ನಾಪೋಕ್ಲು ಮೇ 14 NEWS DESK : ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ ಉತ್ಸವಕ್ಕೆ ವಿಶೇಷ ಪ್ರಾರ್ಥನೆಯೊಂದಿಗೆ ಚಾಲನೆ ನೀಡಲಾಯಿತು. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 18ರ ವರೆಗೆ ಜರುಗಲಿರುವ ಅಷ್ಟಬಂಧ ಬ್ರಹ್ಮಕಲಶ ಉತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಸಂಜೆ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ತಕ್ಕ ಮುಖ್ಯಸ್ಥರು ಹಾಗೂ ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ ಅವರು ದೇವರ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಧಾರ್ಮಿಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಧಾರ್ಮಿಕ ಕಾರ್ಯಕ್ರಮಗಳಾದ ಅಂಕುರಾರ್ಪಣೆ, ಪ್ರಾಸಾದ ಸುದ್ದಿ, ವಾಸ್ತು, ರಾಕ್ಷೋಗ್ನ ಹೋಮ, ವಾಸ್ತು ಬಲಿ ನಡೆಯಿತು. ಇದಕ್ಕೂ ಮೊದಲು ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ಅವರನ್ನು ಚಂಡೆ ಮೇಳಗಳೊಂದಿಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ ಹಾಗೂ ಸುಮನ್ ಸುಬ್ರಮಣಿ ಅವರು ಮಾತನಾಡಿ, ಪೂಜಾ…
ಲೇಖಕ: admin
ಮಡಿಕೇರಿ ಮೇ 14 NEWS DESK : ಕೇಂದ್ರ ಸರ್ಕಾರವು ದೇಶದಲ್ಲಿ ಮುಂಬರುವ ಖರೀದಿ ಋತುವಿನ ಹಿನ್ನಲೆಯಲ್ಲಿ ಮತ್ತು ಪರಿಣಾಮಕಾರಿ ಲಾಜಿಸ್ಟಿಕ್ಸ್ ಮತ್ತು ಸಂಗ್ರಹಣೆಗಾಗಿ ರಾಜ್ಯಗಳು ಎದುರಿಸುತ್ತಿರುವ ಅಡಚಣೆಗಳಿಂದಾಗಿ ಎನ್‍ಎಫ್‍ಎಸ್‍ಎ ಅಡಿಯಲ್ಲಿ ಮೇ ಮತ್ತು ಜೂನ್-2026 ರ ಎರಡು ಮಾಹೆಗಳ ಅಹಾರಧಾನ್ಯ ಹಂಚಿಕೆಯನ್ನು ಮುಂಗಡವಾಗಿ ಎತ್ತುವಳಿ ಮಾಡಿ ಕೂಡಲೇ ವಿತರಣೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ. ಪ್ರಯುಕ್ತ ಮೇ-2026 ಮತ್ತು ಜೂನ್-2026 ರ ಎರಡು ಮಾಹೆಗಳ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‍ಎಫ್‍ಎಸ್) ಹಂಚಿಕೆಯನ್ನು ಮೇ-2026 ರ ಮಾಹೆಯಲ್ಲಿ ವಿತರಿಸಲು ಸರ್ಕಾರವು ನಿರ್ದೇಶನ ನೀಡಿರುತ್ತದೆ. ಪ್ರಯುಕ್ತ ಕೊಡಗು ಜಿಲ್ಲೆಯ ಪ್ರತಿ ಅಂತ್ಯೋದಯ (ಎಎವೈ) ಪಡಿತರ ಚೀಟಿಗೆ 70 ಕೆ.ಜಿ (ಮೇ-35 + ಜೂನ್-35) ಅಕ್ಕಿ ಮತ್ತು ಪಿ.ಹೆಚ್.ಹೆಚ್ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 10 ಕೆ.ಜಿ (ಮೇ-5 + ಜೂನ್-5) ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಮೇ ಮತ್ತು ಜೂನ್ 2026 ರ ಎರಡು ಮಾಹೆಗಳ ಆಹಾರಧಾನ್ಯವನ್ನು ಮೇ-2026ರ ಮಾಹೆಯಲ್ಲಿಯೇ ಒಟ್ಟಿಗೆ ವಿತರಣೆ…
ಮಡಿಕೇರಿ ಮೇ 14 NEWS DESK : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2026-27ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ತರಬೇತಿ ಪಡೆಯಲು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 2 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು, ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು.…
ನಾಪೋಕ್ಲು ಮೇ 14 NEWS DESK : ಮಡಿಕೇರಿ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರನ್ನು ಗೌರವ ಪೂರ್ವಾಕವಾಗಿ ಆಹ್ವಾನಿಸಲಾಯಿತು. ಮಡಿಕೇರಿ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ನಾಪೋಕ್ಲು ಹೋಬಳಿಯ ಕಡಂಗ ಅರಪಟ್ಟು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 20 ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಆಯ್ಕೆಯಾಗಿದ್ದು ಅವರನ್ನು ಗುರುವಾರ ಮೈಸೂರಿನ ಅವರ ನಿವಾಸದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂಪಿ ಕೇಶವ ಕಾಮತ್ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಹಾಗೂ ಸಮ್ಮೇಳನದ ಉಪ ಸಮಿತಿಯ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಭೇಟಿಯಾಗಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲು ಮನವಿ ಮಾಡಿ ಶಾಲು ಹೊದಿಸಿ ಫಲ ತಾಂಬೂಲ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಿದರು. ಮನವಿಯನ್ನು ಮಾನ್ಯ ಮಾಡಿ ಗೌರವ ಸ್ವೀಕರಿಸಿದ…
ಮಡಿಕೇರಿ NEWS DESK ಮೇ 14 : ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ಘೋಷಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 53 ಗಂಟೆಗಳ ಸತ್ಯಾಗ್ರಹವನ್ನು ಪೂರ್ಣಗೊಳಿಸಿತು. ನಗರದ ಕೊಡವ ಮಂದ್ ನಲ್ಲಿ ಸತ್ಯಾಗ್ರಹ ನಡೆಸಿದ ಸಿಎನ್‌ಸಿ ತನ್ನ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಿತು. ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಶಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು. ಹೈಕೋರ್ಟ್ ವಕೀಲ ಕಿರಣ್ ನಾರಾಯಣ್ ಅವರು ಕೂಡ ಸತ್ಯಾಗ್ರಹ ನಿರತರನ್ನು ಭೇಟಿಯಾಗಿ ಚರ್ಚಿಸಿದರು. ಖ್ಯಾತ ಅರ್ಥಶಾಸ್ತçಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಎನ್.ಯು.ನಾಚಪ್ಪ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬೇಡಿಕೆಯ ಬಗ್ಗೆ ಮನವರಿಕೆ ಮಾಡಿಕೊಂಡರು. ಕಳೆದ 36 ವರ್ಷಗಳಿಂದ ಭೌಗೋಳಿಕ ಸ್ವಾಯತ್ತತೆ, ಸ್ವಯಂ ಆಡಳಿತ ಮತ್ತು ಮೂಲನಿವಾಸಿ ಏಕ-ಜನಾಂಗೀಯ ಪ್ರಕೃತಿ ಆರಾಧಕ ಕೊಡವರಿಗೆ ಪರಿಶಿಷ್ಟ ಪಂಗಡ ಸ್ಥಾನಮಾನಕ್ಕಾಗಿ ಒತ್ತಾಯಿಸಿ ಸಿಎನ್‌ಸಿ ನಿರಂತರ ಶಾಂತಿಯುತ ಹೋರಾಟವನ್ನು…
ಸೋಮವಾರಪೇಟೆ ಮೇ 14 NEWS DESK : ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯ 2026ರಲ್ಲಿ ಪ್ರಕಟಿಸಿರುವ ಎಂ.ಡಿ ಸ್ನಾತಕೋತ್ತರ ಆಯುರ್ವೇದ ಪದವಿ ಪರೀಕ್ಷೆಯ ಫಲಿತಾಂಶದಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿ ಡಾ. ಎಂ.ಪಿ.ಸೋನಿಯಾ ಅಗದ ತಂತ್ರ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಡಾ. ಎಂ.ಪಿ.ಸೋನಿಯಾ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯ ಸುಬ್ರಾಯಿಗೌಡರ ಮೊಮ್ಮಗಳಾಗಿದ್ದು, ಮೂದರವಳ್ಳಿ ಗ್ರಾಮದ ಎಂ.ಎಸ್ ಪುಟ್ಟೇಗೌಡ ಹಾಗೂ ಶಿಕ್ಷಕಿ ಎ.ಎಸ್.ಸೌಭಾಗ್ಯ ದಂಪತಿಯ ಪುತ್ರಿ.
ಮಡಿಕೇರಿ ಮೇ 14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ವತಿಯಿಂದ ಇಲಾಖಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೆಂಡರ್ ಸ್ಪೆಷಲೀಸ್ಟ್ ಕೇಶಿನಿ ಎಸ್.ಆರ್ ಅವರು ಕಾರ್ಯ ಉದ್ಘಾಟಸಿ ಮಾತನಾಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕವು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಅವರಿಗೆ ರಕ್ಷಣೆ, ಭದ್ರತೆ ಒದಗಿಸಲು ಇರುವ ಯೋಜನಾ ಘಟಕವಾಗಿದ್ದು, ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್‍ಗೆ ಭೇಟಿ ನೀಡಿ ದೂರನ್ನು ಸಲ್ಲಿಸಬಹುದು. ಇಲ್ಲ 24*7 ಕರ್ತವ್ಯ ನಿರ್ವಹಿಸುತ್ತಿದ್ದು, ತುರ್ತು ರಕ್ಷಣೆ ಮತ್ತು ಆಶ್ರಯ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ,…
ಮಡಿಕೇರಿ ಮೇ 14 NEWS DESK : ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಯು, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಕರ್ನಾಟಕ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಾಗಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ(ಕೆಎಸ್‍ಎಪಿಸಿಸಿ)ಯನ್ನು ಸಿದ್ಧಪಡಿಸಿ 2024ರಲ್ಲಿ ಕೇಂದ್ರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮೋದನೆ ಪಡೆದಿದೆ. ಈ ಯೋಜನೆಯಡಿಯಲ್ಲಿ ಹವಾಮಾನ ಬದಲಾವಣೆಯ ಕುರಿತ ಕಾರ್ಯ ಅಂಶಗಳನ್ನು ಆಧರಿಸಿ, ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳನ್ನು ಗುರಿಗಳೊಂದಿಗೆ ನಿಗದಿಪಡಿಸಿವೆ. ಈ ಸೂಚಕಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಪಾಲುದಾರ ಸಂಸ್ಥೆಗಳ ಸಾಮಥ್ರ್ಯ ವೃದ್ಧಿ ಅತ್ಯವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ, ಎಂಪ್ರಿ ಸಂಸ್ಥೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ಇದರ ಮುಂದುವರಿದ ಭಾಗವಾಗಿ, 2026-27ನೇ…
ಮಡಿಕೇರಿ NEWS DESK ಮೇ 14 : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮೇ 15 ರಂದು ನಗರದ ವಿವಿಧ ವಾರ್ಡ್ ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ವಾರ್ಡ್ ಸಂಖ್ಯೆ 22 ಬ್ಲಾಕ್ ಸಂಖ್ಯೆ 16ರಲ್ಲಿ ರೋಶ್ನಿ ಕಾವೇರಪ್ಪ ಅವರ ಮನೆಯ ಮುಂಭಾಗ ತಡಗೋಡೆ ಕಾಮಗಾರಿ, ವಾರ್ಡ್ ಸಂಖ್ಯೆ 15 ಬ್ಲಾಕ್ ಸಂಖ್ಯೆ 13 ರಲ್ಲಿ ರೆಡ್ ಫರ್ನ್ ಬಳಿ ತಡಗೋಡೆ ನಿರ್ಮಾಣ, ಕ್ರಿಸ್ಟಲ್ ಹಾಲ್ ಮುಂಭಾಗ ಹಾದು ಹೋಗುವ ರಸ್ತೆ ಅಭಿವೃದ್ಧಿ, ಕೊಡವ ರುದ್ರಭೂಮಿಗೆ ಹೋಗುವ ರಸ್ತೆ, ಗೌಡ ಸಮಾಜದಿಂದ ಚೈನ್‌ಗೇಟ್ ರಸ್ತೆ, ಜ್ಯೂನಿಯರ್ ಕಾಲೇಜ್ ನಿಂದ ಮೇಲಿನ ಗೌಡಸಮಾಜ ರಸ್ತೆ, ಸಂಪಿಗೆಕಟ್ಟೆಯಿAದ ಮಹದೇವಪೇಟೆ ರಸ್ತೆ, ಅಬ್ಬಿಫಾಲ್ಸ್ ರಸ್ತೆ, ಸಂತ ಜೋಸೆಫರ ಶಾಲೆಗೆ ಹೋಗುವ ರಸ್ತೆ, ಗ್ರಾಮಾಂತರ ಪೋಲಿಸ್ ಠಾಣೆ ಮುಂಭಾಗ ಮೋರಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿಗಳಾದ…
ಮಡಿಕೇರಿ NEWS DESK ಮೇ 14 : ವಿರಾಜಪೇಟೆ ಬ್ಲಾಕ್ ಮತ್ತು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ನ ವಲಯಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನ ಚೆನ್ನಯ್ಯನ ಕೋಟೆ ವಲಯಾಧ್ಯಕ್ಷರಾಗಿ ಹೆಚ್.ಸಿ.ಮನು, ಅಮ್ಮತ್ತಿ ಕೆ.ಎನ್.ರಾಜನ್, ಕಾರ್ಮಾಡು ಪಳಿಯತಂಡ ಡಿ.ಹರಿ, ಕಣ್ಣಂಗಾಲ ಮಚ್ಚಾರಂಡ ಎಂ.ಕಿರಣ್, ಕಾಕೋಟುಪರಂಬು ಬಟ್ಟಕಾಳಂಡ ರಾಜ ದಿನೇಶ್, ಬಿಳಗುಂದ ನೌಫಲ್ ಹೆಚ್.ಎಂ ಹಾಗೂ ವಿರಾಜಪೇಟೆ ವಲಯಾಧ್ಯಕ್ಷರಾಗಿ ಮಾಳೇಟಿರ ಬೋಪಣ್ಣ ನೇಮಕಗೊಂಡಿದ್ದಾರೆ. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ನ ಸಂಪಾಜೆ ವಲಯಾಧ್ಯಕ್ಷರಾಗಿ ವಿಜಯ್ ಕುಮಾರ್, ಕುಂದಚೇರಿ ಕೀರ್ತಿ ಉತ್ತಪ್ಪ, ಅಯ್ಯಂಗೇರಿ ಅಬ್ದುಲ್ ರೆಹಮಾನ್, ಹಾಕತ್ತೂರು ಬಿ.ಕೆ.ನಾರಾಯಣ, ಎಮ್ಮೆಮಾಡು ಕೆ.ಎಂ.ಮೂಸ, ಬಲ್ಲಮಾವಟಿ ಮಣವಟ್ಟಿರ ದಯಾ ಕುಟ್ಟಪ್ಪ, ಮದೆ ದೀಪಕ್ ಎಂ.ಎ, ಮೇಕೇರಿ ಪೊನ್ನಪ್ಪ ಹಾಗೂ ಕರಿಕೆ ವಲಯಾಧ್ಯಕ್ಷರಾಗಿ ಬೇಕಲ್ ಹರಿ ಪ್ರಸಾದ್ ನೇಮಕಗೊಂಡಿದ್ದಾರೆ. ಇತರ ವಲಯ ಅಧ್ಯಕ್ಷರುಗಳು ಯಥಾ ರೀತಿಯಲ್ಲಿ ಮುಂದುವರಿಯಲಿದ್ದಾರೆ…






