ಲೇಖಕ: admin

ಮಡಿಕೇರಿ ಸೆ.6 : ಸರಕಾರಿ ಶಾಲೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಲ್ಲದೇ, ವಿದ್ಯಾರ್ಥಿಗಳ ಪುಸ್ತಕಗಳನ್ನು ಹರಿದು ಹಾಕಿ ಸ್ಥಳದಲ್ಲೇ ಮದ್ಯ ಸೇವಿಸಿ ವಿಕೃತಿ ಮೆರೆದು ಪರಾರಿಯಾಗಿರುವ ಘಟನೆ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಟ್ಟದಳ್ಳ ಸರ್ಕಾರಿ ತಮಿಳು ಶಾಲೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಶಾಲೆಗೆ ಆಗಮಿಸಿದ ಶಿಕ್ಷಕರಿಗೆ ಕೊಠಡಿಯೊಂದರ ಬೀಗವನ್ನು ಕಬ್ಬಿಣದ ರಾಡಿನಿಂದ ಮುರಿಯಲಾಗಿರುವ ದೃಶ್ಯ ಕಂಡು ಬಂದಿದೆ. ಕೊಠಡಿಯನ್ನು ಪರಿಶೀಲಿಸಿದ ಶಾಲಾ ಮುಖ್ಯ ಶಿಕ್ಷಕ ಅಶ್ರಫ್ ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕೊಠಡಿ ಮತ್ತು ಶಾಲೆಯ ಸುತ್ತಮುತ್ತಲು ಪರಿಶೀಲನೆ ನಡೆಸಿದರು. ಕೊಠಡಿಯೊಂದರಲ್ಲಿ ಸಂಗ್ರಹಿಸಿ ಇಡಲಾಗಿದ್ದ ವಿದ್ಯಾರ್ಥಿಗಳ ಪುಸ್ತಕಗಳನ್ನು ಹರಿದು, ಚೆಲ್ಲಾಪಿಲ್ಲಿ ಮಾಡಿರುವ ಕಳ್ಳರು ಸ್ಥಳದಲ್ಲಿಯೇ ಮದ್ಯ ಸೇವಿಸಿರುವುದು ಕಂಡು ಬಂದಿದೆ. ಮದ್ಯ ಮತ್ತು ನೀರಿನ ಬಾಟಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

Read More

ಮಡಿಕೇರಿ ಸೆ.6 : ಕಳೆದ ಕೆಲವು ದಿನಗಳಿಂದ ಸುಂಟಿಕೊಪ್ಪ ಸಮೀಪ ಕೆದಕಲ್ ಗ್ರಾಮದ ಸುತ್ತಮುತ್ತ ಉಪಟಳ ನೀಡುತ್ತಿದ್ದ ಮತ್ತು ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸೋಮವಾರ ಇಬ್ಬರು ಬೈಕ್ ಸವಾರರ ಮೇಲೆ ದಾಳಿ ಮಾಡಿದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಅರಣ್ಯ ಸಿಬ್ಬಂದಿ ಗಿರೀಶ್ ಎಂಬುವವರು ಮೃತಪಟ್ಟಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸೂಕ್ತ ಕ್ರಮಕ್ಕೆ ಅರಣ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ದುಬಾರೆಯ ಸಾಕಾನೆಗಳಾದ ಅಜಯ್, ವಿಕ್ರಂ, ಸುಗ್ರೀವ, ಲಕ್ಷ್ಮಣ, ಪ್ರಶಾಂತ್ ಮತ್ತು ಹರ್ಷ  ಸಾಕಾನೆಗಳನ್ನು ಬಳಸಿ ಮಂಗಳವಾರದಿಂದಲೇ ಕಾರ್ಯಾಚರಣೆ ನಡೆಸಿದ ಇಲಾಖೆ ಇಂದು ಕೆದಕಲ್ ಸಮೀಪದ ಹೊರೂರು ಎಂಬಲ್ಲಿ ಎಸ್ಟೇಟ್ ಒಂದರ ಒಳಗಿದ್ದ 18 ವರ್ಷದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಯಿತು. ಅರೆವಳಿಕೆ ನೀಡಿ ಸೆರೆ ಹಿಡಿಯಲ್ಪಟ್ಟ ಕಾಡಾನೆಯನ್ನು ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ಡಿಎಫ್‍ಒ ಪೂವಯ್ಯ, ಎಸಿಎಫ್ ಗೋಪಾಲ್, ಸೋಮವಾರಪೇಟೆ…

Read More

ಮಡಿಕೇರಿ ಸೆ.6 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಗೆ ರೋವರ್ ಅಂಡ್ ರೇಂಜರ್ ವಿಭಾಗದ ಸಹಾಯಕ ಜಿಲ್ಲಾ ಆಯುಕ್ತರಾಗಿ ಮಂದೆಯಂಡ ಎನ್.ವನಿತ್ ಕುಮಾರ್ ನೇಮಕಗೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ರೋವರ್ ಲೀಡರ್ ಆಗಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ನಡೆಸಿದ ಸೇವೆ ಹಾಗೂ ರೋವರ್ ವಿದ್ಯಾರ್ಥಿಗಳಿಗೆ ಸಮಾಜ ಸೇವೆಯಲ್ಲಿ ತೊಡಗುವಂತೆ ಮಾಡಿ 8 ರೋವರ್ಸ್‍ಗಳಿಗೆ ರಾಜ್ಯ ಪುರಸ್ಕಾರ ದೊರೆಯುವಂತೆ ಮಾಡಿದ ವನಿತ್ ಕುಮಾರ್ ಅವರನ್ನು ಸಹಾಯಕ ಆಯುಕ್ತರಾಗಿ ಕರ್ನಾಟಕ ರಾಜ್ಯ ಸಂಸ್ಥೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯೂ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಹ ಕಾರ್ಯದರ್ಶಿಗಳಾದ ಬೊಳ್ಳಜಿರ ಬಿ ಅಯ್ಯಪ್ಪ ಆದೇಶ ಪ್ರತಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟಕರಾದ ದಮಯಂತಿ ಉಪಸ್ಥಿತರಿದ್ದರು.

Read More

ವಿರಾಜಪೇಟೆ ಸೆ.6 :  ಪರಿಸರದಲ್ಲಿ ನದಿಗಳು ಬಹುಮುಖ್ಯ ಪಾತ್ರವಹಿಸುತ್ತವೆ. ನದಿಗಳ ಹಂಗಿಲ್ಲದೆ ಮನುಷ್ಯರು ಬದುಕುವುದು ಸಾಧ್ಯವಿಲ್ಲ. ಅರ್ಧ ದಕ್ಷಿಣ ಭಾರತವನ್ನು ಸಲಹುವ ಕಾವೇರಿ ನದಿಯ ಹರಿವು ಶೇ.40 ರಷ್ಟು ಕಡಿಮೆಯಾಗಿದೆ ಎಂದು ವರದಿಗಳು ಹೇಳುತ್ತಿವೆ. ಹಾಗಾಗೀ ನದಿಮೂಲದ ರಕ್ಷಣೆಗೆ ಸರ್ಕಾರ ಒತ್ತು ನೀಡಬೇಕು ಎಂದು ಪತ್ರಕರ್ತೆ ಉಷಾಪ್ರೀತಮ್ ಹೇಳಿದರು. ವಿರಾಜಪೇಟೆಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿರಾಜಪೇಟೆ ಕಾವೇರಿ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಕೊಡಗು ಜಿಲ್ಲೆಗೆ ಸಂಬಂಧಿಸಿದ ಪರಿಸರದ ಕುರಿತಾದ ಸುಲೋಚನಾ ಡಾ.ಎಂ.ಜಿ ನಾಗರಾಜ್ ಅವರು ಸ್ಥಾಪಿಸಿರುವ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು. ಕಾವೇರಿ ನದಿಯ ಹರಿವು ಯಾಕಾಗೀ ಕಡಿಮೆಯಾಗಿದೆ ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ವೈಜ್ಞಾನಿಕ ಅಧ್ಯಯನಕ್ಕೆ ಮುಂದಾಗಬೇಕು. ನದಿಯ ಹರಿವನ್ನು ಕಡಿಮೆಯಾಗಲು ಏನೇನು ಅಡೆತಡೆಗಳಾಗಿವೆ ಎಂಬುದನ್ನು ವೈಜ್ಞಾನಿಕವಾಗಿ ಪತ್ತೆಹಚ್ಚುವ ಮೂಲಕ ಕಾವೇರಿ ಎಂದಿನಂತೆ ಮೈದುಂಬಿ ಹರಿಯುವಂತೆ ಮಾಡಿದರೆ ಪರಿಸರದಲ್ಲಿ ಸಾಕಷ್ಟು ಸಮಸ್ಯೆಗಳು ತನ್ನಿಂದಾತಾನೇ ಸರಿಹೋಗುತ್ತವೆ. ಆನೆ-ಮಾನವ ಸಂಘರ್ಷದ ಹಿಂದೆ ಇರುವ ನಿಜವಾದ…

Read More

ಕಡಂಗ ಸೆ.6 : ಎಸ್‍ವೈಎಸ್ ಮತ್ತು ಎಸ್‍ಕೆಎಸ್‍ಎಸ್‍ಎಫ್ ಶಾಖಾ ವತಿಯಿಂದ ಹತ್ತನೇ ವಾರ್ಷಿಕ ಮಜ್ಲಿಸುನ್ನೂರ್  ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮ ನಡೆಯಿತು. ಕಡಂಗ ಶಾದಿ ಮಹಲ್ ಸಭಾಂಗಣದಲ್ಲಿ  ಕೊಡಗು ಜಿಲ್ಲಾ ನಾಯಿಬ್ ಕಾಜಿ ಅಬ್ದುಲ್ಲಾ ಮುಸ್ಲಿಯರ್ ಎಡಪಾಲ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾತ್ ಅಧ್ಯಕ್ಷ ಅಬ್ದುಲ್ಲ  ನಿರ್ವಹಿಸಿದರು. ಕೇರಳದ ಪ್ರಖ್ಯಾತ ಝುಬಿರ್ ಮಾಸ್ಟರ್  ಮತ್ತು ಸಂಗಡಿಗರು ಕಥಾಪ್ರಸಂಗವನ್ನು ವಿವರಿಸಿದರು.  ಖತೀಬ್ ಉಸ್ತಾದರಾದ ಲತೀಫ್, ಲತೀಫಿ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮ ದಲ್ಲಿ ಕೊಡಗು ಜಿಲ್ಲಾ ಅಮಿಲಾ ಅಧ್ಯಕ್ಷ ಹ್ಯಾರಿಸ್  ಅವರನ್ನು ಸನ್ಮಾನಿಸಲಾಯಿತು. ಎಸ್ ಕೆ ಎಸ್ ಎಸ್ ಎಫ್ ಸಮಿತಿ ಸದಸ್ಯರಾದ ಇಸಾಕ್, ಇಕ್ಬಾಲ್, ಸಮದ್, ಅಬೂಬಕರ್, ಹನೀಫ್ ಫೈಜಿ, ಯುಸಫ್ ಮುಸ್ಲಿಯಾರ್, ಹನೀಫ್ ಉಸ್ತಾದ್, ಮಾಹಿನ್ ದಾರಿಮಿ, ಅಬ್ದುಲ್ ರೆಹಮಾನ್, ಇಬ್ರಾಹಿಂ, ಜುನೈದ್, ಮಮ್ಮು ,ಉಸ್ಮಾನ್  ಹಾಜರಿದ್ದರು. ಮದರಸ ಮುಖ್ಯೋಪಾಧ್ಯಾಯರಾದ ಶುಹೈಬ್ ಫೈಜಿ  ಸ್ವಾಗತಿಸಿದರು. ವರದಿ  : ನೌಫಲ್ ಕಡಂಗ 

Read More

ಮಡಿಕೇರಿ ಸೆ.6 : ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲ್ಲೂಕು ಘಟಕದ ಪದಗ್ರಹಣ ಸಮಾರಂಭವು ಸೆ.10 ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಘಟಕದ ನಿಯೋಜಿತ ಅಧ್ಯಕ್ಷ ಕೆ.ಎಸ್.ನಾಗೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಕುಶಾಲನಗರದ ಕಲಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪಾಲ್ಗೊಳ್ಳಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಕೊಪ್ಪಗೇಟ್ ಬಳಿಯಿಂದ ಯದುವೀರ್ ಒಡೆಯರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗುವುದು. ಅಲ್ಲಿಂದ ಕಲಾ ಭವನದವರೆಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಗುವುದು ಎಂದರು. ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕುಶಾಲನಗರ ಕಲಾ…

Read More

ಮಡಿಕೇರಿ ಸೆ.6 : ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ 50ನೇ ವರ್ಷದ ಸ್ವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಮಡಿಕೇರಿಯ ಪಿ.ಎಂ.ರವಿ ಅವರನ್ನು ಸನ್ಮಾನಿಸಲಾಯಿತು. ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ , ಲಿಪಿ, ಆಚಾರ ವಿಚಾರಗಳ ಬೆಳವಣಿಗೆಗೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಪಿ.ಎಂ.ರವಿ ಅವರ ಸಾಧನೆಯನ್ನು ಗುರುತಿಸಿ ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ದಕ್ಷಿಣ ಕನ್ನಡ ಭಾಗದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರು, ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.6 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ಗೌಡ ಜನಾಂಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಸೆ.28 ರಂದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯ ಕುಮಾರ್, ಅಂದು ಬೆಳಗ್ಗೆ 10 ಗಂಟೆಗೆ ನಗರದ ಗೌಡ ವಿದ್ಯಾ ಸಂಘದ ಸಂಭಾಗಣದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ. ಎಲ್‍ಕೆಜಿ ಯಿಂದ 1ನೇ ತರಗತಿ ವಿದ್ಯಾರ್ಥಿಗಳಿಗೆ ಛದ್ಮವೇಷ, 2ರಿಂದ 4ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ (ವಿದ್ಯಾ ಸಂಘದ ಕಟ್ಟಡವನ್ನು ಚಿತ್ರಿಸುವುದು), 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ “ಗೌಡ ಮನೆತನದ ಹೆಸರು” ಹೇಳುವ ಸ್ಪರ್ಧೆ ನಡೆಯಲಿದೆ. 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ “ಗೌಡ ಸಂಸ್ಕೃತಿ”ಯ ಬಗ್ಗೆ ಪ್ರಬಂಧ (ಎರಡು ಪುಟಗಳಿಗೆ ಮೀರದಂತೆ), ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ “ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲಾ ಅರೆಭಾಷೆ ಗೌಡರ ಪಾತ್ರ” (ಎರಡು ಪುಟಗಳು ಮೀರದಂತೆ) ಸ್ಪರ್ಧೆ ಏರ್ಪಡಿಸಲಾಗಿದೆ.…

Read More

ಮಡಿಕೇರಿ ಸೆ.6 :  ಶ್ರೀ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ  ಸೆ. 10 ರಂದು “ಮೊಸರು ಕುಡಿಕೆ ಒಡೆಯುವ ಸ್ಪರ್ಧೆ” ನಡೆಯಲಿದೆ. ಅಂದು  ಸಂಜೆ 4 ಗಂಟೆಗೆ ದೇವಾಲಯದ ಆವರಣದಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ 5 ವರ್ಷ ದೊಳಗಿನ ಮಕ್ಕಳಿಗೆ ಛದ್ಮ ವೇಷ ಸ್ಪರ್ಧೆ ಏರ್ಪಡಿಸಲಾಗಿದೆ. ಛದ್ಮ ವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳು  ದೂರವಾಣಿ ಸಂಖ್ಯೆ 9482037525, 9449696355  ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ದೇವಾಲಯದಲ್ಲಿ ನಡೆಯುವ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಆಡಳಿತ ಮಂಡಳಿ ಕೋರಿದೆ.

Read More

ಮಡಿಕೇರಿ ಸೆ.6 :  ಅರಂತೋಡು ಗ್ರಾಮದ ಬಿಳಿಯಾರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ವತಿಯಿಂದ ಶ್ರದ್ಧಾಭಕ್ತಿಯಿಂದ ಶ್ರೀ ಕೃಷ್ಣ  ಜನ್ಮಾಷ್ಟಮಿ ಆಚರಿಸಲಾಯಿತು. ಬಿಳಿಯಾರು ಶಾಲಾ ಮೈದಾನದಲ್ಲಿ  ನಡೆದ ಕಾರ್ಯಕ್ರಮವನ್ನು  ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ  ಉದ್ಘಾಟಿಸಿದರು. ಸಮಿತಿಯ ಅಧ್ಯಕ್ಷ ಮಂಜುನಾಥ ಬಿಳಿಯಾರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ನಿವೃತ ಪ್ರಾಂಶುಪಾಲ ಕೆ.ಆರ್.ಗಂಗಾಧರ್, ನಿವೃತ ಪೋಲಿಸ್ ಪದ್ಮಯ್ಯ ಪೂಜಾರಿಮನೆ, ಜನಪ್ರಕಾಶ್, ಸುಳ್ಯ ತಾಲ್ಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ್ ಪೈಕ, ಮಹೇಶ್  ಸೇರಿದಂತೆ  ಮತ್ತಿತರರು ಹಾಜರಿದ್ದರು. ಕೆ.ಪಿ.ಕುಸುಮಾದರ ಸ್ವಾಗತಿಸಿ, ಆನಂದ ಬಿಳಿಯಾರು ಕಾರ್ಯಕ್ರಮ ನಿರೂಪಿಸಿದರು.

Read More