ಲೇಖಕ: admin

ಕುಶಾಲನಗರ ಅ.2 : ರಾಷ್ಟ್ರಪಿತ ಮಹಾತ್ಮ ಗಾಂಧಿ  ಅವರ 154 ನೇ ಜಯಂತಿ ಅಂಗವಾಗಿ  ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ  ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಚತಾ ಹಿ ಸೇವಾ ( ಸ್ವಚ್ಚತೆಯೇ ಸೇವೆ) ಅಭಿಯಾನದ ಮೂಲಕ ಶ್ರಮದಾನ ಕಾರ್ಯ ನಡೆಸಲಾಯಿತು.  ಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್) ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ‌ಘಟಕ, ಸುಂಟಿಕೊಪ್ಪ ಜೆಸಿಐ ಸಂಸ್ಥೆ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ‌ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿಗೆ ಮುನ್ನಾ ದಿನ ಕೂಡ್ಲೂರು ಗ್ರಾಮದ ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು. ಶಾಲಾವರಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜತೆಗೂಡಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯವನ್ನು ತೆರವುಗೊಳಿಸುವ ಮೂಲಕ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.    ವಿದ್ಯಾರ್ಥಿಗಳಿಗೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ “ಸ್ವಚ್ಛ ತಾ ಹಿ ಸೇವೆ” ಹಾಗೂ ಶ್ರಮದಾನದ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್,‌ ಸ್ವಚ್ಛ ಭಾರತ್ ಮಿಷನ್…

Read More

ಮಡಿಕೇರಿ ಅ.2 : ಮಡಿಕೇರಿ ನಗರದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ಡಾಂಬರೀಕರಣ ಕಾರ್ಯ ಆರಂಭಿಸಬೇಕೆಂದು ಒತ್ತಾಯಿಸಿ ಅ.3 ರಂದು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಮತ್ತು ನಗರಸಭೆಯ ಎದುರು ಮುಖ್ಯ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವುದು ಎಂದು ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದ್ದು, ನಗರದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಜನಪರವಾಗಿ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಆಟೋ ಚಾಲಕರ ಸಂಘ, ಲಾರಿ ಚಾಲಕರ ಸಂಘ, ಖಾಸಗಿ ಬಸ್ ಚಾಲಕರು ಹಾಗೂ ಸಿಬ್ಬಂದಿಗಳ ಸಂಘ, ಟ್ಯಾಕ್ಸಿ ಚಾಲಕರ ಸಂಘ ಸೇರಿದಂತೆ ಸಾರ್ವಜನಿಕರು ಕೂಡ ಬೃಹತ್ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಮೆರವಣಿಗೆ ಮೂಲಕ ಬಂದು ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

Read More

ಮಡಿಕೇರಿ ಅ.2 : ಮಡಿಕೇರಿ ನಗರದ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ನಗರಸಭೆ ವಿರುದ್ಧ ಕೊಡಗು ರಕ್ಷಣಾ ವೇದಿಕೆ ಅ.3 ರಂದು ನಡೆಸುತ್ತಿರುವ ಪ್ರತಿಭಟನೆಗೆ ಕೊಡಗು ರಕ್ಷಣಾ ವೇದಿಕೆಯ ಆಟೋ ಚಾಲಕರ ಘಟಕ ಬೆಂಬಲ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಟೋ ಘಟಕದ ನಗರಾಧ್ಯಕ್ಷ ಪಿ.ವೈ.ಸುಲೈಮಾನ್ ಮಂಗಳವಾರ ಬೆಳಗ್ಗೆ 10.30 ರಿಂದ 11.30 ಗಂಟೆಯವರೆಗೆ ಚಾಲಕರು ಆಟೋ ರಿಕ್ಷಾಗಳ ಸಂಚಾರವನ್ನು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

Read More

ಮಡಿಕೇರಿ ಅ.2 : ಶಾಂತಿನಿಕೇತನ ಯುವಕ ಸಂಘದ 45ನೇ ವರ್ಷದ ಗಣೇಶ ವಿಸರ್ಜನೋತ್ಸವವು ಅ.3 ರಂದು ನಡೆಯಲಿದೆ. “ಲೋಕ ಕಲ್ಯಾಣಕ್ಕಾಗಿ ಸಿಂದೂರ ರಾಕ್ಷಸನನ್ನು ವಧಿಸುವ ಮೂಲಕ ಗಣಪತಿಗೆ ಸಿಂದೂರ ಗಣಪತಿ” ಎಂಬ ಹೆಸರು ಬಂದ ಕಥಾ ಹಂದರವಿರುವ ಕಲಾಕೃತಿಗಳ ಚಲನವಲನಗಳಿರುವ ಶೋಭಯಾತ್ರೆ ನಡೆಯಲಿದೆ. ಸೆ.19 ರಂದು ಪ್ರತಿಷ್ಠಾಪಿಸಲ್ಪಟ್ಟು 15 ದಿನಗಳ ಕಾಲ ನಿತ್ಯ ಪೂಜೆಯೊಂದಿಗೆ ಅ.3 ರಂದು ಸಂಜೆ 5 ಗಂಟೆಗೆ ವಿಸರ್ಜನ ಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಪೂಜೆ ಜರುಗಲಿದ್ದು, ನಂತರ ಭಕ್ತಾಧಿಗಳಿಗೆ ಅನ್ನದಾನ ನೆರವೇರಲಿದೆ. ಸಂಜೆ 6 ಗಂಟೆಗೆ ಹೊರಲಿರುವ ಶೋಭಯಾತ್ರೆಯು ಶಾಂತಿನಿಕೇತನ, ಕೆಎಸ್‍ಆರ್‍ಟಿಸಿ ಡಿಪೋ ಮುಂಭಾಗ, ಜನರತ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ, ಇಂದಿರಾಗಾಂಧಿ ವೃತ್ತ, ಚೌಡೇಶ್ವರಿಯಲ್ಲಿ ಪ್ರದರ್ಶನ ನೀಡಲಾಗುತ್ತದೆ. ಮಂಟಪದಲ್ಲಿ ಬೆಂಗಳೂರಿನ ಆರ್.ಜೆ. ಸ್ಟುಡಿಯೋ ದವರಿಂದ ಅತ್ಯಾಧುನಿಕ ಕೂಲ್ ಫೈರ್ ಹಾಗೂ ಸ್ಟುಡಿಯೋ, ಸೆಟ್ಟಿಂಗ್, ಮಡಿಕೇರಿಯ ಗುರು ಲೈಟಿಂಗ್ಸ್‍ನ ಲೋಕೇಶ್ ಅವರ ಸೌಂಡ್ಸ್, ವಿಜಯ್ ಮತ್ತು ತಂಡದಿಂದ ಚಲನವಲನ, ಡಿಕೇರಿಯ ಕಲಾವಿದ…

Read More

ಮಡಿಕೇರಿ ಅ.2 :  ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಇಕೋ ಕ್ಲಬ್,ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಜಂಟಿಯಾಗಿ  ಸ್ವಚ್ಚತಾ ಶ್ರಮದಾನ ನಡೆಸಿದರು. ಮಡಿಕೇರಿ ಬಸ್ ಡಿಪೋದಿಂದ ಕೊಡಗು ವಿದ್ಯಾಲಯ ಶಾಲೆಯವರೆಗೆ  ಹಾಗೂ  ಮಡಿಕೇರಿಯ ಸುದರ್ಶನ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರವರ ಪ್ರತಿಮೆಯನ್ನು ಸ್ವಚ್ಛಗೊಳಿಸಿದರು. ಒಟ್ಟು 45 ಎನ್‌ಸಿಸಿ ಕೆಡೆಟ್‌ಗಳು, 20 ಸ್ಕೌಟ್ಸ್ ಮತ್ತು ಗೈಡ್ಸ್, 25 ವಿದ್ಯಾರ್ಥಿಗಳು ಮತ್ತು 24 ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲಾ ಪ್ರಾಂಶುಪಾಲೆ  ಕೆ.ಎಸ್. ಸುಮಿತ್ರಾ ಮತ್ತು ಆಡಳಿತ ವ್ಯವಸ್ಥಾಪಕ ಪಿ.ರವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Read More

ನಾಪೋಕ್ಲು ಅ.2 : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಪೆರಾಜೆ ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಶ್ರಮದಾನ ನಡೆಯಿತು. ಕೃಷಿ ಪತ್ತಿನ ಸಹಕಾರ ಸಂಘದ ಆವರಣದಿಂದ ಗಡಿಗುಡ್ಡೆ ತನಕ ಮುಖ್ಯ ರಸ್ತೆಯ ಬದಿಗಳ ಕಾಡು ಗಿಡಗಂಟಿಗಳನ್ನು ಕಡಿದು, ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಪಿ.ಎಂ.ಅಶೋಕ್, ಗ್ರಾಮ ಪಂಚಾಯತ್ ಪಿಡಿಒ ಮಹದೇವ ಪ್ರಭು, ಗ್ರಾ.ಪಂ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಸಹಕಾರ ಸಂಘದ ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಡಿ.ಸಿ.ಧೀನರಾಜ್, ಎನ್.ವಿ.ಶೇಷಪ್ಪ, ಪಿ.ಟಿ.ಜಯರಾಮ, ಕಿರಣ ಬಂಗಾರಕೋಡಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಸ್ವಚ್ಛತಾ ವಾಹನ ಚಾಲಕರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಅ.2 : ಮರಂದೋಡ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಪಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ. ಗ್ರಾಮದ ನಿವಾಸಿ ಚೋಯಮಾಡಂಡ ಬಾಸಾ ಪೂಣಚ್ಚ ಅವರ ಗದ್ದೆಗೆ ದಾಳಿ ಮಾಡಿರುವ ಕಾಡಾನೆಗಳು ಭತ್ತದ ಪೈರುಗಳನ್ನು ತುಳಿದು ನಷ್ಟಪಡಿಸಿವೆ. ಅಲ್ಲದೆ ಅಡಿಕೆ ಗಿಡಗಳನ್ನು ಕೂಡ ಧ್ವಂಸಗೊಳಿಸಿದೆ. ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ಹರೀಶ್ ಮೊಣ್ಣಪ್ಪ, ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆಗಟ್ಟುವಂತೆ ಆಗ್ರಹಿಸಿದ ಗ್ರಾಮಸ್ಥರು ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಜಿಲ್ಲಾಡಳಿತ ಹಾಗೂ ಸಂಬಂಧಿಸಿ ಇಲಾಖೆಯನ್ನು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಅ.2 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಗೌಡ ಜನಾಂಗದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಂಬೆಕಲ್ ನವೀನ್, ಜನಾಂಗದ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವಂತಾಗಬೇಕು ಎಂದು ಕರೆ ನೀಡಿದರು. ಪುಟಾಣಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪೇರಿಯನ ಪ್ರಣವಿ ಹಾಗೂ ಪೇರಿಯನ ಮಾನ್ಯ ಪ್ರಾರ್ಥಿಸಿದರು, ಪರಿಚನ ಸತೀಶ್, ಪುದಿನೆರವನ ರೇವತಿ ರಮೇಶ್ ಹಾಗೂ ಕೆದಂಬಾಡಿ ಕಾಂಚನ ನಿರೂಪಿಸಿದರು. ವಿದ್ಯಾ ಸಂಘದ ಕಾರ್ಯದರ್ಶಿ ಪೇರಿಯನ ಉದಯ ವಂದಿಸಿದರು. ::: ಸ್ಪರ್ಧಾ ವಿಜೇತರು ::: ಛದ್ಮವೇಶ ಸ್ಪರ್ಧೆಯಲ್ಲಿ ಕೊಂಪುಳಿರ ಧ್ವನಿ ಪ್ರಥಮ, ಕರ್ಣಯನ ಯುಕ್ತ ದ್ವಿತೀಯ, ಅಯ್ಯಂಡ್ರ ಶಾನ್ ಚಂಗಪ್ಪ ತೃತೀಯ ಸ್ಥಾನ ಪಡೆದುಕೊಂಡರು. ಚಿತ್ರಕಲೆ ಸ್ಪರ್ಧೆಯಲ್ಲಿ ಸೊರ್ಣಂಗೇರಿ ನಿಶ್ಮಿತಾ ಪ್ರಥಮ, ಮೂಲೆಮಜಲು ಆರ್ಥ ಪೊನ್ನಪ್ಪ ದ್ವಿತೀಯ, ಮೂಲೆಮಜಲು ಆರ್ಹ ಪೊನ್ನಪ್ಪ ತೃತೀಯ, ಗೌಡ ಮನೆತನದ ಹೆಸರುಗಳನ್ನು…

Read More

ಮಡಿಕೇರಿ ಅ.2 : ಜಿಲ್ಲಾಡಳಿತ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ.ಮ್ಯಾಥ್ಯು, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕಾರ್ಯದರ್ಶಿ ಟಿ.ಎಂ.ಮುದ್ದಯ್ಯ, ಅಂಬೆಕಲ್ಲು ನವೀನ್, ಚುಮ್ಮಿ ದೇವಯ್ಯ, ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಕಾನೆಹಿತ್ಲು ಮೊಣ್ಣಪ್ಪ, ಲಿಯಾಕತ್ ಆಲಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ದಮಯಂತಿ, ಜುಲೇಕಾಬಿ, ಸೂರಯ್ಯ ಅಬ್ರಾರ್, ಎಂ.ಎನ್.ಸುಬ್ರಮಣಿ, ಪೆಮ್ಮಯ್ಯ, ಕಡ್ಲೇರ ತುಳಸಿ ಮೋಹನ್, ಪ್ರೇಮ ರಾಘವಯ್ಯ, ಭಾರತೀ ರಮೇಶ್, ರೇವತಿ ರಮೇಶ್, ತೆನ್ನಿರಾ ಮೈನಾ, ಸದಸ್ಯರು ಇತರರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ…

Read More

ಮಡಿಕೇರಿ ಅ.2 : ಮಹಾತ್ಮ ಗಾಂಧೀಜಿ ಅವರು ವಿಶ್ವದಲ್ಲಿ ನಿರಂತರ ಶಾಂತಿಗಾಗಿ ಶ್ರಮಿಸಿದರು. ಗಾಂಧೀಜಿ ಅವರು ಸತ್ಯ ದರ್ಶನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಗಾಂಧೀಜಿಯವರ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು, ಅವರ ತ್ಯಾಗ ಅಪಾರ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳ ಹಾಗೂ ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154 ನೇ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 119 ನೇ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಾತ್ಮ ಗಾಂಧೀಜಿ ಅವರ ತ್ಯಾಗವನ್ನು ಯಾರೂ…

Read More