ಮಡಿಕೇರಿ ನ.17 : ಮಂಗಳೂರಿನ ಕೇಶವ ಸ್ಮೃತಿ ಸಂವರ್ಧನ ಸಮಿತಿ ವತಿಯಿಂದ ನ.19 ರಂದು ಕೊಡಗು ಜಿಲ್ಲಾ ಮಹಿಳಾ ಸಮನ್ವಯದ “ನಾರೀ ಶಕ್ತಿ ಸಂಗಮ” ಮಹಿಳಾ ಸಮ್ಮೇಳನ ಮಡಿಕೇರಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ 2 ಗಂಟೆಯವರೆಗೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ನಡೆಯಲಿರುವ ಸಮ್ಮೇಳನ ರಾಷ್ಟ್ರೀಯ ಚಿಂತನೆ, ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷತೆ, ಗ್ರಾಮೀಣ ಕೃಷಿ ವಿಚಾರಗಳ ಬಗ್ಗೆ ಬೆಳಕು ಚೆಲ್ಲಲಿದೆ. ಕಾರ್ಯಕ್ರಮವನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಪುಷ್ಪಾ ಕುಟ್ಟಣ್ಣ ಉದ್ಘಾಟಿಸಲಿದ್ದು, ಸಾಹಿತಿ ಜಲಾ ಕಾಳಪ್ಪ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತೆ ವಸಂತ ಸ್ವಾಮಿ “ಭಾರತೀಯ ಚಿಂತನೆಯಲ್ಲಿ ಮಹಿಳೆ, ಭಾರತದ ವಿಕಾಸದಲ್ಲಿ ಮಹಿಳೆಯರ ಪಾತ್ರ ಮತ್ತು ಸುರಕ್ಷತೆ, ಸ್ವಾವಲಂಬನೆ, ಆರೋಗ್ಯ, ಶಿಕ್ಷಣ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ. ಸಮಾರೋಪ ವಾಚಕರಾಗಿ ಅಖಿಲ ಭಾರತೀಯ ಕಿಸಾನ್ ಸಂಘದ ಸಂಯೋಜಕಿ ವೀಣಾ ಸತೀಶ್ ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲೆಯ ಸಾಧಕ ಮಹಿಳೆಯರು ಸೇರಿದಂತೆ ವೈದ್ಯರು, ವಕೀಲರು,…
ಲೇಖಕ: admin
ನಾಪೋಕ್ಲು ನ.17 : ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸಾರ್ವಜನಿಕ ನೀರಿನ ಟ್ಯಾಂಕ್ ಅನ್ನು ಶ್ವಚ್ಛಗೊಳಿಸಲಾಯಿತು. ನಾಪೋಕ್ಲು ಗ್ರಾಮ ಪಂಚಾಯತಿಗೆ ಸೇರಿದ ಸಾರ್ವಜನಿಕ ನೀರಿನ ಟ್ಯಾಂಕ್ ಅನ್ನು ಸ್ವಯಂ ಸೇವಕರು ಶ್ರಮದಾನದ ಮೂಲಕ ಸ್ವಚ್ಛತೆ ಮಾಡಿದರು. ಈ ಸಂದರ್ಭ ಸ್ವಯಂ ಸೇವಕರಾದ ಚೇತನ್, ದೇವಪ್ಪ, ಚರಣ್, ಸುದೀಪ್, ನಿತೀಶ್, ರಾಜೇಶ್, ಶರತ್ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಮೈಸೂರು ನ. 17: ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ, ಛತ್ತಿಸ್‍ಗಡ, ಮಧ್ಯಪ್ರದೇಶ ಹಾಗೂ ರಾಜಾಸ್ಥಾನದಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಬಂದಿರುವ ಮಾಹಿತಿಯ ಪ್ರಕಾರ ಮೂರು ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂದ ಅವರು. ಕಾಂಗ್ರೆಸ್ ಪರವಾಗಿ ಜನಾದೇಶ ಬಂದರೆ ಲೋಕಸಭಾ ಚುನಾವಣೆ ಮುಂದೂಡಲಾಗುವುದೇ ಎಂಬ ಬಗ್ಗೆ ಉತ್ತರಿಸಿ ಮುಂದೂಡಲಾಗುವುದಿಲ್ಲ ಏಕೆಂದರೆ ಈಗಾಗಲೇ ನವೆಂಬರ್ ಕೊನೆಯಲ್ಲಿದ್ದೇವೆ, ಚುನಾವಣಾ ನೀತಿ ಸಂಹಿತೆ ಮಾರ್ಚ್ ಅಂತ್ಯಕ್ಕೆ ಆಗಬಹುದು ಎಂಬ ನಿರೀಕ್ಷೆ ಇದೆ ಎಂದರು. ಬರಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ:: ರಾಜ್ಯಸರ್ಕಾರ ಬರಪರಿಹಾರ ನೀಡುವ ಸಂಬಂಧ ಕೇಂದ್ರಕ್ಕೆ ಒಂದು ವಾರದ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರದಿಂದ 17900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಾಗೂ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ…
ಮಡಿಕೇರಿ ನ.17 : ತೋಟದ ಲೈನ್ ಮನೆಗಳಲ್ಲಿ ವಾಸವಿರುವ ಕಾರ್ಮಿಕರಿಗೆ ಸ್ವಂತ ಭೂಮಿ ಮತ್ತು ಮನೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆದಿವಾಸಿ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘ, ಕರ್ನಾಟಕ ರೈತ ಸಂಘ (ಎಐಕೆಎಸ್) ಮತ್ತು ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಹಕ್ಕೊತ್ತಾಯಗಳನ್ನು ಮಂಡಿಸಿದರು. ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಮೂಲ ನಿವಾಸಿ ಆದಿವಾಸಿಗಳು, ದಲಿತರು, ಕೃಷಿ ಕಾರ್ಮಿಕರು ಸ್ವಂತ ಸೂರಿಲ್ಲದೆ, ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಶತ-ಶತಮಾನಗಳಿಂದ ಉಳ್ಳವರ ದೌರ್ಜನ್ಯಕ್ಕೆ ಒಳಗಾಗಿ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಂದು ನಿಜವಾದ ಆದಿವಾಸಿಗಳು ಯಾವುದೇ ಸೌಲಭ್ಯಗಳಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಗುರುತಿನ ದಾಖಲೆಗಳನ್ನು ಮಾಲೀಕರು ಕಸಿದುಕೊಂಡು ಸರ್ಕಾರದ ದಾಖಲೆಗಳಲ್ಲಿ ಆದಿವಾಸಿಗಳು ಇಲ್ಲದಂತೆ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು. ಕೊಡಗಿನ ಭೂಮಾಲೀಕ ವರ್ಗಕ್ಕೆ…
ಮಡಿಕೇರಿ ನ.17 : ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾಂಶವನ್ನು (ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ-Farmer Registration and Unified Beneficiary Information System- FRUITS) ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ್ ಅವರು ತಿಳಿಸಿದ್ದಾರೆ. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಗುರುತಿನ ಸಂಖ್ಯೆ (ಎಫ್‍ಐಡಿ) ಪಡೆಯಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕಂದಾಯ ಇಲಾಖೆ ಮತ್ತು ಇತರೆ ಸಂಬಂಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆಹಾನಿ ಪರಿಹಾರ, ಬ್ಯಾಂಕ್ ಸಾಲ ಪಡೆಯಲು ಹಾಗೂ ಯೋಜನೆಗಳಿಗೆ ಫ್ರೂಟ್ಸ್ ಸಂಖ್ಯೆ ಬಳಸಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆಯುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ. 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ…
ಮಡಿಕೇರಿ ನ.17 : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ಮಡಿಕೇರಿ ಮಲ್ಲಂಗಡ ಎಂ.ಎ ಬೆಳ್ಳಿಯಪ್ಪ ಸ್ಮರಣಾರ್ಥ ಮಡಿಕೇರಿಯಲ್ಲಿ ಮೂರುದಿನಗಳ ಕಾಲ ಆಯೋಜಿಸಿರುವ ‘ಕೂರ್ಗ್ ಚಾಂಪಿಯನ್ಸ್ ಕಪ್ – 2013 ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ ದೊರಕಿತು. ಜನರಲ್ ತಿಮ್ಮಯ್ಯ ಟೇಬಲ್ ಟೆನ್ನಿಸ್ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಯವ ಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ, ಜನನಿ ಹೆಲ್ತ್ ಸೆಂಟರ್ ಮಾಲೀಕರಾದ ಡಾ.ನವೀನ್ ಹಾಗೂ ಡಾ.ರಾಜೇಶ್ವರಿ, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ ಹಾಗೂ ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ಸ್ಥಾಪಕಾಧ್ಯಕ್ಷ ಮಲ್ಲೆಂಗಡ ರಚನ್ ಪೆÇನ್ನಪ್ಪ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವಿಸ್ಮಯಿ ಚಕ್ರವರ್ತಿ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕ್ರೀಡಾ ಕೂಟಗಳಿಗೆ ಮೊದಲಿನಿಂದಲೂ ಸಹಕರಿಸುತ್ತಾ ಬಂದಿದ್ದು, ಕೊಡಗಿನ ಮನೆಮನೆಯಲ್ಲೂ ಕ್ರೀಡಾ ಪಟುಗಳಿದ್ದಾರೆ ಅವರನ್ನು ಗುರುತಿಸಿ ಸರಿಯಾಗಿ ಅವಕಾಶ ಕಲ್ಪಿಸಿದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ನಾಡಿನ ಕ್ರೀಡಾಪಟುಗಳು ಸಾಧಿಸುತ್ತಾರೆ.…
ಕುಶಾಲನಗರ ನ.17 : ವಿದ್ಯಾರ್ಥಿಗಳು ವ್ಯಾಸಾಂಗಕ್ಕೆ ನೀಡುವಷ್ಟೇ ಆದ್ಯತೆಯನ್ನು ಕ್ರೀಡೆಗಳಿಗೂ ಮೀಸಲಿಡಬೇಕು. ಆ ಮೂಲಕ ತಮ್ಮಲ್ಲಿನ ಪ್ರತಿಭೆಗಳನ್ನು ಹೊರ ಪ್ರದರ್ಶಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಯಾವುದೇ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಕೀಳರಿಮೆ, ಅಸಹನೆ, ಅತೃಪ್ತಿ ಎಂಬುದು ಹತ್ತಿರವೂ ಸುಳಿಯಲ್ಲ. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮಥ್ರ್ಯ ಹಾಗೂ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದು ಹೆಚ್.ಡಿ.ಕೋಟೆಯ ಸಂತ ಮೇರಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಹಾಗೂ ದೈಹಿಕ ಶಿಕ್ಷಣ ಸಾಧಕ ಅಂಥೋಣಿ ಪ್ರಭುರಾಜ್ ಹೇಳಿದರು. ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಮಹಾನ್ ಪುರುಷರ ಜೀವನ ಹಾಗೂ ಸಾಧನೆಗಳು ಆದರ್ಶವಾಗಬೇಕಿದೆ. ಹಾಗೆಯೇ ಕುಶಾಲನಗರದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯನ್ನು ಕಟ್ಟಿ ಬೆಳೆಸುತ್ತಿರುವ ಸಂಸ್ಥೆಯ ಅಧ್ಯಕ್ಷ ಶಂಭುಲಿಂಗಪ್ಪ ಅವರ ಪರಿಶ್ರಮ ಹಾಗೂ ಸಾಧನೆಯನ್ನು ಪ್ರಭುರಾಜ್ ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಮಕ್ಕಳ ವ್ಯಾಸಾಂಗಕ್ಕೆ ನೀಡುವಷ್ಟೇ ಆದ್ಯತೆಯನ್ನು ಮಕ್ಕಳಲ್ಲಿ ಅಡಗಿರುವ ಸುಪ್ತವಾದ ಪ್ರತಿಭೆಗಳನ್ನು…
ಮಡಿಕೇರಿ ನ.17 ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ನ.24 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ತಿಳಿಸಿದ್ದಾರೆ.
ಮಡಿಕೇರಿ ನ.17 : 8000 ಕ್ಕೂ ಹೆಚ್ಚು ಎಸ್‍ಬಿಐ ಜೂನಿಯರ್ ಅಸೋಷಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಹ ವಿದ್ಯಾರ್ಥಿಗಳು ಡಿಸೆಂಬರ್, 07 ರೊಳಗೆ ವೆಬ್‍ಸೈಟ್ ವಿಳಾಸhttps://bank.sbi/web/careers/current-openings ಅಥವಾ https://ibpsonline.ibps.in/sbijaoct23/ ಕ್ಕೆ ಭೇಟಿ ನೀಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫ಼ೌಂಡೇಶನ್(ರಿ) ಹಾಸನ ಶಾಖೆಯಲ್ಲಿ ನುರಿತ ವಿಷಯ ತಜ್ಞರಿಂದ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ರಿಯಾಯಿತಿ ದರದಲ್ಲಿ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 8660217739 / 08172245135 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಶಾಖೆಯ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿಸಿದ್ದಾರೆ.
ಮಡಿಕೇರಿ ನ.17 : ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಸೋಮವಾರಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂಎಸ್ಸಿ(ಕೃಷಿ/ತೋಟಗಾರಿಕೆ/ಮೀನುಗಾರಿಕೆ/ ಅರಣ್ಯ/ ರೇಷ್ಮೆ) ಆಗಿರಬೇಕು. ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಮ್‍ಎಸ್ ಆಫೀಸ್‍ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ ವಯೋಮಿತಿ 45, ಮಾಸಿಕ ರೂ.30,000 ಗೌರವ ಧನ ನೀಡಲಾಗುವುದು. ಈ ಹುದ್ದೆಗಳಿಗೆ ಅರ್ಹರಿರುವ ಅಭ್ಯರ್ಥಿಗಳು ನವೆಂಬರ್, 24 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ(ಆತ್ಮ ವಿಭಾಗ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು…






