ಲೇಖಕ: admin

ಮಡಿಕೇರಿ ಮೇ 13 NEWS DESK : ಕುಶಾಲನಗರ 220/66/11 ಕೆ.ವಿ ಹಾಗೂ 66/11 ಕೆ.ವಿ ಸುಂಟಿಕೊಪ್ಪ ಮತ್ತು ಮಾದಾಪುರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ಮೇ, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಮಾರ್ಗದಿಂದ ಸರಬರಾಜಾಗುವ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಕಣಿವೆ, ಮಲ್ಲೇನಹಳ್ಳಿ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು, ಶಿರಂಗಾಲ, ಕಾನ್‍ಬೈಲು, ಅಂದಗೋವೆ, ನಾಕೂರು, ಹಾದ್ರೆಹೆರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಆಲೂರು ಸಿದ್ದಾಪುರ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರ, 66/11 ಕೆವಿ ಹಾನಗಲ್ಲು ಶೆಟ್ಟಳ್ಳಿ ಹಾಗೂ 33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ…

Read More

ಗೋಣಿಕೊಪ್ಪಲು ಮೇ 13 NEWS DESK : ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯಿತಿಯ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕೆ.ಆರ್‌.ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ.  ಈ ಹಿಂದೆ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಸಿ.ಅಪ್ಪಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿಗೆ ವರ್ಗಾವಣೆಗೊಂಡ ಹಿನ್ನೆಲೆ, ಮಾಲ್ದಾರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆರ್‍ರಾಜೇಶ್ ಅವರನ್ನು ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ. ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ, ಅರುವತ್ತೊಕ್ಲು, ಕಿರುಗೂರು ಪಂಚಾಯ್ತಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ರಾಜೇಶ್, ಈ ಹಿಂದೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Read More

ಮಡಿಕೇರಿ ಮೇ 13 NEWS DESK : ಸೌತ್ ಏಷ್ಯಾ ಬೋಡಿ ಬಿಲ್ಡಿಂಗ್ ಅಸೋಸಿಯೇಷನ್ ಹಾಗೂ ಶ್ರೀ ರಾಮ ವ್ಯಾಯಾಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ವಿಜಯನಗರದಲ್ಲಿ ಆಯೋಜಿಸಲಾದ ಸೌತ್ ಇಂಡಿಯಾ ಗರಡಿ ಕ್ಲಾಸಿಕ್ಸ್ -2026 ದೇಹದಾರ್ಢ್ಯ ಸ್ಪರ್ಧೆ ಯಲ್ಲಿ ಮೊಹಮ್ಮದ್ ನಬ್ ಹಾನ್ ಭಾಗವಹಿಸಿ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ತನ್ನದಾಗಿಸಿಕೊಂಡಿದ್ದಾರೆ. ಮೊಹಮ್ಮದ್ ನಬ್ ಹಾನ್ ಕುಶಾಲನಗರದ  ನೆಲ್ಲಿಹುದಿಕೇರಿ ಗ್ರಾಮದ ನೌಫಲ್ -ನಸೀಮ ದಂಪತಿಗಳ ಪುತ್ರ. ಇವರ ಸಾಧನೆಗೆ ಸ್ಥಳೀಯ ಡೋಮಿನೋಸ್ ಕಲಾ ಮತ್ತು ಕ್ರೀಡಾ ಯುವಜನ ಸಂಘ ಅಭಿನಂದಿಸಿದೆ.

Read More

ಮಡಿಕೇರಿ ಮೇ 13 NEWS DESK : ಮದೆನಾಡು ಬಳಿ ಕೊಡಗು ಗೌಡ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ 6 ಎಕರೆ ಭೂಮಿ ಕಾಯ್ದಿರಿಸಿದೆ. ಹಾಗೆಯೇ ಭಾಗಮಂಡಲ ಗೌಡ ಸಮಾಜ ನೂತನ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ನಿಗದಿ ಮಾಡಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಅರೆಭಾಷೆ, ಸಂಸ್ಕøತಿ ಮತ್ತು ಅಭಿವೃದ್ಧಿ ಸಂಘ ಇವರ ಸಹಕಾರದಲ್ಲಿ ತೋರ ಸಮುದಾಯ ಭವನದ ಆವರಣದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ನವೆಂಬರ್ ತಿಂಗಳಲ್ಲಿ ನಡೆದ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದಂತೆ 6 ಎಕರೆ ಭೂಮಿ ನೀಡಿದ್ದಾರೆ. ಹಾಗೆಯೇ ಭಾಗಮಂಡಲ ಗೌಡ ಸಮಾಜ…

Read More

ಮಡಿಕೇರಿ ಮೇ 13 NEWS DESK : ಜಿಲ್ಲೆಯಲ್ಲಿ ಅಕ್ರಮ ಮತ್ತು ಅನಧಿಕೃತ ಹೋಂಸ್ಟೇಗಳ ಪತ್ತೆ ಹಾಗೂ ಪ್ರವಾಸಿಗರ ಸುರಕ್ಷತೆಗಾಗಿ ಪ್ರವಾಸೋದ್ಯಮ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಜಂಟಿ ಆಶ್ರಯದಲ್ಲಿ ಸರ್ವೆ ಕಾರ್ಯ ಆರಂಭಗೊಂಡಿದ್ದು, ನೋಂದಣಿ ಆಗದೆ ಇರುವ ಹೋಂಸ್ಟೇ ಮಾಲೀಕರು ಕಾಲಮಿತಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆ, ನಗರಸಭೆ, ಪುರಸಭೆ ಅಥವಾ ಗ್ರಾಮ ಪಂಚಾಯಿತಿಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್‍ಒಸಿ) ಪಡೆದು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಯಿಸಿಕೊಳ್ಳಬೇಕು, ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ನಿತಿನ್ ಚಕ್ಕಿ ಅವರು ಎಚ್ಚರಿಸಿದ್ದಾರೆ. ನಗರದ ಉಪ ವಿಭಾಗಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಹೋಂಸ್ಟೇ/ ಬೆಡ್ ಮತ್ತು ಬ್ರೇಕ್ ಪಾಸ್ಟ್/ ಹೋಟೆಲ್‍ಗಳ ಸುರಕ್ಷತೆ ಕುರಿತು ಭಿತ್ತಿಪತ್ರ ಬಿಡುಗಡೆ ಮಾಡಿ ಹೋಂಸ್ಟೇಗಳ ಮಾಲೀಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಧಿಕಾರಿಗಳು ಹೋಂ-ಸ್ಟೇಗಳ ಸರ್ವೇ ನಡೆಸುವ ಸಂದರ್ಭದಲ್ಲಿ ಮಾಲೀಕರು ಸರಿಯಾದ ಮಾಹಿತಿ ನೀಡಬೇಕು. ಈ ಹಿಂದೆ…

Read More

ಮೈಸೂರು ಮೇ 13 NEWS DESK : ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿ ಯಾದವಗಿರಿ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಲಾರಿಗೆಳಿಗೆ ಸಂಚಾರ ಮುಕ್ತ ಮಾಡಿಸುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಯಶಸ್ವಿಯಾಗಿದ್ದಾರೆ. ಯಾದವಗಿರಿ ಬಳಿಯ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಬಂದ್‌ ಮಾಡಿದ್ದರಿಂದ ಲಾರಿಗಳು ಐದಾರು ಕಿಲೋ ಮೀಟರ್‌ ಬಳಸಿ ಬರಬೇಕಾಗಿತ್ತು. ಇದರಿಂದ ಲಾರಿ ಮಾಲೀಕರಿಗೆ ಸಾವಿರಾರು ರೂಪಾಯಿ ನಷ್ಟವಾಗುತ್ತಿತ್ತು. ಈ ಕುರಿತು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಹತ್ತು ದಿನಗಳ ಹಿಂದೆ ಸಂಸದ ಯದುವೀರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಯದುವೀರ್‌ ಒಡೆಯರ್‌ ರೈಲ್ವೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ರೈಲ್ವೆ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು. ನಂತರ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌, ಈ ಸಮಸ್ಯೆ ಕುರಿತು ನನ್ನ ಗಮನಕ್ಕೆ ಬಂದ ಕೂಡಲೇ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿದೆ. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಅಧಿಕಾರಿಗಳು ಬೈಪಾಸ್‌…

Read More

ಮಡಿಕೇರಿ ಮೇ 13 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಾರಿಕಾಡು ಗ್ರಾಮದಲ್ಲಿ  ರೂ.30 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಸಾರ್ವಜನಿಕರು ಇದರ ಸದ್ಬಳಕೆಯನ್ನು ಮಾಡುತ್ತ ನಾಡಿದ ಒಳಿತಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಕೆಡಿಪಿ ಸದಸ್ಯರು ಪ್ರಶಾಂತ್, ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಮಾಜಿ ಪುರಸಭೆ ಅಧ್ಯಕ್ಷರು ದೇಚಮ್ಮ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಅಧ್ಯಕ್ಷರು ಶಬೀರ್, ಬೂತ್ ಅಧ್ಯಕ್ಷರು ವಿಜಯ್ ಕುಮಾರ್, ಮಾಜಿ ಅಧ್ಯಕ್ಷರು ಜೆಫ್ರೀ ಉತ್ತಪ್ಪ, ಇಸ್ಮಾಯಿಲ್, ಆಲಿ, ಮಳೇಟೀರ ಶುಭ ಸುಬ್ಬಯ್ಯ, ಸೂರಜ್ ಹೊಸೂರು, ಕುಂಡಚ್ಚಿರ ಮಂಜು ದೇವಯ್ಯ, ಜಿತನ್, ಧ್ಯಾನಿ, ಪಾಲಂಗಾಲ ಬೂತ್ ಅಧ್ಯಕ್ಷರು ಜಾಲು ಚೆಂಗಪ್ಪ,ಮಿಟ್ಟು ಅಯ್ಯಪ್ಪ, ಹರಿದಾಸ್,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಮೇ 13 NEWS DESK :  ಕ್ಷೇತ್ರದ ಜನತೆಯನ್ನು ದಶಕಗಳಿಂದ ಕಾಡುತ್ತಿರುವ ಆನೆ-ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ, ಈಗಾಗಲೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಹಲವಾರು ಪ್ರಮುಖ ನಿರ್ಣಯಗಳನ್ನು ಕೈಗೊಂಡು, ಕ್ಷೇತ್ರಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಅದರ ಭಾಗವಾಗಿ ವಿರಾಜಪೇಟೆ ತಾಲೂಕು ಪಾಲಂಗಾಲ ಗ್ರಾಮಕ್ಕೆ ಆಗಮಿಸಿದ ಶಾಸಕರು, ಈ ಭಾಗದಲ್ಲಿ ಅರಣ್ಯ ಇಲಾಖೆ ವತಿಯಿಂದ ಆನೆ ಹಾವಳಿ ತಡೆಗಟ್ಟಲು ರೂ.28 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಚಾಲನೆ ನೀಡಿದರಲ್ಲದೆ, ಈಗಾಗಲೇ ಈ ಸಂಬಂಧ ನಡೆಯುತ್ತಿರುವ ಕಾಮಗಾರಿಯ ವೀಕ್ಷಣೆ ಹಾಗೂ ಅಧಿಕಾರಿಗಳಿಂದ ಇದರ ಬಗ್ಗೆ ಸಂಪೂರ್ಣ ವಿವರಣೆಗಳನ್ನು ಪಡೆದರು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಗಂಚಿನಲ್ಲಿ ವಾಸಿಸುತ್ತಿರುವ ಮಹಿಳೆಯರು ಸ್ವಾವಲಂಬಿ ಆಗಲು ನೀಡುವ ಹೊಲಿಗೆ ಯಂತ್ರ ಹಾಗೂ ಇತರ ಸೌಲತ್ತುಗಳನ್ನು ಶಾಸಕರು ವಿತರಿಸಿದರು.  ಬಳಿಕ ಮಾತನಾಡಿದ ಶಾಸಕರು, ತನ್ನ ಕೋರಿಕೆ ಹಾಗೂ ಪ್ರಯತ್ನದ ಮೇರೆಗೆ, ಕರ್ನಾಟಕ…

Read More

ಮಡಿಕೇರಿ ಮೇ 13 NEWS DESK : ಮೈಸೂರಿನ ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ  ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

Read More

ಮಡಿಕೇರಿ ಮೇ 13 NEWS DESK : ಮಂಗಳೂರಿನ ಎಂಪೀರಿಯಾ ಎಂಟರ್‍ಟೈನ್‍ಮೆಂಟ್ ವತಿಯಿಂದ ನಿರ್ಮಾಣವಾಗಲಿರುವ “ಕೋವಿ ಮತ್ತು ಕೊಳಲು” ಸಿನಿಮಾದ ಮುಹೂರ್ತ ಇದೇ ಮೇ 15 ರಂದು ನಗರದ ರಾಜಾಸೀಟಿನಲ್ಲಿ ನಡೆಯಲಿದೆಯೆಂದು ಚಿತ್ರ ನಿರ್ದೇಶಕ ಬಾಸುಮ ಕೊಡಗು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಗುರುರಾಜ ಮಾರ್ಪಳ್ಳಿಯವರ “ಗರ್ಭ” ಕಾದಂಬರಿ ಆಧಾರಿತ ಕೋವಿ ಮತ್ತು ಕೊಳಲು ಸಿನೆಮಾವು ಕಲಾತ್ಮಕ ಹಾಗೂ ವಾಣಿಜ್ಯಕ ಚಲನಚಿತ್ರವಾಗಿದೆ. ಇದರ ಚಿತ್ರೀಕರಣ ಮಡಿಕೇರಿ, ಸಂಪಾಜೆ ಮತ್ತು ಸುಳ್ಯ ವಿಭಾಗಗಳಲ್ಲಿ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಕಲೆ ಮತ್ತು ಹಣದ ನಡುವಿನ ಸಂಘರ್ಷಗಳ ಕುರಿತ ಕಥೆಯನ್ನು ಇಲ್ಲಿ ಚಲನಚಿತ್ರವಾಗಿ ನಿರ್ಮಿಸಲಾಗುತ್ತಿದೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶೌರ್ಯತೇಜ ಅವರು ಬರೆದಿದ್ದಾರೆ. ಛಾಯಾಗ್ರಾಹಕರಾಗಿ ದೃಶಾ ಕೊಡಗು, ಕಲಾ ನಿರ್ದೇಶನವನ್ನು ಲೋಕೇಶ್ ಊರುಬೈಲು ನಿರ್ವಹಿಸಲಿದ್ದಾರೆ. ಚಿತ್ರವನ್ನು ಪ್ರಸಕ್ತ ಸಾಲಿನ ಸೆಪ್ಟಂಬರ್‍ನಲ್ಲಿ ತೆರೆಗೆ ತರಲು ಉದ್ದೇಶಿಸಲಾಗಿದೆಯೆಂದು ತಿಳಿಸಿದರು. ಚಿತ್ರದಲ್ಲಿ ಅಕ್ಷತಾ ಪಾಂಡವಪುರ, ನವೀನ್ ಡಿ.ಪಡೀಲ್, ಮೋಹನ್ ಶೇಣಿ, ಮುರಳಿ ಶೃಂಗೇರಿ, ಆನಂದ…

Read More