ಲೇಖಕ: admin

ಬೆಂಗಳೂರು ನ.23: ಉಸ್ತುವಾರಿ ಸಚಿವರ ಆಪ್ತಸಹಾಯಕರು ಅಥವಾ ಕಚೇರಿ ಹೆಸರಿನಲ್ಲಿ ಹಣ ಕೇಳುವವರ ವಿರುದ್ದ ದೂರು ದಾಖಲಿಸಿ ತನಿಖೆ ನಡೆಸುವಂತೆ  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು  ಕೊಡುಗು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಸೂಚನೆ ನೀಡಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ್ ತಿಳಿಸಿದ್ದಾರೆ. ಆಪ್ತ ಸಹಾಯಕರ ಸೋಗಿನಲ್ಲಿ ಅಧಿಕಾರಿಗೆ ಹಣಕ್ಕೆ ಬೇಡಿಕೆಯಿಟ್ಟಿರುವ ಪ್ರಕರಣದ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಯಾರೇ ಹಣಕ್ಕೆ ಬೇಡಿಕೆಯಿಡುವ ಪ್ರಕರಣ ಕಂಡಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಬೇಕು. ಹಾಗೆಯೇ, ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಪ್ರಕರಣಗಳ ಬಗ್ಗೆ ಯಾವುದೇ ಹಿಂಜರಿಕೆಯಿಲ್ಲದೆ ಪೊಲೀಸರಿಗೆ ದೂರು ನೀಡಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದು, ಈ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ನೀಡುವಂತೆಯೂ ಮನವಿ ಮಾಡಿದ್ದಾರೆ.

Read More

ಮಡಿಕೇರಿ ನ.23 : 2023 ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯು ಜಿಲ್ಲಾ ಮಟ್ಟದಲ್ಲಿ ಡಿ.3 ರಂದು ಆಚರಿಸುವ ಸಲುವಾಗಿ ಜಿಲ್ಲೆಯ ಮೂರು ತಾಲ್ಲೂಕುಗಳ ವಿಶೇಷಚೇತನರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನ.24 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪ ದಸರಾ ಮೈದಾನ, ನ.29 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನ ಮತ್ತು ನ.29 ರಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಜಿಲ್ಲೆಯ ಎಲ್ಲಾ ವಿಶೇಷ ಚೇತನರು ಆಯಾಯ ತಾಲ್ಲೂಕುಗಳಲ್ಲಿ ಹಮ್ಮಿಕೊಂಡಿರುವ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಾಗೂ ಡಿ.3 ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿನಾಚರಣೆಯನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಕೋರಿದ್ದಾರೆ.

Read More

ಮಡಿಕೇರಿ ನ.23 : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ವಿಧಾನಸಭೆಯ ಮಾಜಿ ಸಭಾಧ್ಯಕ್ಷ  ಕೆ.ಜಿ.ಬೋಪಯ್ಯ ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆ ನಿಟ್ಟಿನಲ್ಲಿ ಸಂವಿಧಾನದ ಆಶಯದಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಕಾರ್ಯ ನಿರ್ವಹಿಸಬೇಕು ಎಂದರು. ಅಧಿವೇಶನದ ಜವಾಬ್ದಾರಿ ಸಭಾಧ್ಯಕ್ಷರ ಮೇಲಿರುತ್ತದೆ. ಅಧಿವೇಶನದಲ್ಲಿ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತವೆ. ಒಟ್ಟಾರೆ ಸಮಾಜಮುಖಿಯಾಗಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಉತ್ತಮ ಸಂಸದೀಯ ಪಟುಗಳಾಗಿ ಯುವ ಪೀಳಿಗೆ ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಎ.ಪಿ.ಧನಂಜಯ್ ಮಾತನಾಡಿ ದೇಶ ಕಟ್ಟುವ ನಿಟ್ಟಿನಲ್ಲಿ ಯುವ ಪೀಳಿಗೆಗಾಗಿ ಇಂತಹ ಪ್ರಯತ್ನ ಶ್ಲಾಘನೀಯ. ಸರ್ಕಾರದ ಪಾತ್ರ, ಕಾನೂನಿನ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

Read More

ಮಡಿಕೇರಿ ನ.23 : ಜಿಲ್ಲೆಯಲ್ಲಿ ಮಕ್ಕಳಲ್ಲಿನ ರಕ್ತಹೀನತೆ ತಡೆಯುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ `ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಅಭಿಯಾನ’ ಕಾರ್ಯಕ್ರಮಕ್ಕೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 10,359 ಪದವಿ ಪೂರ್ವ ಕಾಲೇಜಿನ ಮಕ್ಕಳನ್ನು ಪ್ರಥಮ ಹಂತದಲ್ಲಿ ಪರೀಕ್ಷಿಸಿ, ರಕ್ತಹೀನತೆ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಅಗತ್ಯ ಮಾತ್ರೆ ಹಾಗೂ ಔಷಧಿಯನ್ನು ನಿಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲೆಯಾದ್ಯಾಂತ ಮೊದಲ ಹಂತವಾಗಿ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಮಕ್ಕಳ ರಕ್ತಹೀನತೆ ತಪಾಸಣೆಯನ್ನು ನಡೆಸಿ ಪೂರಕ ಮತ್ತು ಚಿಕಿತ್ಸಾತ್ಮಕವಾಗಿ ಐಎಫ್‍ಎ-ಪಿಂಕ್ ಮತ್ತು ಬ್ಲೂ ಮಾತ್ರೆಗಳನ್ನು ನೀಡಿ ಎಲ್ಲಾ ಮಕ್ಕಳನ್ನು ಅನೀಮಿಯಾ ತಡೆಯುವ ಉದ್ದೇಶದಿಂದ ಆರೋಗ್ಯ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ವಿದ್ಯಾರ್ಥಿಗಳಲ್ಲಿ ಅನೀಮಿಯದಿಂದಾಗುವ ಸುಸ್ತು, ಬೆಳವಣಿಗೆಯಲ್ಲಿ…

Read More

ಮಡಿಕೇರಿ ನ.23 : ನಗರದ ಮೈಸೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ `ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನ’ ಕಾಮಗಾರಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ವೀಕ್ಷಿಸಿದರು. ಈಗಾಗಲೇ ಕಾಮಗಾರಿ ತುಂಬಾ ವಿಳಂಬವಾಗಿದ್ದು, ಆದಷ್ಟು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಕಾಮಗಾರಿ ಪೂರ್ಣಗೊಂಡ ನಂತರ ಬಾಕಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ ಅವರು ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನದ ತಳ ಮಹಡಿಯಲ್ಲಿ ಕೊಡವ ಮತ್ತು ಅರೆಭಾಷೆ ಅಕಾಡೆಮಿ ಕಚೇರಿಗಳು, ಗ್ರಂಥಾಲಯ, ವಾಹನ ನಿಲುಗಡೆ, ನೆಲಮಹಡಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಮತ್ತು ಗ್ರಂಥಾಲಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಮತ್ತು ರಿಜಿಸ್ಟ್ರಾರ್‍ಗಳ ಕಚೇರಿ, ಮೊದಲ ಮಹಡಿಯಲ್ಲಿ ವೇದಿಕೆ ಸಭಾಂಗಣ, ಎರಡನೇ ಮಹಡಿಯಲ್ಲಿ ಡಾರ್ಮೆಟ್ರರಿ ಒಳಗೊಂಡಿದೆ ಎಂದು ಮಾಹಿತಿ ನೀಡಿದರು. ಸಹಾಯಕ ಎಂಜಿನಿಯರ್ ಸತೀಶ್, ಕಾಮಗಾರಿ ಸಂಬಂಧಿಸಿದಂತೆ…

Read More

ಮಡಿಕೇರಿ ನ.23 : ಬರ ಪರಿಹಾರವಾಗಿ ಕೊಡಗು ಜಿಲ್ಲೆಗೆ ರಾಜ್ಯ ಸರ್ಕಾರ 200 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಮಳೆಯ ಕೊರತೆಯಿಂದ ರಾಜ್ಯವ್ಯಾಪಿ ಬರದ ಛಾಯೆ ಮೂಡಿದೆ. ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರಪೀಡಿತವೆಂದು ಘೋಷಣೆಯಾಗಿದೆ. ಆದರೆ ಸರ್ಕಾರ ಬರ ಪರಿಹಾರ ನೀಡುವ ಕಾಳಜಿಯನ್ನು ತೋರುತ್ತಿಲ್ಲವೆಂದು ಟೀಕಿಸಿದ್ದಾರೆ. ಸಕಾಲದಲ್ಲಿ ಮಳೆ ಬಾರದೆ ಭತ್ತದ ಕೃಷಿಗೆ ಹಿನ್ನಡೆಯಾಗಿದೆ, ಸೆಪ್ಟಂಬರ್ ತಿಂಗಳಿನಲ್ಲಿ ಸುರಿದ ಮಳೆಯಿಂದ ಕೃಷಿ ಫಸಲು ಮತ್ತು ಕಾಫಿ ನಷ್ಟವಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದ್ದು, ಕೃಷಿಕ ವರ್ಗ ಆತಂಕಕ್ಕೆ ಒಳಗಾಗಿದೆ. ರೈತರ ಒತ್ತಾಯದ ಹಿನ್ನೆಲೆ ರಾಜ್ಯ ಸರ್ಕಾರ ಕೊಡಗು ಜಿಲ್ಲೆಗೆ ಕೇವಲ 7.5ಕೋಟಿ ರೂ. ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿರುವ 2 ಲಕ್ಷಕ್ಕೂ ಅಧಿಕ ಕೃಷಿಕರಿಗೆ ಈ ಹಣವನ್ನು ಹಂಚಿಕೆ ಮಾಡಿದರೆ ತಲಾ 300 ರೂ. ಮಾತ್ರ…

Read More

ಮಡಿಕೇರಿ ನ.23 : ಸಂಘಟಿತರಾಗುವುದರಿಂದ ಅಗತ್ಯ ಸೌಲಭ್ಯಗಳನ್ನು ಸಹಕಾರಿಯಾಗುವುದಲ್ಲದೇ, ಬಹುಕಾಲದ ಬೇಡಿಕೆಗಳ ಈಡೇರಿಕೆ ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿಮತ ವ್ಯಕ್ತಪಡಿಸಿದರು. ನಗರದ ಮೈತ್ರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನಿಂದ ಹೆಚ್ಚಿನ ಪೊಲೀಸ್ ಅಧಿಕಾರಿಗಳು ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ಬಳಿಕ ಪೊಲೀಸರು ಸುಗಮ ಜೀವನ ನಡೆಸವಂತಾಗಬೇಕು. ಸರಕಾರದ ಸೌಲಭ್ಯಸುಲಭವಾಗಿ ದೊರೆಯಬೇಕಾದರೆ ಸಂಘಟನಾತ್ಮಕ ಚಟುವಟಿಕೆ ಮುಖ್ಯವಾಗಿತ್ತದೆ. ಸಂಘ ಉತ್ತಮವಾಗಿ ಮುನ್ನಡೆಯುತ್ತಿದೆ ಎಂದು ಶ್ಲಾಘಿಸಿದ ಅವರು, ಸಂಘದ ಚಟುವಟಿಕೆಗೆ ಪೂರಕ ಸಹಕಾರ ನೀಡುತ್ತೇನೆ. ಮೈತ್ರಿ ಭವನ ದುರಸ್ತಿ ಕಾರ್ಯಕ್ಕೆ ಶೀಘ್ರದಲ್ಲಿ ಮುಂದಾಗಲಾಗುವುದು. ಇದರಿಂದ ಆರ್ಥಿಕ ಕ್ರೋಡಿಕರಣಕ್ಕೆ ಸಹಕಾರಿಯಾಗಲಿದೆ ಎಂದರು. ಧ್ವಜ ದಿನಾಚರಣೆಯಡಿ ಸಂಗ್ರಹಿಸಿದ ಶುಲ್ಕ ಕಳೆದ ಬಾರಿಗಿಂತ ಶೇ.50ರಷ್ಟು ಹೆಚ್ಚಿದೆ. ಜಿಲ್ಲಾ ಪೊಲೀಸ್ ಇಲಾಖೆಗೂ ನಿವೃತ್ತ ಪೊಲೀಸರ ಮಾರ್ಗದರ್ಶನವಿದೆ. ಕಾಲಕಾಲಕ್ಕೆ ಸರಿಯಾದ ಸಲಹೆ ನೀಡುತ್ತ ವೃತ್ತಿಯಲ್ಲಿರುವ ಪೊಲೀಸರನ್ನು ಜಾಗೃತಗೊಳಿಸುತ್ತಿದ್ದಾರೆ. ನಿವೃತ್ತ ಪೊಲೀಸರಿಗೆ ವಿಮೆ ಯೋಜನೆ ಜಾರಿ ಸಂಬಂಧ ಸರಕಾರದ…

Read More

ಮಡಿಕೇರಿ ನ.23 : ಒಂದು ಗ್ರಾಮದಲ್ಲಿ ಒಂದು ಸಹಕಾರ ಸಂಘ ಸ್ಥಾಪನೆಯಾಗಬೇಕೆಂಬುದು ಸರ್ಕಾರದ ಆಶಯವಾಗಿದ್ದು, ಆ ಮೂಲಕ ಸ್ಥಳೀಯ ರೈತರಿಗೆ ಗೊಬ್ಬರ, ಉತ್ಪನ್ನಗಳಿಗೆ ಗೋದಾಮು, ಶಿಕ್ಷಣ ನೀಡುವಂತಹ ಕಾರ್ಯಗಳನ್ನು ಕೈಗೊಂಡು ರೈತರ ಆರ್ಥಿಕತೆಯನ್ನು ವೃದ್ಧಿಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಕರಿಕೆ ಸಹಕಾರ ಸಂಘದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಸಹಕಾರ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದೆ ಕೊಡಗು ಜಿಲ್ಲೆಯ ಕರಿಕೆ ಭಾಗದಲ್ಲಿ ಅಪ್ಪಿಕೊ ಚಳುವಳಿಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕರಿಕೆ ಪ್ಯಾಕ್ಸ್‍ನ ಸಣ್ಣ ಕೊಠಡಿಯಲ್ಲಿ ಉಳಿದುಕೊಂಡು…

Read More

ಮಡಿಕೇರಿ ನ.23 : ಕನಕದಾಸರ ಜಯಂತಿಯನ್ನು ನ.30 ರಂದು ಜಿಲ್ಲಾಡಳಿತ ವತಿಯಿಂದ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯ ಗಾಂಧಿ ಭವನದಲ್ಲಿ ಕನಕದಾಸರ ಜಯಂತಿಯನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಯಿತು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಉಪನ್ಯಾಸಕರ ಹೆಸರನ್ನು ತಿಳಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಕನಕ ಗುರುಪೀಠ ಮತ್ತು ಧರ್ಮದರ್ಶಿ ಎಂ.ನಂಜುಂಡಸ್ವಾಮಿ, ಕೊಡಗು ಜಿಲ್ಲಾ ಕೇಂದ್ರದಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸುವಂತಾಗಬೇಕು ಎಂದು ಮನವಿ ಮಾಡಿದರು. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುರುಬ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 25 ಸೆಂಟು ಜಾಗ ಗುರುತಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಅವರು ಜನವರಿ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ…

Read More

ಮಡಿಕೇರಿ ನ.23 : ವಿರಾಜಪೇಟೆ ರೋಟರಿ ಸಂಸ್ಥೆಯ ವತಿಯಿಂದ ನಡೆದ ವಿಜ್ಞಾನ ಮಾದರಿ ತಯಾರಿಕ ಸ್ಪರ್ಧೆಯಲ್ಲಿ ರೋಟರಿ ಪ್ರಾಥಮಿಕ ಶಾಲೆ ವಿರಾಜಪೇಟೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ಏಳನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯಸ್, ಲಿಖಿತ, ಎಬಿನ್, ಶ್ರೇಷ್ಠ, ತನ್ ಜಿಮ್ ಭೂಕಂಪದ ಎಚ್ಚರಿಕಾ ಯಂತ್ರವನ್ನು ಸಿದ್ದಪಡಿಸಿ ಪ್ರಥಮ ಬಹುಮಾನ ಪಡೆದುಕೊಂಡರು. ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯರಾದ ವಿಶಾಲಾಕ್ಷಿ, ಶಿಕ್ಷಕರು ಹಾಗೂ ಪೋಷಕರು ಹಾರೈಸಿದ್ದಾರೆ.

Read More