ಲೇಖಕ: admin

ವಿಜಯಪುರ ನ.20 : ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು. *ಉತ್ತರವಿಲ್ಲ* ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು. *ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ* ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಕಾಯುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ ಎಂದರು.

Read More

ವಿಶಾಖಪಟ್ಟಣಂ ನ.20 : ಅಗ್ನಿ ಆಕಸ್ಮಿಕದಿಂದ 30 ಕ್ಕೂ ಅಧಿಕ ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿರುವ ಘಟನೆ ವಿಶಾಖಪಟ್ಟಣಂ ನ ಜಟ್ಟಿ ಪ್ರದೇಶದಲ್ಲಿ ನಡೆದಿದೆ. ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಬೆಳಗ್ಗೆ 4 ಗಂಟೆ ಸುಮಾರಿಗೆ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿತು. ಸ್ಥಳದಲ್ಲಿದ್ದ 8 ಎಲ್‌ಪಿಜಿ ಸಿಲಿಂಡರ್‌ಗಳಿಂದ ಸ್ಫೋಟ ಸಂಭವಿಸಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ.

Read More

ನಾಪೋಕ್ಲು ನ.20 : ಕೆನರಾ ಬ್ಯಾಂಕ್ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ 118ನೇ ಸಂಸ್ಥಾಪಕರ ದಿನಾಚರಣೆಯನ್ನು ಕೆನರಾ ಬ್ಯಾಂಕ್ ನಲ್ಲಿ ಆಚರಿಸಲಾಯಿತು. ಕಾಫಿ ಬೆಳೆಗಾರ ಎಮ್. ಡಿ ತಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮ ದಲ್ಲಿ ನಾಪೋಕ್ಲು ಶಾಖೆಯ ಸಂಸ್ಥಾಪಕ ಪ್ರಶಾಂತ್ ಕುಮಾರ್ ಬೋಹಿದಾರ್, ಸಿಬ್ಬಂದಿಗಳಾದ ಫೌಝಿಯ, ಅಜಿತ್, ಕಣ್ಣಾ ಬಾಬು, ಬಿ.ಆರ್.ದೇವಪ್ಪ, ಸುಧಾ ಹಾಜರಿದ್ದರು. ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು, ಗ್ರಾಹಕರು ಹಾಜರಿದ್ದರು. ಗ್ರಾಹಕರಿಗೆ ಸಿಹಿ ಹಂಚಲಾಯಿತು. ವರದಿ : ದುಗ್ಗಳ ಸದಾನಂದ 

Read More

ವಿರಾಜಪೇಟೆ  ನ.20 :  ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಅವರ ಸಾಮಾಜಿಕ ಬದ್ಧತೆ ಮೆಚ್ಚುವಂತಹದ್ದು ಎಂದು ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅಭಿಪ್ರಾಯಪಟ್ಟರು. ಅಮ್ಮತ್ತಿ ಒಂಟಿಯಂಗಡಿಯ ಜಿ. ಎಂ. ಪಿ. ಶಾಲೆಯಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಲಿಟಲ್ ಸ್ಕಾಲರ್ಸ್ ಶಾಲಾ ವಿದ್ಯಾರ್ಥಿಗಳು ಈ ಶಾಲೆಗೆ ಆಗಮಿಸಿ ಕಾರ್ಯಕ್ರಮಗಳನ್ನು ನಡೆಸಿ ಇಲ್ಲಿನ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಗಳನ್ನು ನಡೆಸಿರುತ್ತಾರೆ. ಎರಡು ಶಾಲೆಗಳು ಒಂದೆಡೆ ಸೇರಿ ಮಾಡುವ ಕಾರ್ಯಕ್ರಮ ಇದಾಗಿದ್ದು ಬೇರೆ ಶಾಲೆಗಳಿಗೆ ಲಿಟಲ್ ಸ್ಕಾಲರ್ಸ್ ಶಾಲೆ ಮಾದರಿಯಾಗಿದೆ. ಸಮಾಜ ಸೇವೆಯಲ್ಲಿ ತೊಡಗಿರುವುದು ಗಮನಾರ್ಹ ಎಂದರು. ಸಿಆರ್ ಪಿ ಸುಷ್ಮ  ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಓದಿನ ಜೊತೆಯಲ್ಲಿ ಇಂತಹ ಕಾರ್ಯಕ್ರಮಗಳು ಬೇಕು. ಮಕ್ಕಳು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಕ್ತವಾಗಿ ಪಾಲ್ಗೊಳ್ಳಬೇಕು ಎಂದರು. ಜಿ. ಎಂ. ಪಿ ಶಾಲಾ ಮುಖ್ಯ…

Read More

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ. ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ. ( ಮುಖ್ಯಮಂತ್ರಿ Siddaramaiah )

Read More

ಬೆಂಗಳೂರು ನ.19 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ತಾಯಿ ಹಾಗೂ 9 ತಿಂಗಳ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಮಹದೇವಪುರದ ಕಾಡುಗುಡಿ ಠಾಣೆ ವ್ಯಾಪ್ತಿಯ ವೈಟ್ ಫೀಲ್ಡ್ ನ ಹೋಪ್ ಫಾರಂ ಸಿಗ್ನಲ್ ಬಳಿ ನಡೆದಿದೆ. ಭಾನುವಾರ ಮುಂಜಾನೆ 6 ಗಂಟೆ ಸುಮಾರಿಗೆ ಪಾದಾಚಾರಿ ಮಾರ್ಗದಲ್ಲಿ ಮನೆಗೆ ತೆರಳುತ್ತಿದ್ದ ಸೌಂದರ್ಯ ಹಾಗೂ ಮಗಳು ಸುವಿಶಾಲಯ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ಸಾವನ್ನಪ್ಪಿದ್ದಾರೆ. ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಎಇ, ಎಇಇಯನ್ನು ಅಮಾನತುಗೊಳಿಸಿದ್ದೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸಚಿವ ಕೆ.ಜೆ.ಜಾರ್ಜ್‌ ಅವರು, ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಹೇಳಿದ್ದಾರೆ.

Read More

ಮಡಿಕೇರಿ ನ.19 : ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ತಾಲ್ಲೂಕಿನ ಲಾಳನಕೆರೆ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಸಾಕಮ್ಮ ಎಂದು ಗುರುತಿಸಲಾಗಿದೆ. ಕೃಷಿ ಕೆಲಸಕ್ಕೆ ಹೊಲಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಕುಶಾಲನಗರ/ ಕೂಡಿಗೆ ನ.19 : ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸ್ವಚ್ಛ್ ಭಾರತ್ ಮಿಷನ್ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ  ಹಾಗೂ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ  (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ,  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ  ಆಶ್ರಯದಲ್ಲಿ ಪ್ರೌಢಶಾಲೆಯಲ್ಲಿ  ಸ್ವಚ್ಛ ಭಾರತ್ ಅಭಿಯಾನ ಹಾಗೂ  ‘ ಗೋ ಗ್ರೀನ್ ಅಭಿಯಾನ’ದಡಿ  “ಬದಲಾವಣೆಯನ್ನು ವೇಗಗೊಳಿಸುವುದು’ ಎಂಬ ಧ್ಯೇಯದೊಂದಿಗೆ  ” ವಿಶ್ವ ಶೌಚಾಲಯ ದಿನ”-2023 ದ ಜನಜಾಗೃತಿ ನಡೆಸಲಾಯಿತು. “ವಿಶ್ವ ಶೌಚಾಲಯ ದಿನ*ದ ಮಹತ್ವ ಹಾಗೂ ಶೌಚಾಲಯ ಸ್ವಚ್ಛತೆ ಕುರಿತು ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋಪಾಧ್ಯಾಯರೂ ಆದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಜಿಲ್ಲಾ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ , ಶೌಚಾಲಯಗಳು…

Read More

ಸುಂಟಿಕೊಪ್ಪ ನ.19 : ಗೆಲುವಿನ ರುವಾರಿ ಸೆಸ್ಟೋ ಬಾಲ್ ತಂಡದ ನಾಯಕ ಶಾಹಿಲ್ ಉಸ್ಮಾನ್ ಮತ್ತು ಆಟಗಾರ ಇರ್ಷಾದ್ ಮುಸ್ತಫಾ ಅವರುಗಳನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ, ವಿವಿಧ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರು ಸನ್ಮಾನಿಸಿ ಗೌರವಿಸಿದರು. ಇತ್ತೀಚೆಗೆ ಅಂತರಾಷ್ಟ್ರೀಯ ಸೆಸ್ಟೋ ಬಾಲ್ ಚಾಂಪಿಯನ್ ಶಿಪ್‌ನ ಭಾರತ ಪುರುಷರ ತಂಡದ ಥೈಲ್ಯಾಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧ ಜಯಗಳಿಸಿ  ಆಗಮಿಸಿದ ಭಾರತೀಯ ಪುರುಷರ ಸೆಸ್ಟೋ ಬಾಲ್ ತಂಡದ ನಾಯಕ ಶಾಹಿಲ್ ಉಸ್ಮಾನ್ ಹಾಗೂ ಅತ್ಯುತ್ತಮ ಆಟಗಾರ ಇರ್ಷಾದ್ ಮುಸ್ತಫಾ ಅವರನ್ನು ಸುಂಟಿಕೊಪ್ಪ ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯಿಂದ ತೆರೆದ ಜೀಪ್ ನಲ್ಲಿ ಮೆರವಣಿಗೆಯ ಮೂಲಕ ಕರೆತಂದು ಕನ್ನಡ ವೃತ್ತದ ಬಳಿ ಆತ್ಮೀಯ ಸ್ಚಾಗತ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್ ಮಾಲಾರ್ಪಣೆ ಮಾಡುವ ಮೂಲಕ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶಬೀರ್, ಆಲಿಕುಟ್ಟಿ, ವಾಹನ ಚಾಲಕರ ಸಂಘದ ಅಧ್ಯಕ್ಚ ಸುರೇಶ್, ಮಾಜಿ ಅಧ್ಯಕ್ಷರುಗಳಾದ ಅಚ್ಚುಪ, ಬಿ.ಎಂ.ಪೂವಪ್ಪ, ಬಿಲ್ಲವ…

Read More

ಕುಶಾಲನಗರ ನ.19 : ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಕೂಡುಮಂಗಳೂರು ಗ್ರಾಮ ಪಂಚಾಯತಿ ವತಿಯಿಂದ  ಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಆಶ್ರಯದಲ್ಲಿ ಸ್ವಚ್ಛ ಭಾರತ್ ಅಭಿಯಾನ ಹಾಗೂ ಗ್ರೋ ಗ್ರೀನ್ ಅಭಿಯಾನದಡಿ ಪ್ರತಿ ವರ್ಷ ನವೆಂಬರ್ 19 ರಂದು ಆಚರಿಸುವ  ವಿಶ್ವ ಶೌಚಾಲಯ ದಿನ: 2023 ರ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಚತಾ ಜನಜಾಗೃತಿ ಆಂದೋಲನಕ್ಕೂ ಮುನ್ನ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು ಸ್ವತಃ ಶಾಲಾ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಮಕ್ಕಳಿಗೆ ಶೌಚಾಲಯವನ್ನು ಸ್ವಚ್ಚಗೊಳಿಸುವ ಕುರಿತು ಅರಿವು  ಮೂಡಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಟಿ.ಜಿ.ಪ್ರೇಮಕುಮಾರ್ ಅವರು ಶಾಲಾ ಶೌಚಾಲಯ ಸ್ವಚ್ಚಗೊಳಿಸಿದ ಕುರಿತು ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಡಿ. ಭಾಸ್ಕರ್ ನಾಯಕ್ ಶ್ಲಾಘಿಸಿದರು. ಇದೊಂದು ಶಾಲಾ ಮುಖ್ಯಸ್ಥರು ಸ್ವತಃ ಶೌಚಾಲಯ ತೊಳೆಯುವ ಮೂಲಕ ಮಕ್ಕಳಿಗೆ ಹಾಗೂ ಸಮುದಾಯಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರಶಂಸಿದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು ಶಾಲಾ…

Read More