ಲೇಖಕ: admin

ವಿರಾಜಪೇಟೆ ನ.17 : ಸಮರ್ಥ ಕನ್ನಡಿಗರು ಸಂಸ್ಥೆ ವತಿಯಿಂದ ಮಡಿಕೇರಿಯ ಓಂಕಾರ ಸದನದಲ್ಲಿ ನಡೆದ ನಿಮ್ಮ ಪ್ರತಿಭೆ ನಮ್ಮ ವೇದಿಕೆ -2023 ಕನ್ನಡ ಹಬ್ಬ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆಯ ‘ಈಶಾನ್ವಿ ಡಾನ್ಸ್ ಟ್ರೂಫ್’ ತಂಡದಿಂದ ನಡೆದ ಆದಿವಾಸಿಗಳ ನೃತ್ಯ ಪ್ರದರ್ಶನ ಮೆಚ್ಚುಗೆಗೆ ಪಾತ್ರವಾಯಿತು. ನೃತ್ಯ ಪ್ರದರ್ಶನದಲ್ಲಿ ಬಿ.ಕೆ.ಈಶಾನ್ವಿ, ಬಿ.ಈ.ಲಕ್ಷಾ, ಎನ್.ಆರ್. ಹನ್ಸ್‍ನಿ, ಬಿ.ಆರ್. ಅನುಶ್ರಿ, ಬಿ.ಆರ್. ಕಾವ್ಯಶ್ರಿ, ಎಂ.ಎಸ್. ಸಾನ್ವಿ, ಸಿ.ತೇಜಸ್ವಿನಿ, ಹೆಚ್.ವಿ. ವರ್ಷಿತಾ ಸೇರಿದಂತೆ 8 ಮಕ್ಕಳು ನೃತ್ಯ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದು ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರವನ್ನು ಪಡೆದುಕೊಂಡರು. ಸಮರ್ಥ ಕನ್ನಡಿಗರು ಸಂಸ್ಥೆಯ ಸಂಚಾಲಕಿ ಕೆ.ಜಯಲಕ್ಷ್ಮಿ, ಮಡಿಕೇರಿ ಜಾನಪದ ಪರಿಷತ್ತಿನ ಅಧ್ಯಕ್ಷ ಅನಿಲ್ ಹೆಚ್.ಟಿ., ವಿರಾಜಪೇಟೆ ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಜಿತ ಕಾರ್ಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.17 : ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಮೂರು ರಾಷ್ಟçಗಳಾದ ಬ್ಯಾಂಕಾಕ್, ಥೈಲ್ಯಾಂಡ್ ಮತ್ತು ಶ್ರೀಲಂಕಾ ನಡುವಿನ ಅಂತರರಾಷ್ಟ್ರೀಯ ಸೆಸ್ಟೋಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ನಾಗಿ ಹೊರಹೊಮ್ಮಿದ ಭಾರತ ತಂಡಕ್ಕೆ ಚಿನ್ನದ ಪದಕ ಗಳಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತ ಸೆಸ್ಟೋಬಾಲ್ ತಂಡದ ನಾಯಕ, ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿ ಮಹಮ್ಮದ್ ಶಾಹಿಲ್ ಉಸ್ಮಾನ್ ಅವರನ್ನು ಕಾಲೇಜ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ದ್ವಿತೀಯ ಬಿಬಿಎ ವಿದ್ಯಾರ್ಥಿಯಾಗಿರುವ ಮಹಮ್ಮದ್ ಶಾಹಿಲ್ ಉಸ್ಮಾನ್ ರ ಕ್ರೀಡಾ ಸಾಧನೆಯ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿ ಸಂಘದ ಸಂಚಾಲಕ ತಳವಾರ ಬಿ.ಹೆಚ್, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣ ಎಂ.ಪಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ತಿಪ್ಪೇಸ್ವಾಮಿ ಈ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಮಹದೇವಯ್ಯ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶೈಲಶ್ರೀ, ಇಂಗ್ಲೀಷ್ ವಿಭಾಗದ ಸಹಾಯ ಪ್ರಾಧ್ಯಾಪಕ ಅಲೋಕ್ ಬಿಜೈ, ದೈಹಿಕ ಶಿಕ್ಷಣ ವಿಭಾಗದ ರಮೇಶ್ ಹಾಗೂ ಮಹಮ್ಮದ್ ಶಾಹಿಲ್ ಅವರ ತಂದೆ ಉಸ್ಮಾನ್…

Read More

ಕಡಂಗ ನ.17 : ಕೊಡಗಿನ ಪುತ್ತರಿ ಹಬ್ಬದ ಮೂಹೂರ್ತವನ್ನು ಸಂಪ್ರಾದಯದಂತೆ ಅರಪಟ್ಟು ಕಣಿಯಂಡ ಕುಟುಂಬಸ್ಥರು ಅರಪಟ್ಟು ಶ್ರೀ ಭಗವತಿ ದೇವಸ್ಥಾನದಲ್ಲಿ  ಓದಿದರು. ಈ ಸಂದರ್ಭ ಕಣಿಯಂಡ ಪ್ರಕಾಶ್,  ಕಣಿಯಂಡ ನಂಜುಂಡ ಹಾಗೂ ಚೇತನ್  ಮತ್ತು ಕೋಡಿರ ಪ್ರಸನ್ನ , ಕುಲ್ಲಚಂಡ ರಶಿ , ಅನ್ನಂಬಿರ ಗೀರಿಶ್, ಅನ್ನಂಬಿರ ಸತೀಶ್, ಪಾಲಚಂಡ ಸುರೇಶ್ ಹಾಗೂ ಊರಿನವರು  ಹಾಜರಿದ್ದರು. ವರದಿ : ನೌಫಲ್ ಕಡಂಗ  

Read More

ಮಂಗಳೂರು ನ.17 : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ.22ರಂದು ಭಗವಾನ್ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿ ಮತ್ತು ಉಡುಪಿ ಪೇಜಾವರ ಮಠದ ಮುಖ್ಯಸ್ಥ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರ್ತಿ ಪ್ರತಿಷ್ಠಾಪನೆ ಮಾಡಿದ ಒಂದು ದಿನದ ನಂತರ ಭಕ್ತರು ಭೇಟಿ ನೀಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಸುಮಾರು 6 ಅಡಿ ಎತ್ತರದ ಶ್ರೀರಾಮನ ಮೂರ್ತಿಯನ್ನು ಕೆತ್ತನೆ ಮಾಡಲಾಗುತ್ತಿದ್ದು, ಜ.17ರಂದು ಮೆರವಣಿಗೆ ಮೂಲಕ ಸರಯೂ ನದಿಗೆ ತರಲಾಗುವುದು. ಅಭಿಷೇಕದ ನಂತರ ಜನವರಿ 18 ರಂದು ದೇವಸ್ಥಾನದ ಗರ್ಭಗುಡಿಯಲ್ಲಿ ಇಡಲಾಗುವುದು. ಮುಂದಿನ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ವಿಗ್ರಹ ಪ್ರತಿಷ್ಠಾಪನೆಯ ಆಚರಣೆಗಳು ದೇಗುಲ ಲೋಕಾರ್ಪಣೆಗೆ ಐದು ದಿನಗಳ ಮೊದಲು ಪ್ರಾರಂಭವಾಗುತ್ತವೆ ಎಂದು ಮಾಹಿತಿ ನೀಡಿದರು. ಜ.22 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ವಿಶ್ವಪ್ರಸನ್ನ ತೀರ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ನ.17 : ಅರೆಸೇನಾ ಪಡೆಯ ಕೊಡಗು ಜಿಲ್ಲಾ ನಿವೃತ್ತ (ಮಾಜಿ) ಯೋಧರ ಒಕ್ಕೂಟದ 11ನೇ ವಾರ್ಷಿಕ ಮಹಾಸಭೆ ನ.21 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಒಕ್ಕೂಟದ ಕಾರ್ಯದರ್ಶಿ ಎನ್.ಎಂ.ಭೀಮಯ್ಯ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10.30 ಗಂಟೆಗೆ ಒಕ್ಕೂಟದ ಅಧ್ಯಕ್ಷ ಎಂ.ಜಿ.ಯತೀಶ್ ಅವರ ಅಧ್ಯಕ್ಷತೆಯಲ್ಲಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದ ಬಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಸಭೆ ನಡೆಯಲಿದೆ. ಜಿಲ್ಲೆಯ ಅರೆಸೇನಾ ಪಡೆಯ ಮಾಜಿ ಯೋಧರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಎಂ.ಭೀಮಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿರಾಜಪೇಟೆ ನ.17 : ವಿರಾಜಪೇಟೆ ವಲಯ ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನದರ್ಶನ ಪ್ರವಾಸ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಜಯಪ್ರಕಾಶ್ ನಾರಾಯಣ ಪ್ರೌಢಶಾಲೆ ವಿದ್ಯಾರ್ಥಿಗಳು ನಾಗರಹೊಳೆ ಹಾಗೂ ಮತ್ತಿಗೋಡು, ತಿತಿಮತಿ ಆನೆ ಕೇಂದ್ರಗಳಿಗೆ ಭೇಟಿ ಸಸಿಗಳ ಪೋಷಣೆ, ಬೆಳವಣಿಗೆ ಹಾಗೂ ಅವುಗಳ ಮಹತ್ವದ ಕುರಿತು ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್. ಲಾಲ್ ಕುಮಾರ್, ವಲಯ ಅರಣ್ಯ ಅಧಿಕಾರಿ ಕಚೇರಿಯ ಸಿಬ್ಬಂದಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.

Read More

ಮಡಿಕೇರಿ ನ.17 : ಕಳೆದ ಅನೇಕ ವರ್ಷಗಳಿಂದ ಲೈನ್ ಮನೆಗಳಲ್ಲಿ ಸಂಕಷ್ಟದ ಜೀವನ ನಡೆಸುತ್ತಿರುವ ಬಡ ಕಾರ್ಮಿಕ ವರ್ಗಕ್ಕೆ ಸರ್ಕಾರ ಶೀಘ್ರ ವಸತಿ ಸೌಲಭ್ಯ ಕಲ್ಪಿಸದಿದ್ದಲ್ಲಿ ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಕಾರ್ಮಿಕರು ಒಗ್ಗೂಡಿ ಬೃಹತ್ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಐಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಎಚ್ಚರಿಕೆ ನೀಡಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಹರದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಎಐಟಿಯುಸಿ ಸಂಘಟನೆ ವತಿಯಿಂದ ನಿವೇಶನ ಮತ್ತು ವಸತಿ ರಹಿತ ಕಾರ್ಮಿಕರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೃಷಿ ಕಾರ್ಮಿಕರು ಸ್ವಂತ ನಿವೇಶನ ಮತ್ತು ಮನೆ ಇಲ್ಲದೆ ಲೈನ್ ಮನೆಗಳಲ್ಲಿ ಸಂಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಸ್ವಂತ ಮನೆಯನ್ನು ಒದಗಿಸಿಕೊಡಿ ಎಂದು ಕಳೆದ ಅನೇಕ ವರ್ಷಗಳಿಂದ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರೂ ಇಲ್ಲಿಯವರೆಗೆ ಯಾವುದೇ ಸರ್ಕಾರಗಳು ಬಡವರ ಕೂಗಿಗೆ ಸ್ಪಂದಿಸಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಸರ್ಕಾರಿ ಪೈಸಾರಿ ಭೂಮಿ ಇದ್ದರೂ ಇದು ಉಳ್ಳವರ ಪಾಲಾಗುತ್ತಿದೆಯೇ ಹೊರತು ಬಡ ಕೂಲಿ ಕಾರ್ಮಿಕರಿಗೆ ಹಂಚಿಕೆ ಮಾಡುವ ಕಾಳಜಿಯನ್ನು ಜನಪ್ರತಿನಿಧಿಗಳು ತೋರುತ್ತಿಲ್ಲವೆಂದು ಸೋಮಪ್ಪ…

Read More

ವಿರಾಜಪೇಟೆ ನ.17 : ಕೊಡವ ಕ್ರಿಕೆಟ್ ಅಕಾಡೆಮಿ ವತಿಯಿಂದ ನಡೆದ ಅಂತರ್ ಕೊಡವ ಸಮಾಜಗಳ ನಡುವಿನ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊನ್ನಂಪೇಟೆ ಕೊಡವ ಸಮಾಜ ಚಾಂಪಿಯನ್ ಪಟ್ಟ ಮುಡಿಗೇರಿಸಿ ಕೊಂಡಿದ್ದು, ವಿರಾಜಪೇಟೆ ಕೊಡವ ಸಮಾಜ (ಎ) ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ವಿರಾಜಪೇಟೆ ಪದವಿ ಪೂರ್ವ ಮೈದಾನದಲ್ಲಿ ಆರಂಭಗೊಂಡ ಪಂದ್ಯಾವಳಿಯಲ್ಲಿ ನಾಪೋಕ್ಲು, ವಿರಾಜಪೇಟೆ ಎ ಹಾಗೂ ವಿರಾಜಪೇಟೆ ಬಿ, ಟಿ.ಶೆಟ್ಟಿಗೇರಿ ಎ ಹಾಗೂ ಬಿ, ಪೊನ್ನಂಪೇಟೆ, ಕುಶಾಲನಗರ, ಬಾಳೆಲೆ, ಮಕ್ಕಂದೂರು ಮತ್ತು ಮೂರ್ನಾಡು ಕೊಡವ ಸಮಾಜಗಳು ಭಾಗವಹಿಸಿದ್ದವು. ಫೈನಲ್ ಫಲಿತಾಂಶ : ವಿರಾಜಪೇಟೆ ಕೊಡವ ಸಮಾಜ ಎ ಮತ್ತು ಪೊನ್ನಂಪೇಟೆ ಕೊಡವ ಸಮಾಜ ತಂಡಗಳ ನಡುವಿನ ಫೈನಲ್ ಪಂದ್ಯಾವಳಿಯಲ್ಲಿ ಟಾಸ್ ಗೆದ್ದ ಪೊನ್ನಂಪೇಟೆ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ವಿರಾಜಪೇಟೆ ಕೊಡವ ಸಮಾಜದ ಪರವಾಗಿ ಕರ್ನಾಟಕ ಪ್ರೀಮಿಯರ್ ಲೀಗ್‍ನಲ್ಲಿ ಆಡಿರುವ ದರ್ಶನ್ ಮಾಚಯ್ಯ 17 ರನ್ ಗಳಿಸಿ ಔಟಾದರೆ, ನಿಗದಿತ 12 ಓವರ್‍ಗಳಲ್ಲಿ 6 ವಿಕೆಟ್ ನಷ್ಟಕ್ಕೆ 93 ರನ್…

Read More

ಮಡಿಕೇರಿ ನ.17 : ದೇಶದ ಅಭಿವೃದ್ಧಿಗೆ ಸರ್ಕಾರಿ ಕ್ಷೇತ್ರದ ಜೊತೆಗೆ ಸಹಕಾರಿ ಮತ್ತು ಖಾಸಗಿ ಕ್ಷೇತ್ರದ ಪಾಲು ದೊಡ್ಡದಿದ್ದು, ಈ ಮೂರು ಕ್ಷೇತ್ರಗಳ ಹೊಂದಾಣಿಕೆ ಕಾರ್ಯನಿರ್ವಹಣೆಯಿಂದ ದೇಶವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಾಧ್ಯ ಎಂದು ಸಹಕಾರ ಸಂಘಗಳ ಉಪನಿಬಂಧಕರಾದ ಎಂ.ಎಸ್. ಎಸ್. ಕೃಷ್ಣ ಪ್ರಸಾದ್ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ’ ದಿನಾಚರಣೆಯನ್ನು ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಸಹಕಾರ ಇಲಾಖೆಯು ಸಹಕಾರ ಕ್ಷೇತ್ರದ ಕಾರ್ಯಚಟುವಟಿಕೆಗಳನ್ನು ನಿಯಂತ್ರಣದಲ್ಲಿಡಲು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಲು, ಸಹಕಾರ ಸಂಘಗಳ ಮೇಲ್ವಿಚಾರಣೆಯಂತಹ ಕೆಲಸ ನಿರ್ವಹಿಸುತ್ತದೆ. ಸಹಕಾರ ಕ್ಷೇತ್ರದಲ್ಲಿ ಖಾಸಗಿ ಮತ್ತು ಸರ್ಕಾರದ ಪಾಲುದಾರಿಕೆ ಅಗಾಧವಾಗಿದೆ. ಸಹಕಾರ ಕ್ಷೇತ್ರದ ಕಾರ್ಯವ್ಯಾಪ್ತಿಯನ್ನು ಅರಿತು ಕೇಂದ್ರ ಸರ್ಕಾರವು 13…

Read More

ಮಡಿಕೇರಿ ನ.17 : ‘ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ’ಯ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಮಡಿಕೇರಿ ತಾಲೂಕಿನ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ 2023-24ನೇ ಸಾಲಿನ “ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ”ಗಳು ನವೆಂಬರ್, 20 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗುವ ಜನಪದ ಗೀತೆ, ಆಶುಭಾಷಣ, ಪ್ರಬಂಧ, ಸ್ಥಳದಲ್ಲೇ ಪಾಠೋಪಕರಣಗಳ ತಯಾರಿಕೆ, ಸ್ಥಳದಲ್ಲೇ ಚಿತ್ರ ಬರೆಯುವುದು, ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಶಿಕ್ಷಕರು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ. ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಬಹುದು. ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ. “ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ”ಯ ವತಿಯಿಂದ ಇದುವರೆವಿಗೆ ನಡೆಸಲಾಗಿರುವ ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ,…

Read More