ಮಡಿಕೇರಿ ಸೆ.9 : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 2 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ…
ಲೇಖಕ: admin
ಕುಶಾಲನಗರ ಸೆ.8 : ಇಲ್ಲಿನ ರಾಜಸ್ಥಾನ ಸಮಾಜದ ಮಹಿಳೆಯರಿಂದ ಶ್ರೀಕೃಷ್ಣಜನ್ಮಾಷ್ಟಮಿ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನೆರವೇರಿತು. ರಾಜಸ್ಥಾನ ಸಮಾಜದಲ್ಲಿ ಕೃಷ್ಣ ಹಾಗೂ ರಾಧೆಯನ್ನು ಪ್ರತಿಷ್ಠಾಪಿಸಿ ಒಂದು ದಿನ ಉಪವಾಸ ವೃತ ನಡೆಸಿದ ಮಹಿಳೆಯರು, ಶುಕ್ರವಾರ ಕೃಷ್ಣ ಹಾಗೂ ರಾಧೆಯರ ಭಾವಚಿತ್ರವನ್ನು ಮೆರವಣಿಗೆಯಲ್ಲಿ ಹೊತ್ತೊಯ್ದು ಕಾವೇರಿ ನದಿಯಲ್ಲಿ ವಿಸರ್ಜಿಸಿದರು. ಮೆರವಣಿಗೆಯುದ್ದಕ್ಕೂ ಮಹಿಳೆಯರು ಶ್ರೀಕೃಷ್ಣನ ಭಜನೆ ಹಾಡುತ್ತಾ ಸಾಗಿ ಭಕ್ತಭಾವ ಮೂಡಿಸಿದರು.
ಮರಗೋಡು ಸೆ.8 : ಮರಗೋಡು ಹೊಸ್ಕೇರಿ ರಸ್ತೆಯಲ್ಲಿ ಮರಗೋಡು ಗ್ರಾಮ ಕೇಂದ್ರದಿಂದ ಸುಮಾರು 300 ಮೀಟರ್ ದೂರದಲ್ಲಿ ರಸ್ತೆ ಬದಿ ಬೃಹತ್ ಹೊಂಡವೊಂದು ಸೃಷ್ಟಿಯಾಗಿ ಅಪಾಯವನ್ನು ಆಹ್ವಾನಿಸುತ್ತಿದೆ. ಈ ಗುಂಡಿ ರಸ್ತೆಯ ತೀರಾ ಅಂಚಿನಲ್ಲೇ ಇರುವುದರಿಂದ ವಾಹನ ಸವಾರರ ಪಾಲಿಗೆ ಅಕ್ಷರಶಃ ಮರಣ ಗುಂಡಿಯಾಗಿದೆ. ಕೆಲದಿನಗಳ ಹಿಂದೆ ಕೆಎಸ್ಆರ್ಟಿಸಿ ಬಸ್ ನ ಚಕ್ರವೊಂದು ಗುಂಡಿಗೆ ಸಿಲುಕಿ ಪರದಾಡುವಂತಾಗಿತ್ತು. ಎದುರಿನಿಂದ ಬರುವ ವಾಹನಗಳಿಗೆ ದಾರಿ ನೀಡುವ ಯತ್ನದಲ್ಲಿ ಹಲವು ದ್ವಿಚಕ್ರ ವಾಹನಗಳು ಉರುಳಿ ಬಿದ್ದು ಸವಾರರು ಗಂಭೀರ ಗಾಯಗೊಂಡ ಪ್ರಕರಣಗಳು ನಡೆದಿವೆ. ಹಲವು ಕಾರುಗಳು ಕೂಡ ಗುಂಡಿಗೆ ಸಿಲುಕಿ ದಾರಿಹೋಕರು ಅವುಗಳನ್ಬು ತಳ್ಳಿರುವ ಪ್ರಸಂಗಗಳೂ ನಡೆದಿವೆ. ರಸ್ತೆಯ ಎರಡೂ ದಿಕ್ಕುಗಳು ಇಳಿಜಾರಿನಿಂದ ಕೂಡಿರುವುದರಿಂದ ವಾಹನಗಳು ವೇಗವಾಗಿ ಬಂದು ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಈ ಗುಂಡಿಯನ್ನು ತಕ್ಷಣ ಮುಚ್ಚಿ ಮುಂದಾಗಬಹುದಾದ ಅನಾಹುತ ತಪ್ಪಿಸುವಂತೆ ಮರಗೋಡು ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಬೆಂಗಳೂರು ಸೆ 8 : ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತೀ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿ ಎಂದರು. ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ದವಾಗಿದೆ ಎಂದರು. ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು , ಸಮಾಜವನ್ನು…
ಮಡಿಕೇರಿ ಸೆ.8 : ಕೆ.ಆರ್ ಎಸ್ ಜಲಾಶಯದ ವಾಸ್ತವ ಸ್ಥಿತಿ ಅರಿಯಲು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಕೆ.ಆರ್.ಎಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್ , ಗೋಪಾಲಯ್ಯ, ಸಂಸದೆ ಸುಮಲತಾ ಅಂಬರೀಶ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ ಸೆ.8 : ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಉಡುಪು ಮತ್ತಿತರ ವಸ್ತುಗಳು ಮಡಿಕೇರಿಯ ಪ್ರವಾಸಿತಾಣ ಅಬ್ಬಿಫಾಲ್ಸ್ ಬಳಿ ಪತ್ತೆಯಾದ ಹಿನ್ನೆಲೆ ಆಕೆಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಬೆಟದ್ಟದಪುರದ ಬಾರಸೆ ಗ್ರಾಮದ ನಿವಾಸಿ ಸರಸ್ವತಿ(33) ಎಂಬುವವರು ನಾಪತ್ತೆಯಾಗಿರುವ ಬಗ್ಗೆ ಅಲ್ಲಿನ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆಕೆಯ ಪಾದರಕ್ಷೆ, ಪರ್ಸ್, ಬಟ್ಟೆಗಳು ಅಬ್ಬಿಫಾಲ್ಸ್ ಬಳಿ ಪತ್ತೆಯಾಗಿದೆ. ಈ ಹಿನ್ನೆಲೆ ಮಡಿಕೇರಿ ನಗರಠಾಣಾ ಪೊಲೀಸರು, ಎನ್‌ಡಿಆರ್‌ಫ್ ಮತ್ತು ಬೆಟ್ಟದಪುರ ಪೊಲೀಸರು ನಾಪತ್ತೆಯಾದ ಮಹಿಳೆೆಗಾಗಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.
ಮಡಿಕೇರಿ ಸೆ.8 : ವಿಶ್ವಕರ್ಮ ಜಯಂತಿಯನ್ನು ಸೆ.17 ರಂದು ಆಚರಿಸುವ ಸಂಬಂಧ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಜೊತೆ ಚರ್ಚೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಮಾಜದ ಮುಖಂಡ ಜೊತೆ ಚರ್ಚಿಸಿದ ಬಳಿಕ ಜಿ.ಪಂ.ಸಿಇಒ ಅವರ ಕಚೇರಿಯಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಸಮ್ಮುಖದಲ್ಲಿ ಸಮಾಲೋಚನೆ ನಡೆಯಿತು. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿಯೇ ಆಯೋಜಿಸಬೇಕು. ತಾಲ್ಲೂಕು ಮಟ್ಟದ ಕಾರ್ಯಕ್ರಮವನ್ನು ತಾಲ್ಲೂಕು ಮಟ್ಟದಲ್ಲಿ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿ ತಿಳಿಸಲಾಗುವುದು ಎಂದು ಜಿ.ಪಂ.ಸಿಇಒ ಹೇಳಿದರು. ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಎಸ್.ಜೆ.ದೇವದಾಸ್, ಜಿಲ್ಲಾ ಕಾರ್ಯದರ್ಶಿ ಬಿ.ಬಿ.ನಾಗರಾಜು, ವಿಶ್ವಕರ್ಮ ಸಮಾಜದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎಸ್.ಬಿ.ಯಶವಂತ್, ಶಿಲ್ಪಿ ಮಂಜುನಾಥ ಆಚಾರ್ಯ, ಬಿ.ಕೆ.ಸುದರ್ಶನ, ಕೆ.ಕೆ.ರಮೇಶ್, ಎನ್.ಪಿ.ರಾಜು. ಜಗದೀಶ್ ಆಚಾರ್ಯ, ದಾಮೋದರ ಆಚಾರ್ಯ, ಸಂದ್ಯಾ ಅಶೋಕ್, ವೀಣಾ ಅಶೋಕ್, ಬಿ.ಸಿ.ಅಶೋಕ್ ಆಚಾರ್ಯ, ರವಿ ಆಚಾರ್ಯ, ಸಂದೇಶ್ ಆಚಾರ್ಯ, ಸುರೇಶ್ ಆಚಾರ್ಯ, ಶಾಂತಿ ದೇವದಾಸ್, ಶೋಭ ಯಶವಂತ್, ಪ್ರಕಾಶ್ ಆಚಾರ್ಯ ಇತರರು…
ಮಡಿಕೇರಿ ಸೆ.8 : ಭಾರತ ದೇಶದ ಪ್ರಜೆಯಾಗಿ ಹೆಮ್ಮೆಪಡಲು ಸರ್ಕಾರ ಪ್ರತಿಯೊಬ್ಬರಿಗೂ ಸುವರ್ಣಾವಕಾಶ ಕಲ್ಪಿಸಿದ್ದು, ಸೆ.15 ರಂದು ಭಾರತ ಸಂವಿಧಾನದ ಪೀಠಿಕೆ ಓದಲು ಹೆಚ್ಚು ಜನರು, ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿ, ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರು ಆನ್‍ಲೈನ್ ಮೂಲಕ ಸೆ.14 ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಕೋರಿದ್ದಾರೆ. ಇದೇ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸುವ ನಿಟ್ಟಿನಲ್ಲಿ, ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ಕೆ ನೋಂದಣಿ ಮಾಡಿಕೊಳ್ಳುವ ಕುರಿತು ವಿಡಿಯೊ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ನೀಡಿದರು. ಭಾರತ ಸಂವಿಧಾನದ ಪೀಠಿಕೆಯನ್ನು ಸೆ.15 ರಂದು ಬೆಳಗ್ಗೆ 10 ಗಂಟೆಗೆ ಪ್ರತಿಯೊಬ್ಬರೂ ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಮನವಿ ಮಾಡಿದರು. ಈ ಅವಕಾಶವನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕು. ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕು, ಅಲ್ಲದೆ ಸೆ.15 ರಂದು ಬೆಳಗ್ಗೆ 10 ಗಂಟೆಗೆ ಸಂವಿಧಾನದ ಪೀಠಿಕೆಯನ್ನು…
ಮಡಿಕೇರಿ ಸೆ.8 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 27.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.95 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1751.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2979.47ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.30 ಮಿ.ಮೀ. ಕಳೆದ ವರ್ಷ ಇದೇ ದಿನ 40.38 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2586.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4332.32 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1305.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2261.33 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.40 ಮಿ.ಮೀ.…
ಮಡಿಕೇರಿ ಸೆ.8 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ನಡೆಸಲಾಯಿತು. ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಕಚೇರಿಯಿಂದ ಗಾಂಧಿ ಮೈದಾನದವರೆಗೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಸರ್ಕಾರ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ಕುರಿತು ಕೆ.ಎಂ.ಲೋಕೇಶ್ ಮಾತನಾಡಿದರು. ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮ್ಮದ್, ಉಪಾಧ್ಯಕ್ಷ ಸುಜು ತಿಮ್ಮಯ್ಯ, ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ನಗರ ಮಹಿಳಾ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮೂಡ ಮಾಜಿ…






