ಲೇಖಕ: admin

ಮಡಿಕೇರಿ ಮೇ 12 NEWS DESK : ಶ್ರೇಷ್ಠ ಅಂಕಗಳಿಂದ ಮಾತ್ರವೇ ಜೀವನವನ್ನು ನಿರ್ಧರಿಸಲು ಸಾಧ್ಯವಿಲ್ಲ, ಇದರ ಹೊರತಾಗಿಯೂ ಒಂದು ಬದುಕಿದೆ ಎಂಬುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿ ಅರಿತುಕೊಳ್ಳಬೇಕು. ಜೀವನ ಕೇವಲ ಅಂಕಗಳಿಗೆ ಸೀಮಿತವಾಗಬಾರದು ಎಂದು ಲೇಖಕ ಹಾಗೂ ಪ್ರಾಧ್ಯಾಪಕ ಅರ್ಜುನ್ ಮೌರ್ಯ ಅವರು ಸಲಹೆ ನೀಡಿದ್ದಾರೆ. ಉಮ್ಮತ್‍ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಶಿಕ್ಷಣ ಮೇಳ, ಪ್ರತಿಭಾ ಪುರಸ್ಕಾರ, 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು, ಸಾಧಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳ ಜೊತೆಯಲ್ಲಿಯೇ ಸವಾಲುಗಳಿವೆ. ಅವುಗಳ ಬಗ್ಗೆಯೂ ಜವಾಬ್ದಾರಿ ವಹಿಸಬೇಕು. ಶಿಕ್ಷಣ ಮಾತ್ರವೇ ವ್ಯಕ್ತಿಯ ಧರ್ಮವನ್ನು ನಿರ್ಧರಿಸುತ್ತದೆಯೇ ಹೊರತು, ಚೌಕಟ್ಟಿನ ಧರ್ಮ ಶಿಕ್ಷಣವನ್ನು ನಿರ್ಧರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ನಿರೀಕ್ಷೆಗಳ ಮೇಲೆ ಕಲ್ಲು ಎತ್ತಿ ಹಾಕುವ ಕೆಲಸ ಮಾಡಬಾರದು. ಇಂದು ಶಿಕ್ಷಣ…

Read More

ಮಡಿಕೇರಿ ಮೇ 12 NEWS DESK : ಶ್ರೇಷ್ಠ ಅಂಕಗಳಿಂದ ಮಾತ್ರವೇ ಜೀವನವನ್ನು ನಿರ್ಧರಿಸಲು ಸಾಧ್ಯವಿಲ್ಲ, ಇದರ ಹೊರತಾಗಿಯೂ ಒಂದು ಬದುಕಿದೆ ಎಂಬುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿ ಅರಿತುಕೊಳ್ಳಬೇಕು. ಜೀವನ ಕೇವಲ ಅಂಕಗಳಿಗೆ ಸೀಮಿತವಾಗಬಾರದು ಎಂದು ಲೇಖಕ ಹಾಗೂ ಪ್ರಾಧ್ಯಾಪಕ ಅರ್ಜುನ್ ಮೌರ್ಯ ಅವರು ಸಲಹೆ ನೀಡಿದ್ದಾರೆ. ಉಮ್ಮತ್‍ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಶಿಕ್ಷಣ ಮೇಳ, ಪ್ರತಿಭಾ ಪುರಸ್ಕಾರ, 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು, ಸಾಧಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳ ಜೊತೆಯಲ್ಲಿಯೇ ಸವಾಲುಗಳಿವೆ. ಅವುಗಳ ಬಗ್ಗೆಯೂ ಜವಾಬ್ದಾರಿ ವಹಿಸಬೇಕು. ಶಿಕ್ಷಣ ಮಾತ್ರವೇ ವ್ಯಕ್ತಿಯ ಧರ್ಮವನ್ನು ನಿರ್ಧರಿಸುತ್ತದೆಯೇ ಹೊರತು, ಚೌಕಟ್ಟಿನ ಧರ್ಮ ಶಿಕ್ಷಣವನ್ನು ನಿರ್ಧರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ನಿರೀಕ್ಷೆಗಳ ಮೇಲೆ ಕಲ್ಲು ಎತ್ತಿ ಹಾಕುವ ಕೆಲಸ ಮಾಡಬಾರದು. ಇಂದು ಶಿಕ್ಷಣ…

Read More

ಮಡಿಕೇರಿ NEWS DESK ಮೇ 12 : ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹವನ್ನು ಇಂದು ಮಡಿಕೇರಿ ನಗರದ “ಕೊಡವ ಮಂದ್” ನಲ್ಲಿ ಆರಂಭಿಸಿತು. ಕೊಡವ ಮಂದ್ ನಲ್ಲಿ ಸಾಂಪ್ರದಾಯಿಕ ಪ್ರಾರ್ಥನೆಯನ್ನು ಸಲ್ಲಿಸಿ ಮೂರು ಬಾರಿ ಕುಶಲತೋಪು ಹಾರಿಸುವ ಮೂಲಕ ಶಾಂತಿಯುತ ಸತ್ಯಾಗ್ರಹ ಆರಂಭಿಸಲಾಯಿತು. ಸತ್ಯಾಗ್ರಹದಲ್ಲಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ, ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರ ನೀಡಬೇಕೆಂದು ಆಗ್ರಹಿಸಿರುವ ಮನವಿ ಪತ್ರವನ್ನು ಭಾರತದ ರಾಷ್ಟಪತಿಗಳು, ಪ್ರಧಾನಮಂತ್ರಿಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಲಾಗುವುದು. “ಕೊಡವ ಮಂದ್” ನಲ್ಲಿ ಮೇ 14 ರಂದು ಬೆಳಿಗ್ಗೆ 10.30 ರವರೆಗೆ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು. ಕೊಡವರ ಸಾಂಪ್ರದಾಯಿಕ ಆವಾಸಸ್ಥಾನದ ಗಡಿಗಳನ್ನು ಬದಲಾಯಿಸದೆ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಸಿಕ್ಕಿಂನ…

Read More

ಮಡಿಕೇರಿ NEWS DESK ಮೇ 12 : ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಶೇ.50 ಕ್ಕಿಂತಲೂ ಕಡಿಮೆ ಮಳೆ ಆಗಿದೆ. ಆದರೂ ಮಳೆಗಾಲದ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ.ಇಒಗಳು, ಸ್ಥಳೀಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸ್ಥಳೀಯ ಎಂಜಿನಿಯರ್‌ಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ತಾಲ್ಲೂಕು ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ…

Read More

ಮಡಿಕೇರಿ NEWS DESK ಮೇ 12 : ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೋಳಿಬೈಲು ವೆಂಕಟೇಶ್ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣ ನೀಡಿರುವ ಅವರು ರಾಜೀನಾಮೆ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರಿಗೆ ಸಲ್ಲಿಸಿದ್ದಾರೆ.

Read More

ಸುಂಟಿಕೊಪ್ಪ ಮೇ 11 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿ ಧ್ವಜಾರೋಹಣ ಹಾಗೂ ಅಡಂಬರ ದಿವ್ಯ ಬಲಿಪೂಜೆ ನೆರವೇರಿಸುವ ಮೂಲಕ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಯಾದ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಹಾಗೂ ಮಡಿಕೇರಿ ವಲಯ ದರ್ಮಗುರುಗಳು ಮತ್ತು ಸಂತ ಮೈಕಲರ ದೇವಾಲಯದ ಧರ್ಮಗುರುಗಳಾದ ಜಾರ್ಜ್ ದೀಪಕ್, ಬೆಂಗಳೂರಿನ ಧರ್ಮಗುರುಗಳು ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ಚಾಲನೆ ನೀಡಿದರು. ಬಲಿಪೂಜೆ ಹಾಗೂ ಆರಾಧನೆಯನ್ನು ಕೆ.ಆರ್.ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರುಗಾಳದ ಟಿ.ಪೌಲೂಸ್ ಅವರುಗಳು ನೆರವೇರಿಸಿದರು. ಮಕ್ಕಳಿಗೆ ನೂತನ ಪರಮ ಪ್ರಸಾದ ಸಂಸ್ಕಾರ ಮತ್ತು ಅಡಂಬರ ದಿವ್ಯ ಬಲಿಪೂಜೆಯನ್ನು ಏಕಾರ್ಡ್ ಎಸ್ಟೇಟ್ ಸಹಾಯಕ ಧರ್ಮಗುರುಗಾಳದ ಚಾಲ್ರ್ಸ್ ಪೆರಿಯನಾಗಮ್ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ಆಡಂಬರ ದಿವ್ಯ ಬಲಿಪೂಜೆ ಪ್ರಭೋದನೆ ಮತ್ತು ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಸಂಸ್ಕಾರ ವಿತರಿಸಿದರು. ಸಂತ ಅಂತೋಣಿ ದೇವಾಲಯದ ಧರ್ಮಗುರುಗಳು…

Read More

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಕೊಡಗು ಬ್ಲಡ್ ಡೋನರ್ಸ್ ಪದಾಧಿಕಾರಿಗಳು ಟಿ.ಕೆ.ರಾಜು ಅವರನ್ನು ಭೇಟಿಯಾಗಿ ತುರ್ತು ಸಂದರ್ಭದಲ್ಲಿ ರಕ್ತದ ಬೇಡಿಕೆ ಇದ್ದಾಗ ತಮ್ಮ ಇಲಾಖಾ ಸಿಬ್ಬಂದಿಗಳನ್ನು ರಕ್ತದಾನ ಮಾಡಲು ಕಳುಹಿಸುತ್ತಿದ್ದನ್ನು ಸ್ಮರಿಸಿ, ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

Read More

ಮಡಿಕೇರಿ ಮೇ 11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಮ್ಮೇಳನಾಧ್ಯಕ್ಷರಾದ ಅಬ್ದುಲ್ ರಶೀದ್ ಅವರಿಗೆ ಆಹ್ವಾನ ನೀಡಲಾಯಿತು. 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳು ಕಥೆಗಾರ ಅಬ್ದುಲ್ ರಶೀದ್ ಅವರ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ತೋಟದ ನಿವಾಸಕ್ಕೆ ಭೇಟಿ ನೀಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್, ಹದಿನೇಳನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷರು, ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರಾದ ಲೋಕೇಶ್ ಕುಮಾರ್, ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪಿ.ಎಫ್. ಸಬಾಸ್ಟಿನ್, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರು, ಸಮ್ಮೇಳನದ ಆಹಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಗುಡ್ಡೆಮನೆ  ಅವರು ಸಾಂಪ್ರದಾಯಿಕವಾಗಿ ಸಮ್ಮೇಳನದ ಅಧ್ಯಕ್ಷರನ್ನು ಗೌರವಿಸಿ ಸಮ್ಮೇಳನಕ್ಕೆ ಆಹ್ವಾನ ನೀಡಿದರು. ಈ ಸಂದರ್ಭ ಅಬ್ದುಲ್ ರಶೀದ್ ಅವರ ಪತ್ನಿ…

Read More

ಮಡಿಕೇರಿ ಮೇ 11 NEWS DESK : ವಿದ್ಯುತ್ ವಿತರಣಾ 66/11 ಕೆ.ವಿ ಉಪಕೇಂದ್ರ ಪೊನ್ನಂಪೇಟೆಯಿಂದ ಹೊರಹೊಮ್ಮುವ ಎಫ್10 ಹೈಸೊಡ್ಲೂರು ಫೀಡರ್‍ನಲ್ಲಿ ಮೇ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹುದಿಕೇರಿ, ಕೊಣಂಗೇರಿ, ಬೆಳ್ಳೂರು, ಹೈಸೊಡ್ಲೂರು, ಪೂಕಳತೋಡು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 11 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು  ಮೇ, 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.  ಸರ್ಕಾರಿ  ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More