ಮಡಿಕೇರಿ ನ.24 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 33ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನದ ಆಚರಣೆ ನ.26 ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಬೆಳಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ಹಕ್ಕೊತ್ತಾಯ ಮಂಡಿಸಲಾಗುವುದು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ದಿನವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕೊಡವ ಬುಡಕಟ್ಟಿನ ವಿಸ್ತಾರವಾದ ಭೂಮಿಯಾದ ಮರೆನಾಡ್, ಐವತ್ ನಾಡ್, ಪಾಕೇರಿ ನಾಡ್ ನಿಂದ ಸೂರ್ಲಬಿನಾಡ್ ವರೆಗೆ, ಬಡಿಗೇರಿನಾಡ್, ಮುತ್ತನಾಡ್, ತಾವುನಾಡ್ ನಿಂದ ಅರ್ಕೇರಿ ನಾಡ್ ವರೆಗೆ, ಬೇಂಗ್ ನಾಡ್, ಕುಯ್ಯಂಗೇರಿ ನಾಡ್ ನಿಂದ ಪತ್ಕಟ್ ನಾಡ್ ವರೆಗೆ, ಗಡಿನಾಡ್ ನಿಂದ ಕುರ್ಚಿನಾಡ್ ವರೆಗೆ, ಪಾಡಿನಾಡ್ ನಿಂದ ತೊಡನಾಡ್ ವರೆಗೆ, ಪೋರಮಲೆ ನಾಡ್,…
ಲೇಖಕ: admin
ಮಡಿಕೇರಿ ನ.23 : 2024 ರ ಜೂನ್, 21 ಕ್ಕೆ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಅವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನ.6 ರ ವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-18 ಮತ್ತು 19 ರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ 2023 ನ.6 ಕ್ಕೆ 1395 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ 992 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 79 ಅರ್ಜಿಗಳು ವಿವಿಧ ಕಾರಣಗಳಿಂದ ತಿರಸ್ಕøತಗೊಂಡಿವೆ. 189 ಅರ್ಜಿಗಳನ್ನು ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ವರ್ಗಾಯಿಸಲಾಗಿದೆ. 135 ಅರ್ಜಿಗಳನ್ನು ಬೇರೆ ಮತ ಕ್ಷೇತ್ರಕ್ಕೆ…
ಮಡಿಕೇರಿ ನ.23 : ಕೃಷಿಕರು ಸರ್ಕಾರದ ಸೌಲಭ್ಯವನ್ನು ಪಡೆಯಲು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಆಧಾರ್ ಕಾರ್ಡ್ ಜೊತೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಆ ನಿಟ್ಟಿನಲ್ಲಿ ರೈತರು ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು. ಜಿಲ್ಲೆಯಲ್ಲಿ 3,26,776 ಅದರಲ್ಲಿ 1,47,621 ಮಂದಿ ಫ್ರೂಟ್ಸ್ ತಂತ್ರಂಶದಲ್ಲಿ ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ 1,29, 976 ಮಂದಿ ಫ್ರೂಟ್ಸ್ ತಂತ್ರಾಂಶದಡಿ ಹೆಸರು ನೋಂದಾಯಿಸಬೇಕಿದೆ. Farmer Registration and Unified Beneficiary Information System-fruits ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಲಾಗಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ರೈತರು ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಗುರುತಿನ ಸಂಖ್ಯೆ (ಎಫ್‍ಐಡಿ) ಪಡೆಯಬಹುದು ಎಂದು…
ಮಡಿಕೇರಿ ನ.23 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ನ.27 ರಂದು ಸಂಜೆ 5.30 ಗಂಟೆಯಿಂದ “ತೆಪ್ಪೋತ್ಸವ, ಪಲ್ಲಕಿ ಉತ್ಸವ, ದಟ್ಟೋತ್ಸವ” ಹಾಗೂ ಅಂದು ಕೊಡಗಿನ ಸಾಂಪ್ರಾದಾಯಿಕ ಹಬ್ಬ “ಹುತ್ತರಿ ಹಬ್ಬದ” ಪ್ರಯುಕ್ತ ದೇವಾಲಯ ಹಾಗೂ ಕೊಡವ ಸಮಾಜದ ವತಿಯಿಂದ ರಾತ್ರಿ 8.45ಕ್ಕೆ ದೇವಾಲಯದ ಗದ್ದೆಯಲ್ಲಿ ಕದಿರು ಕುಯ್ಯುವುದು ಕಾರ್ಯಕ್ರಮವಿದ್ದು, ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ಜರುಗುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ವತಿಯಿಂದ ಕೋರಿದೆ.
ಮಡಿಕೇರಿ ನ.23 : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಕೂಸಿನ ಮನೆಯೂ ಕೂಡ ಒಂದಾಗಿದೆ. ಮಕ್ಕಳ ಪಾಲನೆ ಮತ್ತು ಪೋಷಣೆ ಅತ್ಯಂತ ಸೂಕ್ಷ್ಮವಾಗಿದ್ದು, ಸೂಕ್ತ ರೀತಿಯಲ್ಲಿ ತರಬೇತಿ ಪಡೆದುಕೊಳ್ಳುವಂತೆ ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ. ಕೂಡಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿನ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆರಂಭಗೊಂಡ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳ ಕೇರ್ ಟೇಕರ್ಸ್ ಸೇವಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಮನರೇಗಾ ಕೂಲಿಕಾರರ ಮಕ್ಕಳಿಗೂ ಸೂಕ್ತ ಪಾಲನೆ ಮತ್ತು ಪೋಷಣೆ ಒದಗಿಸುವ ನಿಟ್ಟಿನಲ್ಲಿ ಕೂಸಿನ ಮನೆಗಳನ್ನು ಆರಂಭಿಸಲಾಗಿದೆ. ಮಹಿಳಾ ಕೂಲಿಕಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಮತ್ತು ಮಹಿಳಾ ಸಬಲೀಕರಣದ ಭಾಗವಾಗಿ ಕೂಸಿನ ಮನೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ರಾಜ್ಯಾದ್ಯಂತ ಕೇರ್ ಟೇಕರ್ಸ್ ಗಳಿಗೆ ತರಬೇತಿ ನಡೆಯುತ್ತಿದ್ದು, ಜಿಲ್ಲೆಯಲ್ಲಿಯೂ 2 ತಂಡಗಳಲ್ಲಿ 14 ದಿನಗಳ ಕಾಲ ತರಬೇತಿ ನಡೆಯಲಿದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳು…
ಮಡಿಕೇರಿ ನ.23 : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಗಣಿತ ಶಿಕ್ಷಕರ ಎರಡು ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಂದರ್ಶನವು ನ.28 ರಂದು ಬೆಳಗ್ಗೆ 10.30 ಗಂಟೆಗೆ ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ https://navodaya.gov.in/nvs/nvs-school/KODAGU/en/home/ ದೂ.ಸಂ. 8921089811, 6361148504 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ.
ಮಡಿಕೇರಿ ನ.23 : ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ನಿಶಾನ್ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸೋಮಣ್ಣ ಮಿಮಿಕ್ರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್ ಕಾರ್ಯದರ್ಶಿ ಪಿ.ಎನ್.ವಿನೋದ್, ಶಾಲಾ ಸಂಯೋಜಕರಾದ ಚೈತ್ರ, ಭಾಗ್ಯ, ಅಮೃತ ಮತ್ತು ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ವಿರಾಜಪೇಟೆ ನ.23 : ಮೈಸೂರಿನಲ್ಲಿ ನಡೆದ 3ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಪ್ಸರ ಜಯನ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಕರಾಟೆ ಶಿಕ್ಷಕ ಎಂ.ಬಿ. ಚಂದ್ರನ್ ಅವರಲ್ಲಿ ತರಬೇತಿ ಮತ್ತು ಮಾರ್ಗದರ್ಶ ಪಡೆದಿದ್ದಾರೆ. ಶಾಲಾ ಸಂಯೋಜಕರಾದ ಅಮೃತ, ಶಿಕ್ಷಕಿ ಟಿ.ಜಿ.ಕಲ್ಪ ಹಾಜರಿದ್ದರು. ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ, ಸಿಬ್ಬಂದಿಗಳು ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ನ.23 : ಕರ್ನಾಟಕ ಸ್ಪೋರ್ಟ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಡೆದ ವಲಯ ಮಟ್ಟದ ಡ್ಯಾನ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯ ಇಂಟೋಪೀಸ್ ಡ್ಯಾನ್ಸ್ ತಂಡ 8 ಚಿನ್ನ, 5 ಬೆಳ್ಳಿ, 7 ಕಂಚಿನ ಪದಕವನ್ನು ಪಡೆದು ರಾಜ್ಯ ಮಟ್ಟದ ಚಾಂಪಿಯನ್‍ಶಿಪ್ ಗೆ ಆಯ್ಕೆಯಾಗಿದೆ.
ಮಡಿಕೇರಿ.ನ23 : ಕೊಡಗಿನ ಜನತೆ ಕಾನೂನಿಗೆ ಸೂಕ್ತ ಗೌರವ ನೀಡುತ್ತಿದ್ದು, ರಾಜಿ ಪಂಚಾಯತ್ ಗಳಿಗೆ ಆದ್ಯತೆ ನೀಡದೇ ಇರುವುದರಿಂದಲೇ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಈ ಜಿಲ್ಲೆಯಲ್ಲಿ ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ಆಯೋಜಿತ ನಿರಂತರ ಕಲಿಕಾ ಕಾಯಾ೯ಗಾರ ಮತ್ತು ಔಷಧಿ ಕ್ಷೇತ್ರದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತ ವಿಚಾರಗೋಷ್ಟಿ ಉದ್ಘಾಟಿಸಿ ರಾಮರಾಜನ್ ಮಾತನಾಡಿದರು. ಶಿಸ್ತು ಮತ್ತು ಶಿಕ್ಷಣವಂತರಾದ ಕೊಡಗಿನ ಜನತೆ ಹೆಚ್ಚಿನ ಪಾಲು ಕಾನೂನು ಅನುಸರಿಸುತ್ತಾ ನಿಯಮಗಳನ್ನು ಪಾಲಿಸುತ್ತಾರೆ. ಹೀಗಾಗಿಯೇ ಇಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಅಪರಾಧ ಪ್ರಕರಣಗಳ ಸಂದಭ೯ ರಾಜಿಪಂಚಾಯತ್ , ಒತ್ತಡ ಹೇರುವಿಕೆ ಗಣನೀಯವಾಗಿ ಕಡಮೆಯಿದೆ. ಇದರಿಂದಾಗಿಯೇ ತಪ್ಪಿತಸ್ಥರಿಗೆ ಸೂಕ್ತ ಕಾನೂನು ಶಿಕ್ಷೆಯ ಪ್ರಮಾಣ ಕೊಡಗಿನಲ್ಲಿ ಹೆಚ್ಚಾಗಿದೆ ಎಂದರು. ಮಾದಕ ವ್ಯಸನಿಗಳಿಗೆ ಮಾದಕ ಪದಾಥ೯ಗಳನ್ನು ಅಂಗಡಿಗಳಲ್ಲಿ ಯಾರೂ ನೀಡಬಾರದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ…






