ಲೇಖಕ: admin

ಮಡಿಕೇರಿ ನ.18 : ಮಡಿಕೇರಿ ಯೂತ್ ಕ್ರಿಕೆಟ್ ಕ್ಲಬ್(ಎಂವೈಸಿಸಿ) ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.18 ರಿಂದ 24 ರವರೆಗೆ ಜಿಲ್ಲಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ ನ ಉಪಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಪ್ಪ ಅವರ ಪರಿಶ್ರಮದಿಂದ 39 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಎಂವೈಸಿಸಿ, ಕ್ರಿಕೆಟ್ ಆಟಕ್ಕೆ ಉತ್ತೇಜನ ನೀಡುತ್ತಾ, ಪಂದ್ಯಾವಳಿಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ನೋಂದಾಯಿತ ಜಿಲ್ಲೆಯ ಎರಡು ಕ್ಲಬ್‌ಗಳಲ್ಲಿ ಎಂವೈಸಿಸಿ ಕೂಡ ಒಂದಾಗಿದೆ. ಕ್ಲಬ್‌ನಿಂದ ನಿರಂತರವಾಗಿ ಪಂದ್ಯಾವಳಿಗಳನ್ನು ನಡೆಸಲು ಸಾಧ್ಯವಾಗದಿದ್ದರು, ಕಳೆದ ಏಳೆಂಟು ವರ್ಷಗಳಿಂದ ತಪ್ಪದೆ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿಕೊಂಡು ಬರುತ್ತಿರುವುದಾಗಿ ಹೇಳಿದರು. ಈ ಬಾರಿಯ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾ ವ್ಯಾಪ್ತಿಯ 18 ರಿಂದ 20 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಆಟಗಾರರು ಕೊಡಗಿನ ಮೂಲದವರೇ ಆಗಿರಬೇಕೆಂದು ಸ್ಪಷ್ಟ…

Read More

ಮಡಿಕೇರಿ ನ.18 : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024ರ ಸಂಬಂಧ ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು, ತಿದ್ದುಪಡಿ ಇತ್ಯಾದಿ ಸಂಬಂಧ ಕೊಡಗಿನ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ. ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಯವರು, ಮತದಾರರ ನೋಂದಣಾಧಿಕಾರಿ ಹಾಗೂ ಹಿರಿಯ ಉಪವಿಭಾಗಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

Read More

ವಿರಾಜಪೇಟೆ ನ.18 : ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಭವಿಷ್ಯದ ಭಾರತ ಪ್ರಗತಿಯತ್ತ ಸಾಗಲು ಸಹಕಾರಿಯಾಗಲಿದೆ ಎಂದು ವಿರಾಜಪೇಟೆ ಜಾನಪದ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಸಾಹಿತಿ ರಂಜಿತ ಕಾರ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆಯ ಮೌಂಟೇನ್ ವ್ಯೂ ಶಾಲೆಯಲ್ಲಿ ನಡೆದ ಸಂಭ್ರಮದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸ್ವಾತಂತ್ರ್ಯ ಭಾರತ ಅಭಿವೃದ್ಧಿಯತ್ತ ಸಾಗಬೇಕಾದರೆ ಇಂದಿನ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಉತ್ತಮ ಆರೋಗ್ಯ, ಮಕ್ಕಳ ಹಕ್ಕು ರಕ್ಷಣೆ, ಶಿಕ್ಷೆ ರಹಿತ ಶಿಕ್ಷಣ, ಪರಿಶುದ್ಧ ಪ್ರೇಮ ಕಲಿಕೆ, ಬದುಕುವ, ವಿಕಸಿಸುವ, ಭಾಗವಹಿಸುವ ಹಕ್ಕುಗಳ ಅನುಪಾಲನೆಯಾಗಬೇಕು ಎಂದರು. ಮಕ್ಕಳಲ್ಲಿ ಯಾವ ರೀತಿಯ ಅಭಿರುಚಿಯಿದೆ ಎಂಬುವುದನ್ನು ಪೋಷಕರು ಮೊದಲು ಅರಿತುಕೊಂಡು ಉತ್ತಮ ಗುರಿಯೆಡೆಗೆ ತಲುಪಿಸಲು ಪ್ರಯತ್ನಿಸಬೇಕು. ಸೋಲು ಗೆಲುವು ಎಂದಿಗೂ ಇದ್ದಿದ್ದೇ, ಆದರೆ ಪ್ರಯತ್ನ ನಮ್ಮದಾಗಿರಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿ ಹಾಗೂ ವಿವಿಧ ಸ್ಪರ್ಧೆಯ ತೀರ್ಪುಗಾರರಾಗಿ ಪಾಲ್ಗೊಂಡಿದ್ದ ವಿರಾಜಪೇಟೆಯ ವಕೀಲರಾದ ಅನುಪಮ ಕಿಶೋರ್ ಮಾತನಾಡಿ ನಮ್ಮ ದೇಶದಲ್ಲಿ ವಿಭಿನ್ನ ಸಂಸ್ಕೃತಿ,…

Read More

ಮಡಿಕೇರಿ ನ.18 : ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಜನಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದರ ನೈತಿಕ ಹೊಣೆ ಹೊತ್ತು ನಗರಸಭಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಗರಸಭೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸದಸ್ಯರುಗಳು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭಾ ಸದಸ್ಯ ಹಾಗೂ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಅವರು, ನಗರಸಭಾ ಅಧ್ಯಕ್ಷರು ತಮಗೆ ದೊರೆತ್ತಿರುವ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ತಮ್ಮ ಹಿತಕ್ಕಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಯೇ ಹೊರತು ನಗರದ ಅಭಿವೃದ್ಧಿಗಾಗಿ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಮತ್ತು ಜನಪರ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದರು. ಅಧ್ಯಕ್ಷರು ನಗರದ ಜನರ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ, ಸರ್ಕಾರದಿಂದ ವಿಶೇಷ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಇವರ ಅಸಮರ್ಥ ಆಡಳಿತದಿಂದಾಗಿ ನಗರೋತ್ಥಾನದ ಮೂರನೇ ಹಂತದ ಅನುದಾನ ರೂ.3 ಕೋಟಿ ಖರ್ಚಾಗದೆ ಸರ್ಕಾರಕ್ಕೆ ವಾಪಾಸ್ಸಾಗಿದೆ. ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸೋಣವೆಂದು ಕರೆ ನೀಡಿದ ಕ್ಷೇತ್ರದ ಶಾಸಕರ…

Read More

ಮಡಿಕೇರಿ ನ.18 : ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಜನಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದರ ನೈತಿಕ ಹೊಣೆ ಹೊತ್ತು ನಗರಸಭಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಗರಸಭೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸದಸ್ಯರುಗಳು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭಾ ಸದಸ್ಯ ಹಾಗೂ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಅವರು, ನಗರಸಭಾ ಅಧ್ಯಕ್ಷರು ತಮಗೆ ದೊರೆತ್ತಿರುವ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ತಮ್ಮ ಹಿತಕ್ಕಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಯೇ ಹೊರತು ನಗರದ ಅಭಿವೃದ್ಧಿಗಾಗಿ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಮತ್ತು ಜನಪರ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದರು. ಅಧ್ಯಕ್ಷರು ನಗರದ ಜನರ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ, ಸರ್ಕಾರದಿಂದ ವಿಶೇಷ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಇವರ ಅಸಮರ್ಥ ಆಡಳಿತದಿಂದಾಗಿ ನಗರೋತ್ಥಾನದ ಮೂರನೇ ಹಂತದ ಅನುದಾನ ರೂ.3 ಕೋಟಿ ಖರ್ಚಾಗದೆ ಸರ್ಕಾರಕ್ಕೆ ವಾಪಾಸ್ಸಾಗಿದೆ. ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸೋಣವೆಂದು ಕರೆ ನೀಡಿದ ಕ್ಷೇತ್ರದ ಶಾಸಕರ…

Read More

ಮಡಿಕೇರಿ ನ.18 : ಶಾಲೆಗಳಿಗೆ ಸಾಹಿತ್ಯವನ್ನು ಕೊಂಡೊಯ್ಯುವ ಮೂಲಕ ವಿದ್ಯಾರ್ಥಿಗಳನ್ನು ಸಾಹಿತ್ಯಾಸಕ್ತರನ್ನಾಗಿ ಮಾಡಿ ಕನ್ನಡ ಭಾಷೆಯನ್ನು ಬೆಳೆಸುವ ಕಾರ್ಯಕ್ರಮ ಪ್ರತಿಯೊಂದು ಶಾಲೆಗಳಲ್ಲಿ ವ್ಯವಸ್ಥಿತವಾಗಿ ನಡೆಯಬೇಕೆಂದು ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ ತಿಳಿಸಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ಹಾಕತ್ತೂರು ಪ್ರೌಢಶಾಲೆಯಲ್ಲಿ ನಡೆದ ಬಿ.ಆರ್.ಸಾಯಿನಾಥ್ ಮತ್ತು ತ್ರಿಭಾಷಾ ಸಾಹಿತಿ ಮುಲ್ಲೇಂಗಡ ದಿ.ಬೇಬಿ ಚೋಂದಮ್ಮ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕೊಡಗಿನ ಮಹಿಳಾ ಸಾಹಿತ್ಯದಲ್ಲಿ ಕಥೆಗಾರ್ತಿ ಗೌರಮ್ಮ ಅವರ ಸಾಧನೆಯ ಕುರಿತು ಶ್ಲಾಘಿಸಿದ ದೊಡ್ಡೇಗೌಡರು, ನಂಜನಗೂಡು ತಿರುಮಲಾಂಭ ಕಲ್ಯಾಣಮ್ಮನವರ ಸಮಕಾಲೀನರಾಗಿ ಗೌರಮ್ಮನವರು ಬರೆದ ಪುಸ್ತಕಗಳು ಇಂದು ಓದುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ ಎಂದರು. ಹತ್ತನೇ ಶತಮಾನದ ಕವಿ ನಾಗವರ್ಮ 15ನೇ ಶತಮಾನದ ಜೈನ ಕವಿ ದೇವಪ್ಪ, ರೆ.ಫಾ.ಕಿಟೆಲ್ ಅನಂತರ ಪಂಜೆ ಮಂಗೇಶರಾಯರು, ಭಾರತೀಸುತರು , ಗೌರಮ್ಮ, ಡಿ.ಎನ್. ಕೃಷ್ಣಯ್ಯನವರು ಕೊಡಗಿನಲ್ಲಿ ಬೆಳೆಸಿದ…

Read More

ಗರಿಯಾಬಂದ್ ನ.17 : ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದ ಬಳಿ ನಡೆದಿದೆ. ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು ಸ್ಫೋಟ ಸಂಭವಿಸಿತು. ಹುತಾತ್ಮ ಐಟಿಬಿಪಿ ಸಿಬ್ಬಂದಿಯನ್ನು ಹೆಡ್ ಕಾನ್‌ಸ್ಟೆಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಬಂದಿದ್ದ ಮತಗಟ್ಟೆ ತಂಡವು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

Read More

ಬೆಂಗಳೂರು ನ.17 : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ  ಬಿಜೆಪಿ ಶಾಸಕ ಆರ್.ಅಶೋಕ್ ಅವರು ಆಯ್ಕೆಯಾಗಿದ್ದಾರೆ. ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.

Read More

ಬೆಂಗಳೂರು ನ.17 : ಬಿಜೆಪಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ವರಿಷ್ಠರು ಬೆಂಬಲ ಸೂಚಿಸಿದ ಹಿನ್ನೆಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಇಂದು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಎನ್ ಡಿಎ ಜೊತೆಗಿನ ಮೈತ್ರಿ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿದ್ದ ಇಬ್ರಾಹಿಂ ಅವರನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಿದ್ದಾರೆ. ಕಾಂಗ್ರೆಸ್ ಎಂಎಲ್‌ಸಿ ಆಗಿದ್ದ ಇಬ್ರಾಹಿಂ ಅವರು, ಪಕ್ಷ ತೊರೆದು  ಜೆಡಿಎಸ್‌ ನ ರಾಜ್ಯಾಧ್ಯಕ್ಷರಾಗಿದ್ದರು.

Read More

ಸುಂಟಿಕೊಪ್ಪ ನ.17 : ಲಾರಿ ಹಾಗೂ ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಗದ್ದೆಹಳ್ಳದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿಗೆ ಬರುತ್ತಿದ್ದ ಓಮ್ನಿ ಹಾಗೂ ಮಡಿಕೇರಿಯಿಂದ ಸುಂಟಿಕೊಪ್ಪದ ಕಡೆಗೆ ತೆರಳುತ್ತಿದ್ದ ಲಾರಿ ಗದ್ದೆಹಳ್ಳದ ತಿರುವಿನಲ್ಲಿ ಡಿಕ್ಕಿಯಾಗಿದೆ. ಘಟನೆಯಿಂದ ಓಮ್ನಿಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More