ನಾಪೋಕ್ಲು ನ.21 : ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾಂಶವನ್ನು ಸರ್ಕಾರದ ವತಿಯಿಂದ ಅಭಿವೃದ್ಧಿಗೊಳಿಸಲಾಗಿದ್ದು, ಸರ್ಕಾರದ ಸವಲತ್ತುಗಳನ್ನು ಪಡೆಯಲು ಎಲ್ಲ ರೈತರು, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವುದು ಅವಶ್ಯಕವಾಗಿರುವುದರಿಂದ ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಮಾಹಿತಿ ದಾಖಲೆಸಿಕೊಂಡರು. ರೈತರು ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನುಗಳ ಪಹಣಿ ಪ್ರತಿ ಗಳು, ಆಧಾರ್ ಕಾರ್ಡು, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ ಒದಗಿಸಿ ನೋಂದಣಿ ಮಾಡಿಕೊಂಡರು. ಕೃಷಿ ,ಕಂದಾಯ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ರೈತರಿಂದ ಮಾಹಿತಿ ಪಡೆದುಕೊಂಡು ಒಟ್ಟು 85 ಅರ್ಜಿಗಳನ್ನು ಸ್ವೀಕರಿಸಿ ನೋಂದಾಯಿಸಿದರು. ಈ ಸಂದರ್ಭ ಗ್ರಾಮ ಲೆಕ್ಕಾಧಿಕಾರಿ ಅಮೃತ ಆರ್, ಕೃಷಿ ಇಲಾಖೆಯ ಅಕೌಂಟೆಂಟ್ ಸಾಗರಿಕ, ಗ್ರಾಮ ಸಹಾಯಕ ಪ್ರಸಾದ್ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ಮಡಿಕೇರಿ ನ.21 : ದುಡಿಯುವ ಕಾರ್ಮಿಕ ವರ್ಗಕ್ಕೆ ಕನಿಷ್ಠ ವೇತನ ಘೋಷಿಸದ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೌಕರರನ್ನು ದುಡಿಸಿಕೊಳ್ಳುವ ಮೂಲಕ ಪರೋಕ್ಷವಾಗಿ ಜೀತದಾಳುಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಸಮಿತಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಕುಟುಂಬದ ನಿರ್ವಹಣೆ, ಆಹಾರ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನ 26 ಸಾವಿರ ರೂ. ಘೋಷಿಸುವ ಅಗತ್ಯವಿದೆ ಎಂದರು. ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ 2 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಆದರೆ ಇವುಗಳನ್ನು ಗುತ್ತಿಗೆ ಆಧಾರದ ನೌಕರರ ಮೂಲಕ ತುಂಬಲಾಗುತ್ತಿದೆ. ಕಡಿಮೆ ವೇತನ ನೀಡಿ ಹೆಚ್ಚು ದುಡಿಸಿಕೊಳ್ಳುವ ಜೀತ ಪದ್ಧತಿಯನ್ನು ಸರ್ಕಾರವೇ ಜಾರಿಗೆ ತರುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ, ಉದ್ಯೋಗ ವಿನಿಮಯ ಕಚೇರಿಯಲ್ಲೂ ಗುತ್ತಿಗೆ ಆಧಾರದ ನೌಕರರನ್ನೇ ನೇಮಿಸಿಕೊಳ್ಳಲಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಪ್ರಯತ್ನವನ್ನೇ ಮಾಡುತ್ತಿಲ್ಲವೆಂದು ಟೀಕಿಸಿದರು. ::: ಭರವಸೆ…
ಮಡಿಕೇರಿ ನ.21 : ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ಜನಪ್ರಿಯಗೊಳ್ಳುತ್ತಿದೆ. ಇದನ್ನು ಸಹಿಸದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಟ್ಟೆಕಿಚ್ಚಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಜನವರಿ ವೇಳೆಗೆ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನಗೊಳ್ಳುವುದು ಖಚಿತವೆಂದು ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿಯೊಬ್ಬರು ತಮ್ಮ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಕೃಪೆಯಿಂದ ಪ್ರಧಾನಿಯಾದರು, ಪ್ರಸ್ತುತ ರಾಜ್ಯಸಭಾ ಸದಸ್ಯರೂ ಆಗಿದ್ದಾರೆ. ಕಾಂಗ್ರೆಸ್ ಕೃಪೆಯಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ಕೃತಜ್ಞತಾಭಾವವಿಲ್ಲದೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ಬಗ್ಗೆ ವೈಯುಕ್ತಿಕ ಟೀಕೆಗಳನ್ನು ಮಾಡುತ್ತಿದ್ದಾರೆ. ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಮತ್ತು ಸಾಕ್ಷಿ ಸಹಿತ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು. ಕೇಂದ್ರ ಸಚಿವ ಅಮಿತ್ ಶಾ ಅವರು ಕುಮಾರಸ್ವಾಮಿ ಅವರಿಗೆ ಸುಪಾರಿ ನೀಡಿರುವ…
ಮಡಿಕೇರಿ ನ.21 : ಕಾರ್ಯಪ್ಪ ಕಾಲೇಜ್ ನಲ್ಲಿ ಪರೀಕ್ಷಾ ಪುಸ್ತಕಗಳ ಪ್ರದರ್ಶನ : ವಿದ್ಯಾರ್ಥಿಗಳು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು : ಮೇಜರ್ ಪ್ರೊ. ರಾಘವ ಕರೆ ಮಡಿಕೇರಿ ನ.21 : ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಕರೆ ನೀಡಿದ್ದಾರೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕಾರ್ಯಪ್ಪ ಕಾಲೇಜ್ ನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು. ಓದುವ ಹವ್ಯಾಸ ಜ್ಞಾನವನ್ನು ಹೆಚ್ಚಿಸುತ್ತದೆ, ಮಾತ್ರವಲ್ಲದೆ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ದಿನಪತ್ರಿಕೆ ಮತ್ತು ಸ್ಪರ್ಧಾತ್ಮಕ ಪುಸ್ತಕಗಳನ್ನು ಓದಿ ಅಧ್ಯಯನ ಮಾಡಿದರೆ ಪದವಿ ಹಂತವನ್ನು ಮುಗಿಸಿದ ತಕ್ಷಣ ಸರಕಾರಿ ಉದ್ಯೋಗವನ್ನು ಪಡೆಯಲು ಅನುಕೂಲವಾಗುತ್ತದೆ. ಮಾಹಿತಿ…
ಮಡಿಕೇರಿ ನ.21 : ಕೊಡಗು ಜಿ.ಪಂ., ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು, ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ಲಯನ್ಸ್ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ:2023 ದ ಪೂರ್ವಭಾವಿ ಯಾಗಿ ನಡೆದ ಜಿಲ್ಲಾಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರವನ್ನು ಜಿ.ಪಂ.ಸಿಇಓ ವರ್ಣಿತ್ ನೇಗಿ ಉದ್ಘಾಟಿಸಿದರು. ಡಿಡಿಪಿಐ ಎಂ.ಚಂದ್ರಕಾಂತ್, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಸ್ಕೌಟ್ಸ್, ಗೈಡ್ಸ್ ನ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಸಂಘಟಕ ಟಿ.ಜಿ.ಪ್ರೇಮಕುಮಾರ್, ಜಿ.ಶ್ರೀಹರ್ಷ, ಲಯನ್ಸ್ ಅಧ್ಯಕ್ಷ ಮಧುಕರ್ ಶೇಟ್ ಇದ್ದರು.
ಮಡಿಕೇರಿ ನ.21 : ಮಡಿಕೇರಿಯ ಡಿಪಿ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಜಿಲ್ಲಾ ಮಟ್ಟದ ನಾಕೌಟ್ ಮಾದರಿಯ ಕಬಡ್ಡಿ ಚಾಂಪಿಯನ್ ಶಿಪ್ “ಮಿಸ್ಟಿ ಕಪ್-2023” ಪಂದ್ಯಾವಳಿ ಡಿ.3 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆ ಮಾಡಿ ಮಾಹಿತಿ ನೀಡಿದ ಕ್ಲಬ್ ನ ಸದಸ್ಯ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕೊಡಗಿನ ಕಬಡ್ಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ, ಬೆಳೆಸುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಿರುವುದಾಗಿ ತಿಳಿಸಿದರು. ಹರಿಯಾಣದಲ್ಲಿ ನಡೆದ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್‍ನಲ್ಲಿ ಆಡಿರುವ ಕಬಡ್ಡಿ ಕ್ರೀಡಾಪಟು ಹೊಟ್ಟೆಯಂಡ ಸಚಿನ್ ಪೂವಯ್ಯ ನೇತೃತ್ವದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಒಂದು ದಿನದ ರೋಚಕ ಪಂದ್ಯಾವಳಿ ನಡೆಯಲಿದೆ. ರಾಷ್ಟ್ರೀಯ ತರಬೇತುದಾರ ಮಂಜುನಾಥ್ ಹಾಗೂ ರಾಷ್ಟ್ರೀಯ ಕಬಡ್ಡಿ ಆಟಗಾರ ಶಶಿಧರ್ ಅವರುಗಳು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಡಿಪಿ ಸ್ಪೋಟ್ರ್ಸ್ ಕ್ಲಬ್‍ನ ಕಾರ್ಯದರ್ಶಿ ಅಜ್ಜಮಕ್ಕಡ ವಿನು ಕುಶಾಲಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಆಸ್ಟ್ರಾ ಕಾಫಿ…
ಸೋಮವಾರಪೇಟೆ ನ.21 : ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಸೋಮವಾರಪೇಟೆ, ವಿರಾಜಪೇಟೆ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಹಾಗೂ ಬೆಟ್ಟದಳ್ಳಿ ಮಾನವತಾ ಯುವಕ ಸಂಘದ ಆಶ್ರಯದಲ್ಲಿ ಬೆಟ್ಟದಳ್ಳಿ ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲಾ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಮಡಿಕೇರಿ ಶಾಸಕ ಡಾ.ಮಂತರ್‍ಗೌಡ, ಗ್ರಾಮೀಣಾಭಿವೃದ್ಧಿಯೊಂದಿಗೆ ದೇಶದ ಅಭಿವೃದ್ಧಿಯಾಗಬೇಕಿದೆ. ಯುವಸಬಲೀಕರಣಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಯುವಕ ಸಂಘಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಮಾತನಾಡಿ, ಪೋಷಕರು ಮಕ್ಕಳ ಆಸಕ್ತಿಯನ್ನು ಗಮನಿಸಿ, ಅವರ ಅಭಿಲಾಷೆಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು. ಮಕ್ಕಳಿರುವಾಗಲೇ ಒಳ್ಳೆಯ ಹವ್ಯಾಸಗಳನ್ನು ಮೈಗೊಡಿಸಿಕೊಳ್ಳಲು ತಿಳಿಹೇಳಿದರೆ, ಮುಂದೆ ಉತ್ತಮ ವ್ಯಕ್ತಿಯಾಗಿ ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬೆಟ್ಟದಳ್ಳಿ ಗ್ರಾ.ಪಂ ಅಧ್ಯಕ್ಷ ತಮ್ಮಯ್ಯ, ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್, ಮಾಜಿ ಅಧ್ಯಕ್ಷ ಎಂ.ಪಿ.ರವಿ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟದ…
ಮಡಿಕೇರಿ ನ.20 : ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ಕಾನೂರು ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಲ ಎಂದು ಗುರುತಿಸಲಾಗಿದೆ, ಆದರೆ ಇವರ ವಾರಸುದಾರರು ಯಾರೆಂದು ತಿಳಿಯದೇ ಇರುವುದರಿಂದ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ನ.19 ರಂದು ಬೆಳಗ್ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಅವರು ಮೃತಪಟ್ಟಿದ್ದಾರೆ. ಬಾಲ ಅವರ ಸಂಬಂಧಿಕರು ಯಾರು ಹಾಗೂ ಊರು ಯಾವುದೆಂದು ತಿಳಿಯದ ಹಿನ್ನೆಲೆ ವಾರಸುದಾರರು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊನ್ನಂಪೇಟೆ ಪೊಲೀಸರು ಮನವಿ ಮಾಡಿದ್ದಾರೆ. ಬೈಕ್ ಸವಾರ ಪರಾರಿಯಾಗಿದ್ದು, ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್‌ಕುಮಾರ್, ಗೋಣಿಕೊಪ್ಪ ವೃತ್ತದ ಸಿಪಿಐ ಗೋವಿಂದರಾಜು, ಪೊನ್ನಂಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ನವೀನ್.ಜಿ ಹಾಗೂ ಸಿಬ್ಬಂದಿಗಳು ಅಪಘಾತ ನಡೆದ ಸ್ಥಳಕ್ಕೆ…
ಮಡಿಕೇರಿ ನ.20 : ಮಡಿಕೇರಿ ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ. ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಎಂಡಿಎಂಎ ಯನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಕುಂಜಿಲ ಗ್ರಾಮದ ನಿವಾಸಿ ನೌಫಲ್ (25) ಹಾಗೂ ಎಮ್ಮೆಮಾಡು ಪೈಸಾರಿ ನಿವಾಸಿ ಸಾದಿಕ್ (32) ಎಂಬುವವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ನ.20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 9-12 ಹಾಗೂ 13-16 ವರ್ಷದ ಮಕ್ಕಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು ಹಾಗೂ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳನ್ನು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು. ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹಾದೇವ ಸ್ವಾಮಿ, ಡಿಡಿಪಿಐ ಕಚೇರಿಯ ಕೃಷ್ಣಪ್ಪ ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಟರಾಜ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸದಾಶಿವ…






