ಲೇಖಕ: admin

ವಿರಾಜಪೇಟೆ ನ.16 : ಕೊಡಗು ರಮ್ಯ ಪರಿಸರದ, ಪ್ರಕೃತಿ ಸೊಬಗಿನ ನಾಡು, ಇದು ಕಲಾವಿದರಿಗೆ ಸ್ಫೂರ್ತಿ ನೀಡುತ್ತದೆ. ಇದನ್ನೆ ಕುಂಚದಲ್ಲಿ ಅರಳಿಸಿದರೆ ಉತ್ತಮ ಕಲಾ ಚಿತ್ರ ಮೂಡಿ ಬರುತ್ತದೆ. ಆದರಿಂದ ಕಲಾವಿದರಿಗೆ ಒತ್ತಾಸೆ ನೀಡುವಂತಹ ತಾಣಗಳನ್ನು ಆರಿಸಿ ಚಿತ್ರ ಕಲಾ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಕೊಡಗು ಜಾನಪದ ಪರಿಷತ್ತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಮೊಗರಗಲ್ಲಿಯಲ್ಲಿ ಸಾಧಿಕ್ ಅರ್ಟ್ ಗ್ಯಾಲರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಲಾ ಉತ್ಸವ 2023 ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅನಂತಶಯನ ಅವರು ಕಲೆ, ಸಾಹಿತ್ಯಕ್ಕೆ ಕೊಡಗು ಮರುಭೂಮಿಯಂತೆ ಎನ್ನುತ್ತಾರೆ, ವಿದ್ಯಾವಂತರಿದ್ದರು ಕಲೆ, ಸಾಹಿತ್ಯ ಕಾರ್ಯಕ್ರಮಗಳಿಗೆ ಬರುವುದಿಲ್ಲ ಹಾಗೂ ಪ್ರೋತ್ಸಾಹ ನೀಡುವುದಿಲ್ಲ. ಆದರಿಂದ ಆರ್ಥಿಕ ಮತ್ತು ಪ್ರೋತ್ಸಾಹ ನೀಡಿ ಕಲಾವಿದರಿಗೆ ವೇದಿಕೆ ಒದಗಿಸಬೇಕು. ನಮ್ಮಲ್ಲಿ ಹೆಸರಾಂತ ಕಲಾವಿದರು ಅನೇಕರಿದ್ದಾರೆ. ಅವರಿಗೆ ನಾವು ಸದಾ ಜೊತೆಯಾಗಿ ನಿಂತು ಸಹಕಾರ ನೀಡಬೇಕು. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು ಜೊತೆಗೆ ಪ್ರತಿಯೊಂದು…

Read More

ಮಡಿಕೇರಿ ನ.16 : ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ನ.19 ರವರೆಗೆ ವಿರಾಜಪೇಟೆಯ ಬಾಳುಗೋಡುವಿನಲ್ಲಿ ನಡೆಯುವ “ಕೊಡವ ನಮ್ಮೆ” ಗೆ ಚಾಲನೆ ದೊರೆತ್ತಿದೆ. ಒಟ್ಟು 12 ಕೊಡವ ಸಮಾಜಗಳ ಹಾಕಿ ತಂಡಗಳ ನಡುವೆ ಪ್ರಶಸ್ತಿಗಾಗಿ ಹಣಾಹಣಿ ನಡೆಯಲಿದೆ. ಕೊಡವ ಸಮಾಜಗಳ ನಡುವಿನ “ಹಾಕಿ ನಮ್ಮೆ” ಯನ್ನು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು ಉದ್ಘಾಟಿಸಿದರು. ಅಮ್ಮತ್ತಿ ಮತ್ತು ಶ್ರೀಮಂಗಲ ಕೊಡವ ಸಮಾಜಗಳ ನಡುವೆ ಪ್ರಥಮ ಪಂದ್ಯ ನಡೆಯಿತು. ಬಾಳುಗೋಡುವಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಂಸ್ಕೃತಿಕ ಕೇಂದ್ರ ಹಾಗೂ ಜನರಲ್ ತಿಮ್ಮಯ್ಯ ಕ್ರೀಡಾ ಕೇಂದ್ರದಲ್ಲಿ ಭಾನುವಾರದವರೆಗೆ “ಕೊಡವ ನಮ್ಮೆ” ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಕೊಡವ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ವಾಟೇರಿರ ಶಂಕರಿ ಪೊನ್ನಪ್ಪ, ಊಟೋಪಚಾರ ಸಮಿತಿ ಅಧ್ಯಕ್ಷ ಕುಂಬೇರ ಮನುಕುಮಾರ್, ಆಟೋಟ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ, ಸಂಚಾಲಕ ಕಂಬೀರಂಡ ಕಿಟ್ಟು ಕಾಳಪ್ಪ, ಪಂದ್ಯಾಟದ ತಾಂತ್ರಿಕ ಸಮಿತಿ ನಿರ್ದೇಶಕ ಅಚ್ಚಕಾಳಿರ ಪಳಂಗಪ್ಪ, ಸದಸ್ಯ ಪಟ್ಟಡ ಮನು ರಾಮಚಂದ್ರ,…

Read More

ಮಡಿಕೇರಿ ನ.16 : ಕನ್ನಡ ಚಲನಚಿತ್ರರಂಗದಲ್ಲಿ ಗುರುತಿಸಿಕೊಂಡ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಶಸ್ತಿ ವಿಜೇತ ನಿರ್ದೇಶಕಿ ಹಾಗೂ ನಿಮಾರ್ಪಕರಾದ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಈ ಬಾರಿಯ ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಿಂಚಲಿದ್ದಾರೆ. FIAPF ಮಾನ್ಯತೆ ಪಡೆದಿರುವ ವಿಶ್ವದ 16 ಚಲನ ಚಿತ್ರೋತ್ಸವದಲ್ಲಿ ಕೊಲ್ಕತ್ತಾ ಚಲನಚಿತ್ರೋತ್ಸವವು ಒಂದಾಗಿದೆ. ಡಿ.5 ರಿಂದ 12ರ ವರೆಗೆ ನಡೆಯಲಿರುವ 2023ನೇ ಸಾಲಿನ 29ನೇ ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ದೇಶಿಸಿರುವ 2ನೇ ಕನ್ನಡ ಚಲನಚಿತ್ರ “ಕಂದೀಲು” ನ್ಯಾಷನಲ್ ಕಾಂಪಿಟೀಷನ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಯಶೋಧ ಪ್ರಕಾಶ್ ಕೊಡವ ಭಾಷೆಯಲ್ಲೂ ಚಲನಚಿತ್ರ ನಿರ್ಮಾಣ ಮಾಡಿದ್ದು, ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. “ಕಂದೀಲು” ಚಿತ್ರದ ಬಾಲನಟಿಯಾಗಿ ಕೊಡಗಿನ ಈರಮಂಡ ಖುಷಿ ಕಾವೇರಮ್ಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಕಾಂತಾರಾ ಖ್ಯಾತಿಯ ಪ್ರಭಾಕರ ಬ.ಕುಂದರ, ವಿನೂತ್ ರಾಜೇಶ್, ವೆಂಕಟೇಶ್ ಪ್ರಸಾದ್, ಚಂದ್ರಕಾಂತ್ ಕೊಟ್ಟುಪಾಡಿ, ಈರಮಂಡ ಹರಿಣಿ ವಿಜಯ್ ನಟಿಸಿದ್ದಾರೆ. ಛಾಯಾಗ್ರಾಹಕರಾಗಿ ಸ್ವಾಮಿ ಗೂಗರ ದೊಡ್ಡಿ ಕಾರ್ಯನಿರ್ವಹಿಸಿದ್ದು, ಚಿತ್ರಕಥೆ-ಸಂಕಲನ…

Read More

ವಿರಾಜಪೇಟೆ ನ.16 : ಪ್ರತಿಯೊಬ್ಬರಲ್ಲೂ ಹಲವು ಪ್ರತಿಭೆಗಳಿದ್ದು, ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯವಾಗಿದೆ ಎಂದು ಸೆಂಟ್ ಆನ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಗಳಲ್ಲಿ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲಾಗುತ್ತದೆ. ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕುವುದರಲ್ಲಿ ಪೋಷಕರು, ಶಿಕ್ಷಕರು ಮಹತ್ವವಾದ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸಬಹುದಾಗಿದೆ ಎಂದರು. ಕಳೆದ 20 ವರ್ಷಗಳಿಂದ ಸರಕಾರ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ.…

Read More

ಮಡಿಕೇರಿ ನ.16 : ಶ್ರೀ ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ನ.19 ರಂದು ದಕ್ಷಿಣ ಕೊಡಗಿನ ಮಾಯಮುಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ದ್ವಿತೀಯ ವರ್ಷದ ‘ಬೊಡಿ ನಮ್ಮೆ’ಯನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಸಣ್ಣುವಂಡ ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ವಂಶಿ ಮಾರ್ಲ ಮತ್ತು ಜೆ.ಕೆ. ಟೈಯರ್ಸ್ ಪ್ರಾಯೋಜಕತ್ವದಲ್ಲಿ ನಡೆಯುವ ಬೊಡಿ ನಮ್ಮೆ ಇಲ್ಲವೆ ಬಂದೂಕಿನಿಂದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ 12 ಬೋರ್, .22 ಮತ್ತು ಏರ್ ಗನ್ ಸೇರಿದಂತೆ ಮೂರು ವಿಭಾಗಗಲ್ಲಿ ನಡೆಯಲಿದೆ. ಇದರಲ್ಲಿ ಇನ್ನೂರ ಐವತ್ತಕ್ಕೂ ಹೆಚ್ಚಿನ ಸ್ಪರ್ಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ಹೇಳಿದರು. ಸ್ಪರ್ಧೆಯ .22 ವಿಭಾಗ 50 ಮೀಟರ್ ಅಂತರದ ಗುರಿಯನ್ನು ಮತ್ತು 12 ಬೋರ್ ವಿಭಾಗ 30 ಮೀಟರ್ ಅಂತರದ ಗುರಿಯನ್ನು ಹೊಂದಿದ್ದು, ಇವೆರಡು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗಳಾಗಿವೆ. ಏರ್ ಗನ್ ವಿಭಾಗ 15 ಮಿಟರ್ ಅಂತರದ…

Read More

ಪಾಟ್ನಾ ನ.16 : ಮಾಜಿ ಯೋಧರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಜನರ ಗುಂಪೊಂದು ಹಲ್ಲೆ ಮಾಡಿ ಕೊಂದು ಹಾಕಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಾಜಿ ಯೋಧರನ್ನು ಬಿಜೇಂದ್ರ ಸಿಂಗ್ (55) ಎಂದು ಗುರುತಿಸಲಾಗಿದ್ದು, ಮಿಥಿಲೇಶ್ ಕುಮಾರ್ (23) ಹಾಗೂ ಆದಿತ್ಯ ಕುಮಾರ್ (25) ಜನರ ಗುಂಪಿನಿಂದ ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಮೂರನೇ ದಾಳಿಕೋರನನ್ನು ಅಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Read More

ಚಿತ್ರದುರ್ಗ ನ.16 : ಲೈಂಗಿಕ ದೌರ್ಜನ್ಯದ ಆರೋಪದಡಿ ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದು, ಚಿತ್ರದುರ್ಗ ಜಿಲ್ಲೆ ಪ್ರವೇಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದೆ ಎಂದು ತಿಳಿದು ಬಂದಿದೆ.

Read More

ಮಡಿಕೇರಿ ನ.16 : ನಗರದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 25ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ನ.15 ರ ಸಂಜೆಯಿಂದಲೇ ದೇವಾಲಯದಲ್ಲಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಇಂದು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. 25ನೇ ಸಾರ್ಥಕತೆಯ ವಾರ್ಷಿಕೋತ್ಸವ ಪ್ರಯುಕ್ತ ದೇವರಿಗೆ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮುಖವಾಡವನ್ನು ಅರ್ಪಿಸಲಾಯಿತು.  ನಗರದ ವಿವಿಧ ಬಡಾವಣೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

Read More

ಕಡಂಗ ನ.16 :  ಕಡಂಗ ಸರಕಾರಿ ಹಿರಿಯ ಪ್ರಾಥಮಿಕ  ಶಾಲಾ ವಿದ್ಯಾರ್ಥಿ ಅಂಕಿತಾ ಮಂಡಲ್  ಚಿತ್ರಕಲಾ ವಿಭಾಗದಲ್ಲಿ  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಮಡಿಕೇರಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಚಿತ್ರಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಶುಭಹಾರೈಸಿದ್ದಾರೆ. ವರದಿ : ನೌಫಲ್   

Read More

ಮಡಿಕೇರಿ ನ.16 :  ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ  ಬಿ.ವೈ.ವಿಜಯೇಂದ್ರ ಅವರನ್ನು ಕೊಡಗು ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು. ಮಾಜಿ ವಿಧಾನಸಭಾ ಮಾಜಿ ಸಭಾಧ್ಯಕ್ಷ  ಕೆ.ಜಿ.ಬೋಪಯ್ಯ  ಅವರ ನೇತೃತ್ವದಲ್ಲಿ  ಬೆಂಗಳೂರಿನ  ನಿವಾಸದಲ್ಲಿ ಭೇಟಿ ಮಾಡಿದ ಬಿಜೆಪಿ ಕಾರ್ಯಕರ್ತರು, ಬಿ.ವೈ.ವಿಜಯೇಂದ್ರ ಅವರನ್ನು ಸನ್ಮಾನಿಸಿ, ಅಭಿನಂದಿಸಿದರು. ಇದೇ ಸಂದರ್ಭ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ  ಶುಭ ಕೋರಿದರು. ಈ ಸಂದರ್ಭ ಕೊಡಗು ಬಿಜೆಪಿ ಮಾಜಿ ಉಪಾಧ್ಯಕ್ಷ  ಪಟ್ರಪಂಡ ರಘು ನಾಣಯ್ಯ, ಮಡಿಕೇರಿ ಮಂಡಲ ಅಧ್ಯಕ್ಷ  ಕಾಂಗಿರ ಸತೀಶ್, ಅಶ್ವಿನ್, ಪಕ್ಷದ ಮುಖಂಡರಾದ ಕಾಳನ ರವಿ, ಮಲ್ಲಂಡ ಮಧು ದೇವಯ್ಯ, ಕೀರ್ತನ್ ಕಡ್ಲೇರ, ವಿಷ್ಣು, ಸುವಿನ್ ಮಾಚಿಮಂಡ, ವಿರಾಜಪೇಟೆ ಮಂಡಲ ಸಾಮಾಜಿಕ ಜಾಲತಾಣ ಸಂಚಾಲಕ  ಸಚಿನ್ ಪೆಮ್ಮಯ್ಯ ಚಿರಿಯಪಂಡ, ಜಿಲ್ಲಾ ಸಹ ಸಂಚಾಲಕ  ಜೀತು ಪೂಜಾರಿ, ಪಟ್ರಪಂಡ ಸುಯೋಗ್ ಕಾರ್ಯಪ್ಪ, ಸಂಪತ್ ಚಂಗುಲಂಡ, ಪವಿ ಪೊನ್ನಪ್ಪ ತೀತಿಮಡ, ನಿತಿನ್ ದೆಯಂಡ, ಚಿರಿಯಪಂಡ ಸರ್ವಿನ್  ಹಾಜರಿದ್ದರು.

Read More