ಮಡಿಕೇರಿ ಅ.9 : ಸಂವಿಧಾನದ ಆರ್ಟಿಕಲ್ 244 R/w 6 ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 3ನೇ ಹಂತದ ಪಾದಯಾತ್ರೆಯ ಮುಂದುವರಿದ ಭಾಗವನ್ನು ದಕ್ಷಿಣ ಕೊಡಗಿನ ಕಿರ್ನಾಲ್‍ನಾಡ್ – ಗುಮ್ಮತ್ಮಾಡ್ ನಾಡ್ ಮಂದ್ (ಕಿರ್ಗೂರ್-ಬೆಸಗೂರ್) ಮತ್ತು ಪತ್ತ್ ಕಟ್‍ನಾಡ್ (ಬೆಕ್ಕೆಸೆಡ್ಲೂರ್-ಕಾನೂರ್) ಮಂದ್ ನಲ್ಲಿ ನಡೆಸಿತು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕೊಡವ ಜಾಗೃತಿ ಸಭೆ ಆರಂಭಿಸಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, 9 ಪ್ರಮುಖ ಹಕ್ಕೊತ್ತಾಯಗಳನ್ನು ಮಂಡಿಸಿದರು. ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಹಕ್ಕೊತ್ತಾಯಗಳ ಕುರಿತು ಸರ್ಕಾರದ ಗಮನ ಸೆಳೆಯಲು ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ಬೇಡಿಕೆ ಈಡೇರುವವರೆಗೆ ಸಿಎನ್‍ಸಿ ಹೋರಾಟ ಮುಂದುವರೆಯಲಿದೆ. ಸರ್ವ ಕೊಡವರು ಈ ಹೋರಾಟದೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ್ಮ ಸಮಗ್ರ ಕುಲಶಾಸ್ತ್ರ ಅಧ್ಯಯನ, ಕೊಡವ “ಸಂಸ್ಕಾರ ಗನ್” ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ…
ಲೇಖಕ: admin
ಕೂಡಿಗೆ ಅ.9 : ಉತ್ತರ ಕೊಡಗಿನ ಕೂಡಿಗೆಯ ಸರ್ಕಾರಿ ಕ್ರೀಡಾಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರು ಮತ್ತು ಬಾಲಕಿಯರ ಎರಡು ದಿನಗಳ ರಾಜ್ಯಮಟ್ಟದ ಮಕ್ಕಳ ಹಾಕಿ ಪಂದ್ಯಾವಳಿ ಆರಂಭಗೊಂಡಿತು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಉಪ ನಿರ್ದೇಶಕ ಹಾಗೂ ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕ್ರೀಡೆಯು ನಮ್ಮ ದೈಹಿಕ ದೃಢತೆ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯ ಕಾಪಾಡುವುದರೊಂದಿಗೆ ಶಿಸ್ತಿನ ಜೀವನ ಮತ್ತು ಉತ್ತಮ ಬದುಕನ್ನು ರೂಪಿಸಲು ಸಹಕಾರಿಯಾಗಿವೆ ಎಂದರು. ಕೊಡಗಿನಲ್ಲಿ ಹಾಕಿ ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹದಿಂದ ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಹಾಕಿ ಟೂರ್ನಿಯಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದರು. ಏಷ್ಯನ್ ಕ್ರೀಡಾಕೂಟದಲ್ಲಿ ಚೀನಾ ಮತ್ತು ಜಪಾನ್ ಮಾದರಿಯಲ್ಲಿ ಭಾರತದ ಕ್ರೀಡಾಳುಗಳಿಗೂ ಹೆಚ್ಚಿನ…
ಮಡಿಕೇರಿ ಅ.9 : 400 ಮೀ. ಓಟದ ಸ್ಪರ್ಧೆಯಲ್ಲಿ ಚೆಟ್ಟಳ್ಳಿ ಪ್ರೌಢಶಾಲಾ ವಿದ್ಯಾರ್ಥಿನಿ ಕೆ.ಹೆಚ್.ಅಂಜಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ 400 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳಿಗೆ ಶಾಲಾ ದೈಹಿಕ ಶಿಕ್ಷಕಿ ಗೀತಾ ಅಯ್ಯಪ್ಪ ತರಬೇತಿ ನೀಡುತ್ತಿದ್ದಾರೆ. ಶಾಲಾ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ಹಾಗೂ ಶಾಲಾ ಮುಖ್ಯೋಪದ್ಯಾಯರಾದ ಕೆ.ತಿಲಕ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಶುಭ ಹಾರೈಸಿದರು.
ಮಡಿಕೇರಿ ಅ.9 : ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಅಂಗವಾಗಿ ದಸರಾ ಕ್ರೀಡಾ ಸಮಿತಿ ವತಿಯಿಂದ ಅ.15 ರಿಂದ 22 ರವರೆಗೆ ವಿವಿಧ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಕಪಿಲ್ ದುಗ್ಗಳ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಕ್ರೀಡಾಕೂಟಕ್ಕೆ ಅ.15 ರಂದು ಬೆಳಗ್ಗೆ ಚಾಲನೆ ದೊರಕಲಿದೆ. ಆರಂಭಿಕ ದಿನದಂದು ಪುರುಷರು, ಮಹಿಳೆಯರು, 1 ರಿಂದ 4ನೇ ತರಗತಿ ವಿದ್ಯಾರ್ಥಿಗಳು, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಪಿಯುಸಿ ವಿದ್ಯಾರ್ಥಿಗಳ ವಿಭಾಗಗಳಲ್ಲಿ ಮ್ಯಾರಥಾನ್ ಸ್ಪರ್ಧೆಗಳು ನಡೆಯಲಿವೆ. ಬೆಳಗ್ಗೆ 6.30 ಗಂಟೆಗೆ ಆರಂಭಗೊಳ್ಳುವ ಮ್ಯಾರಥಾನ್ ಜನರಲ್ ತಿಮ್ಮಯ್ಯ ವೃತ್ತದಿಂದ ವಿವಿಧ ವಿಭಾಗಗಳಿಗೆ ಅನುಗುಣವಾಗಿ ಕ್ಯಾಪಿಟಲ್ ವಿಲೇಜ್‍ವರೆಗೆ ನಡೆಯಲಿದೆ ಎಂದರು. ಅಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷರಿಗೆ ಬಾಸ್ಕೆಟ್ ಬಾಲ್, ಸಾರ್ವಜನಿಕ ಮುಕ್ತ ವಿಭಾಗದಲ್ಲಿ ಫುಟ್ಬಾಲ್( 5+2 ಆಟಗಾರರು) ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಫುಟ್ಬಾಲ್ ಪಂದ್ಯಾವಳಿ ವಿಜೇತ ತಂಡಕ್ಕೆ 15 ಸಾವಿರ ರೂ.…
ಮಡಿಕೇರಿ ಅ.9 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ, ಚೆಟ್ಟಳ್ಳಿ ಕಾಫಿ ಸಂಶೋಧನಾ ಉಪಕೇಂದ್ರ, ಮರಗೋಡು ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ, ಮರಗೋಡು ಫಾರ್ಮರ್ಸ್ ಡೆವಲಪ್ ಮೆಂಟ್ ಮತ್ತು ರಿಕ್ರಿಯೇಶನ್ ಕ್ಲಬ್ ನ ಸಂಯುಕ್ತಾಶ್ರಯದಲ್ಲಿ ಕಾಫಿ ಮತ್ತು ಕಾಳು ಮೆಣಸು ಬೆಳೆಗಳ ಬೇಸಾಯದ ಕುರಿತು ಕೃಷಿಕರಿಗಾಗಿ ವಿಚಾರ ಸಂಕಿರಣ ನಡೆಯಿತು. ಮರಗೋಡುವಿನ ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞರಾದ ಡಾ.ಪ್ರಭಾಕರ್ ಹಾಗೂ ಡಾ.ವಿರೇಂದ್ರ ಕುಮಾರ್ ಅವರುಗಳು ಕಾಳು ಮೆಣಸು ಬೇಸಾಯದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಚೆಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ವಿಷಯ ತಜ್ಞರಾದ ಡಾ.ನಾಗರಾಜ್ ಹಾಗೂ ಡಾ.ಮಂಜುನಾಥ ರೆಡ್ಡಿ ಅವರುಗಳು ಮಾತನಾಡಿ, ಕಾಫಿ ಬೆಳೆಸುವ ಆಧುನಿಕ ಕ್ರಮ ಮತ್ತು ಗಿಡಗಳಿಗೆ ತಗಲುವ ರೋಗ ಮತ್ತು ಕೀಟ ಬಾಧೆಗಳನ್ನು ಹತ್ತಿಕ್ಕುವ ಕ್ರಮಗಳ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಮರಗೋಡು ಪ್ರಾಥಮಿಕ ಕೃಷಿ…
ಬೆಂಗಳೂರು, ಅ.9: ಹಿರಿಯ ಪತ್ರಕರ್ತ, ಖ್ಯಾತ ಬರಹಗಾರರಾಗಿದ್ದ ಜಿ.ಎನ್.ರಂಗನಾಥರಾವ್(81) ವಯೋಸಹಜ ಅನಾರೋಗ್ಯದಿಂದ ಇಂದು ಬೆಳಗ್ಗೆ ನಗರದ ಬಸವನಗುಡಿಯ ಬಿಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ, ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಬೆಂಗಳೂರು ಜಿಲ್ಲೆಯ ಹಾರೋಹಳ್ಳಿಯಲ್ಲಿ 1942ರಲ್ಲಿ ಜನಿಸಿದ ಜಿ.ಎನ್.ರಂಗನಾಥ್ ರಾವ್ ಹೊಸಕೋಟೆ ಹಾಗೂ ಬೆಂಗಳೂರು ನಗರಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಆ ಬಳಿಕ ಅನುವಾದಕ, ಅಂಕಣಕಾರ, ಬರಹಗಾರ ಮಾತ್ರವಲ್ಲದೆ ಭಾರತೀಯ ವಿದ್ಯಾ ಭವನದಲ್ಲಿ ಪತ್ರಿಕೋದ್ಯಮದ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಜಿ ಎನ್ ರಂಗನಾಥ ರಾವ್ ಮೃದು ಮಾತು ಹಾಗೂ ಸರಳತೆಗೆ ಹೆಸರಾಗಿದ್ದರು. ಇವರು ಕಾದಂಬರಿ, ಸಣ್ಣಕತೆ, ನಾಟಕ, ಪ್ರಬಂಧಗಳನ್ನು ರಚಿಸಿದ್ದಾರೆ. ಹೊಸ ತಿರುವು, ಮಾಸ್ತಿಯವರ ನಾಟಕಗಳು, ಒಳನೋಟ, ಹಿಂದಣ್ಣ ಹೆಜ್ಜೆ, ಅನ್ಯೋನ್ಯ, ಗುಣ- ದೋಷ ಮುಖ್ಯ ಇವು ಅವರ ವಿಮರ್ಶಾ ಕೃತಿಗಳು. ಇವಲ್ಲದೆ ಅನೇಕ ಕೃತಿಗಳನ್ನು ಅವರು ಕನ್ನಡಕ್ಕೆ…
ಮಡಿಕೇರಿ ಅ.9 : ಜನರ ತೆರಿಗೆ ಹಣವನ್ನು ಉಚಿತ ಯೋಜನೆಗಳಿಗೆ ಹಂಚಿ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸಿ ಜನರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಜಿಲ್ಲಾ ಜೆಡಿಎಸ್ ಮಾಜಿ ವಕ್ತಾರ ಸೂದನ ಎಸ್.ಈರಪ್ಪ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರ್ಕಾರದ ಉಚಿತ ಯೋಜನೆಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿರುವುದು ಮತ್ತು ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನು ಬುದ್ಧಿವಂತ ಮತದಾರರು ಅರ್ಥಮಾಡಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ದೇಶದ ಭದ್ರತೆ-ರಾಷ್ಟ್ರ ಭಕ್ತಿಗೆ ಅನಿವಾರ್ಯವಾಗಿದೆ. ಅವರ ನೇತೃತ್ವದಿಂದ ಮಾತ್ರ ದೇಶ ಸುಗಮವಾಗಿ ಮುನ್ನಡೆಯಲು ಸಾಧ್ಯವೆಂಬುವುದು ಜನಸಾಮಾನ್ಯರ ಇಂಗಿತವಾಗಿದೆ. ಕೊಡಗು ಜಿಲ್ಲೆಯ ಬಹುತೇಕ ಜೆಡಿಎಸ್ ಕಾರ್ಯಕರ್ತರು ಹಾಗೂ ತೆರೆಮರೆಯಲ್ಲಿರುವ ಪಕ್ಷದ ಎಲ್ಲಾ ಹಿತೈಷಿಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಯನ್ನು ಬೆಂಬಲಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ…
ಮಡಿಕೇರಿ ಅ.9 : ಅಭಿವೃದ್ಧಿಯಾಗುತ್ತಿರುವ ನಗರದ ಜನರಲ್ ತಿಮ್ಮಯ್ಯ ವೃತ್ತದ ನೂತನ ಮಾದರಿಯನ್ನು ನಗರಸಭೆ ಬಿಡುಗಡೆ ಮಾಡಿದೆ. ಇತ್ತೀಚೆಗೆ ಬಸ್ ಡಿಕ್ಕಿಯಾಗಿ ವೃತ್ತಕ್ಕೆ ಹಾನಿಯಾಗಿತ್ತು. ವೃತ್ತದ ಕಾಮಗಾರಿ ಭರದಿಂದ ಸಾಗಿದೆ.
ಮಡಿಕೇರಿ ಅ.9 : ಅಂಗವಿಕಲ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಉಚಿತ ಶ್ರವಣ ಸಾಧನ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಫಲಾನುಭವಿಗಳಿಗೆ ಸಾಧನಗಳನ್ನು ವಿತರಿಸಿದರು.
ಮಡಿಕೇರಿ ಅ.9 : ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ವಿದ್ಯಾರ್ಥಿಗಳಾದ ಎಸ್.ಸಂಜಯ್ ಶಾಟ್ ಪುಟ್ ನಲ್ಲಿ ಪ್ರಥಮ, ಹ್ಯಾಮರ್ ಥ್ರೋ ದ್ವಿತೀಯ, ಸಿ.ಆರ್. ಕೌಶಿಕ್ ಕುಮಾರ್ ಲಾಂಗ್ ಜಂಪ್ ನಲ್ಲಿ ಪ್ರಥಮ, ಟ್ರಿಪಲ್ ಜಂಪ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಬಾಲಕರ ರಿಲೇ ಸ್ಪರ್ಧೆಯಲ್ಲಿ ರಿಲೇ ತಂಡದಲ್ಲಿ ಕೌಶಿಕ್ ಕುಮಾರ್, ಲಿಖಿತ್ ಕುಮಾರ್, ಎ.ವಿ.ವಿಕಾಸ್, ಎಸ್.ಸಂಜಯ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲ ಲೋಕೇಶ್ ಮತ್ತು ನಿಲಯ ಪಾಲಕ ಕೆ.ಕೆ.ದೀಪಕ್, ದೈಹಿಕ ಶಿಕ್ಷಣ ಶಿಕ್ಷಕ ಕೆ.ಪಿ.ಪವನ್ ಸಾಗರ್ ಹಾಗೂ ಬೋಧಕ ಬೋದಕೇತರ ಸಿಬ್ಬಂದಿಗಳು ಮುಂದಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಶುಭ ಹಾರೈಸಿದ್ದಾರೆ.






