ಮಡಿಕೇರಿ ನ.25 : ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಡಿ.3 ರಂದು ಬೆಳಿಗ್ಗೆ 10 ಗಂಟೆಯಿಂದ ಪೊನ್ನಂಪೇಟೆಯ ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆಯಲಿದ್ದು, ಜಿಲ್ಲೆಯ ಮೂಲನಿವಾಸಿಗಳು ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಮೂರು ನಾಡಿನ ತಕ್ಕ ಮುಖ್ಯಸ್ಥ ಹಾಗೂ ಬೊಟ್ಟಿಯತ್ ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಕೈಮುಡಿಕೆ ಪುತ್ತರಿ ಕೋಲ್ ಮಂದ್ ವಿಷಯವಾಗಿ ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡಿಗೆ ಸೇರಿದ ವಿವಿಧ ಗ್ರಾಮಗಳ ಹಾಗೂ ಮೂರು ನಾಡಿನ ತಕ್ಕಮುಖ್ಯಸ್ಥರು ಸೇರಿದಂತೆ ಮೂರು ನಾಡಿನವರು ಸೇರಿ ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಯಿತು. ಮೂರು ನಾಡಿನವರು ಮಾತ್ರವಲ್ಲದೆ ಜಿಲ್ಲೆ ಹಾಗೂ ಹೊರಜಿಲ್ಲೆಯಲ್ಲಿ ನೆಲೆಸಿರುವ ಕೊಡವ ಮಂದಿಗೆ ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಇದರೊಂದಿಗೆ ಜಿಲ್ಲೆಯ ವಿವಿಧ ಶಾಲಾಕಾಲೇಜುಗಳ ತಂಡಕ್ಕೆ ಮತ್ತು ಸಾರ್ವಜನಿಕರಿಗೂ ಮುಕ್ತ…
ಲೇಖಕ: admin
ನಾಪೋಕ್ಲು ನ.25 : ಮಡಿಕೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಎಂಬ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಮಡಿಕೇರಿ ಆರೋಗ್ಯ ಇಲಾಖೆಯ ಆರ್.ಬಿ.ಎಸ್.ಕೆ ತಂಡ ವಿದ್ಯಾರ್ಥಿಗಳಿಗೆ ರಕ್ತ ಪರೀಕ್ಷೆಯನ್ನು ನಡೆಸಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಹಿಮೋಗ್ಲೋಬಿನ್ ಅಂಶ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ನೀಡಿ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ಸಂದರ್ಭ ಮಡಿಕೇರಿ ಆರೋಗ್ಯ ಇಲಾಖೆಯ ಡಾ.ಪೂಜಾ ಹಾಗೂ ಡಾ.ಲಾವಣ್ಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ನ.25 : ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಚೀಯಕಪೂವಂಡ ಸವಿತ ಅಪ್ಪಚ್ಚು ಅವರು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಹೆಗಡೆ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಭಾರತೇಂದು ಹರಿಶ್ಚಂದ್ರ ಮತ್ತು ಹರದಾಸ ಅಪ್ಪಚ್ಚ ನಾಟಕ ಸಾಹಿತ್ಯದ ತುಲನಾತ್ಮಕ ಅಧ್ಯಯನ ಎಂಬ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯ ಪಿಎಚ್ಡಿ ನೀಡಿದೆ. ಇವರು ಚೀಯಕಪೂವಂಡ ಅಪ್ಪಚ್ಚು ಅವರ ಪತ್ನಿ.ದೇವಣಗೇರಿ ಪುಗ್ಗೇರ ಪೊನ್ನಪ್ಪ ಜೂಬಿ ದಂಪತಿಯ ಪುತ್ರಿ. ವರದಿ : ದುಗ್ಗಳ ಸದಾನಂದ
ಕುಶಾಲನಗರ, ನ. 24: ಕುಶಾಲನಗರದ ಗೌಡ ಸಮಾಜ ಮತ್ತು ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ನ.27 ರಂದು ಹುತ್ತರಿ ಆಚರಣೆ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಬ್ಬದ ಆಚರಣೆ ಬಗ್ಗೆ ಮಾಹಿತಿ ನೀಡಿದ ಅವರು, ಅಂದು ಸಂಜೆ ಕುಶಾಲನಗರ ಗೌಡ ಸಮಾಜದಲ್ಲಿ ಸೇರಿ 7.45ಕ್ಕೆ ದೇವರಿಗೆ ಪೂಜೆ ಸಲ್ಲಿಸಿ ನೆರೆಕಟ್ಟಿ ಮೆರವಣಿಗೆಯಲ್ಲಿ ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವುದರೊಂದಿಗೆ ಗುಮ್ಮನಕೊಲ್ಲಿಯಲ್ಲಿ ಗೌಡ ಯುವಕ ಸಂಘದ ಗದ್ದೆಯಲ್ಲಿ ರಾತ್ರಿ 8.45 ಕ್ಕೆ ಗದ್ದೆಗೆ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕದಿರು ತೆಗೆದು ಜನಾಂಗದವರಿಗೆ, ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ, ನಾಲ್ಕು ಗದ್ದೆಗಳಲ್ಲಿ ಕದಿರು ಬೆಳೆಯಲಾಗಿದ್ದು ಸಾರ್ವಜನಿಕರು ನೂಕುನುಗ್ಗಲಿಲ್ಲದೆ ಕದಿರು ಪಡೆದುಕೊಳ್ಳಲು ಅವಕಾಶವಿದೆ ಎಂದರು. ಗೋಷ್ಠಿಯಲ್ಲಿ…
ಮಡಿಕೇರಿ ನ.24 : ಮಡಿಕೇರಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ನ.26 ರಂದು ಜಿಲ್ಲಾ ಮಟ್ಟದ ಪುರುಷರ ಕ್ರಿಕೆಟ್ ಹಾಗೂ ಮಹಿಳೆಯರಿಗಾಗಿ ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಅವರು ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ದಿನದ ಕ್ರೀಡಾಕೂಟ ನಡೆಯಲಿದ್ದು, ಸಂಜೆ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡಾಕೂಟವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ಯಾಮ್ ಪ್ರಸಾದ್.ಹೆಚ್.ಸಿ ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಂ.ಜಿ.ಉಮಾ ಅವರು ಸಭೆಯನ್ನುದ್ದೇಶಿಸಿ ಸಂವಿಧಾನದ ದಿನಾಚರಣೆಯ ಕುರಿತು ಪ್ರಾಸ್ತವಿಕ ನುಡಿಯನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ, ಹಿರಿಯ ವಕೀಲ ಹಾಗೂ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಶಾಂತಿ.ಜಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್…
ಮಡಿಕೇರಿ ನ.24 : ಹಿಂದೂ ಮಲಯಾಳಿ ಸಂಘದ ವತಿಯಿಂದ ನ.26 ರಂದು ಮಡಿಕೇರಿಯಲ್ಲಿ ಮಲಯಾಳಿ ಬಾಂಧವರ “ಓಣಾಘೋಷಂ-ಓಣಂಸಧ್ಯ” ಹಬ್ಬ ಆಚರಿಸಲಾಗುವುದೆಂದು ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್.ವಾಸುದೇವ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕಾವೇರಿ ಹಾಲ್‍ನಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್.ರಮೇಶ್ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಹೊರಟು ನಗರದ ಮುಖ್ಯ ರಸ್ತೆಯ ಮೂಲಕ ಸಾಗಿ ಕಾವೇರಿ ಹಾಲ್ ತನಕ ಓಣಾಘೋಷಂ ಮೆರವಣಿಗೆ ನಡೆಯಲಿದೆ ಎಂದರು. ಮಧ್ಯಾಹ್ನ 1 ಗಂಟೆಗೆ ಓಣಂ ಸಧ್ಯ ನಡೆಯಲಿದ್ದು, 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು,…
ಮಡಿಕೇರಿ ನ.24 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನ.27 ರಂದು ಸಂಜೆ 4.00 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯವರಾದ ಚಂದ್ರಶೇಖರ್ ಎನ್.ಜಿ ಕೋರಿದ್ದಾರೆ.
ಮಡಿಕೇರಿ ನ.24 : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ನ.29 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ.
ಮಡಿಕೇರಿ ನ.24 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡಲಾಗುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದಲ್ಲಿ ವೀಕ್ಷಿಸಿದರು. ನೂತನ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಕುರಿತು ಕಲಾವಿದ ಈ.ರಾಜು ಮತ್ತು ತಂಡದವರು ಹಾಡು ಹಾಡಿದರು. ಬೀದಿನಾಟಕ, ಸಂಗೀತ ಕಾರ್ಯಕ್ರಮಗಳು ಸೇರಿದಂತೆ ಹೆದ್ದಾರಿ ಫಲಕಗಳು ಹೀಗೆ ವಿವಿಧ ಮಾಧ್ಯಮಗಳ ಮೂಲಕ ಸರ್ಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ವಾರ್ತಾಧಿಕಾರಿ ಚಿನ್ನಸ್ವಾಮಿ ಮಾಹಿತಿ ನೀಡಿದರು.
ಮಡಿಕೇರಿ ನ.24 : ಮಂಗಳೂರು ವಿಶ್ವವಿದ್ಯಾನಿಲಯ (ಮಂಗಳ ಗಂಗೋತ್ರಿ) ವತಿಯಿಂದ 2023-24 ನೇ ಸಾಲಿನ ಪಿಎಚ್‍ಡಿ ಪದವಿಗಾಗಿ ವಿವಿಧ ವಿಭಾಗಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ www.mangaloreuniversity.ac.in ಪಡೆಯಬಹುದಾಗಿದೆ.






