ಮಡಿಕೇರಿ ನ.23 : ಎಲ್ಲಾ ಕೊಡವ ಸಮುದಾಯದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ವತಿಯಿಂದ ಡಿ.29 ಮತ್ತು 30 ರಂದು ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನ (“ಗ್ಲೋಬಲ್ ಕೊಡವ ಸಮ್ಮಿಟ್”) ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಶಾಂತೆಯಂಡ ನಿರನ್ ನಾಚಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲೆ, ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶದಲ್ಲಿ ನೆಲೆಸಿರುವ ಕೊಡವ ಜನಾಂಗ ಬಾಂಧವರು ಸೇರಿದಂತೆ ಸುಮಾರು 20 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಕೊಡವರ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ, ಕೊಡವರು ಎದುರಿಸುತ್ತಿರುವ ಸಮಸ್ಯೆಗಳು, ಕೊಡವರ ಸಂಸ್ಕೃತಿ, ಸಂಪ್ರದಾಯ ಹಾಗೂ ಕೊಡವರ ವಿನೂತನ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಮತ್ತು ಮುಂದಿನ ನಡೆಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ವಿಶಿಷ್ಟ ಕಾರ್ಯಕ್ರಮವನ್ನು ಹಲವು ವರ್ಷಗಳ ಅಧ್ಯಯನದ ನಂತರ…
ಲೇಖಕ: admin
ಮಡಿಕೇರಿ ನ.23 : ವಿವಿಧ ಕ್ಷೇತ್ರಗಳಲ್ಲಿನ ಅಸಂಘಟಿತ ಕಾರ್ಮಿಕ ಸಮೂಹಕ್ಕೆ ಆರ್ಥಿಕ ಚೈತನ್ಯವನ್ನು ಒದಗಿಸುವ ಮೂಲಕ ರಾಷ್ಟ್ರಾಭ್ಯುದಯದ ಚಿಂತನೆಯಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ಸ್ವನಿಧಿಯಿಂದ ಪಿಎಂ ಸುರಕ್ಷಾ’ ಯೋಜನೆ ಸಮಾಜದ ತಳ ಹಂತದಲ್ಲಿರುವವರ ಆಶಾಕಿರಣವಾಗಿದೆ ಎಂದು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವ ಕರ್ಮ ಯೋಜನೆಯ ರಾಜ್ಯ ಸಂಚಾಲಕರಾದ ಮಾಜಿ ಸಚಿವ ಎ.ರಾಮದಾಸ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯೋಜನೆಯ ವಿವರಗಳನ್ನು ನೀಡಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಬೀದಿ ಬದಿ ವ್ಯಾಪಾರಿಗಳ ನೆರವಿನ ಚಿಂತನಡಿಯಡಿ ರೂಪುಗೊಂಡ ಪಿಎಂ ಸ್ವನಿಧಿ ಯೋಜನೆಯಡಿ ಪ್ರಸ್ತುತ ಪತ್ರಿಕಾ ವಿತರಕರು, ವಿವಾಹ ಸಮಾರಂಭಗಳಲ್ಲಿ ಛಾಯಾಚಿತ್ರ ತೆರೆಯುವವರು, ವಿಡಿಯೋಗ್ರಾಫರ್‍ಗಳು, ಹಾಲು ವಿತರಕರು, ಹೂ ಕಟ್ಟುವವರು ಮತ್ತು ಮಾರುವವರು ಹೀಗೆ 23 ವಿವಿಧ ಕ್ಷೇತ್ರಗಳ ಅಸಂಘಟಿತರನ್ನು ಸೇರ್ಪಡೆಗೊಳಿಸಿ, ಅವರಿಗೆ ಯೋಜನೆಯ ನೆರವನ್ನು ವಿಸ್ತರಿಸಲಾಗಿದೆ ಎಂದರು. ಸ್ವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗೆ ಮೊದಲ ಹಂತದಲ್ಲಿ 10ಸಾವಿರ, ಎರಡನೇ ಹಂತದಲ್ಲಿ 20 ಸಾವಿರ ರೂ., ಮೂರನೇ ಹಂvದಲ್ಲಿ 50ಸಾವಿರ ರೂ. ಮತ್ತು…
ಮಡಿಕೇರಿ ನ.23 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ‘ಉತ್ಥಾನ ದ್ವಾದಶಿ’ ಪ್ರಯುಕ್ತ ದೇವಾಲಯದ ರೂಢಿ ಸಂಪ್ರದಾಯದಂತೆ “ತುಳಸಿ ಪೂಜೆ” ಯನ್ನು ನ.24 ರಂದು ಸಂಜೆ 6.30 ರಿಂದ 7.30 ಗಂಟೆಗೆ ನಡೆಸಲಾಗುವುದು. ಈ ದಿನದಂದು ಸೇವಾಕರ್ತರು ತಮ್ಮ ಹೆಸರನ್ನು ದೇವಾಲಯದಲ್ಲಿ ನೋಂದಾಯಿಸುವ ಮೂಲಕ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಅಣ್ಣಪ್ಪ ಜೆ.ಆರ್. ಮೊ.ಸಂ.9902290302 ಹಾಗೂ ಕುಶಕುಮಾರ್ ಜೆ.ಎನ್. ಮೊ.ಸಂ.9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ನ.23 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ (ಕೆಐಸಿಎಂ) ಮಡಿಕೇರಿ ಇಲ್ಲಿ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’’ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ ಪಡೆದಿರಬೇಕು. ತರಬೇತಿ ಅವಧಿ 6 ತಿಂಗಳು. ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಹಾಗೂ ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ರಂತೆ ಶಿಷ್ಯವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ 8792628437, 9845318364, 9663153922, 8762925862, 8762110952ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ತಿಳಿಸಿದ್ದಾರೆ.
ಮಡಿಕೇರಿ ನ.23 : ವಿಶ್ವ ಹಿಂದು ಪರಿಷದ್ ವತಿಯಿಂದ ನ.26 ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ ನಡೆಯಲಿದೆ. ಸಂಜೆ 5 ಗಂಟೆಗೆ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಜನೆ, ವೇದಘೋಷಗಳೊಂದಿಗೆ ಕಾವೇರಿ ತಾಯಿಗೆ ಕಾವೇರಿ ಆರತಿ ನೆರವೇರಲಿದೆ. ಮುಖ್ಯ ಭಾಷಣಕಾರರಾಗಿ ಸುವರ್ಣ ನ್ಯೂಸ್ ಚಾನಲ್ ನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಪಾಲ್ಗೊಳ್ಳಲಿದ್ದಾರೆ. ವಿಶ್ವ ಹಿಂದು ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಉಪಸ್ಥಿತರಿರುವರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾತೆ ಕಾವೇರಿಗೆ ಆರತಿ ಬೆಳಗುವಂತೆ ವಿಶ್ವ ಹಿಂದು ಪರಿಷದ್ ನ ಕೊಡಗು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಸಿದ್ದಾಪುರ ನ.23 : ಸೇವಾ ಮನೋಭಾವದ ಸಮಾಜ ಸೇವೆಗಾಗಿ ಪಾಲಿಬೆಟ್ಟದ ಮೂಕೊಂಡ ವಿಜು ಸುಬ್ರಮಣಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಸದಸ್ಯರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಪರಿಸರ ಕಾಳಜಿಯೊಂದಿಗೆ ಕ್ರೀಡೆ, ಶಿಕ್ಷಣ, ಆರೋಗ್ಯ ಸೇರಿದಂತೆ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ವಿಜು ಸುಬ್ರಮಣಿಯವರ ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕಳತ್ತೂರು ಕಲ್ಯಾಣ ಮಂಟಪದಲ್ಲಿ ನಡೆದ ಅಂತರಾಷ್ಟ್ರೀಯ ಪಂಡಿತ್ ದಿನೇಶ್ ಗುರೂಜಿ ಅವರ ಸಂಸ್ಥೆಯ 4ನೇ ರಾಜ್ಯಮಟ್ಟದ ಜ್ಯೋತಿಷ್ಯ ಹಾಗೂ ಸಾಧಕ ಸಮಾವೇಶದಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಾಗಿಣಿ ಭರಣ, ಪಂಡಿತ್ ದಿನೇಶ್ ಗುರೂಜಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ವಿರಾಜಪೇಟೆ ನ.23 : ಬಿಳುಗುಂದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ರಂಗೋಲಿ ಸ್ಪರ್ಧೆ, ಕ್ರೀಡಾ ಸ್ಪರ್ಧೆ ಹಾಗೂ ಗ್ರಾಹಕರ ಸಂಘದ ವತಿಯಿಂದ ಮಕ್ಕಳ ಸಂತೆ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ಅರುಣ್ ಆನ್ಸಿ ಡಿಸೋಜ ಭಾಷೆ ಹಾಗೂ ಪಠ್ಯ ವಿಷಯಕ್ಕೆ ಸಂಬಂಧಿಸಿದ ರಂಗೋಲಿ ಸ್ಪರ್ಧೆ ಉದ್ಘಾಟನೆ ಮಾಡಿದರು. 8,9,10ನೇ ತರಗತಿಯ ವಿದ್ಯಾರ್ಥಿಗಳು ತ್ರಿಭುಜ, ಹೃದಯ, ಮೆದುಳು, ನರಮಂಡಲ, ಕಿವಿ, ಸಮಾಸ, ಇಂಗ್ಲೀಷ್ ವ್ಯಾಕರಣ, ಭಾರತದ ನಕ್ಷೆ ಇತ್ಯಾದಿಗಳನ್ನು ರಂಗೋಲಿಯ ಮೂಲಕ ಚಿತ್ರಿಸಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೂ, ಪೋಷಕರಿಗೂ, ವಿಷದ ಚೆಂಡು, ಸಂಗೀತ ಖುರ್ಚಿ, ಬಾಲ್ ಇನ್ ದಿ ಬಕೆಟ್, ಬಾಂಬ್ ಇನ್ ದಿ ಸಿಟಿ ಇತ್ಯಾದಿ ಮನೋರಂಜನಾ ಕ್ರೀಡೆಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್.ಜಿ.ಲಿನ್ನಿ ನಡೆಸಿಕೊಟ್ಟರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುರೇಶ್ ಮಕ್ಕಳ ಸಂತೆ ಕಾರ್ಯಕ್ರಮವನ್ನು ಮಕ್ಕಳಿಂದ ತರಕಾರಿ ವ್ಯಾಪಾರ ಮಾಡುವ ಮೂಲಕ ಉದ್ಘಾಟಿಸಿದರು. ಮಕ್ಕಳು ಸ್ಥಳೀಯವಾಗಿ ಸಿಗುವ ಸೊಪ್ಪು, ತರಕಾರಿ, ಹೇರಳೆಕಾಯಿ ಇತ್ಯಾದಿಗಳನ್ನು ತಂದು ವ್ಯಾಪಾರ ಮಾಡಿ ಗಮನ…
ಪುತ್ತೂರು ನ.23 : ರಾಜ್ಯ ಮಟ್ಟದ ಜೂನಿಯರ್ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್‌ರಾಮ್ ಜಗದೀಶ್ ಭಂಡಾರಿ ಕಂಚಿನ ಪದಕ ಗೆದ್ದಿದ್ದಾರೆ. ಕರ್ನಾಟಕ ರಾಜ್ಯ ವೆಯ್ಟ್ ಲಿಫ್ಟಿಂಗ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‌ರಾಮ್ 67ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ. ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಇವರ ಪುತ್ರ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್‌ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ನ.23 : ಪ್ರಸಕ್ತ(2023-24) ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಮತ್ತು ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆಯಂತ್ರ, ಮರಗೆಲಸ ಮತ್ತು ಗಾರೆ ಕಸುಬಿನ ಸುಧಾರಿತ ಉಪಕರಣ ಪಡೆಯಲು ಆಸಕ್ತಿಯುಳ್ಳ ಗ್ರಾಮೀಣ ಪ್ರದೇಶದ ವೃತ್ತಿನಿರತ ಕಸುಬುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಧಿತ ದಾಖಲಾತಿಗಳೊಂದಿಗೆ https://kodagu.nic.in/en/application-for-free-toolkits-for-rural-artisans-during-the-year-2023-24/2023-24/ ವೆಬ್‍ಸೈಟ್‍ನಲ್ಲಿ ಡಿ.20 ರೊಳಗೆ ಅಪ್‍ಲೋಡ್ ಮಾಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ವೋಟರ್ ಐಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಪಡೆದ ಪ್ರಮಾಣ ಪತ್ರ(ಸರ್ಟಿಫಿಕೇಟ್ ಪ್ರಮ್ ಪಂಚಾಯತ್ ಡೆವಲೆಪ್‍ಮೆಂಟ್ ಆಫಿಸರ್(ಫಾರ ಟೈಲರಿಂಗ್, ಮೆಷಿನ್ ಮತ್ತು ಕಾರ್‍ಫೆಂಟರಿ) ದಾಖಲಾತಿಗಳನ್ನು ನೀಡುವುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು(ಗ್ರಾಮೀಣ ಕೈಗಾರಿಕೆ) ರವರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರ್ ರಸ್ತೆ, ಮಡಿಕೇರಿ ದೂ.ಸಂ.08272-228113 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕೆಗಳ ಉಪ ನಿರ್ದೇಶಕರು ತಿಳಿಸಿದ್ದಾರೆ. ಅರ್ಹತೆ:-ವಿದ್ಯುತ್ ಚಾಲಿತ ಹೊಲಿಗೆಯಂತ್ರ…
ಮಡಿಕೇರಿ ನ.22 : ಅವಕಾಶ ವಂಚಿತ ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ಪ್ರಕಟಪಡಿಸಲು ಹಾಗೂ ಚಿಣ್ಣರಾಗಿ ಸಂತೋಷ ಹಾಗೂ ಖುಷಿ ಯಿಂದಿರಲು ನ.25 ರಂದು ಒಂದು ದಿನದ `ಬಾಲಮೇಳ-2023′ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ನ.25 ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬಾಲಮೇಳವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಉದ್ಘಾಟಿಸಲಿದ್ದಾರೆ. ನಂತರ ಸಂಜೆ 3.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಹೈಕೋರ್ಟ್ ನ್ಯಾಯಾಧೀಶರಾದ ಉಮಾ ಎಂ.ಜಿ., ಜಿಲ್ಲಾ ಮುಖ್ಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ರಾಜ್ಯ ಕಾನೂನು ಪ್ರಾಧಿಕಾರದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. `ಬಾಲ ಮೇಳ-2023′ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ 200 ಮಕ್ಕಳು ಭಾಗವಹಿಸಲಿದ್ದು, ಇವರು ತಮ್ಮ ಚಿಂತನೆ, ಯೋಜನೆಗಳನ್ನು, ಪ್ರತಿಭೆ ಮತ್ತು ಕನಸುಗಳನ್ನು ಹಂಚಿಕೊಳ್ಳುವರು. ಮೇಳದಲ್ಲಿ ಹಲವಾರು ಸಂತೋಷದಾಯಕ ಆಟಗಳು ಮತ್ತು ಚಟುವಟಿಕೆಗಳ ಸ್ಟಾಲ್‍ಗಳಿದ್ದು ಇವುಗಳಲ್ಲಿ ಮಕ್ಕಳು ಭಾಗವಹಿಸಲಿದ್ದಾರೆ. ಹಾಗೂ ಈ…






