ವಿರಾಜಪೇಟೆ ನ.19 : ಆರ್ಜಿ ಗ್ರಾಮದ ಕಲ್ಲುಬಾಣೆಯ ಕಲ್ಲುಬಾಯ್ಸ್ ತಂಡದ ವತಿಯಿಂದ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕಲ್ಲುಬಾಯ್ಸ್ ನೈಸ್-ಹೈಟೆಕ್ ಕಪ್ 5 ಪ್ಲಡ್ ಲೈಟ್ ಫುಟ್ಬಾಲ್ ಪಂದ್ಯಾವಳಿಯ ಜೆರ್ಸಿ ಯನ್ನು ಭಾರತ ಫುಟ್ಬಾಲ್ ತಂಡದ ಮಾಜಿ ಆಟಗಾರ ಮಹಮ್ಮದ್ ರಾಫಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಮಹಮ್ಮದ್ ರಾಫಿ, ಇತ್ತಿಚೆಗೆ ಫುಟ್ಬಾಲ್ ಆಟದತ್ತ ಯುವಕರು ಆಸಕ್ತಿ ತೋರಿಸುತ್ತಿದ್ದಾರೆ. ದೈಹಿಕ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಉಳಿಸುವ ಕ್ರೀಡಾಕೂಟಗಳು ನಡೆಯಬೇಕು. ಕ್ರೀಡಾ ಮನೋಭಾವನೆಯಿಂದಾಗಿ ಸಾಮಾಜಿಕ ಸಾಮರಸ್ಯ ವೃದ್ಧಿಸಿಕೊಂಡು ಸಮಾಜದ ಆರೋಗ್ಯ ಕಾಪಾಡಬೇಕು ಎಂದರು. ಕೊಡಗಿನಲ್ಲಿ ಫುಟ್ಬಾಲ್ ಅಕಾಡೆಮಿ ಸ್ಥಾಪನೆಯಾಗಬೇಕು, ಇದು ಕ್ರೀಡಾಸಕ್ತರಿಗೆ ಅನುಕೂಲವಾಗಲಿದೆ. ಇದಕ್ಕೆ ಬೇಕಾದ ಸಲಹೆ ಸಹಕಾರವನ್ನು ನೀಡಲು ನಾನು ತಯಾರಿದ್ದೇನೆ. ಕೊಡಗಿನ ಅತಿಥ್ಯಕ್ಕೆ ಮನಸೋತಿದ್ದೇನೆ. ಬಹಳಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಆದರೆ ಈ ಕಾರ್ಯಕ್ರಮದ ಉದ್ಘಾಟನೆ ವಿಭಿನ್ನವಾಗಿದ್ದು, ಮನಸ್ಸಿಗೆ ಸಂತೋಷ ತಂದಿದೆ ಎಂದು ಅಭಿಮಾನ ವ್ಯಕ್ತಪಡಿಸಿದರು. ಇದೀಗ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಿರುವುದು ಮಹತ್ವದ್ದಾಗಿದೆ. ಕ್ರೀಡೆಗಳು ಆತ್ಮಸ್ಥೈರ್ಯ…
ಲೇಖಕ: admin
ಮಡಿಕೇರಿ ನ.19 : ಯಾವುದೇ ವ್ಯಕ್ತಿ ಪೋಷಕರನ್ನು ಕಳೆದುಕೊಂಡ, ತಿರಸ್ಕರಿಸಲ್ಪಟ್ಟ, ತ್ಯಜಿಸಲ್ಪಟ್ಟ ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು ಅಥವಾ ದತ್ತು ಪಡೆಯುವುದು ಮಾಡಿದಲ್ಲಿ ಅಂತಹ ವ್ಯಕ್ತಿಗೆ ಐದು ವರ್ಷಗಳ ಅವಧಿಯವರೆಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದು. ಒಂದು ವೇಳೆ ಇಂತಹ ಅಪರಾಧಗಳಲ್ಲಿ ಯಾವುದೇ ಆಸ್ಪತ್ರೆ, ನರ್ಸಿಂಗ್ ಹೋಮಿನ ಅಥವಾ ಹೆರಿಗೆ ಕೇಂದ್ರದ ಸಿಬ್ಬಂದಿಗಳು ಶಾಮೀಲಾಗಿದ್ದರೆ ಶಿಕ್ಷೆಯ ಅವಧಿ ಮೂರು ವರ್ಷಗಳಿಗೆ ಕಡಿಮೆ ಇಲ್ಲದಂತೆ ಏಳು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾಗಿದೆ. ಅನಾಥ, ಪರಿತ್ಯಕ್ತ ಮಕ್ಕಳು ಕಂಡು ಬಂದಲ್ಲಿ ಹಾಗೂ ಮಗುವನ್ನು ದತ್ತು ಪಡೆಯಲು ಇಚ್ಚಿಸುವ ಪೋಷಕರು ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ ಹಾಗೂ ದತ್ತು ಮಾರ್ಗದರ್ಶನ ಕೇಂದ್ರ, ಸರ್ಕಾರಿ ಬಾಲಕಿಯರ ಬಾಲಮಂದಿರದ ಆವರಣ, ಮುಳಿಯ ಲೇಔಟ್, ಎಫ್‍ಎಂಕೆಎಂಸಿ. ಕಾಲೇಜು ಹತ್ತಿರ, ಮಡಿಕೇರಿ ದೂ.ಸಂ.08272-200450 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ನ.19 : ಕೊಡಗು ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಮಕ್ಕಳ ದಿನಾಚರಣೆ ಪ್ರಯುಕ್ತ ಸ್ಪರ್ಧಾ” ಕಾರ್ಯಕ್ರಮವು ನವೆಂಬರ್, 20 ರಂದು ಬೆಳಗ್ಗೆ 11 ಗಂಟೆಗೆ “ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ” ಯಲ್ಲಿ ಸ್ಪರ್ಧೆ ನಡೆಯಲಿದೆ. ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ 2 ವಿಭಾಗಗಳಾಗಿ ವಿಂಗಡಿಸಿ ಯಾವುದಾದರು ಒಂದು ಚಟುವಟಿಕೆಯಲ್ಲಿ ಭಾಗವಹಿಸುವುದು. 9-12, 13-16 ವರ್ಷದ ಮಕ್ಕಳಿಗೆ ಶಾಸ್ತ್ರೀಯ ನೃತ್ಯ/ ಜಾನಪದ ನೃತ್ಯ/ ಕರ್ನಾಟಕ ಶಾಸ್ತ್ರೀಯ ಸಂಗೀತ/ಹಿಂದೂಸ್ತಾನಿ ಸಂಗೀತ/ ಸುಗಮ ಸಂಗೀತ, ವಾದ್ಯ ಸಂಗೀತ/ತಬಲ/ಮೃದಂಗ/ ಕೀಬೋರ್ಡ್ /ಕೊಳಲು/ಡೊಳ್ಳು ಮತ್ತು ನಗಾರಿ, ವಿಜ್ಞಾನ ಸೃಜನಾತ್ಮಕ ಆವಿಷ್ಕಾರ ಹಾಗೂ ಚಿತ್ರ ಕಲೆ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಜೇತ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಹಾಗೆಯೇ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳನ್ನು ನವೆಂಬರ್, 21 ರಂದು ರಾಜ್ಯ…
ಮಡಿಕೇರಿ ನ.19 : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಒಂದು ಮಿಶ್ರ ತಳಿ ಹಸು ಘಟಕ ಅನುಷ್ಠಾನಕ್ಕೆ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ ವಿಶೇಷ ಘಟಕ ಯೋಜನೆಯಡಿ 7 ಮತ್ತು ಗಿರಿಜನ ಉಪಯೋಜನೆಯಡಿ 14 ಗುರಿ ನಿಗದಿಪಡಿಸಲಾಗಿದ್ದು ಘಟಕದ ವೆಚ್ಚ ರೂ.65 ಸಾವಿರ ಸಹಾಯಧನ ರೂ:5,8500 ಶೇ.90), ಫಲಾನುಭವಿಗಳ ವಂತಿಗೆ/ ಬ್ಯಾಂಕ್ ಸಾಲ ರೂ. 6,500 (ಶೇ.10) ರಂತೆ ಘಟಕ ಅನುಷ್ಠಾನಗೋಳಿಸಲಾಗುತ್ತದೆ. ಪ.ಜಾತಿ/ ಪ.ಪಂಗಡ ಮಹಿಳೆಯರಿಗೆ ಶೇ.33.3 ಮತ್ತು ಅಂಗವಿಕಲಕರಿಗೆ ಶೇ.3 ರಷ್ಟು ಅದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಫಲಾನುಭವಿಗಳ ಆರ್.ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ. ಅರ್ಜಿ ನಮೂನೆ…
ಮಡಿಕೇರಿ ನ.18 : ಸಹಕಾರಿ ಕ್ಷೇತ್ರದಲ್ಲಿ ಸಹಕಾರಿಗಳಿಗಾಗಿ ಹಲವು ಸೌಲಭ್ಯಗಳನ್ನು ಕಲ್ಪಿಸುವುದು ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿಕರಿಗೆ ವಿವಿಧ ಸವಲತ್ತುಗಳನ್ನು ತಲುಪಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು ಅವರು ತಿಳಿಸಿದ್ದಾರೆ. ನಗರದ ಬಾಲಭಾವನದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಉನ್ನತೀಕರಣ ದಿನಾಚರಣೆ ಕಾರ್ಯಕ್ರಮದಲ್ಲಿ ಶನಿವಾರ ಪಾಲ್ಗೊಂಡು ಅವರು ಮಾತನಾಡಿದರು. ಸಹಕಾರ ಕ್ಷೇತ್ರವು ವಿಶಾಲ ವ್ಯಾಪ್ತಿ ಹೊಂದಿದೆ. ಕೊನೆಯಿಲ್ಲದ ಸೇವೆ ಎಂದರೆ ಜನ ಸೇವೆ ಕಷ್ಟಕಾಲಕ್ಕೆ ರೈತರಿಗೆ ನೆರವಾಗುವುದು ಎಂದರೆ ಅದು ಸಹಕಾರ ಸಂಘ ಬ್ಯಾಂಕುಗಳು ಎಂದು ತಿಳಿಸಿದರು. ಸಹಕಾರಿ ಯೂನಿಯನ್‍ಗಳು ಸಮೃದ್ಧವಾಗಬೇಕಾದರೆ ರಾಜಕೀಯತ್ವ ನಡೆಯಬಾರದು, ಆಗಲೇ ಸಹಕಾರಿ ಸಂಘ ಹಾಗೂ ಬ್ಯಾಂಕುಗಳು ಉನ್ನತಿ ಕಾಣಲು ಸಾಧ್ಯ. ಹಾಗೆಯೇ ರೈತಾಪಿ ವರ್ಗದ ಜೀವನವೇ ಅತ್ಯಂತ ಶ್ರೀಮಂತ ಜೀವನ. ರೈತರಿಂದಲೇ ಆರ್ಥಿಕತೆ ಸಮೃದ್ಧವಾಗಿರುವುದು ಎಂದು ಎ.ಮಂಜು ಅವರು ವಿವರಿಸಿದರು. ಕೊಡಗು ಜಿಲ್ಲಾ ಸಹಕಾರ…
ಮಡಿಕೇರಿ ನ.18 : ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ಬರಹಗಾರರು ಮತ್ತಷ್ಟು ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಾಹಿತಿ ಹಂಚೆಟ್ಟಿರ ಫ್ಯಾನ್ಸಿಮುತ್ತಣ್ಣ ಅವರು ಹೇಳಿದ್ದಾರೆ. ಕರ್ನಾಟಕ ಸಂಭ್ರಮ 50 ಪ್ರಯುಕ್ತ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ರಾಜೇಶ್ವರಿ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ರಾಜೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ಸಾಹಿತಿ ವಿಜಯ ವಿಷ್ಣುಭಟ್ ಮತ್ತು ದಿ.ಡಿ.ಜೆ.ಪದ್ಮನಾಭ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕೊಡಗಿನ ಮಹಿಳಾ ಸಾಹಿತಿಗಳು’ ವಿಷಯ ಕುರಿತು ಮಾತನಾಡಿದರು. ಕೊಡಗಿನ ಗೌರಮ್ಮ ಹೆಸರಿನಲ್ಲಿ ಪ್ರಶಸ್ತಿ ಪ್ರಾರಂಭವಾದ ನಂತರ ಕೊಡಗು ಜಿಲ್ಲೆಯಲ್ಲಿ ಮಹಿಳಾ ಬರಹಗಾರರ ಸಂಖ್ಯೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಇನ್ನಷ್ಟು ಮಹಿಳಾ ಬರಹಗಾರರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕನ್ನಡ, ಕೊಡವ, ಅರೆಭಾಷೆ ಸೇರಿದಂತೆ ಹಲವು ಭಾಷೆಗಳ ಅಭಿವೃದ್ಧಿಗೆ ಶ್ರಮಿಸಬೇಕು. ಜೊತೆಗೆ ಸಾಹಿತ್ಯದ ಮೂಲಕ ಸಮಾಜದ ಆಗುಹೋಗುಗಳನ್ನು…
ಮಡಿಕೇರಿ ನ.18 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಶಿಕ್ಷಣ ಇಲಾಖೆ ವತಿಯಿಂದ ಮೂರ್ನಾಡು ವೃತ್ತದ 20 ಅಂಗನವಾಡಿ ಕೇಂದ್ರದ ಹಾಗೂ ಪಿಎಂಶ್ರೀ ಶಾಲೆ ಮೂರ್ನಾಡುವಿನ ಸುಮಾರು 400 ಮಕ್ಕಳ ಪ್ರತಿಭೆಗೆ ಒಂದು ಸುಂದರ ವೇದಿಕೆಯನ್ನು ಕಲ್ಪಿಸಲಾಗಿತ್ತು. ಪುಟಾಣಿ ಮಕ್ಕಳು ಛದ್ಮವೇಶ, ನೃತ್ಯ,ಅಭಿನಯ ಗೀತೆ,ಪಾಲ್ಗೊಂಡು ಪದಕಗಳನ್ನು ಪಡೆದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರಶಸ್ತಿ ಪತ್ರ, ಬಹುಮಾನ,,ಡ್ರಾಯಿಂಗ್ ಪುಸ್ತಕ ವಿತರಣೆ ಮಾಡಲಾಯಿತು. ಮಕ್ಕಳ ಪೋಷಕರು, ಶಿಕ್ಷಕರು, ಅಂಗನವಾಡಿ ಶಿಕ್ಷಕರು,ಸಹಾಯಕರಿಗೂ ವಿವಿಧ ರೀತಿಯ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಪದಕಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿತ ಪೊನ್ನಮ್ಮ ಶಾಲಾ ವಿದ್ಯಾರ್ಥಿನಿ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಕಾಂತೂರು ಮೂರ್ನಾಡು ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷರಾದ ದಿವ್ಯ, ಶಾಲಾ ಶಿಕ್ಷಕ ರಾಜೇಶ್, ದಸರಾ ಸಾಂಸ್ಕೃತಿಕ ಸಮಿತಿಯ ತೆನ್ನಿರ ಮೈನಾ, ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿ ವಿ.ಕೆ.ಲಲಿತಾ ಅವರನ್ನು ಸನ್ಮಾನಿಸಲಾಯಿತು.…
ಮಡಿಕೇರಿ ನ.18 : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024 ರ ಸಂಬಂಧ ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು, ತಿದ್ದುಪಡಿ ಇತ್ಯಾದಿ ಸಂಬಂಧ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ತಹಶೀಲ್ದಾರರು ಇತರರು ಇದ್ದರು.
ಸೋಮವಾರಪೇಟೆ ನ.18 : ಸೋಮವಾರಪೇಟೆ ಸಮೀಪದ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶನಿವಾರದಂದು ವಿವಿಧ ಮನರಂಜನಾ ಕ್ರೀಡೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಶಾಲಾ ಮಕ್ಕಳಿಂದಲೇ ವೇದಿಕೆ ಕಾರ್ಯಕ್ರಮ ನಡೆಯಿತು. ಸ್ಫರ್ದಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಂಗೀತ ಕುರ್ಚಿ ಸ್ಪರ್ಧೆ ಪ್ರೇಕ್ಷಕರ ಮನರಂಜಿಸಿತು.
ಸೋಮವಾರಪೇಟೆ ನ.18 : ಸೋಮವಾರಪೇಟೆ ಜೇಸಿಐ ಪುಷ್ಪಗಿರಿ ಸಂಸ್ಥೆಯ ವತಿಯಿಂದ ನಂಜಮ್ಮ ಸಮುದಾಯ ಭವನದಲ್ಲಿ ನಡೆಸಲಾಗುತ್ತಿರುವ ಜೇಸಿ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಚದುರಂಗ ಸ್ಪರ್ಧೆ ನಡೆಯಿತು. ಈ ಸಂದರ್ಭ ಜೇಸಿ ಸಂಸ್ಥೆಯ ಅಧ್ಯಕ್ಷೆ ಎಂ.ಎ. ರುಬೀನಾ, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರಾ ಲಕ್ಷ್ಮೀ ಕುಮಾರ್, ಕಾರ್ಯಕ್ರಮ ಯೋಜನಾಧಿಕಾರಿ ವಿನುತಾ ಸುದೀಪ್ ಸದಸ್ಯರಾದ ಬಿ.ಈ. ಅರಣ್‌ಕುಮಾರ್ ಇದ್ದರು.






