ಮಡಿಕೇರಿ ನ.19 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯತಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದೊಂದಿಗೆ ಕೂಡಿಗೆಯ ಸರ್ಕಾರಿ ಕ್ರೀಡಾ ಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಜನವರಿ 3 ರಿಂದ ನಡೆಯಲಿರುವ 17 ವರ್ಷದೊಳಗಿನ ಬಾಲಕಿಯರ ರಾಷ್ಟ್ರೀಯ ಹಾಕಿ ಟೂರ್ನಿಯನ್ನು ಯಶಸ್ವಿಯಾಗಿ ಸಂಘಟಿಸಲು ನಿರ್ಧರಿಸಲಾಗಿದೆ. ಹಾಕಿ ಟೂರ್ನಿಯ ರೂಪುರೇಷೆ, ಸಂಘಟನೆ, ಸಮಿತಿ ರಚನೆಗೆ ಸಂಬಂಧಿಸಿದಂತೆ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಟೂರ್ನಿಯನ್ನು ಜನರ ಸಹಭಾಗಿತ್ವದಲ್ಲಿ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಸಂಘಟಿಸುವ ಕುರಿತು ಚರ್ಚಿಸಲಾಯಿತು. ರಾಷ್ಟ್ರೀಯ ಹಾಕಿ ಟೂರ್ನಿ ಸಂಘಟನೆ ಹಾಗೂ ರೂಪುರೇಷೆ ಕುರಿತು ಮಾಹಿತಿ ನೀಡಿದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯೂ ಆದ ಟೂರ್ನಿಯ ಸಂಚಾಲಕ ಡಾ. ಸದಾಶಿವಯ್ಯ ಎಸ್.ಪಲ್ಲೇದ್, ಟೂರ್ನಿಯನ್ನು ಕೂಡಿಗೆಯ ಸರ್ಕಾರಿ ಕ್ರೀಡಾ ಶಾಲೆಯ ಟರ್ಫ್ ಮೈದಾನ ಸೇರಿದಂತೆ…
ಲೇಖಕ: admin
ಮಡಿಕೇರಿ ನ.19 : ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸಂಯುಕ್ತ ಹೋರಾಟ-ಕರ್ನಾಟಕ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ 72 ಗಂಟೆಗಳ ಮಹಾಧರಣಿಯ ಪ್ರಚಾರ ಆಂದೋಲನಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಸಮಿತಿ ಸಿದ್ದಾಪುರದಲ್ಲಿ ಚಾಲನೆ ನೀಡಿತು. ಮೂರು ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಪ್ರಚಾರ ಆಂದೋಲನ ನಡೆಯಲಿದ್ದು, ಅದರ ಭಾಗವಾಗಿ ಸಿದ್ದಾಪುರದಲ್ಲಿ ಪ್ರಚಾರ ಜಾಥಾ ನಡೆಸಲಾಯಿತು. ಬೆಲೆ ಏರಿಕೆ ನಿಯಂತ್ರಿಸಬೇಕು, ಅಗತ್ಯ ವಸ್ತುಗಳು, ಆಹಾರ, ಔಷಧಿ, ನೇಕಾರಿಕೆ, ಕೃಷಿ ಯಂತ್ರೋಪಕರಣಗಳ ಮೇಲಿನ ಜಿ.ಎಸ್.ಟಿ ರದ್ದುಪಡಿಸಬೇಕು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು ಎಂದು ಪ್ರಮುಖರು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ದುಡಿಯುವ ಜನರ ಪ್ರಮುಖ 24 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ 72 ಗಂಟೆಗಳ ಮಹಾಧರಣಿ ನಡೆಯಲಿದ್ದು, ಅದರ ಪ್ರಚಾರ…
ಸಿದ್ದಾಪುರ ನ.19 : ಸಮಸ್ತ ಎಂಬ ಆಧ್ಯಾತ್ಮಿಕ ಉಲಮಾ ಸಂಘಟನೆಯ ನಿರ್ದೇಶನದ ಮೇರೆಗೆ ಕೊಡಗು ಜಿಲ್ಲಾ ಜಂಇಯ್ಯತುಲ್ ಉಲಮಾದ ನೇತೃತ್ವದಲ್ಲಿ ನ.21 ರಂದು ಸುಂಟಿಕೊಪ್ಪದಲ್ಲಿ ಉಲಮಾ ಸಮ್ಮೇಳನ ನಡೆಯಲಿದೆ. ಸುಂಟಿಕೊಪ್ಪ ಜಾಮಿಅ ಜೂನಿಯರ್ ಶರಿಯತ್ ಅರೇಬಿಕ್ ಕಾಲೇಜಿನಲ್ಲಿ ಬೆಳಿಗ್ಗೆ 8.30 ಕ್ಕೆ ಕಂಬಿಬಾಣೆಯಲ್ಲಿ ಅಂತ್ಯ ವಿಶ್ರಾಂತಿ ಗೊಳ್ಳುತ್ತಿರುವ ಕಾಕು ಉಪ್ಪಾಪ (ನ, ಮ ) ರವರ ದರ್ಗಾ ಝಿಯಾರತ್ ಮೂಲಕ ಆರಂಭಗೊಳ್ಳುವ ಕಾರ್ಯಕ್ರಮವನ್ನು ಸಮಸ್ತ ಕೇಂದ್ರ ಮುಶಾವರ ಸದಸ್ಯ ಶೈಖುನಾ ಮೂಸಕ್ಕೋಯ ಉಸ್ತಾದ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಉಪ ಖಾಝಿ ಎಂ.ಎಂ.ಅಬ್ದುಲ್ಲಾ ಫೈಝಿ ವಹಿಸಲಿದ್ದಾರೆ. ಕೊಡಗು ಜಿಲ್ಲೆಯ ಸರ್ವ ಉಲಮಾಗಳು ಸಮ್ಮೇಳನದಲ್ಲಿ ಭಾಗವಹಿಲಿದ್ದಾರೆ ಪವಿತ್ರ ಇಸ್ಲಾಂ ಧರ್ಮದ ನೈಜವಾದ ಆಶಯ, ಆದರ್ಶ, ಆಚಾರ ವಿಚಾರಗಳನ್ನು ಮುಸ್ಲಿಂ ಸಮಾಜದ ಜನಸಾಮಾನ್ಯರಿಗೆ ತಲುಪಿಸಿ ಕೊಡುವ ಅತಿ ದೊಡ್ಡ ಜವಾಬ್ದಾರಿಯು ಉಲಮಾಗಳಿಗಿದ್ದು ಪ್ರಸ್ತುತ ಜವಾಬ್ದಾರಿಯನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸುವ ಸಾಮರ್ಥ್ಯವು ಪ್ರತಿಯೊಬ್ಬ ಧಾರ್ಮಿಕ ನೇತಾರನಲ್ಲಿ ಇರಬೇಕಿದೆ. ಇಸ್ಲಾಂ ಧರ್ಮದ ನೈಜ ಮುಖವಾದ ಪವಿತ್ರ ಅಹ್ಲು…
ಬೆಂಗಳೂರು ನ.19 : ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತೆ ದಿನ ಕಾರ್ಯಕ್ರಮದಲ್ಲಿ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.
ಮಡಿಕೇರಿ ನ.19 : ಪರಿಹಾರ ಸಹಾಯವಾಣಿಯಿಂದ ನಿಮಗೆ ವರ್ಗಾಯಿಸಲಾದ ದೂರುಗಳನ್ನು ಮತ್ತು ಬಾಕಿ ಉಳಿದ ದೂರುಗಳನ್ನು ನಿಮಗೆ ನೀಡಿದ ಅವಧಿಯಲ್ಲಿ ಬಗೆಹರಿಸಿ. ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿ ಎಂದು ಪಂಚಾಯತ್ ರಾಜ್ ಇಲಾಖೆ PDO, AE, JE ಗಳಿಗೆ ಸುತ್ತೋಲೆ ಹೊರಡಿಸಿದೆ.
ಮಡಿಕೇರಿ ನ.19 : ಮಾಜಿ ಪ್ರಧಾನಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಬದುಕು ದೇಶದ ಎಲ್ಲಾ ಮಹಿಳೆಯರಿಗೆ ಮಾದರಿಯಾಗಿದೆ ಎಂದು ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಇಂದಿರಾ ಗಾಂಧಿಯವರ 106 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಂದಿರಾ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಮೂಲಕ ಸಾರ್ವಜನಿಕ ಜೀವನ ಆರಂಭಿಸಿ ದೇಶದ ಪ್ರಧಾನಿಯಾಗಿ ಅಪ್ರತಿಮ ಸಾಧನೆ ಮಾಡಿ ಎಲ್ಲಾ ಮಹಿಳೆಯರಿಗೆ ಮಾದರಿಯಾಗಿದ್ದಾರೆ ಎಂದರು. ಇಂದಿರಾ ಗಾಂಧಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತಮ್ಮ ಕೊನೆಯ ಭಾಷಣದಲ್ಲಿ “ನನ್ನ ದೇಹದಲ್ಲಿರುವ ಕೊನೆಯ ರಕ್ತದ ಹನಿ ಕೂಡ ದೇಶಕ್ಕಾಗಿ ಮೀಸಲಾಗಿದೆ” ಎಂದು ನುಡಿದಿದ್ದರು. ಅದೇ…
ಮಡಿಕೇರಿ ನ.19 : ತೋಟದ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಗೋಣಿಕೊಪ್ಪ ಮತ್ತು ವಿರಾಜಪೇಟೆ ಪೊಲೀಸರು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ. ಕಂಡಂಗಾಲ ಗ್ರಾಮದ ನಿವಾಸಿ ವಿಜಯ್ ಭೀಮಯ್ಯ (39) ಎಂಬಾತನೆ ಆರೋಪಿಯಾಗಿದ್ದು, 1 ಕೆ.ಜಿ 606 ಗ್ರಾಂ ಹಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿದಾಗ ತೋಟದ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಕಂಡು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದರು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಸಿಪಿಐ ಗೋವಿಂದರಾಜು, ವಿರಾಜಪೇಟೆ ಗ್ರಾಮಾಂತರ ಠಾಣೆಯ ಪಿಎಸ್‌ಐ ಮಂಜುನಾಥ ಸಿ.ಸಿ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯ ದಕ್ಷತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಗಾಂಜಾ ಸೇರಿದಂತೆ ಮಾದಕ ವಸ್ತುಗಳು ಮಾರಾಟವಾಗುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ…
ಮಡಿಕೇರಿ ನ.19 : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಸ್ ಗಳ ಕೊರತೆಯಿಂದ ಕೊಡಗು ಜಿಲ್ಲೆಯಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿದೆ. ಯೋಜನೆಯ ಲಾಭ ಎಲ್ಲಾ ಮಹಿಳೆಯರಿಗೆ ದೊರೆಯುತ್ತಿಲ್ಲವೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಐದು ತಿಂಗಳಿನಿಂದ ಶಕ್ತಿ ಯೋಜನೆ ಜಾರಿಯಲ್ಲಿದ್ದರೂ ಬಸ್ ಗಳ ಕೊರತೆ ಮತ್ತು ಗ್ರಾಮೀಣ ಮಾರ್ಗದಲ್ಲಿ ಕೆಎಸ್‍ಆರ್‍ಟಿಸಿ ಬಸ್ ಗಳ ಸೇವೆ ಇಲ್ಲದೆ ಇರುವುದರಿಂದ ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯ ಶೇ.70 ರಷ್ಟು ಮಹಿಳೆಯರಿಗೆ ಇದರ ಪ್ರಯೋಜನ ದೊರೆಯುತ್ತಿಲ್ಲವೆಂದು ಗಮನ ಸೆಳೆದಿದ್ದಾರೆ. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳೇ ಹೆಚ್ಚು ಇದ್ದರೂ ಕೆಎಸ್‌ಆರ್‌ಟಿಸಿ ಬಸ್ ಗಳ ಸೇವೆ ಗ್ರಾಮಗಳಿಗೆ ಲಭ್ಯವಿಲ್ಲ. ಗ್ರಾಮಸ್ಥರು ಮುಖ್ಯ ರಸ್ತೆಗೆ ಬರಬೇಕೆಂದರೆ 10-12 ಕಿ.ಮೀ ದೂರ ನಡೆಯಲೇಬೇಕಾಗಿದೆ. ಕೆಎಸ್‌ಆರ್‌ಟಿಸಿ ಸೇವೆಯ ನ್ಯೂನತೆ ಮತ್ತು ಬಸ್ ಗಳ ಕೊರತೆಯಿಂದ ಶಕ್ತಿ ಯೋಜನೆ ಕೊಡಗು ಜಿಲ್ಲೆಗೆ ನಿಷ್ಪ್ರಯೋಜಕವಾಗಿದೆ. ಮಡಿಕೇರಿ, ಕುಶಾಲನಗರ, ಸೋಮವಾರಪೇಟೆ,…
ನಾಪೋಕ್ಲು ನ.19 : ಮರಂದೊಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾಕು ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಲಾಯಿತು. ಕಾರ್ಯಕ್ರಮವನ್ನು ಕಕ್ಕಬೆ ಗ್ರಾ.ಪಂ ಸದಸ್ಯ ಚೋಯಮಾಡoಡ ಹರಿ ಮೊಣ್ಣಪ್ಪ ಉದ್ಘಾಟಿಸಿದರು. ನಾಪೋಕ್ಲು ಪಶು ವೈಧ್ಯಾಧಿಕಾರಿ ಡಾ.ಶಿಲ್ಪಾ ಶ್ರೀ ಮಾರ್ಗದರ್ಶನದಲ್ಲಿ ಹಿರಿಯ ಪಶು ವೈಧ್ಯಕೀಯ ಪರೀಕ್ಷಕ ಸುನಿಲ್ ಮತ್ತು ಕಕ್ಕಬೆ ಪಶು ಸಖಿ ಸುಧಾ 60 ಸಾಕು ನಾಯಿಗಳಿಗೆ ರೇಬಿಸ್ ಮುಂಜಾಗ್ರತ ಲಸಿಕೆ ನೀಡಿದರು. ಕಾರ್ಯಕ್ರಮದಲ್ಲಿ ಮಾರ್ಚಂಡ ವಿಜಯ್ ಸೇರಿದಂತೆ ಹಲವು ಗ್ರಾಮಸ್ಥರು ತಮ್ಮ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ನ.19 : ಮನೆಯ ಸಮೀಪವೇ ಲಾರಿ ಡಿಕ್ಕಿಯಾಗಿ ಅಮ್ಮತ್ತಿ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮೂಕೊಂಡ ಬೋಸ್ ದೇವಯ್ಯ ಅವರು ನಿಧನ ಹೊಂದಿದ್ದಾರೆ. ಮನೆಗೆ ಇಟ್ಟಿಗೆ ತಂದಿದ್ದ ಲಾರಿ ಹಿಂಬದಿಗೆ ಬರುತ್ತಿದ್ದಾಗ ಅಲ್ಲೇ ನಿಂತಿದ್ದ ಬೋಸ್ ದೇವಯ್ಯ ಅವರಿಗೆ ಡಿಕ್ಕಿಯಾಗಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು. ಬಿಜೆಪಿಯ ಹಿರಿಯ ಮುಖಂಡರೂ ಆಗಿದ್ದ ಬೋಸ್ ದೇವಯ್ಯ ಅವರು, ಗೋಣಿಕೊಪ್ಪಲು ಎಪಿಎಂಸಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ::: ಸಂತಾಪ ::: ಬೋಸ್ ದೇವಯ್ಯ ಅವರ ನಿಧನಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಂತಾಪ ಸೂಚಿಸಿದ್ದಾರೆ. ಸರಳ ಸಜ್ಜನಿಕೆಯ ಸ್ನೇಹಜೀವಿ ಬೋಸ್ ದೇವಯ್ಯ ಅವರ ಅಗಲಿಕೆ ಅತೀವ ದು:ಖ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.






