ಲೇಖಕ: admin

ಮಡಿಕೇರಿ ಸೆ.8 : ಪೊನ್ನಂಪೇಟೆಯ ಮದರ್ಸ್ ಆರ್ಮ್ ಮೊಂಟೆಸ್ಸರಿ ಪ್ಲೇ ಹೋಂ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಧಾಕೃಷ್ಣನ ವೇಷಧಾರಿಗಳಾಗಿ ಪುಟಾಣಿಗಳು ಮಿಂಚಿದರು. ಶ್ಲೋಕ ಮತ್ತು ಹಾಡುಗಳನ್ನು ಹೇಳಿ ಗಮನ ಸೆಳೆದರು. ಬೆಣ್ಣೆ, ಚಕ್ಕುಲಿ, ರವೆ ಉಂಡೆ ಮುಂತಾದ ಖಾದ್ಯಗಳನ್ನು ಸವಿದು ಪೋಷಕರೊಂದಿಗೆ ಸಂಭ್ರಮಿಸಿದರು. ಪ್ಲೇ ಹೋಂ ನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಪುಟಾಣಿಗಳ ಪೋಷಕರು ಕೂಡ ಪಾಲ್ಗೊಂಡು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.

Read More

ಸುಂಟಿಕೊಪ್ಪ ಸೆ.8 : ಅನಾರೋಗ್ಯದಿಂದ ಬಳಲುತ್ತಿರುವ ಯುವತಿಯ ಹೆಚ್ಚಿನ ಚಿಕಿತ್ಸೆಗಾಗಿ ನಾಕೂರು ಶಿರಂಗಾಲ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಯುವತಿಯ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳುವ ಅಗತ್ಯ ಇರುವುದರಿಂದ ಫ್ರೆಂಡ್ಸ್ ಯೂತ್ ಕ್ಲಬ್ ಗ್ರಾಮಸ್ಥರಿಂದ ಸಂಗ್ರಹಿಸಿಲಾದ ರೂ 30,350 ಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭ ನಾಕೂರು ಶಿರಂಗಾಲ ಫ್ರೆಂಡ್ಸ್ ಯೂತ್ ಕ್ಲಬ್ ಕಾರ್ಯದರ್ಶಿ ಶಂಕರನಾಯಣ, ಸದಸ್ಯ ದಯಾನಂದ, ಎಕೆಜಿ ಟಿಂಬರ್ ಬಾಯ್ಸ್ ಮಾಲೀಕ ಗಣೇಶ್, ಗ್ರಾಮಸ್ಥರಾದ ಹೆಚ್.ಪಿ.ಶಾಂತಪ್ಪ, ಪ್ರಕಾಶ ಮತ್ತಿತರರು ಹಾಜರಿದ್ದರು. 

Read More

ಸುಂಟಿಕೊಪ್ಪ,ಸೆ.8 : ಸುಂಟಿಕೊಪ್ಪ ನಾಡಕಚೇರಿ ವತಿಯಿಂದ ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಕಂದಾಯ ನಿಗಧಿ ಆಂದೋಲ ನಡೆಯಿತು. ನಾಕೂರು ಶಿರಂಗಾಲ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್‍ಗೌರಯ್ಯ ಉದ್ಘಾಟಿಸಿ, ಕೃಷಿಭೂಮಿ ಸೇರಿದಂತೆ ಭೂಮಾಲೀಕರ ಹಕ್ಕುದಾರರು ದಾಖಲಾತಿಗಳನ್ನು ಹೊಂದಿಸಿಕೊಳ್ಳಲು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರಕಾರವು ಸಂಬಂಧಿಸಿದ ಇಲಾಖೆಯ ಮೂಲಕ ಪ್ರತಿ ಗ್ರಾಮಳಿಗೆ ಇಲಾಖೆಯ ಅಧಿಕಾರಿಗಳೇ ತೆರಳಿ ಗ್ರಾಮಸ್ಥರಿಂದ ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕೃಷಿಕರು ಮತ್ತು ಭೂ ಸಮಸ್ಯೆಗಳನ್ನು ಎದುರಿಸುತ್ತಿರುವ ಮಂದಿ ಮೂಲ ದಾಖಲಾತಿಗಳನ್ನು ನೀಡುವ ಸಮಸ್ಯೆಗೆ ಪರಿಹಾರ ಒದಗಿಸಿಕೊಡಲಾಗುವುದು ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೆಕೆಂದರು. ಸರ್ವೆ ವಿಭಾಗದ ಮುಖ್ಯಅಧಿಕಾರಿ ಮಹೇಶ್ ಸಭೆಯನ್ನುದ್ದೇಶಿಸಿ ಮತನಾಡಿದ ಅವರು ಗ್ರಾಮಸ್ಥರಿಗೆ ಸರ್ವೆ ಇಲಾಖೆಯ ವತಿಯಿಂದ ಕೃಷಿ ಹಾಗೂ ಭೂಮಾಲೀಕರು ಹಕ್ಕುದಾರರಿಗೆ ಆಂದೋಲನದ ಸದುಉದ್ದೇಶವನ್ನು ತಿಳಿಸಿದರು. ಸುಂಟಿಕೊಪ್ಪ ಉಪ ತಹಶೀಲ್ದಾರ್ ಶಿವಪ್ಪ, ಸರ್ವೆಯರ್‍ಗಳಾದ ಶ್ರೀನಿವಾಸ್, ಸಿದ್ದರಾಜು, ಸಹಾಯಕಗುರು, ಕಂದಾಯ ಪರಿವೀಕ್ಷಕರಾದ ಪ್ರಶಾಂತ್, ಗ್ರಾಮ…

Read More

ಮಡಿಕೇರಿ ಸೆ.8 : ಮಡಿಕೇರಿಯ ವಿದ್ಯಾನಗರದ ಶ್ರೀ ಶಕ್ತಿ ಗಣಪತಿ ದೇವಾಲಯದ 28ನೇ ಗಣೇಶೋತ್ಸವದ ಪ್ರಯುಕ್ತ ಸೆ.19 ರಂದು ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ದೇವಾಲಯದ ಆವರಣದಲ್ಲಿ “ಗಣೇಶ” ವಿಷಯ ಕುರಿತು ಚಿತ್ರಕಲೆ ಸ್ಪರ್ಧೆ ನಡೆಯಲಿದ್ದು, 1 ರಿಂದ 8ನೇ ತರಗತಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರಥಮ ಹಾಗೂ ದ್ವಿತೀಯ ವಿಜೇತರನ್ನು ಆಯ್ಕೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವವರು ಸೆ.17ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಗಣಪತಿ ಉತ್ಸವ ಸಮಿತಿ ತಿಳಿಸಿದೆ. ವಿಜೇತರ ಹೆಸರನ್ನು ಸೆ.23 ರಂದು ಘೋಷಿಸಲಾಗುವುದು. ಚಿತ್ರ ಬಿಡಿಸಲು ಬಣ್ಣದ ಪೆನ್ಸಿಲ್ ಮತ್ತು ಕ್ರಯೋನ್‍ಗಳನ್ನು ಮಾತ್ರ ಅನುಮತಿಸಲಾಗಿದೆ. ಚಿತ್ರಕಲೆಗೆ ಬಳಸುವ ಡ್ರಾಯಿಂಗ್ ಪೇಪರ್ ಅನ್ನು ಸಮಿತಿಯ ಕಡೆಯಿಂದ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9611496538, 8105160547 ಸಂಪರ್ಕಿಸಬಹುದಾಗಿದೆ. 

Read More

ನಾಪೋಕ್ಲು ಸೆ.8 : ಭಾರತ ಮಾತೆಯ ಛದ್ಮವೇಷದಲ್ಲಿ ವಾಟೆಕಾಡು ಸ.ಹಿ.ಪ್ರಾ.ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ರಿಸ್ಪಾ ಗಮನ ಸೆಳೆದಳು. ಮೂರ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ (ಮೇರಾ ಮಿಟ್ಟಿ ಮೇರಾ ದೇಶ್ ) “ನನ್ನ ಮಣ್ಣು ನನ್ನ ದೇಶ” ಭಾರತ ಮಾತೆಯ ಛದ್ಮವೇಷ ಧರಿಸಿ ಎಲ್ಲರ ಪ್ರಸಂಶೆಗೆ ಪಾತ್ರಳಾದಳು. ಈಕೆ ಅಬ್ದುಲ್ ರಜಾಕ್, ರೆಹಾನತ್ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಸೆ.8 :  ಗೋಣಿಕೊಪ್ಪ ಕಾವೇರಿ ದಸರಾ ಸಮಿತಿ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ ಆಯ್ಕೆಯಾಗಿದ್ದಾರೆ. ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಬಾಲು ಅಧ್ಯಕ್ಷತೆಯಲ್ಲಿ ನಡೆದ ದಸರಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಶಾಸಕ ಎ.ಎಸ್.ಪೊನ್ನಣ್ಣ ಸಹಕಾರದೊಂದಿಗೆ ಅದ್ದೂರಿ ದಸರಾ ಉತ್ಸವಕ್ಕೆ  ಸಭೆಯಲ್ಲಿ ನಿರ್ಧರಿಸಲಾಯಿತು.

Read More

ನಾಪೋಕ್ಲು ಸೆ.9 : ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡುವುದು ಮಾತ್ರವಲ್ಲ. ಅವರನ್ನು ಆದರ್ಶ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನಿವೃತ್ತ ಶಿಕ್ಷಕ ಎ.ಜಿ.ಗಣೇಶ್ ಹೇಳಿದರು. ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚಿಟ್ಟಿರ ಮಾದಪ್ಪ ಮಾತನಾಡಿ, ಶಿಕ್ಷಕರ ಸ್ಥಾನ ಅತ್ಯಂತ ಪವಿತ್ರವಾದದ್ದು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು. ಮುರ್ನಾಡು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವೇಣು ಅಪ್ಪಣ್ಣ, ಖಜಾಂಚಿ ಸುಬ್ರಮಣಿ, ಪ್ರಾಂಶುಪಾಲರಾದ ದೇವಕ್ಕಿ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಧಮಯಂತಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಸೆ.8 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆ.9 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು…

Read More

ಮಡಿಕೇರಿ ಸೆ.8 :  ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಾನಿಗೆ ಒಳಗಾಗಿದ್ದ ವೀರ ಯೋಧ ಜನರಲ್ ಕೊಡಂದೇರ ಎಸ್.ತಿಮ್ಮಯ್ಯ ಅವರ ಕಂಚಿನ ಪ್ರತಿಮೆಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ದುರಸ್ತಿ ಕಾರ್ಯ  ನಡೆಸುತ್ತಿದ್ದಾರೆ.

Read More

ಮಡಿಕೇರಿ ಸೆ.8 :  ಒಂದೇ ಗಿಡದ ಬಾಳೆಗೊನೆಯಲ್ಲಿ ಎರಡು ಬಣ್ಣದ ಬಾಳೆ ಹಣ್ಣು ಬಿಡುವ ಮೂಲಕ ಅಚ್ಚರಿ ಮೂಡಿಸಿದೆ. ಚೆಟ್ಟಳ್ಳಿಯ ಮುಳ್ಳಂಡ ಕರಣ್ ಸೋಮಣ್ಣ ಅವರ ಮನೆಯ ಪಕ್ಕದಲ್ಲಿ ಬೆಳೆದ ಒಂದೇ ಬಾಳೆಗೊನೆಯಲ್ಲಿ  ವಿವಿಧ ಜಾತಿಯ ಹಾಗೂ ವಿವಿಧ ಬಣ್ಣದ ಬಾಳೆ ಬಿಡುವ ಮೂಲಕ  ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.

Read More