ಲೇಖಕ: admin

ಮಡಿಕೇರಿ ನ.23 : ಮಾಯಮುಡಿ ಗ್ರಾಮ ಪಂಚಾಯತ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮುದಾಯ ಹಾಗೂ ಅಕ್ಷರ ಪೌಂಡೇಶನ್ ವತಿಯಿಂದ ಗ್ರಾ.ಪಂ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ನಡೆಯಿತು. ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಾವು ಸ್ಪರ್ಧಾತ್ಮಕ ಯುಗದಲ್ಲಿದ್ದು, ಮಕ್ಕಳು ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು. ಕಷ್ಟಪಟ್ಟು ಓದುವುದರಿಂದ ಯಾವುದೇ ಪ್ರಯೋಜನವಿಲ್ಲ, ಇಷ್ಟಪಟ್ಟು ಓದಿ ಗುರಿಯನ್ನು ತಲುಪಬೇಕು ಮತ್ತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲಕೋಡ್ ಶಾಲಾ ಮುಖ್ಯೋಪಾದ್ಯಾಯರಾದ ಸೋಪಿಯಾ, ಪರೀಕ್ಷಾ ಮಾರ್ಗದರ್ಶಕರಾದ ಅದೇಂಗಡ ಶೋಭಾ, ಶಿಕ್ಷಕರಾದ ಡಿ.ಯು.ರಾಗಿಣಿ, ಸುಮಿತ ರವಿ, ನಳಿನಿ, ಎಂ.ಟಿ.ಸತ್ಯ, ಪಿ.ವಿ.ಲಾಯ್ದ, ಎಂ.ಕೆ.ಲೀಲ ಉಪಸ್ಥಿತರಿದ್ದರು. ಗಣಿತ ಸ್ಪರ್ಧೆಯಲ್ಲಿ ರುದ್ರಬೀಡು ಹಿರಿಯ ಪ್ರಾಥಮಿಕ ಶಾಲೆ, ಚನ್ನಂಗೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. :::…

Read More

ಮಡಿಕೇರಿ ನ.23 : ಮಾಯಮುಡಿ ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಳ್ಳಲಿರುವ 5.20ಲಕ್ಷ ರೂ. ವೆಚ್ಚದ ಶೌಚಾಲಯ ಕಾಮಗಾರಿಗೆ ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಚಾಲನೆ ನೀಡಿದರು. ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣಗೊಳ್ಳುತ್ತಿದ್ದು, ಟಾಟು ಮೊಣ್ಣಪ್ಪ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶುಚಿತ್ವಕ್ಕೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲಕೋಡ್, ನರೇಗ ಅಭಿಯಂತರ ಗಣೇಶ್, ಗ್ರಾ.ಪಂ ಉಪಾಧ್ಯಕ್ಷೆ ಪಿ.ಎಸ್.ಶಾಂತ, ಸದಸ್ಯರುಗಳಾದ ಹೆಚ್.ಆರ್.ಸುಶೀಲ, ಜೆ.ಸುಮಿತ್ರ ಬಸವಣ್ಣ, ಸಿ.ಕೆ.ಪೂವಯ್ಯ, ಪಿ.ಮುತ್ತಮ್ಮ, ಶಾಲಾ ಮುಖ್ಯೋಪಾಧ್ಯಾಯರಾದ ವಾಣಿ ನಾಚಪ್ಪ, ಗುತ್ತಿಗೆದಾರರಾದ ಕಾಚುಮ ಖದೀಜ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.22 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 2009 ರಿಂದ ಇಲ್ಲಿಯವರೆಗೆ 2563 ಹೆಚ್‍ಐವಿ ಸೋಂಕಿತರನ್ನು ಗುರುತಿಸಲಾಗಿದೆ. ಸೋಂಕನ್ನು 2025ರ ಒಳಗಾಗಿ ಶೂನ್ಯಕ್ಕೆ ಇಳಿಸುವ ನಿಟ್ಟಿನ ಗುರಿ ಸರ್ಕಾರದ್ದಾಗಿದೆ. ಈ ಬಾರಿ ಡಿ.1 ರಂದು ‘ಸಮುದಾಯಗಳು ಮುನ್ನಡೆಸಲಿ’ ಎನ್ನುವ ಘೋಷ ವಾಕ್ಯದೊಂದಿಗೆ ‘ವಿಶ್ವ ಏಡ್ಸ್ ದಿನ-2023’ನ್ನು ಆಚರಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.1 ಎಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಜಾಥ, ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ::: 657 ಸಾವು ::: ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ನಿಯಂತ್ರಣಾಧಿಕಾರಿ ಡಾ.ಆನಂದ್ ಮಾತನಾಡಿ, ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದಲ್ಲಿ ಕೊಡಗಿನಲ್ಲಿ ಹೆಚ್‍ಐವಿ ಸೋಂಕು ಮತ್ತು ಏಡ್ಸ್ ನಿಯಂತ್ರಣದಲ್ಲಿದ್ದು, ಸೋಂಕಿತರಿಗೆ ಅಗತ್ಯ ಚಿಕಿತ್ಸೆಗಳನ್ನು ಒದಗಿಸಲಾಗುತ್ತಿದೆ ಎಂದು…

Read More

ಮಡಿಕೇರಿ ನ.22 : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪೊ ನ್ನಂಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ನಡೆದಿದೆ. ಕೋತೂರು ಗ್ರಾಮದ ನಿವಾಸಿ ಶಶಿ(23) ಮೃತ ದುರ್ದೈವಿಯಾಗಿದ್ದಾರೆ. ಬೋಸ್ ಮಂದಣ್ಣ ಎಂಬುವವರಿಗೆ ಸೇರಿದ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಗಾಯಾಳು ಶಶಿಯನ್ನು ಗೋಣಿಕೊಪ್ಪ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪೊನ್ನಂಪೇಟೆ ಕಡೆಯಿಂದ ಬಾಳೆಲೆಗೆ ಹೋಗುತ್ತಿದ ಬೈಕ್ ಹಾಗೂ ಬಾಳೆಲೆಯಿಂದ ಪೊನ್ನಂಪೇಟೆ ಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿತು. ಸ್ಥಳಕ್ಕೆ ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್ ಹಾಗೂ ಪೊನ್ನಂಪೇಟೆ ಪೊಲೀಸ್ ಠಾಣಾಧಿಕಾರಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ವಿರಾಜಪೇಟೆ ನ.22 : ವಿರಾಜಪೇಟೆ ಮಾಜಿ ಸೈನಿಕರ ಸಂಘದ ವತಿಯಿಂದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಶಾಸಕರ ಕಚೇರಿಗೆ ಭೇಟಿ ನೀಡಿದ ಸಂಘದ ಪದಾಧಿಕಾರಿಗಳು, ಶಾಲು ಹೊದಿಸಿ, ಸನ್ಮಾನಿಸಿ ಗೌರವಿಸಿದರು. ಈ ಹಿಂದೆ ಸರಕಾರ ಕೊಡಗಿನ ಮಾಜಿ ಸೈನಿಕರಿಗೆ ಜಾಗ ಮಂಜೂರು ಮಾಡಿದ್ದರೂ ಇದುವರೆಗು ಜಿಲ್ಲಾಧಿಕಾರಿಗಳು ಜಾಗವನ್ನು ಮಾಜಿ ಸೈನಿಕರಿಗೆ ಹಸ್ತಾಂತಿಸಿರುವುದಿಲ್ಲ. ಈ ಸಂಬಂಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮಾಜಿ ಸೈನಿಕರು ಶಾಸಕರಿಗೆ ಮನವಿ ಸಲ್ಲಿಸಿದರು. ಸನ್ಮಾನ ಸ್ವಿಕರಿಸಿದ ಮಾತನಾಡಿದ ಶಾಸಕ ಪೊನ್ನಣ್ಣ, ಮಾಜಿ ಸೈನಿಕರಿಗೆ ಜಾಗದ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮೇ.ಜ. ಕಾರ್ಯಪ್ಪ, ಮೇ.ಚಿಂಗಪ್ಪ, ವಿರಾಜಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರಿಶ್, ಸಂಘದ ಸದಸ್ಯರಾದ ಕೊಂಗಂಡ ಭೀಮಯ್ಯ, ಪಟ್ರಪಂಡ ಕರುಂಬಯ್ಯ ಹಾಗೂ ಸೋಮೇಶ್, ತೊರೇರ ರಾಜ ಪೂವಯ್ಯ, ಸುಬ್ಬಯ್ಯ, ಮತ್ತು ಟಿ,ಶೆಟ್ಟಿಗೇರಿ ಸಂಘದ ಆಡಳಿತ ಮಂಡಳಿ ಸದಸ್ಯರು ಮನವಿ ನೀಡುವ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ನ.22 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ನವೆಂಬರ್, 23 ರಂದು ಮಧ್ಯಾಹ್ನ 2.30 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.

Read More

ಮಡಿಕೇರಿ ನ.22 : ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ನ.23 ರಂದು  ನಿರಂತರ ಕಲಿಕಾ ಕಾಯಾ೯ಗಾರ ಮತ್ತು ಔಷಧಿ ಕ್ಷೇತ್ರದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತಂತೆ ವಿಚಾರಗೋಷ್ಠಿ  ನಡೆಯಲಿದೆ. ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು  ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ. ವಿಚಾರಗೋಷ್ಟಿಯಲ್ಲಿ ಮೈಸೂರು ವೖತ್ತದ ಉಪಔಷಧ ನಿಯಂತ್ರಕ ಬಿ.ಪಿ. ಅರುಣ್, ಕೊಡಗು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಗುರುನಾಥ್ ಮಾಗಣಗೇರಿ, ಜಿಲ್ಲಾ ಕಾಮಿ೯ಕ ಅಧಿಕಾರಿ ಎಸ್.ಎಲ್.ಹಷ೯ವಧ೯ನ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ. ಅನಿಲ್ ಧವನ್, ಕೊಡಗು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಆನಂದ್, ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾನೂನು ಸಲಹೆಗಾರಕೆ.ಹರೀಶ್ , ಸಂಘದ ಜಿಲ್ಲಾ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಜೀವನ್ ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ನ.22 : ನೆಲ್ಯಾಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ನ.27 ರಂದು ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮುತ್ತಪ್ಪನ ಪುತ್ತರಿ ವೆಳ್ಳಾಟಂ ಜರುಗಲಿದ್ದು, ರಾತ್ರಿ 8.30ಕ್ಕೆ ಕದಿರು ತೆಗೆಯಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

Read More

ಮಡಿಕೇರಿ ನ.22 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 07 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ 07 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಡಿ.15 ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿಕಲಚೇತನರು ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್ 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್ 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸುವಂತೆ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ…

Read More

ಸುಂಟಿಕೊಪ್ಪ ನ.22 :  ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕ್‍ರ್‍ವೊಂದು ರಸ್ತೆ ಬದಿಯ ಹೊಟೇಲ್‍ವೊಂದಕ್ಕೆ ನುಗ್ಗಿರುವ ಘಟನೆ ಗದ್ದೆಹಳ್ಳದಲ್ಲಿ  ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುಶಾಲನಗರ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರೊಂದು ರಾತ್ರಿ 1 ಗಂಟೆಯ ಸುಮಾರಿಗೆ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳದ ಮಸೀದಿ ಸಮೀಪದ, ಹಂಸ ಎಂಬವರಿಗೆ ಸೇರಿದ ಹೋಟೆಲ್‍ಗೆ ಡಿಕ್ಕಿಯಾಗಿದೆ. ಇದರಿಂದ ಹೋಟೆಲ್ ಮುಂಭಾಗ ಸೇರಿದಂತೆ, ಅದರ ಒತ್ತಿನಲ್ಲಿರುವ ಕೆ.ಕೆ. ಸೌಂಡ್ಸ್ ಶಾಮಿಯಾನ ಅಂಗಡಿಗೆ ಹಾನಿಯಾಗಿದೆ. ಈ ಸಂದರ್ಭ ಹೋಟೆಲ್ ಮತ್ತು ಸೌಂಡ್ಸ್ ಮಳಿಗೆಯಲ್ಲಿ ಯಾರು ಇರಲಿಲ್ಲವಾದ್ದರಿಂದ, ಸಂಭವನೀಯ ಭಾರೀ ಅನಾಹುತ ತಪ್ಪಿದೆ. ಘಟನೆಗೆ ಸಂಬಂಧಿಸಿದಂತೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More