ಲೇಖಕ: admin

ಮಡಿಕೇರಿ ನ.17 : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2023-24 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಷ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿ.2 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ನ.17 : 2023-24 ನೆ ಸಾಲಿಗೆ ICDP- MTF ಯೋಜನೆ ಅಡಿಯಲ್ಲಿ ಕಾಫಿ ಮಂಡಳಿಯು ಕಾಫಿ ಬೆಳೆಗಾರರಿಗೆ ಈ ಕೆಳಕಂಡ ಯೋಜನೆಗಳಿಗೆ ಸಹಾಯಧನ ನೀಡಲು ಅನುಮೋದನೆ ದೊರೆತ್ತಿದೆ. 1. ರಿಪ್ಲಾಂಟೇಶನ್ (ಮರುನಾಟಿ)– 25 ವರ್ಷಕ್ಕೂ ಮೀರಿದ ಎತ್ತರದ ಅರೇಬಿಕಾ ಹಾಗೂ 15 ವರ್ಷ ಮೀರಿದ ಡ್ವಾರ್ಫ್ ಅರೇಬಿಕಾ ತಳಿಗಳು ಹಾಗೂ 40 ವರ್ಷ ಮೀರಿದ ರೊಬಸ್ಟಾ ಅನುತ್ಪಾದಕ ತೋಟಗಳಲ್ಲಿ, ಗಿಡಗಳನ್ನು ತೆಗೆದು ಹೊಸ ಗಿಡಗಳನ್ನು ಹಾಕಲು (ಮರುನಾಟಿ). 2. ಕೆರೆ, ತೆರೆದ ರಿಂಗ್ ಬಾವಿ, ನೀರಾವರಿ (ಸ್ಪ್ರಿಂಕ್ಲರ್/ ಡ್ರಿಪ್) ಉಪಕರಣಗಳು. 3. ಕಾಫಿ ಕಣ, ಗೋಡಾನ್ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರಿಗೆ ಮಾತ್ರ). ಸಹಾಯಧನವು ಕೆಳಕಂಡ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ. 1. 25 ಎಕರೆ ಒಳಗಿನ ವೈಯಕ್ತಿಕ ಸಣ್ಣ ಬೆಳೆಗಾರರಿಗೆ ಮಾತ್ರ ಅನ್ವಯವಾಗುವುದು. 2. ಕಳೆದ ಹತ್ತು ವರ್ಷಗಳಲ್ಲಿ ಅಂದರೆ 2013-14 ರಿಂದ ಕಾಫಿ ಮಂಡಳಿಯಿಂದ ಅರ್ಜಿ ಸಲ್ಲಿಸುವ ಕೆಲಸಕ್ಕೆ ಸಹಾಯಧನ ಪಡೆದಿರಬಾರದು. 3.ಸಹಾಯಧನಕ್ಕಾಗಿ ಸಲ್ಲಿಸಬೇಕಾದ ಅಗತ್ಯವಿರುವ ದಾಖಲೆಗಳು…

Read More

ಮಡಿಕೇರಿ ನ.17 :  ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ವತಿಯಿಂದ ಎರಡನೇ ವರ್ಷದ ರಾಜ್ಯಮಟ್ಟದ ಕೊಡವ ವಾಲಗತ್ತಾಟ್ ನಮ್ಮೆಯನ್ನು ಅಮ್ಮತಿ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಡಿಸೆಂಬರ್ 12ರಂದು ಅಮ್ಮತ್ತಿ ಕೊಡವ ಸಮಾಜದ ಅವರಣದಲ್ಲಿ ಕೊಡವ ವಾಲಗತ್ತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು ಪುರುಷರು ಹಾಗೂ ಮಹಿಳೆಯರು ಎಂದು ಬೇರೆ ಬೇರೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ತಲಾ ಐದು ವಿಭಾಗದಲ್ಲಿ ಸ್ಪರ್ಧೆ ನಡೆಯಲ್ಲಿದ್ದು ಪ್ರಾಥಮಿಕ ವಿಭಾಗ ಎಂದು ಒಂದರಿಂದ 7ನೇ ತರಗತಿಯವರೆಗೆ, 8ನೇ ತರಗತಿಯಿಂದ 10ನೇ ತರಗತಿಯವರೆಗೆ ಹೈಸ್ಕೂಲ್ ವಿಭಾಗ, ಒಂದನೇ ಪಿಯುಸಿಯಿಂದ 3ನೇ ಪದವಿಯವರೆಗೆ ಕಾಲೇಜು ವಿಭಾಗ, ಕಾಲೇಜಿನ ನಂತರ 60 ವಯಸ್ಸಿನವರೆಗೆ ಮತ್ತೊಂದು ವಿಭಾಗ, 60 ವಯಸ್ಸಿನ ಮೇಲ್ಪಟ್ಟು ಹಿರಿಯ ನಾಗರಿಕರ ವಿಭಾಗ ಹೀಗೆ ಐದು ವಿಭಾಗಗಳಲ್ಲಿ ಪುರುಷರು ಮಹಿಳೆಯರು ಎಂದು ತಲಾ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಹೇಳಿದ್ದಾರೆ.…

Read More

 ಮಡಿಕೇರಿ ನ.17 : ಪಾಲಿಬೆಟ್ಟ ಲಯನ್ಸ್ ಕ್ಲಬ್ ಹಾಗೂ ಮಡಿಕೇರಿಯ ” ಇಕ್ಷಾ” ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನವೆಂಬರ್ 18ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸೆ ನಡೆಯಲಿದೆ. ಶನಿವಾರ ಬೆಳಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಪಾಲಿಬೆಟ್ಟದ ಲಯನ್ಸ್ ಸೇವಾ ಭವನ “ಅನುಗ್ರಹ”ದಲ್ಲಿ ಶಿಬಿರ ನಡೆಯಲಿದ್ದು ಡಾ. ಎ.ಜಿ. ಚಿನ್ನಪ್ಪರವರು ಉಚಿತ ತಪಾಸಣೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8222224848 9480084740, 9448647453 ಸಂಪರ್ಕಿಸಬಹುದಾಗಿದೆ.     ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ಮತ್ತು ಕನ್ನಡಕವನ್ನು ನೀಡಲಾಗುವುದು.

Read More

ಸುಂಟಿಕೊಪ್ಪ ನ.16 : ಕಾಫಿ ಪುಡಿ ಅಂಗಡಿ ಮತ್ತು ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಚೋರರು ನುಗ್ಗಿ ನಗದು ಹಾಗೂ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಪ್ರಕರಣ ಸುಂಟಿಕೊಪ್ಪದಲ್ಲಿ ನಡೆದಿದೆ. ಸುಂಟಿಕೊಪ್ಪ ಉಲುಗುಲಿ ರಸ್ತೆಯ ಶ್ರೀಚಾಮುಂಡೇಶ್ವರಿ ಕಾಫಿ ವರ್ಕ್ಸ್ ಗೆ ರಾತ್ರಿ ವೇಳೆ ಬೀಗ ಮುರಿದು ನುಗ್ಗಿದ ಕಳ್ಳರು 5 ಸಾವಿರ ರೂ. ನಗದು ಮತ್ತು ಬ್ಯಾಂಕ್ ಖಾತೆ ಪುಸ್ತಕಗಳನ್ನು ಕದ್ದೊಯ್ದಿದ್ದಾರೆ. ಅದೇ ರಸ್ತೆಯಲ್ಲಿದ್ದ ವೇದಾ ಮೋಟಾರ್ಸ್ ಡ್ರೈವಿಂಗ್ ಸ್ಕೂಲ್ ಗೆ ಲಗ್ಗೆ ಇಟ್ಟ ಚೋರರು ಮೊಬೈಲ್ ನ್ನು ಕೊಂಡೊಯ್ದಿದ್ದಾರೆ. ಬೆಳಗ್ಗೆ ಅಂಗಡಿ ಮಾಲೀಕರು ಬಂದು ನೋಡಿದಾಗ ಬೀಗ ಮುರಿದಿರುವುದು ಗೋಚರಿಸಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಪುತ್ತೂರು ನ.16 : ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ 52 ಸಾವಿರ ಕೋಟಿಗಳಷ್ಟು ಅನುದಾನವನ್ನು ನೀಡಿದೆ. ಜಿಲ್ಲೆಯ ಹಲವೆಡೆ ಕಾಮಗಾರಿಗಳು ಚುರುಕಿನಿಂದ ಸಾಗಿವೆ ಮತ್ತು ಕೆಲವೊಂದು ಕೆಲಸಗಳು ಸಂಪನ್ನಗೊಂಡಿವೆ ಎಂದು ಮಂಗಳೂರು ಕ್ಷೇತ್ರದ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು. ಅವರು ಪುತ್ತೂರಿನ ನೆಹರುನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ಆರಂಭಕ್ಕೆ ಶಿಲಾನ್ಯಾಸ ಮಾಡಿ, ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತಾಡಿದರು. ಇಂದು ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ಕ್ಷೇತ್ರಗಳಲ್ಲಿ ಮುಂದುವರಿದಿದ್ದು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ, ಹೀಗೆ ಭಾರತವನ್ನೂ ವಿಶ್ವವಂದ್ಯವನ್ನಾಗಿ ಮಾಡುವುದು ಪ್ರಧಾನಿ ಮೋದಿ ಸರ್ಕಾರದ ಗುರಿಯಾಗಿದೆ ಎಂದರು. ಇಂದು ಶಿಲಾನ್ಯಾಸಗೊಂಡ ರೈಲ್ವೇ ಮೇಲ್ಸೇತುವೆಯ ಸಂಪೂರ್ಣ ಖರ್ಚು ರೈಲ್ವೇ ಇಲಾಖೆಯೇ ಭರಿಸುತ್ತಿದ್ದು ಪ್ರಾಯಶಃ ಈ ರೀತಿಯ ಕಾಮಗಾರಿಯು ದೇಶದಲ್ಲಿಯೇ ಪ್ರಥಮ ಎಂದು ಹೇಳಿದರು. 6 ತಿಂಗಳ ಕಾಲಾವಕಾಶವಿದ್ದರೂ ಕೇವಲ 92 ದಿನದಲ್ಲಿ ಕೆಲಸವನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರೈಲ್ವೇ ಅಧಿಕಾರಿಗಳು ಭರವಸೆಯನ್ನು ನೀಡಿದ್ದಾರೆ…

Read More

ಮಡಿಕೇರಿ ನ.16 : ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮಾದಾಪುರ ಮತ್ತು ಕೆದಕಲ್ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ನ.17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗರಗಂದೂರು, ಮಾದಾಪುರ, ಕಾಂಡನಕೊಲ್ಲಿ, ಹಟ್ಟಿಹೊಳೆ. ಕುಂಬೂರು, ಬಿಳಿಗೇರಿ, ಸೂರ್ಲಬಿ, ಹಾಲೇರಿ, ಕೆದಕಲ್, ಹೊರೂರು, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.

Read More

ಮಡಿಕೇರಿ ನ.16 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಗರದ ರೆಡ್‍ಕ್ರಾಸ್ ಭವನದಲ್ಲಿ ಮಕ್ಕಳ ದಿನಾಚರಣೆ ಮತ್ತು ಅಂಗನವಾಡಿ ದಿನಾಚರಣೆ ನಡೆಯಿತು. ರೋಟರಿ ಮಡಿಕೇರಿ ವುಡ್ಸ್ ಪ್ರಾಯೋಜಕತ್ವ” ನೀಡುವುದರೊಂದಿಗೆ ಸಕ್ರಿಯವಾಗಿ ಭಾಗವಹಿಸಿದ್ದು, ಸುಮಾರು 180 ಪುಟಾಣಿ ಮಕ್ಕಳಿಗೆ ಆಟಿಕೆಗಳು, ಸರ್ಟಿಫಿಕೇಟ್‍ಗಳು, ಡ್ರಾಯಿಂಗ್ ಪುಸ್ತಕಗಳು ಮತ್ತು ಬಹುಮಾನ ವಿತರಿಸಲಾಯಿತು. ಪುಟಾಣಿ ಮಕ್ಕಳಿಗೆ ಹಾಡು, ನೃತ್ಯ, ಸಣ್ಣ ಕತೆಗಳ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವುಡ್ಸ್ ಅಧ್ಯಕ್ಷ ರೊ.ವಸಂತ್ ಕುಮಾರ್, ಮಕ್ಕಳ ದಿನಾಚರಣೆ ಮತ್ತು ಅಂಗನವಾಡಿ ದಿನವನ್ನು ಆಚರಣೆ ಮಾಡುವುದರ ಮೂಲಕ ಮಕ್ಕಳಿಗೆ ಖುಷಿಯ ವಾತಾವರಣವನ್ನು ಕಲ್ಪಿಸಿಕೊಡುವುದು ನಮ್ಮ ಜವಾಬ್ದಾರಿಯೂ ಆಗಿದೆ. ಪುಟಾಣಿ ಮಕ್ಕಳಲ್ಲಿ ಸದಭಿರುಚಿಯ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸಿ, ಸಮಾಜಕ್ಕೆ, ದೇಶಕ್ಕೆ ಒಳ್ಳೆಯ ಪ್ರಜೆಯನ್ನು ಕೊಡುವಲ್ಲಿ ಅಂಗನವಾಡಿಯೂ ಕೂಡ ಮಹತ್ತರ ಪಾತ್ರವಹಿಸಿದೆ ಎಂದರು. ರೋಟರಿ ಸಂಸ್ಥೆಯು ಹಲವಾರು ವರ್ಷಗಳಿಂದ ಅಂಗನವಾಡಿ ಜೊತೆ ಗುರುತಿಸಿಕೊಂಡು ಇಂತಹ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ವಿಶೇಷವಾಗಿ ಈ ಸಾಲಿನಲ್ಲಿ ತನ್ನ ವಾರ್ಷಿಕ ಚಟುವಟಿಕೆಯಲ್ಲಿ…

Read More

ಮಡಿಕೇರಿ ನ.16 : ಕರ್ನಾಟಕ ಸಂಭ್ರಮ 50 ರ ಸಂಭ್ರಮದಲ್ಲಿ ಕನ್ನಡ ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಎಲ್ಲೆಡೆ ಪಸರಿಸಬೇಕಿದೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಹೇಳಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೊಡಗು ಗೌಡ ಮಹಿಳಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರೋತ್ಸವ ಅಮೃತೋತ್ಸವದ ಸವಿನೆನಪು ಸಾಂಸ್ಕೃತಿಕ ಕಾರ್ಯಕ್ರಮವು ಕೊಡಗು ಗೌಡ ಸಮಾಜದಲ್ಲಿ ನಡೆಯಿತು. ಗಡಿಯಲ್ಲಿ ಕನ್ನಡ ನುಡಿ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದಲ್ಲಿ ಮಹಿಳೆಯರ ಪಾತ್ರ ಮುಖ್ಯವಾದುದು. ಕೊಡಗು ಗೌಡ ಮಹಿಳಾ ಒಕ್ಕೂಟ ಈ ಒಂದು ಕಾರ್ಯವನ್ನು ಯಶಸ್ವಿಯಾಗಿ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಿವೃತ್ತ ಪ್ರಾಂಶುಪಾಲ ಹಾಗೂ ಹಿರಿಯ ಸಾಹಿತಿ ಬಾರಿಯಂಡ ಜೋಯಪ್ಪ ಅವರು ಮಾತನಾಡಿ ಭಾರತ ಅಮೃತೋತ್ಸವದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯಲ್ಲಿ ನಾವಿದ್ದೇವೆ. ಇಂತಹ ಸಂದರ್ಭಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸುವ ಕಾರ್ಯವಾಗುತ್ತಿದೆ. ಕನ್ನಡಿಗರಾದ ನಾವುಗಳು ಸೂಕ್ಷ್ಮ ಮನಸ್ಸಿನವರಾಗಿದ್ದು, ಶಾಂತಿಯೊಂದಿಗೆ ಎಲ್ಲರಲ್ಲೂ ಸಮಾನತೆಯನ್ನು ಕಾಣುವವರು. ಸಾಮನ್ಯವಾಗಿ ಗಡಿಪ್ರದೇಶವನ್ನು ನಾವುಗಳು ಶ್ರೀಮಂತ ಪ್ರದೇಶವೆಂದು…

Read More

ಮಡಿಕೇರಿ ನ.16 : ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲೆಮಾಡು ಕಾನ್ಸಿರಾಮ್ ನಗರ ನಿವಾಸಿಗಳ 90 ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು. ಮಡಿಕೇರಿ ತಾಲ್ಲೂಕು ಹೊದ್ದೂರು ಬಳಿಯ ಪಾಲೆಮಾಡು ಗ್ರಾಮದ ಕಾನ್ಸಿರಾಮ್ ನಗರ ನಿವಾಸಿಗಳ ಕುಂದುಕೊರತೆ ಸಭೆ ನಡೆಸಿ ಶಾಸಕರು ಮಾತನಾಡಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯ ಪಾಲೆಮಾಡು ಬಳಿಯಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ. ಇದರಿಂದ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪಾಲೆಮಾಡು ಕಾನ್ಸಿರಾಮ್ ನಗರದಲ್ಲಿ ವಾಸಿಸುತ್ತಿರುವ ಎಲ್ಲಾ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದರು. ಇಲ್ಲಿನ ರಸ್ತೆ ಅಗಲೀಕರಣ, ರಸ್ತೆ ಸರಿಪಡಿಸುವುದು, ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು, ಬಸ್ ಸೌಕರ್ಯ ಜೊತೆಗೆ ನ್ಯಾಯ ಬೆಲೆ ಅಂಗಡಿ ಕಲ್ಪಿಸುವುದು ಹೀಗೆ ಹಲವು ಮೂಲಭೂತ ಸೌಕರ್ಯವನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದು ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಸರ್ಕಾರ ಬಡ ಜನರ…

Read More