ.27 ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ‘ಗಿರಿಜನ ಉತ್ಸವ’ ಕಾರ್ಯಕ್ರಮವು ಡಿ. 1 ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ತಿತಿಮತಿ ಗ್ರಾ.ಪಂ. ಅಧ್ಯಕ್ಷರಾದ ಪಿ.ಎಸ್.ಪೊನ್ನು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ವಿಭಾಗದ ಕನ್ನಡ ಮತ್ತು…

Read More

ಮಡಿಕೇರಿ ನ.27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಕುರುಬ ಸಮಾಜ ಇವರ ಸಹಕಾರದಲ್ಲಿ ಕನಕದಾಸರ ಜಯಂತಿ ಆಚರಣೆಯು ನ,30 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಎಚ್.ಎಸ್.ಮಹೇಶ್, ಕೊಡಗು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ.ಗಂಗಾಧರ, ಹುಣಸೂರು ಡಿ.ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ.ಆರ್.ರಾಶಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ನ.27 : ಮಂಗಳೂರಿನ ಕುದ್ರೋಳಿಯ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕೊಡಗಿನ ಟ್ರೆಡಿಷನಲ್ ಶೊಟೊಕಾನ್ ಕರಾಟೆ ಅಸೋಸಿಯೇಷನ್ ನ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಮತ್ತು ಕಂಚು ಗೆದ್ದುಕೊಂಡಿದ್ದಾರೆ. ಐಗೂರಿನ ಸಿಂಚನ ಪ್ರಭಾಕರ್ ಹಾಗೂ ಕೆ.ಆರ್.ಅನರ್ಘ್ಯ ಪೂವಯ್ಯ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಕೆ.ಆರ್.ಆರಾಧ್ಯ ಪೂವಯ್ಯ ಹಾಗೂ ಹರ್ಷಲ್ ಬೆಳ್ಳಿ ಪದಕ, ನಂಗಾರು ನಿರುಷ್, ಚಿರಾಗ್, ಯಶ್ವಂತ್ ಪೂಜಾರಿ, ಬಿಂದು ಬೆಳ್ಯಪ್ಪ, ವಿವಾನ್ ಗೌಡ ಹಾಗೂ ಮನ್ವಿತ್ ಮೋಹನ್ ಕಂಚಿನ ಪದಕ ಗೆದ್ದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ತರಬೇತುದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ.

Read More

ಮಡಿಕೇರಿ ನ.27 : ಕೊಡ್ಲಿಪೇಟೆ ಸಮೀಪದ ನೀರಗುಂದ ಗ್ರಾಮದಲ್ಲಿ ಶ್ರೀ ವೀರಭದ್ರ ಸ್ವಾಮಿ ದೇವಾಲಯ, ಶ್ರೀ ಮಲ್ಲೇಶ್ವರ ಸ್ವಾಮಿ ಹಾಗೂ ಶ್ರೀ ಕನ್ನಂಬಾಡಿ ಅಮ್ಮನವರ ದೇವಾಲಯದಲ್ಲಿ ಕಾರ್ತಿಕ ಮಾಸದ ಪೂಜೆ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ವೀರಭದ್ರ ಸ್ವಾಮಿಗೆ ಶತ ರುದ್ರಾಭಿಷೇಕ, ವಿಷೇಶವಾಗಿ ತರಕಾರಿಯಿಂದ ದೇವರ ವಿಗ್ರಹಕ್ಕೆ ಅಲಂಕಾರ, ದೇವಾಲಯಗಳಿಗೆ ಹೂವಿನ ಗುಚ್ಚಗಳಿಂದ ಅಲಂಕಾರ ಮಾಡಲಾಗಿತ್ತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ರಾತ್ರಿ ದೀಪಾಲಂಕಾರ, ಕಾರ್ತೀಕ ಪೂಜೆ, ಆಕಾಶದಲ್ಲಿ ವರ್ಣರಂಜಿತ ಪಟಾಕಿ ಸಿಡಿಸುವ ಕಾರ್ಯಕ್ರಮವು ಜರುಗಿತು. ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗವಾಯಿತು. ಪೂಜಾಕೈಂಕರ್ಯಗಳನ್ನು ಕಿರಿಕೊಡ್ಲಿ ಮಠಾಧ್ಯಕ್ಷರಾದ ಶ್ರೀ ಶ್ರೀ ಸದಾಶಿವ ಸ್ವಾಮೀಜಿ, ಅರ್ಚಕ ಮಣಿಕಂಠ ಹಾಗೂ ಚಂದ್ರಯ್ಯ ನೆರವೇರಿಸಿದರು. ಹೊರ ಜಿಲ್ಲೆಗಳಲ್ಲಿ, ರಾಜ್ಯಗಳಲ್ಲಿ ವೃತ್ತಿ ಜೀವನ ನಡೆಸುತ್ತಿರುವ ಎಲ್ಲರೂ ಒಟ್ಟಾಗಿ ಸೇರಿಕೊಂಡು ತಮ್ಮ ಕುಟುಂಬದ ಸದಸ್ಯರೊಂದಿಗೆ ಕೂಡಿ ಈ ಪೂಜಾಕೈಂಕರ್ಯಗಳನ್ನು ಪ್ರತೀ ವರ್ಷದಂತೆ ನಡೆಸಿಕೊಂಡು ಬರುತ್ತಿರುವುದು ವಿಷೇಶವಾಗಿದೆ. ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ಎನ್.ಎ.ಅಶ್ವಥ್ ಕುಮಾರ್…

Read More

ಮಡಿಕೇರಿ ನ.27 : ತನಲ್ ಸ್ವಯಂ ಸೇವಕ ಸಂಘ ಕಣ್ಣೂರಿನ ತನಲ್ ಬೆಟಾಲಿಯನ್ ವತಿಯಿಂದ ನಗರದ ತನಲ್ ನೆರಳಿನ ಮನೆಯಲ್ಲಿ ಸಂಭ್ರಮದಿಂದ ಪುತ್ತರಿ ಹಬ್ಬವನ್ನು ಆಚರಿಸಲಾಯಿತು. ತನಲ್ ಆಶ್ರಮ ವಾಸಿಗಳಿಗೆ ಪುತ್ತರಿ ಹಬ್ಬದ ಪ್ರಯುಕ್ತ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನ ಬಿರಿಯಾನಿ ತಯಾರಿಸಿ ಬಡಿಸುವುದರೊಂದಿಗೆ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಿ ರಸದೌತಣ ನೀಡಿದರು. ಮಡಿಕೇರಿಯ ಫೈವ್ ಸ್ಟಾರ್ ಸಿಂಗರ್ ತಂಡದ ಸದಸ್ಯರು ಕನ್ನಡ ಹಾಡುಗಳನ್ನು ಹಾಡಿ ರಂಜಿಸಿದರು.  ಆಶ್ರಮ ವಾಸಿಗಳು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳಿಗೆ ಶಾಲು ಹೊದಿಸಿ ಗೌರವಿಸಲಾಯಿತು. ತನಲ್ ವ್ಯವಸ್ಥಾಪಕ ಮೊಹಮ್ಮದ್ ಮುಸ್ತಫ, ಪತ್ರಕರ್ತ ಎಂ.ಅಬ್ದುಲ್ಲ, ಶುಕೂರ್, ಸಾಮಾಜಿಕ ಕಾರ್ಯಕರ್ತ ಬಸಾಮ ಸೇರಿದಂತೆ ಗೆಳೆಯರ ಬಳಗ ಹಾಜರಿದ್ದರು.

Read More