ನಾಪೋಕ್ಲು ನ.25 : ಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿವಂಗತ ಮೇಕೇರಿರ ಕಾರ್ಯಪ್ಪ ಸ್ಮರಣಾರ್ಥ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ನಡೆದ ಜಿಲ್ಲಾಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸೈನಿಕ್ ಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಪೊನ್ನಂಪೇಟೆಯ ಕೆಪಿಎಸ್ ಪ್ರೌಢಶಾಲೆಯ ತಂಡ ದ್ವಿತೀಯ ಸ್ಥಾನ ಗಳಿಸಿತು.ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆ, ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಹಾಗೂ ವಿರಾಜಪೇಟೆಯ ಕಾವೇರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ಕ್ರಮವಾಗಿ ತೃತೀಯ,ಚತುರ್ಥ ಹಾಗೂ ಐದನೇ ಸ್ಥಾನ ಪಡೆದವು. ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ 15 ತಂಡಗಳು ಪಾಲ್ಗೊಂಡಿದ್ದವು. ಮೊದಲಿಗೆ ಅರ್ಹತಾ ಸುತ್ತಿನ ಸ್ಪರ್ಧೆ ನಡೆದು ಐದು ತಂಡಗಳನ್ನು ಮೌಖಿಕ ಸುತ್ತಿಗೆ ಆಯ್ಕೆ ಮಾಡಿಕೊಳ್ಳಲಾಯಿತು.ಹತ್ತು ಸುತ್ತಿನಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು. 128 ಅಂಕ ಗಳಿಸಿ ಕೂಡಿಗೆಯ ಸೈನಿಕ್ ಶಾಲೆಯ ತಂಡದ ವಿದ್ಯಾರ್ಥಿಗಳಾದ ಉನ್ನತೇಶ್ಎಸ್.ಎಂ,ನಿಶಾಂತ್ ನಾರಾಯಣ,ಪ್ರಜ್ವಲ್ ಮೇಟಿ ಮತ್ತು ಪ್ರಣವ್ ರಾವ್ ವಿಜೇತರಾಗಿ ಹೊರಹೊಮ್ಮಿದರು. 74 ಅಂಕಗಳಿಸಿದ ಪೊನ್ನಂಪೇಟೆಯ ಕೆಪಿಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ತೇಜಸ್ವಿನಿ…
ಲೇಖಕ: admin
ನಾಪೋಕ್ಲು ನ.25 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುವರ್ಣ ಕರ್ನಾಟಕ 50ರ ಸಂಭ್ರಮ ದ ಅಂಗವಾಗಿ ಚೆಟ್ಟಿಮಾನಿಯಲ್ಲಿ ಹೋಬಳಿ ಮಟ್ಟದ ಗ್ರಾಮ ಸಿರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಭಾಗಮಂಡಲ ಹೋಬಳಿಯ ಭಾಗಮಂಡಲ-ಅಯ್ಯಂಗೇರಿ ಮತ್ತು ಕುಂದಚೇರಿ ಗ್ರಾ.ಪಂ ಗಳ ಸಹಯೋಗದಲ್ಲಿ ಚೆಟ್ಟಿಮಾನಿಯ ಶಾದಿ ಮಹಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಗ್ರಾಮ ಸಿರಿ ಕಾರ್ಯಕ್ರಮವನ್ನು ಚೆಟ್ಟಿಮಾನಿಯಲ್ಲಿ ನಡೆಸುವ ಬಗ್ಗೆ ಗ್ರಾಮಸ್ಥರಿಂದ ಒಪ್ಪಿಗೆ ಪಡೆದು ಕಾರ್ಯಕ್ರಮದ ಉದ್ದೇಶ ಹಾಗೂ ರೂಪುರೇಷೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮ ನಡೆಸುವ ದಿನಾಂಕ ನಿಗದಿ ಪಡಿಸುವುದು ಹಾಗೂ ಉಪಸಮಿತಿಗಳ ರಚನೆ ಮಾಡುವ ಕುರಿತು ಡಿ.5 ರಂದು ಭಾಗಮಂಡಲ ಅಯ್ಯಂಗೇರಿ ಹಾಗೂ ಕುಂದಚೇರಿ ಗ್ರಾಮಸ್ಥರ ಸಭೆಯನ್ನು ಕರೆಯುವಂತೆ ತೀರ್ಮಾನಿಸಲಾಯಿತು. ಕುಂದಚೇರಿ ಗ್ರಾ.ಪಂ ಅಧ್ಯಕ್ಷ ಪೊಡನೋಳನ ವಿ.ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಯಾದವ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ…
ಮಡಿಕೇರಿ ನ.25 : ಮೇಯಲು ಬಿಟ್ಟಿದ್ದ ಹಸುವೊಂದು ಹುಲಿದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಟಿ.ಶೆಟ್ಟಿಗೇರಿಯಲ್ಲಿ ನಡೆದಿದೆ. ಗ್ರಾಮದ ಕಾಡ್ಯಾಮಾಡ . ಬಿ. ಸುಮನ್ ಅವರಿಗೆ ಸೇರಿದ ಹಸುವನ್ನು ಎಂದಿನಂತೆ ತೋಟದಲ್ಲಿ ಮೇಯಲುಮೇಯಲು ಬಿಟ್ಟ ಸಂದರ್ಭ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಸ್ಥಳಕ್ಕೆ ರೈತಸಂಘ ಭೇಟಿ ಹುಲಿಯನ್ನು ಸೆರೆಹಿಡಿದು ಸ್ಥಳಾಂತರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹುಲಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಡಿಕೇರಿ ನ.25 : ಮಕ್ಕಳಲ್ಲಿ ಕಲಾ ಪ್ರತಿಭೆ ಸಾಕಷ್ಟು ಇದ್ದು, ಮಕ್ಕಳನ್ನು ಸದಾ ಖುಷಿಯಿಂದ ಇರಲು ಆಟೋಟಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಅದನ್ನು ಬಿಟ್ಟು ಜೈಲಿನ ಅನುಭವ ನೀಡಬಾರದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಪ್ರತಿಪಾದಿಸಿದ್ದಾರೆ. ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್, ಮಾನಸ, ಇಸಿಎಚ್ಒ ಹಾಗೂ ಸ್ಪ್ಯಾಡ್ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ‘ಬಾಲಮೇಳ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳು ಮಕ್ಕಳ ತನವನ್ನು ಅನುಭವಿಸಬೇಕು. ಗ್ರಾಮೀಣ ಆಟಗಳಾದ ಮರಕೋತಿ, ಕಪ್ಪೆ ಕುಣಿತ, ಕುಂಟೆಬಿಲ್ಲೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಇತರ ಮಕ್ಕಳ ಜೊತೆ ಬೆರೆಯಲು ಸಾಧ್ಯವಾಗಲಿದೆ ಎಂದರು. ಮಕ್ಕಳು ಮೊಬೈಲ್ ಬದಲಾಗಿ ಮಣ್ಣಿನಲ್ಲಿ ಆಟ ಆಡಬೇಕು. ಇದರಿಂದ ಮಕ್ಕಳ ಚೈತನ್ಯ ಹೆಚ್ಚಾಗಲಿದೆ. ಜೊತೆಗೆ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ವಿಕಸನ ಸದೃಢಗೊಳ್ಳಲಿದೆ ಎಂದು ನಾಗಣ್ಣ ಗೌಡ…
ನಾಪೋಕ್ಲು ನ.25 : ಸಂಪಾಜೆಯ ಮಹಾವಿಷ್ಣು ಮಿತ್ರ ಬಳಗದ ವತಿಯಿಂದ ದೀಪಾವಳಿ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿದ್ದ ಪುರುಷರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸ್ವಾಮಿ ಕೊರಗಜ್ಜ ಪಾಲ್ತಾಡಿ ತಂಡ ಪ್ರಥಮ ಸ್ಥಾನ ಪಡೆದುದ್ದು, ಸಂಪಾಜೆಯ ವಿಷ್ಣು ಬಳಗ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಓಂ ಪ್ಲಸ್ ಸ್ಟಾರ್ ಮಲ್ಲರ್ ಮೂರನೇ ಸ್ಥಾನ ಗಳಿಸಿದರೆ, ಆದರ್ಶ್ ಚಡವು ತಂಡವು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.ಮಹಿಳೆಯರ ವಿಭಾಗದಲ್ಲಿ ಕೊಡಿಯಾಲ ತಂಡವು ಪ್ರಥಮ ಸ್ಥಾನ ಗಳಿಸಿದರೆ ಆದರ್ಶ ಕೆಡವು ತಂಡವು ದ್ವಿತೀಯ ಸ್ಥಾನ ಗಳಿಸಿತು. ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಪುರುಷರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕೊರಗಜ್ಜ ಪಾಲ್ತಾಡಿ ತಂಡಕ್ಕೆ 8 ಸಾವಿರ ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ದ್ವಿತೀಯ ಬಹುಮಾನ ಪಡೆದ ವಿಷ್ಣು ಬಳಗ ತಂಡಕ್ಕೆ 5 ಸಾವಿರ ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ತೃತೀಯ ಸ್ಥಾನ ಪಡೆದ ಓಂ ಪ್ಲಸ್ ಸ್ಟಾರ್ ಮಲರ್ ತಂಡವು 3…
ಮಡಿಕೇರಿ ನ.25 : ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ವೈ.ಯು.ಕಾವ್ಯ ರಾಷ್ಟ್ರ ಮಟ್ಟದ ಫುಟ್‍ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾಳೆ. ಇವಳು 14 ವರ್ಷ ವಯೋಮಿತಿಯ ಬಾಲಕಿಯರ ಫುಟ್‍ಬಾಲ್ ಕ್ರೀಡೆಯಲ್ಲಿ ನಾಯಕಿಯಾಗಿ ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ್ದು, ಮಂಗಳೂರಿನ ಬಜ್ಪೆಯಲ್ಲಿ ನಡೆದ ವಿಭಾಗ ಮಟ್ಟದ ಕ್ರೀಡೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗದ ತಂಡದಲ್ಲಿ ಸ್ಥಾನ ಗಳಿಸಿದ್ದಾಳೆ. ಅಲ್ಲದೇ ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ರಾಜ್ಯ ಮಟ್ಟದ ಕ್ರಿಡೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಕಾವ್ಯ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಯಾಗಿದ್ದು, ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಎಲ್.ಸಂದೇಶ್ ತರಬೇತಿ ನೀಡಿದ್ದಾರೆ. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್.ಡಿ.ಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ನ.25 : ಕೊಡಗು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಪದವಿ ಪೂರ್ವ ಮಕ್ಕಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಡಿಕೇರಿಯ ಸಂತ ಜೋಸೆಫರ ಕಾಲೇಜಿನ ವಿದ್ಯಾಥಿ೯ಗಳು ಬಹುಮಾನ ಗಳಿಸಿ ಮಂಡ್ಯದಲ್ಲಿ ನಡೆಯಲಿರುವ ವಲಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ಭುವನೇಶ್ವರಿ ಎಸ್ ಏಕಪಾತ್ರಾಭಿನಯ, ಕೆ.ಎಸ್. ರಜೀನ್, ಚರ್ಚಾಸ್ಪರ್ಧೆ ಬಿ.ಆರ್.ರಿದಾ ಸುಮನ್ ಪ್ರಬಂಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ. ವಿ.ಸಿ.ಹೇಮಶ್ರೀ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮಡಿಕೇರಿ ನ.25 : ಮೈಸೂರು ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ (ಕೆ.ಎಸ್.ಎ) ಅಧ್ಯಕ್ಷರಾಗಿ ಮನೆಯಪಂಡ ಕಾರ್ಯಪ್ಪ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಚೋಳಪಂಡ ದೇಚಮ್ಮ, ಕಾರ್ಯದರ್ಶಿಯಾಗಿ ಮುಂಡಿಯೊಳಂಡ ಮಾಚಯ್ಯ, ಜಂಟಿ ಕಾರ್ಯದರ್ಶಿ ಇಶಾನಿ ಮೊಟ್ಟೆಯಂಡ, ಖಜಾಂಚಿಯಾಗಿ ಬಲ್ಯಂಡ ಮೌರ್ಯ, ಸಹ ಖಜಾಂಚಿಯಾಗಿ ನಾಯಕಂಡ ತ್ರಿಷಾ, ಸಾಂಸ್ಕೃತಿಕ ನಾಯಕಿಯಾಗಿ ಚೆಟ್ಟೀರ ಗ್ರಂಥ ಹಾಗು ಸಾಂಸ್ಕೃತಿಕ ನಾಯಕನಾಗಿ ಮಂಡೇಟಿರ ದೇಗುಲ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ನ.25 : ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ ಹಾಗೂ ವಿವಿಧ ವಿಭಾಗದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ 52 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಯಿತು. ನಗರದ ಕವಾಯತು ಮೈದಾನದಲ್ಲಿ ನಡೆದ ಕವಾಯತು ಸಂದರ್ಭ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪಶಂಸನಾ ಪತ್ರ ನೀಡಿ ಅಭಿನಂದಿಸಿದರು.
ಬೆಂಗಳೂರು ನ.25 : ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಧನ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು. ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು. ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದರು.






