ಮಡಿಕೇರಿ ಅ.2 : ಜಿಲ್ಲಾಡಳಿತ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ.ಮ್ಯಾಥ್ಯು, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕಾರ್ಯದರ್ಶಿ ಟಿ.ಎಂ.ಮುದ್ದಯ್ಯ, ಅಂಬೆಕಲ್ಲು ನವೀನ್, ಚುಮ್ಮಿ ದೇವಯ್ಯ, ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಕಾನೆಹಿತ್ಲು ಮೊಣ್ಣಪ್ಪ, ಲಿಯಾಕತ್ ಆಲಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ದಮಯಂತಿ, ಜುಲೇಕಾಬಿ, ಸೂರಯ್ಯ ಅಬ್ರಾರ್, ಎಂ.ಎನ್.ಸುಬ್ರಮಣಿ, ಪೆಮ್ಮಯ್ಯ, ಕಡ್ಲೇರ ತುಳಸಿ ಮೋಹನ್, ಪ್ರೇಮ ರಾಘವಯ್ಯ, ಭಾರತೀ ರಮೇಶ್, ರೇವತಿ ರಮೇಶ್, ತೆನ್ನಿರಾ ಮೈನಾ, ಸದಸ್ಯರು ಇತರರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ…
ಲೇಖಕ: admin
ಮಡಿಕೇರಿ ಅ.2 : ಮಹಾತ್ಮ ಗಾಂಧೀಜಿ ಅವರು ವಿಶ್ವದಲ್ಲಿ ನಿರಂತರ ಶಾಂತಿಗಾಗಿ ಶ್ರಮಿಸಿದರು. ಗಾಂಧೀಜಿ ಅವರು ಸತ್ಯ ದರ್ಶನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಗಾಂಧೀಜಿಯವರ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು, ಅವರ ತ್ಯಾಗ ಅಪಾರ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳ ಹಾಗೂ ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154 ನೇ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 119 ನೇ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಾತ್ಮ ಗಾಂಧೀಜಿ ಅವರ ತ್ಯಾಗವನ್ನು ಯಾರೂ…
ಸಿದ್ದಾಪುರ ಅ.2 : ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಅ.7 ರಂದು ಕರೆ ನೀಡಿರುವ ಜನಾಗ್ರಹ ಚಳುವಳಿಗೆ ಕಾಫಿನಾಡು ಕಟ್ಟಡ ಕಾರ್ಮಿಕ ಸಂಘಟನೆಯು ಬೆಂಬಲ ವ್ಯಕ್ತಪಡಿಸಿದೆ. ಸಂಘದ ಕಚೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಎಂ.ಎ ಕೃಷ್ಣ, ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ತಮ್ಮ ಬೇಡಿಕೆಯನ್ನ ಮುಂದಿಟ್ಟುಕೊಂಡು ಚಳುವಳಿಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು. ಈಗಾಗಲೇ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಮಾತ್ರ ನೊಂದಾಯಿಸಿ ಕೊಂಡಿದ್ದು ಯಾವುದೇ ಖಾಸಗಿ ಆಸ್ಪತ್ರೆ ನೊಂದಣಿಯಾಗದೆ ಇರುವುದರಿಂದ ಜಿಲ್ಲೆಯ ಕಟ್ಟಡ ಕಾರ್ಮಿಕರು ಚಿಕಿತ್ಸಾ ಸೌಲಭ್ಯ ದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು. ಈ ಸಮಸ್ಯೆಯನ್ನು ಬಗೆ ಹರಿಸಲು ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯನ್ನು ನೋಂದಾಯಿಸಿ ಕೊಳ್ಳಬೇಕು ಆಗ್ರಹಿಸಿದರು. ನೊಂದಣಿಯ ಹಾಗೂ ನವೀಕರಣಕ್ಕೆ ವೇತನ ಚೀಟಿ ಹಾಗೂ ಹಾಜರಾತಿ ಪಟ್ಟಿ ಕಡ್ಡಾಯವನ್ನು ರದ್ದುಗೊಳಿಸ ಬೇಕು ಹಾಗೂ ನವಿಕರಣ ಅವಧಿ ಈ ಹಿದಿನಂತೆ…
ಮಡಿಕೇರಿ ಅ.2 : ಮನುಷ್ಯ ತನ್ನ ಮನವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಕುರಿತು ಯೋಚಿಸಬೇಕು. ಎರಡನೇ ಹಂತವಾಗಿ ತನ್ನ ಪರಿಸರ ಸ್ವಚ್ಛತೆಯ ಬಗೆಯೂ ಕಾಳಜಿ ವಹಿಸಬೇಕು. ಆ ಮೂಲಕ ಪ್ರಜ್ಞೆ ಮತ್ತು ಪರಿಸರ ಎರಡನ್ನೂ ಸಮತೂಕದಲ್ಲಿಟ್ಟುಕೊಂಡರೆ ಉತ್ತಮ ಸಮಾಜ ರೂಪಿಸಲು ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಮಹದೇವಯ್ಯ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್.ಎಸ್.ಎಸ್, ಎನ್.ಸಿ.ಸಿ ಇಸಿ/ಸಿಸಿ, ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಆಯೋಜಿಸಿದ 154ನೇ ಗಾಂಧಿ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಗಾಂಧಿ ಚಿಂತನಾಧಾರೆಯ ಕುರಿತು ಅವರು, ಉಪನ್ಯಾಸ ನೀಡಿದರು. ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಚಿಂತನೆಗಳು ಸಾರ್ವಕಾಲಿಕತೆಯನ್ನು ಪ್ರತಿಪಾದಿಸುತ್ತದೆ. ರಾಜಕಾರಣಿಗಳು ಗಾಂಧಿ ಮಾರ್ಗದಲ್ಲಿ ಮುನ್ನೆಡೆಯುವ ಪ್ರಯತ್ನ ಮಾಡಿದರೆ ದೇಶ ಈಗಾಲೇ ಅಭಿವೃದ್ಧಿಯ ನಾಗಲೋಟದಲ್ಲಿ ಮುಂಚೂಣಿಯಲ್ಲಿರುತ್ತಿತ್ತು. ವಿಪರ್ಯಾಸವೆಂದರೆ ಗಾಂಧಿ ಚಿಂತನೆ ದೇಶದ ರಾಜಕೀಯ ಪ್ರಕ್ರಿಯೆಯನ್ನು ಪ್ರಭಾವಿಸಲಿಲ್ಲ ಎಂದರು. ಮಾತ್ರವಲ್ಲ ಗಾಂಧಿ ಮತ್ತು ಅಂಬೇಡ್ಕರ್ ಈ ದೇಶದ ಕಣ್ಮಣಿಗಳು…
ಮಡಿಕೇರಿ ಅ.2 : ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ *ಪಬ್ಲಿಕ್ ಟಿವಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಾಣ ಮಾಡಿರುವ *ಕಂಪ್ಯೂಟರ್ ಕೊಠಡಿ* ಲೋಕಾರ್ಪಣೆ ಕಾರ್ಯಕ್ರಮ ಅ.4 ರಂದು ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಸರಸ್ವತಿ ಪೂಜೆ ಹಾಗೂ ಸಂಜೆ 4 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನೂತನ ಕೊಠಡಿಯನ್ನು ಬೆಂಗಳೂರಿನ ಪಬ್ಲಿಕ್ ಟಿವಿ ಕೇಂದ್ರ ಕಚೇರಿಯಿಂದ ಉದ್ಘಾಟನೆ ಮಾಡಲಾಗುವುದು ಎಂದು ಪಬ್ಲಿಕ್ ಟಿವಿಯ ಕೊಡಗು ಜಿಲ್ಲಾ ವರದಿಗಾರ ಮಲ್ಲಿಕಾರ್ಜುನ್ ಮಡಿಕೇರಿ ತಿಳಿಸಿದ್ದಾರೆ.
ಮಡಿಕೇರಿ ಅ.2 : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವ ಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿ.ಪಂ ಮಾಜಿ ಸದಸ್ಯ ವಿ.ಪಿ ಶಶಿಧರ್ ಮಾತನಾಡಿ, ಗಾಂಧೀಜಿಯವರ ಹಿನ್ನೆಲೆ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಮತ್ತು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಮತ್ತು ಸ್ವಾತಂತ್ರ್ಯ ಪಡೆದ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಆಡಳಿತ ವಿಚಾರಗಳನ್ನು ನೆನಪಿಸಿದರು. ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಅವರು ಇಬ್ಬರು ಗಣ್ಯರ ಕುರಿತು ಮಾತನಾಡಿ ಅವರ ವಿಚಾರಧಾರೆಯನ್ನು ಸಂಕ್ಷಿಪ್ತವಾಗಿ ತಿಳಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಕೊಡಗು…
ಮೂರ್ನಾಡು ಅ.2 : ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ‘ಸ್ವಚ್ಛತೆಯೇ ಸೇವೆ’ ಅಭಿಯಾನ ನಡೆಯಿತು. ಮೂರ್ನಾಡುವಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘ, ಶ್ರೀ ರಾಮಮಂದಿರ ಸೇವಾ ಸಮಿತಿ ಗಾಂಧಿನಗರ ಹಾಗೂ ಕಾಂತೂರು ಮೂರ್ನಾಡು ಗ್ರಾ.ಪಂ ಜಂಟಿ ಆಶ್ರಯದಲ್ಲಿ ಮೂರ್ನಾಡು ಪ್ರಾಥಮಿಕ ಹಾಗೂ ಪ್ರೌಢ ಶಾಲೆ ರಸ್ತೆ, ಆರೋಗ್ಯ ಕೇಂದ್ರ ಸುತ್ತಮುತ್ತ, ಆರೋಗ್ಯ ಕೇಂದ್ರದ ವಸತಿ ನಿಲಯ ಹಾಗೂ ನಾಪೋಕ್ಲು ರಸ್ತೆ ಈ ಭಾಗದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು.
ಮಡಿಕೇರಿ ಅ.2 : ಮಾಯಮುಡಿ ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ಕೈಲ್‍ಪೋಳ್ದ್ ಹಬ್ಬದ ಪ್ರಯುಕ್ತ ವಿವಿಧ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕಾಫಿ ಬೆಳೆಗಾರ ಕಾಳಪಂಡ ಸಿ.ಸುಧೀರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಮತ್ತು ಆರೋಗ್ಯವಂತರಾಗಿ ಬದುಕಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಟಿಪ್ಪು ಬಿದ್ದಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ::: ಸ್ಪರ್ಧಾ ವಿಜೇತರು ::: .22 ತೆಂಗಿನ ಕಾಯಿಗೆ ಗುಂಡು ಒಡೆಯುವ ಸ್ಪರ್ಧೆಯಲ್ಲಿ ಚೆಪ್ಪುಡೀರ ದರ್ಶನ್ ಬೆಳ್ಯಪ್ಪ ಪ್ರಥಮ, ಆಪಟ್ಟೀರ ಸಿ.ಪ್ರದೀಪ್ ದ್ವಿತೀಯ, ಆಪಟ್ಟೀರ ಆರ್.ಅಯ್ಯಪ್ಪ ತೃತೀಯ ಬಹುಮಾನ ಪಡೆದುಕೊಂಡರು. ಮಹಿಳಾ ವಿಭಾಗದಲ್ಲಿ ಆಪಟ್ಟೀರ ಸಿ.ಪೌನಿ ಗೌರಮ್ಮ ಪ್ರಥಮ, ಆಪಟ್ಟೀರ ಜಸ್ಮಿ ಬೋಪಣ್ಣ ದ್ವಿತೀಯ, ಚೆರಿಯಪಂಡ ಡಾಟಿ ಪೂವಣ್ಣ ತೃತೀಯ ಬಹುಮಾನ ಗಳಿಸಿದರು. ಬಕೆಟ್‍ಗೆ ಬಾಲ್ ಹಾಕುವ ಸ್ಪರ್ಧೆಯಲ್ಲಿ ಪುಚ್ಚಿಮಾಡ ಶಿಲ್ಪ ರಾಯ್ ಪ್ರಥಮ, ಚೆಪ್ಪುಡಿರ ಮಾನ್ಯ ಪೂವಯ್ಯ ದ್ವಿತೀಯ, ಆಪಟ್ಟೀರ ಸಿ.ಪೌನಿ ಗೌರಮ್ಮ ತೃತೀಯ ಬಹುಮಾನ ಪಡೆದರು. ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ನ…
ಮಡಿಕೇರಿ, ಅ.2: ‘ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊoದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ’ ಎಂದು ಕೊಡಗು ಅರಣ್ಯ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ ಸೋಮವಾರ ಮಡಿಕೇರಿಯಲ್ಲಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ , ರಾಷ್ಟ್ರೀಯ ಸೇವಾ ಯೋಜನೆ ( ಎನ್ನೆಸ್ಸೆಸ್ ) ಘಟಕಗಳು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಘಟಕ ಮತ್ತು ಎನ್.ಸಿ.ಸಿ.,ಘಟಕ ಹಾಗೂ ನಗರದ ಗ್ರೀನ್ ಸಿಟಿ ಪೋರಂ ನ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಅರಣ್ಯ ಭವನದ ಆವರಣದಲ್ಲಿ “ವನ್ಯಜೀವಿಗಳ ಸಂರಕ್ಷಣೆಗಾಗಿ ನಡಿಗೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ : 2023…
ಚೆಟ್ಟಳ್ಳಿ ಅ.2 : ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಚುನಾವಣೆಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಬಲ್ಲಾರಂಡ ಮಣಿ ಉತ್ತಪ್ಪ ಅವರ ಬಳಗ ಭರ್ಜರಿ ಗೆಲವು ಸಾಧಿಸಿದೆ. ಎಲ್ಲಾ 12 ಸ್ಥಾನಗಳಲ್ಲಿ ಮಣಿ ಉತ್ತಪ್ಪ ಅವರ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ. ಒಟ್ಟು 12 ಸ್ಥಾನಗಳಲ್ಲಿ 2ಮಹಿಳಾ ಮೀಸಲು ಸ್ಥಾನಕ್ಕೆ ಕೊಂಗೇಟಿರ ವಾಣಿಕಾಳಪ್ಪ ಹಾಗೂ ಮುಳ್ಳಂಡ ಮಾಯಮ್ಮ, ಪರಿಶಿಷ್ಟ ಜಾತಿ ಸ್ಥಾನಕ್ಕೆ ಪಿ.ಟಿ.ಗಣೇಶ್ ಹಾಗೂ ಪರಿಶಿಷ್ಟ ಪಂಗಡ ಸ್ಥಾನಕ್ಕೆ ಜೆ.ಅರ್.ರವಿ, ಹಿಂದುಳಿದ ವರ್ಗದ ಪ್ರವರ್ಗ- ಎ ಸ್ಥಾನಕ್ಕೆ ಬಿ.ಎಂ.ಕಾಶಿ ಹಾಗೂ ಪ್ರವರ್ಗ- ಬಿ ಸ್ಥಾನಕ್ಕೆ ಪೇರಿಯನ ಪೂಣಚ್ಚ, ಸಾಲಗಾರರಲ್ಲದ ಸ್ಥಾನಕ್ಕೆ ಮರದಾಳು ಚೇತನ್ (ಹರಿ) ಸೇರಿ 7 ಮಂದಿ ಅವಿರೋಧವಾಗಿ ಆಯ್ಕೆಯಾದರು. ಉಳಿದ 5 ಸ್ಥಾನಗಳಿಗೆ ಚುನಾವಣೆ ನಡೆದು ಬಲ್ಲಾರಂಡ ಮಣಿ ಉತ್ತಪ್ಪ (497), ಶಿವುನಂಜಪ್ಪ ಪುತ್ತರಿರ (473), ವೇಣುಗೋಪಾಲ ಬಟ್ಟೀರ (465) ದಯಾನಂದ ಅಕ್ಕಾರಿ(406) ಹಾಗೂ ಪ್ರಜ್ವಲ್ ಕರ್ಣಯ್ಯನ (422) ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿಗಳಾದ ತೀರ್ಥ ಕುಮಾರ್ ಚೆಟ್ಟೋಳಿರ…






