ಲೇಖಕ: admin

ಮಡಿಕೇರಿ ನ.26 : ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮಿತಿ ಮೀರಿದೆ. ಕಾಡಾನೆಗಳ ಹಿಂಡು ಕಾಡಿನಿಂದ ತೋಟ, ಇದೀಗ ತೋಟದಿಂದ ಮನೆಯಂಗಳಕ್ಕೆ ಬಂದು ಉಪಟಳ ನೀಡಲು ಆರಂಭಿಸಿದೆ ವಿರಾಜಪೇಟೆ ತಾಲ್ಲೂಕಿನ ಬೇಟೋಳ್ಳಿ ಗ್ರಾಮದಲ್ಲಿ ಸುಮಾರು ನಾಲ್ಕು ಕಾಡಾನೆಗಳು ಕಾಣಿಸಿಕೊಂಡಿವೆ. ಕಳೆದ ಮೂರು ದಿನಗಳಿಂದ ಮುಖ್ಯ ರಸ್ತೆ ಸಂಚರಿಸುತ್ತಿರುವ ಕಾಡಾನೆಗಳು ಸ್ಥಳೀಯ ಡಿ.ಎಚ್.ಎಸ್ ಮಿಲ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ನಿಲ್ಲಿಸಿದ್ದ ಕಾರುಗಳ ಪಕ್ಕದಲ್ಲೇ ಸ್ವಲ್ಪ ಹೊತ್ತು ಅಡ್ಡಾಡಿದ ಎರಡು ಕಾಡಾನೆಗಳು ಯಾವುದೇ ಹಾನಿ ಮಾಡದೆ ಮರಳಿದೆ. ಆನೆಗಳ ಹಿಂಡು ಇಲ್ಲಿನ ಶ್ರೀಭದ್ರಕಾಳಿ ದೇವಸ್ಥಾನದ ಸಮೀಪದಲ್ಲೇ ಇದೆ ಎಂದು ಗ್ರಾಮಸ್ಥರು ಭಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಸಿಬ್ಬಂದಿಗಳು ಕಾಡಾನೆಗಳನ್ನು ಕಾಡಿಗಟ್ಟುವ ಪ್ರಯತ್ನ ಮಾಡಿದರು. ಸಾರ್ವಜನಿಕರು ಸಂಚರಿಸುವಾಗ ಎಚ್ಚರದಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಕಾಡಾನೆ ಹಾವಳಿ ತಡೆಗೆ ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ನ.26 : ಅಯೋಧ್ಯೆ ನಗರಿಯ ಭವ್ಯ ಶ್ರೀರಾಮ ಮಂದಿರದಲ್ಲಿ ಮುಂದಿನ ವರ್ಷ ಜನವರಿ 22 ರಂದು ಶ್ರೀರಾಮನ ಪ್ರತಿಷ್ಠಾಪನೆಯಾಗಲಿದೆ. ಈ ಹಿನ್ನೆಲೆ ಪ್ರತಿ ಮನೆಗಳಿಗೆ ತಲುಪಿಸಲು ಅಯೋಧ್ಯೆಯಿಂದ ಕರ್ನಾಟಕಕ್ಕೆ ಮಂತ್ರಾಕ್ಷತೆಯನ್ನು ತರಲಾಗಿದೆ. ಇದೀಗ ಮಂತ್ರಾಕ್ಷತೆ ಕೊಡಗನ್ನು ಕೂಡ ತಲುಪಿದ್ದು, ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಇರಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಉಪಾಧ್ಯಕ್ಷ ಕೂತಿ ಪರಮೇಶ್ ಹಾಗೂ ಸಹ ಕಾರ್ಯದರ್ಶಿ ಸಂತೋಷ್ ಅವರುಗಳು ಬೆಂಗಳೂರಿನ ವಿಹೆಚ್‌ಪಿ ಕಚೇರಿಯಿಂದ ಮಂತ್ರಾಕ್ಷತೆ ತುಂಬಿದ ಬಿಂದಿಗೆಗಳನ್ನು ಪಡೆದು ಮಡಿಕೇರಿಗೆ ತಂದರು. ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ರಾಜೇಶನಾಥ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಾಲಯದಲ್ಲಿಡಲಾಗಿರುವ ಮಂತ್ರಾಕ್ಷತೆಯನ್ನು ನ.29 ರಂದು ಓಂಕಾರ ಸದನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಘ ಪರಿವಾರದ ಪ್ರಮುಖರಿಗೆ ಹಾಗೂ ಕಾರ್ಯಕರ್ತರಿಗೆ ನೀಡಲಾಗುವುದು. ಇವರು ಕೊಡಗು ಜಿಲ್ಲೆಯ ಪ್ರತಿ ಮನೆಮನೆಗಳಿಗೆ ರಾಮನ ಭಾವಚಿತ್ರ ಮತ್ತು ಮಂತ್ರಾಕ್ಷತೆಯನ್ನು ಹಂಚಲಿದ್ದಾರೆ ಎಂದು ಸುರೇಶ್ ಮುತ್ತಪ್ಪ ತಿಳಿಸಿದರು. ಶ್ರೀರಾಮನ…

Read More

ಮಡಿಕೇರಿ ನ.26 : ಕೊಡವ ನ್ಯಾಷನಲ್ ಕೌನ್ಸಿಲ್ ನ ಬೇಡಿಕೆಯಾದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದ್ದು, ಖ್ಯಾತ ಅರ್ಥ ಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಪ್ರಯತ್ನದ ಫಲವಾಗಿ ಶೀಘ್ರ ಕೊಡವ ಲ್ಯಾಂಡ್ ಪರ ತೀರ್ಪು ಹೊರ ಬೀಳಲಿದೆ ಎಂದು ವಿರಾಟ್ ಹಿಂದೂಸ್ಥಾನ್ ಸಂಘಂನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಹೊರ ವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನಡೆದ 33ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನದ ಆಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಈಗಾಗಲೇ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವ ಲ್ಯಾಂಡ್ ಸ್ವಾಯತ್ತತೆ ಕುರಿತು ವಿಜಯೋತ್ಸವ ಆಚರಿಸಲು ಕೊಡಗಿಗೆ ಬರುವುದಾಗಿ ಹೇಳಿದ್ದಾರೆ. ಕೆಲವೇ ದಿನಗಳಲ್ಲ್ಲಿ ಈ ಕುರಿತು ಅಂತಿಮ ತೀರ್ಪು ಬರಲಿದ್ದು, ಸಂವಿಧಾನ ಬದ್ಧವಾಗಿಯೇ ಕೊಡವ ಲ್ಯಾಂಡ್ ಬೇಡಿಕೆ ಈಡೇರಲಿದೆ ಎಂದರು. ಹೈಕೋರ್ಟ್ ನಲ್ಲಿ…

Read More

ಸೋಮವಾರಪೇಟೆ,ನ.25 : ತಾಲೂಕಿನ ಗರ್ವಾಲೆ- ಶಿರಂಗಳ್ಳಿ, ಹಂಡ್ಲಿ ಹಾಗೂ ಸಂಪಿಗೆದಾಳು, ಐಗೂರು ಗ್ರಾ.ಪಂ. ವ್ಯಾಪ್ತಿಯ ಯಡವನಾಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಬಿಎಸ್‍ಎನ್‍ಎಲ್ ಟವರ್ ನಿರ್ಮಾಣಕ್ಕೆ ಸಂಸದ ಪ್ರತಾಪ್ ಸಿಂಹ ಭೂಮಿ ಪೂಜೆ ನೆರವೇರಿಸಿದರು. ಕೊಡಗಿನಲ್ಲಿ ಒಟ್ಟು 63 ಕಡೆಗಳಲ್ಲಿ ನೂತನ ಬಿಎಸ್‍ಎನ್‍ಎಲ್ ಟವರ್ ನಿರ್ಮಾಣವಾಗಲಿದೆ. ಈಗಾಗಲೇ 20 ಕಾಮಗಾರಿಗಳು ಪ್ರಾರಂಭವಾಗಿವೆ. ಮಾರ್ಚ್ ಒಳಗಡೆ ಎಲ್ಲಾ ಟವರ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಸೇವೆ ಒದಗಿಸುವ ಗುರಿ ಹೊಂದಲಾಗಿದೆ ಎಂದು ಸಂಸದರು ತಿಳಿಸಿದರು. ನಂತರ ಚೌಡ್ಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯನ್ನು ಸಂಸದರು ಪರಿಶೀಲಿಸಿದರು. ರೂ. 1.9 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಚೌಡ್ಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಚೆಕ್‍ಡ್ಯಾಂ ಹಾಗೂ ಜಾಕ್‍ವೆಲ್ ನಿರ್ಮಾಣ ಮಾಡಿ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲಾಗಿದೆ. ಕೆಲಸ ಪೂರ್ಣಗೊಂಡಿದ್ದು, ಈಗಾಗಲೇ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಂಸದರು ತಿಳಿಸಿದರು. ನಂತರ ಜೂನಿಯರ್ ಕಾಲೇಜು ಮೈದಾನದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ಟರ್ಫ್ ಮೈದಾನ…

Read More

ಸೋಮವಾರಪೇಟೆ ನ.25 : ದಾಸ ಶ್ರೇಷ್ಟ ಶ್ರೀ ಕನಕದಾಸರ  ಜಯಂತಿ ಆಚರಿಸುವ ಸಲುವಾಗಿ ಸೋಮವಾರಪೇಟೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಶೀಲ್ದಾರ್ ಎಸ್.ಎನ್. ನರಗುಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ಎರಡೂ ತಾಲ್ಲೂಕಿನವರು ಒಟ್ಟಾಗಿ ಸೇರಿ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನ. 30 ರಂದು ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ಸಂಗೊಳ್ಳಿ ರಾಯಣ್ಣ ಕುರುಬ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪ್ರಭಾಕರ್ ಮಾತನಾಡಿ, ಈ ಬಾರಿ ಕಾರ್ಯಕ್ರಮದಲ್ಲಿ 15 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲು ಸಭೆಯಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಆಶ್ರಮ ಶಾಲಾ ವಿದ್ಯಾರ್ಥಿಗಳು, ಐಟಿಡಿಪಿ ಇಲಾಖೆ ಮತ್ತು ಸುತ್ತಲಿನ ಶಾಲಾ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಕಾರ್ಯಕ್ರಮ ಆಯೋಜಿಸಲು ಸಭೆಗೆ ತಿಳಿಸಿದರು. ಅಂದು ಸರ್ಕಾರಿ ರಜೆ ಇರುವುದರಿಂದ ಎಲ್ಲ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಬೇಕೆಂದು ಜಿಲ್ಲಾ ಸಮಿತಿ ಉಪಾಧ್ಯಕ್ಷ ಚಿನ್ನಯ್ಯ ತಶೀಲ್ದಾರರಲ್ಲಿ ಮನವಿ ಮಾಡಿದರು. ಇಂದು ನಡೆಯುತ್ತಿರುವ ಸಭೆಗೆ ಹೆಚ್ಚಿನವರು ಗೈರಾಗಿದ್ದಾರೆ. ಪೂರ್ವಭಾವಿ ಸಭೆಗೆ…

Read More

ಮಡಿಕೇರಿ ನ.25 : ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆದಿವಾಸಿ ಬುಡಕಟ್ಟು ಜನ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು, ಜಿಲ್ಲಾಡಳಿತ ತಕ್ಷಣ ಸೂಕ್ತ ಕ್ರಮ ಕೈಗೊಂಡು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಬೆಂಗಳೂರಿನ ನೈಜ ಹೋರಾಟಗಾರರ ವೇದಿಕೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಮುಖಂಡ, ಹೆಚ್.ಎಂ.ವೆಂಕಟೇಶ್, ನಮ್ಮ ನೈಜ ಹೋರಾಟಗಾರರ ವೇದಿಕೆಯ ಸದಸ್ಯರು ಬಾಳುಗೋಡು ಆದಿವಾಸಿ ಜನರು ವಾಸಿಸುವ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಆಗುಹೋಗಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು. ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೌಲಭ್ಯವಿಲ್ಲದೆ ಆದಿವಾಸಿಗಳು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ಆದಿವಾಸಿ ಜನರಿಗೆ ಹಕ್ಕುಪತ್ರ ಮತ್ತು ಯಾವುದೇ ಮೂಲಭೂತ ಸೌಲಭ್ಯ ನೀಡದೆ ಇರುವುದು ದುರಾದೃಷ್ಟಕರ. ಶುದ್ಧ ಕುಡಿಯವ ನೀರಿಲ್ಲದೆ ಅಲ್ಲಿನ ಮಹಿಳೆಯರು ನೀರಿಗಾಗಿ ದೂರದ ಪ್ರದೇಶಕ್ಕೆ ತೆರಳಬೇಕಾಗಿದೆ. ಶೌಚಾಲಯವೂ ಇಲ್ಲದೆ ಕಷ್ಟ ಪಡಬೇಕಾಗಿದೆ. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಯೋಜನೆಗಳು ಪ್ರಚಾರಕಷ್ಟೇ ಸೀಮಿತವಾಗಿದೆ ಎಂದು ಎಂದು ಆರೋಪಿಸಿದರು. ಇನ್ನಾದರು ಜಿಲ್ಲಾಡಳಿತ ಆದಿವಾಸಿಗಳಿಗೆ ಟಾರ್ಪಲ್‍ಗಳನ್ನು…

Read More

ಸಿದ್ದಾಪುರ ನ.25 :  ನೆಲ್ಯಹುದಿಕೇರಿ ಯಂಗ್ ಮುಸ್ಲಿಂ ಅಸೋಶಿಯೇಷನ್ ಹಾಗೂ ಕೊಡಗು ವೈಧ್ಯಕೀಯ ಕಾಲೇಜು ಸಂಯುಕ್ತಾಶ್ರಯದಲ್ಲಿ ನೆಲ್ಯಹುದಿಕೇರಿ ದಾರುಸ್ಸಲಾಂ ಮದರಸ ಸಭಾಂಗಣದಲ್ಲಿ ರಕ್ತದಾನ ಶಿಬಿರ  ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಎಸ್ ಎನ್ ಡಿಪಿ ಕೊಡಗು ಜಿಲ್ಲಾಧ್ಯಕ್ಷ ವಿ.ಕೆ. ಲೋಕೇಶ್  ಮಾತನಾಡಿ, ಸಂಘಟನೆಗಳು ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ನೆಲ್ಯಹುದಿಕೇರಿ ಯಂಗ್ ಮುಸ್ಲಿಂ ಅಸೋಶಿಯೇಷನ್  ಉತ್ತಮ ಕಾರ್ಯಕ್ರಮ ಹಮ್ಮಿ ಕೊಳ್ಳುತ್ತಿದ್ದು, ರಕ್ತದಾನ ಶಿಬಿರದ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಿದ್ದಾರೆ. ಮಾನವೀಯತೆಯ ಮೂಲಕ ಮನುಷ್ಯನ ಪ್ರಾಣ ಉಳಿಸಲು ಅತ್ಯಗತವಾಗಿರುವ ರಕ್ತದಾನ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯವಾಗಲಿದೆ.  ಪ್ರತಿಯೊಬ್ಬರು ರಕ್ತದಾನದ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಸಲಹೆ ನೀಡಿದರು. ಶಿಬಿರದಲ್ಲಿ 60ಕ್ಕೊ ಹೆಚ್ಚು ಜನ ರಕ್ತದಾನ ಮಾಡಿ ಮಾನವೀಯತೆ ತೋರಿದರು. ಕಾರ್ಯಕ್ರಮದಲ್ಲಿ ನೆಲ್ಯಹುದಿಕೇರಿ ಗ್ರಾ ಪಂ ಪಿಡಿಒ ನಂಜುಂಡ ಸ್ವಾಮಿ, ನೈಮಾ ಅಧ್ಯಕ್ಷ ಎ.ಎಸ್. ಆರಿಫ್, ಗ್ರಾಪಂ‌ ಸದಸ್ಯರಾದ ಎ.ಕೆ. ಹಕೀಂ, ಪಿ.ಹೆಚ್. ಅಫ್ಸಲ್, ಹನೀಫ, ಮುಸ್ತಫ,…

Read More

ಕುಶಾಲನಗರ ನ. 25 : ಕುಶಾಲನಗರದ ಗೌಡ ಸಮಾಜ ಮತ್ತು ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ನ.27 ರಂದು ಪುತ್ತರಿ ಆಚರಣೆ ಸಂಭ್ರಮದಿಂದ  ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಬ್ಬದ ಆಚರಣೆ ಬಗ್ಗೆ ಮಾಹಿತಿ‌ ನೀಡಿದ ಅವರು‌, ಅಂದು‌ ಸಂಜೆ ಕುಶಾಲನಗರ ಗೌಡ ಸಮಾಜದಲ್ಲಿ ಸೇರಿ 7.45ಕ್ಕೆ ದೇವರಿಗೆ ಪೂಜೆ ಸಲ್ಲಿಸಿ‌ ನೆರೆಕಟ್ಟಿ ಮೆರವಣಿಗೆಯಲ್ಲಿ ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವುದರೊಂದಿಗೆ ಗುಮ್ಮನಕೊಲ್ಲಿಯಲ್ಲಿ ಗೌಡ ಯುವಕ ಸಂಘದ ಗದ್ದೆಯಲ್ಲಿ ರಾತ್ರಿ 8.45 ಕ್ಕೆ ಗದ್ದೆಗೆ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕದಿರು ತೆಗೆದು ಜನಾಂಗದವರಿಗೆ, ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ, ನಾಲ್ಕು ಗದ್ದೆಗಳಲ್ಲಿ ಕದಿರು ಬೆಳೆಯಲಾಗಿದ್ದು ಸಾರ್ವಜನಿಕರು ನೂಕುನುಗ್ಗಲಿಲ್ಲದೆ ಕದಿರು…

Read More

ಮಡಿಕೇರಿ ನ.25 : ಕೊಡವಾಮೆರ ಕೊಂಡಾಟ ಸಂಘಟನೆಯು ನಡೆಸುವ ಕೊಡವ ಒಕ್ಕಗಳ ನಡುವಿನ ಬಾಳೋಪಾಟ್ ಸ್ಪರ್ಧೆ ಮತ್ತು ಅಖಿಲ ಕೊಡವ ಸಮಾಜ ಮಾಜಿ ಅಧ್ಯಕ್ಷ ದಿ. ಮಾತಂಡ ಮೊಣ್ಣಪ್ಪ ಅವರ ನೆನಪಿಗೆ ನಡೆದ ಪ್ರಬಂಧ ಸ್ಪರ್ಧೆಯ  ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಮತ್ತು ಬಾಳೋಪಾಟ್ ತಜ್ಞರ ಸಭೆಯು ನ.30 ರಂದು ನಡೆಯಲಿದೆ  ಕೊಡವಾಮೆರ ಕೊಂಡಾಟ ಸಂಘಟನೆ  ತಿಳಿಸಿದೆ. ಮಡಿಕೇರಿಯ ಬಾಲಭವನದಲ್ಲಿ ಬೆಳಿಗ್ಗೆ 11.30ಕ್ಕೆ ಕೊಡವಾಮೆರ ಕೊಂಡಾಟ ಸಂಘಟನೆಯ ಸ್ಥಾಪಕ ಮತ್ತು ಅಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ   ಅಖಿಲಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ, ಶಾಸಕ ಮಂಡೆಪಂಡ ಸುಜಾ ಕುಶಾಲಪ್ಪ, ಮಾಜಿ ಸಚಿವ ಮೇರಿಯಂಡ ನಾಣಯ್ಯ, ಸ್ಪರ್ಧೆಯ ಬಹುಮಾನ ದಾನಿಗಳಾದ ಸರ್ಕಂಡ ಸೋಮಯ್ಯ,  ಮಲ್ಲೇಂಗಡ ಸುಧಾಮುತ್ತಣ್ಣ, ಅಂಜಪರವಂಡ ರಂಜು ಮುತ್ತಪ್ಪ, ಹಂಚೆಟ್ಟಿರ ಮನುಮುದ್ದಪ್ಪ ಸೇರಿದಂತೆ ಹಿರಿಯ ಜಾನಪದ ತಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.…

Read More

ಮಡಿಕೇರಿ ನ.25 : ಯಶಸ್ಸು ಎಂದರೆ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆಯುವುದು ಒಂದೇ ಅಲ್ಲ, ಜೀವನದ ಮೌಲ್ಯ ಹಾಗೂ ಪ್ರಬುದ್ಧತೆ ಬೆಳೆಸಿಕೊಂಡು ಯಶಸ್ಸು ಗಳಿಸಬೇಕು. ಜೊತೆಗೆ ಆರೋಗ್ಯಯುತ ಬದುಕು ನಡೆಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎಂ.ಜಿ.ಉಮಾ ಹೇಳಿದರು. ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್, ಮಾನಸ, ಇಸಿಎಚ್‍ಒ ಹಾಗೂ ಸ್ಪ್ಯಾಡ್ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ‘ಬಾಲಮೇಳ’ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳಲ್ಲಿ ಪ್ರತಿಭೆ, ಹುಮ್ಮಸ್ಸು ಇದ್ದು, ಮಕ್ಕಳಿಗೆ ವೇದಿಕೆ ಒದಗಿಸಬೇಕು. ಕೊಡಗು ಜಿಲ್ಲೆಯ ಬಾಲಕರ ಮತ್ತು ಬಾಲಕಿಯರ ಮಂದಿರ ಹಾಗೂ ಆಶ್ರಮ ಶಾಲೆಗಳಲ್ಲಿ ಗಮನ ಸೆಳೆಯುವ ಹಲವು ಪ್ರತಿಭಾವಂತ ವಿದ್ಯಾರ್ಥಿಗಳು ಇರುವುದು ಶ್ಲಾಘನೀಯ ಎಂದು ಉಮಾ ಹೇಳಿದರು. ಇಂತಹ ಮಕ್ಕಳ ಪ್ರತಿಭೆ ರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ…

Read More