ಮಡಿಕೇರಿ ನ.20 : ಕ್ರೀಡಾ ಪಟುಗಳು ಕ್ರೀಡಾಸ್ಫೂರ್ತಿಯ ಮೌಲ್ಯಗಳನ್ನು ಅಳವಡಿಸಿಕೊಂಡು, ಗೆಲುವು ಸಂಪಾದಿಸಬೇಕು ಹಾಗೂ ಸೋಲುಗಳಿಂದ ತಮ್ಮ ತಪ್ಪುಗಳನ್ನು ಅರಿಯಬೇಕು ಎಂದು ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಯ ಡೆಪ್ಯೂಟಿ ಕಮಾಂಡೆಂಟ್ ಏರ್ ಕಮೋಡೋರ್ ನರೇಶ್ ಕುಮಾರ್ ಸೈಧಾ ಹೇಳಿದ್ದಾರೆ. ಕೂಡಿಗೆ ಸೈನಿಕ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಿಷ್ಣುತಾ ಮನೋಭಾವದೊಂದಿಗೆ ಸಕ್ರಿಯವಾಗಿ ಕ್ರೀಡಾಕೂಟದಲ್ಲಿ ತೊಡಗಿಸಿಕೊಳ್ಳಬೇಕು. ವಿಜೇತ ತಂಡವಾಗಿ ಹೊರಹೊಮ್ಮಲು ಸಾಂಘಿಕ ಹೋರಾಟ ಮಾಡಬೇಕು. ವಿದ್ಯಾರ್ಥಿಗಳು ಸ್ಪರ್ಧೆಯ ಎಲ್ಲೆಗಳನ್ನು ಮೀರಿದ ಪರಸ್ಪರ ಸ್ನೇಹತ್ವದ ಮನೋಭಾವನೆಯನ್ನು ಹೊಂದಬೇಕೆಂದು ಕರೆ ನೀಡಿದರು. ಕೆಡೆಟ್ ದರ್ಶನ್, ಕೆಡೆಟ್ ಧ್ರುವ ಹಾಗೂ ಕೆಡೆಟ್ ಮಾನಸ್ ಕುಮಾರ್ ಈ ಕ್ರೀಡಾ ಜ್ಯೋತಿಯನ್ನು ತಂದರು. ಶಾಲೆಯ ಕ್ರೀಡಾ ನಾಯಕ ಕೆಡೆಟ್ ದರ್ಶನ್ ಪಡ್ನಾಡ್ ನೇತೃತ್ವದಲ್ಲಿ ಎಲ್ಲಾ ಸ್ಪರ್ಧಾಳುಗಳು ಪಥಸಂಚಲನ ನಡೆಸಿದರು. ವಿದ್ಯಾರ್ಥಿ ಓಂಕಾರ ಪಾಣಿ ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಕಮೋಡೋರ್ ಎಂ.ಟಿ.ರಮೇಶ್ ಮುಖ್ಯ ಅತಿಥಿಗಳಾಗಿ…
ಲೇಖಕ: admin
ಮಡಿಕೇರಿ ನ.20 : ಪೌರಾಣಿಕ ಹಿನ್ನೆಲೆ ಹೊಂದಿರುವ ಮಡಿಕೇರಿ ಸಮೀಪದ ಬಿಳಿಗೇರಿ ಗ್ರಾಮದ ಶ್ರೀ ಪರದೇವರ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ನ.23 ಮತ್ತು 24 ರಂದು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಸದಸ್ಯರಾದ ಮಂಞಿರ ಕೆ. ಉಮೇಶ್ ಅಪ್ಪಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಂತ ಪುರಾತನವಾದ ಶ್ರೀ ಪರದೇವರ ದೇವಾಲಯವನ್ನು ಗ್ರಾಮಸ್ಥರ ಮತ್ತು ದಾನಿಗಳ ಸಹಕಾರದಿಂದ 20 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆಯೆಂದು ತಿಳಿಸಿದರು. ಶ್ರೀ ಪರದೇವರ ದೇವಸ್ಥಾನದ ಪುನರ್ ಪ್ರತಿಷ್ಠಾ ಕಾರ್ಯಗಳು ಕ್ಷೇತ್ರದ ತಂತ್ರಿಗಳಾದ ಉದಯ ಕುಮಾರ್ ಹುಲಿತಾಳ ಅವರ ನೇತೃತ್ವದಲ್ಲಿ ನಡೆಯಲಿದೆ. ನ.23 ರಂದು ಸಂಜೆ 6 ಗಂಟೆಗೆ ಸ್ಥಳ ಶುದ್ಧಿ, ಪಂಚಗವ್ಯ ಪುಣ್ಯಾಹಃ, ದೇವತಾ ಪ್ರಾರ್ಥನೆ, ವಾಸ್ತು ಪೂಜೆ, ವಾಸ್ತು ಬಲಿ, ವಾಸ್ತು ಹೋಮ, ರಾಕ್ಷೋಘ್ನ, ಸುದರ್ಶನ ಹೋಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆಯೆಂದು ಮಾಹಿತಿ ನೀಡಿದರು. ನ.24 ರಂದು ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, ಸಪ್ತಶತಿ ಪಾರಾಯಣ,…
ಮಡಿಕೇರಿ ನ.20 : ಜಿಲ್ಲೆಯ ಅಭಿವೃದ್ಧಿಗಾಗಿ ಚಿಂತನೆ ನಡೆಸದ ಸ್ಥಳೀಯ ಕಾಂಗ್ರೆಸ್ ಶಾಸಕರು, ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಆಡಳಿತಾತ್ಮಕ ಒಪ್ಪ್ಪಿಗೆ ಪಡೆದು ಟೆಂಡರ್ ಆದ ಕಾಮಗಾರಿಗಳನ್ನು ಬದಲಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ‘ನಯಾ ಪೈಸೆ’ಯ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಈ ಹಿಂದಿನ ಸಕಾರದ ಅವಧಿಯಲ್ಲಿ ಆರಂಭಿಸಿದ ಹಲವು ಕಾಮಗಾರಿಗಳಿಗೆ ಪ್ರಸ್ತುತ ಕನಿಷ್ಟ ಹಣ ಬಿಡುಗಡೆಯನ್ನು ಮಾಡಿಲ್ಲವೆಂದು ಟೀಕಿಸಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿ-ಪ್ರಾಕೃತಿಕ ವಿಕೋಪ ನಿಧಿಯಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಿಗೆ ತಲಾ 7 ಕೋಟಿ ಅನುದಾನವನ್ನು ಒದಗಿಸಲಾಗಿತ್ತು. ಮಡಿಕೇರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 69 ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿಯೂ ದೊರಕಿತ್ತು. ಪ್ರಸ್ತುತ ಈ ಎಲ್ಲಾ ಕಾಮಗಾರಿಗಳನ್ನು ಬದಲಿಸಲು ಮಡಿಕೇರಿ ಕ್ಷೇತ್ರದ ಶಾಸಕರು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್…
ಮಡಿಕೇರಿ ನ.20 : ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2023 ವನ್ನು ಕ್ಕೆ ಪೂರ್ವಭಾಗಿಯಾಗಿ ನ.21 ರಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿ ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ಮಾರ್ಗದರ್ಶಿ ಶಿಕ್ಷಕರಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ನಡೆಯಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ ಹಾಗೂ ಮಡಿಕೇರಿ ನಗರದ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು/ ಆಸಕ್ತ ಶಿಕ್ಷಕರಿಗೆ ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರದಲ್ಲಿ ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ…
ಮಡಿಕೇರಿ ನ.20 : ಸೈನಿಕ ಶಾಲೆ ಕೊಡಗಿನ 2023-24ರ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟವು ಕೂಡಿಗೆಯ ಕ್ರೀಡಾ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು. ಪ್ರಸ್ತುತ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಯ ಡೆಪ್ಯೂಟಿ ಕಮಾಂಡೆಂಟ್ ಏರ್ ಕಮೋಡೋರ್ ನರೇಶ್ ಕುಮಾರ್ ಸೈಧಾ ಅವರು ಆಗಮಿಸಿ, ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕ್ರೀಡಾ ಜ್ಯೋತಿಯನ್ನು ಹೊತ್ತು ಕೆಡೆಟ್ ದರ್ಶನ್, ಕೆಡೆಟ್ ಧ್ರುವ ಮತ್ತು ಕೆಡೆಟ್ ಮಾನಸ್ ಕುಮಾರ್ ಮೈದಾನದ ಸುತ್ತಲೂ ಪ್ರದಕ್ಷಿಣೆ ಹಾಕಿದರು. ನಂತರ ಶಾಲೆಯ ಕ್ರೀಡಾ ನಾಯಕನಾದ ಕೆಡೆಟ್ ದರ್ಶನ್ ಪಡ್ನಾಡ್ ನೇತೃತ್ವದಲ್ಲಿ ಎಲ್ಲಾ ಸ್ಪರ್ಧಾಳುಗಳು ಮನೋಜ್ಞವಾದ ಪಥಸಂಚಲನ ನಡೆಸಿದರು. ಜೊತೆಗೆ ಶಾಲೆಯ ಕ್ರೀಡಾ ನಾಯಕ ಕೆಡೆಟ್ ದರ್ಶನ್ ಪಡ್ನಾಡ್ ಅವರು ಎಲ್ಲಾ ಸ್ಪರ್ಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಕ್ರೀಡೆಗೆ ಸಜ್ಜುಗೊಳಿಸಿದರು. ಹಾಗೆಯೇ ಶಾಲಾ ವಿದ್ಯಾರ್ಥಿ ಕೆಡೆಟ್ ಓಂಕಾರ ಪಾಣಿ ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟರು. ನಂತರ ಮುಖ್ಯ ಅತಿಥಿಗಳು ಸ್ಪರ್ಧೆಯ ಅಧಿಕೃತ ಉದ್ಘಾಟನೆಯನ್ನು ಸಾಂಕೇತಿಕವಾಗಿ…
ಮಡಿಕೇರಿ ನ.20 : ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾದ ನೂರನೇ ವಾರ್ಷಿಕೋತ್ಸವದ ಅಂಗವಾಗಿ ನ.21 ರಂದು ಸುಂಟಿಕೊಪ್ಪದಲ್ಲಿ ಸಮಸ್ತ ಕೊಡಗು ಜಿಲ್ಲಾ ಉಲಮಾ ಸಮ್ಮೇಳನ ನಡೆಯಲಿದೆ ಎಂದು ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಕೊಡಗು ಜಿಲ್ಲಾ ಸಮಿತಿಯ ಸದಸ್ಯ ಎಂ.ತಮ್ಲೀಖ್ ದಾರಿಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಜಾಮಿಅಃ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 8.30 ಗಂಟೆಗೆ ಪಿ.ಬಿ.ಇಸ್ಮಾಯಿಲ್ ಮುಸ್ಲಿಯಾರ್ ನೇತೃತ್ವದಲ್ಲಿ ಕಂಬಿಬಾಣೆಯ ವಲಿಯುಲ್ಲಾಹಿ ಕಾಕು ಉಪ್ಪಾಪ ದರ್ಗಾ ಝಿಯಾರಿತಿನೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ ಎಂದು ಮಾಹಿತಿ ನೀಡಿದರು. ಬೆಳಿಗ್ಗೆ 9.30ಕ್ಕೆ ಎಸ್‍ಕೆಜೆಯು ಕೊಡಗು ಜಿಲ್ಲಾ ಸಮಿತಿ ಉಪಾಧ್ಯಕ್ಷ ಕೆ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಲಿದ್ದು, 10 ಗಂಟೆಗೆ ಸಮಸ್ತ ಕೇಂದ್ರ ಮುಶಾವರ ಮುಶಾವರ ಸದಸ್ಯರು ಹಾಗೂ ಎಸ್ ಕೆಜೆಯು ಜಿಲ್ಲಾಧ್ಯಕ್ಷ ಎಂ.ಎಂ.ಅಬ್ದುಲ್ಲಾ ಫೈಝಿ ಅವರ ಪ್ರಾರ್ಥನೆಯೊಂದಿಗೆ ಸಮ್ಮೇಳನ ಆರಂಭಗೊಳ್ಳಲಿದ್ದು, ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯ ಮೂಸ ಮುಸ್ಲಿಯಾರ್ ವಯನಾಡು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.…
ಮಡಿಕೇರಿ ನ.20 : ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ, ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿದೆ. ಈ ನ್ಯೂನತೆಗಳನ್ನು ಕೇಳುವವರೇ ಇಲ್ಲದಾಗಿದೆ. ನಗರಸಭೆ, ತಾಲ್ಲೂಕು ಕಚೇರಿ, ಪಂಚಾಯಿತಿಗಳಲ್ಲಿ ಅರ್ಜಿಗಳು ವಿಲೇವಾರಿಯಾಗದೆ ಸಾರ್ವಜನಿಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹ್ಯೂಮನ್ ರೈಟ್ಸ್ ಇಂಟರ್‌ನ್ಯಾಷನಲ್ ಫೆಡರೇಷನ್ ಸಂಸ್ಥೆಯ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹ್ಯೂಮನ್ ರೈಟ್ಸ್ ಇಂಟರ್‌ನ್ಯಾಷನಲ್ ಫೆಡರೇಷನ್ ದೇಶದೆಲ್ಲೆಡೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದ್ದು, ಕರ್ನಾಟಕದಲ್ಲೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಸಂಸ್ಥೆ ವತಿಯಿಂದ ಮಾನವ ಹಕ್ಕು ಅರಿವು ಕಾರ್ಯಕ್ರಮ ಡಿಸೆಂಬರ್ ತಿಂಗಳಿನಿಂದ ಜಿಲ್ಲೆಯಾದ್ಯಂತ ಆರಂಭಗೊಳ್ಳಲಿದೆ. ವಿವಿಧ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅಧಿಕಾರಿಗಳನ್ನು ಒಳಗೊಂಡಂತೆ ಹಿರಿಯರು ಮಾನವ ಹಕ್ಕಿನ ಕುರಿತು ವಿವರಿಸಲಿದ್ದಾರೆ ಎಂದು ತಿಳಿಸಿದರು. ಇಂದು ಸರ್ಕಾರಿ ಕಚೇರಿಗಳಲ್ಲಿ ಮಾನವ ಹಕ್ಕಿನ ಉಲ್ಲಂಘನೆಯಾಗುತ್ತಿದೆ. ಫಾರಂ ನಂಬರ್ 3, ಆರ್‍ಟಿಸಿ ಸೇರಿದಂತೆ ಹಲವು ಕಡತಗಳು ಸುಲಭವಾಗಿ ಅರ್ಜಿದಾರರ ಕೈಸೇರುತ್ತಿಲ್ಲ. ಕಡತ ವಿಲೇವಾರಿಗೆ ದಿನ ನಿಗದಿಯಾಗಿದ್ದರೂ ಆ ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಮಾಡಿ ಕೊಡಲು…
ಸುಂಟಿಕೊಪ್ಪ ನ.20 : ಕುಶಾಲನಗರ ತಾಲ್ಲೂಕು ಮೊಗೇರ ಸೇವಾ ಸಮಾಜದ ಅಧ್ಯಕ್ಷರಾಗಿ ಸುಂಟಿಕೊಪ್ಪದ ಪಿ.ಬಿ.ಮಂಜು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪಿ.ಜಿ. ಮಂಜು ನಂಜರಾಯಪಟ್ಟಣ, ಪ್ರಧಾನ ಕಾರ್ಯದರ್ಶಿಯಾಗಿ ವಸಂತ ಮಠದಕಾಡ್, ಸಂಘಟನಾ ಸಂಚಾಲಕರಾಗಿ ತೇಜಸ್ ಗರಗಂದೂರು, ಖಜಾಂಚಿಯಾಗಿ ಪಿ. ಮಂಜು ಗರಗಂದೂರು ಹಾಗೂ ಸಮಿತಿ ಸದಸ್ಯರುಗಳಾಗಿ 36 ಮಂದಿ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪದ ಶ್ರೀ ಮಂಜುನಾಥಯ್ಯ ಮೀನಾಕ್ಷ್ಮಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ನೂತನ ಸಮಿತಿ ರಚನಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಅಧ್ಯಕ್ಷರಾದ ಪಿ.ಬಿ.ಜನಾರ್ಧನ್, ಪ್ರಧಾನ ಕಾರ್ಯದರ್ಶಿ ಹರೀಶ್, ಸಲಹೆಗಾರರಾದ ಎಂ.ಪಿ.ದೇವಪ್ಪ, ಗೌತಮ್ ಶಿವಪ್ಪ, ಪಿ.ಎಂ.ರವಿ ಹಾಜರಿದ್ದರು.
ಮಡಿಕೇರಿ ನ.20 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ನ 10ನೇ ತರಗತಿ ಮತ್ತು ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವೃತ್ತಿಪರ ಶೈಕ್ಷಣಿಕ ಕಾರ್ಯಕ್ರಮ ನಡೆಯಿತು. ಪುತ್ತೂರಿನ ನಿವೃತ್ತ ಪ್ರಾಂಶುಪಾಲ ಸೂರ್ಯನಾರಾಯಣ ರಾವ್ ಅವರು ಮುಖ್ಯ ತರಬೇತುದಾರರಾಗಿ ಪಾಲ್ಗೊಂಡು ಮಾತನಾಡಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತೇರ್ಗಡೆಯಾದ ನಂತರ ಅವರವರ ಅಭಿರುಚಿಗೆ ತಕ್ಕಂತೆ ಯಾವ ಕೋರ್ಸ್‍ಗಳನ್ನು ಆಯ್ಕೆ ಮಾಡಿದರೆ ಉತ್ತಮ ಮತ್ತು ಉದ್ಯೋಗವನ್ನು ಪಡೆಯವುದಾದರೆ ಅದರಲ್ಲಿರುವ ಪ್ರಾಮುಖ್ಯತೆ, ಅದನ್ನು ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು. ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಶಶಿಕಲಾ ಹಾಗೂ ಪದವಿ ಪೂರ್ವ ಕಾಲೇಜ್ ನ ಉಪನ್ಯಾಸಕ ಚಿದಾನಂದ ಮಾತನಾಡಿದರು. ತರಬೇತದಾರರು ನೀಡುವ ಮಾಹಿತಿಯನ್ನು ಸದುಪಯೋಗ ಪಡಿಸಿಕೊಂಡು ಅನುಸರಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಮಾತನಾಡಿ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲೆಂದು ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ವಿವರಿಸಿದರು. 10ನೇ ತರಗತಿಯ 80 ಮತ್ತು…
ಮಡಿಕೇರಿ ನ.20 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್, ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ಮತ್ತು ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ನ.24 ರಂದು ವಿಚಾರ ಮಂಡನೆ, ಪುಸ್ತಕ ಬಿಡುಗಡೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಸಭಾಂಗಣದಲ್ಲಿ ನಿರ್ಮಾಪಕ, ನಿರ್ದೇಶಕ, ನಟ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಬರೆದಿರುವ ಕೊಡವ ಮಕ್ಕಡ ಕೂಟದ 76ನೇ ಪುಸ್ತಕ “ನಾಡ ಕೊಡಗ್” ಅನಾವರಣಗೊಳ್ಳಲಿದೆ. ಸಾಹಿತಿ ಹಾಗೂ ಎಂ.ಎ.ಕೊಡವ ವಿಭಾಗದ ಉಪನ್ಯಾಸಕ ಬಾಚರಣಿಯಂಡ ಅಪ್ಪಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ, ಎಂ.ಎ.ಕೊಡವ ವಿಭಾಗದ ಉಪನ್ಯಾಸಕಿ ಬಾಚರಣಿಯಂಡ ರಾಣು ಅಪ್ಪಣ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ, ಕೊಡವ ಎಂ.ಎ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ, “ನಾಡ ಕೊಡಗ್” ಪುಸ್ತಕ ಬರಹಗಾರ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ,…






