ಮಡಿಕೇರಿ ನ.6 : ರಾಜ್ಯದ ಬೇರೆ ಜಿಲ್ಲೆಗಳಲ್ಲಿರುವಂತೆ ಕೊಡಗಿನಲ್ಲಿಯೂ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯವನ್ನು ಮತ್ತೆ ಜಿಲ್ಲಾಡಳಿತ ಜಾರಿಗೆ ತರಬೇಕೆಂದು ಜಿಲ್ಲಾ ಲೀಡ್ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ, ಅಂಕಣಕಾರ ಆರ್.ಕೆ.ಬಾಲಚಂದ್ರ ಮನವಿ ಮಾಡಿದ್ದಾರೆ. ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಗರದ ಓಂಕಾರ ಸದನದಲ್ಲಿ ಆಯೋಜಿತ ಕನ್ನಡ ಹಬ್ಬ ದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ವಾಷಿ೯ಕ ಪ್ರಶಸ್ತಿ ಪ್ರಧಾನ ಮತ್ತು ಸ್ಪಧಾ೯ ವಿಜೇತರಿಗೆ ಬಹುಮಾನ ವಿತರಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಾಲಚಂದ್ರ, ಪ್ರತೀ ಜಿಲ್ಲೆಯಲ್ಲಿಯೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಇದ್ದಾರೆ. ನವಂಬರ್ ನಲ್ಲಿ ಆಯಾ ಜಿಲ್ಲಾಡಳಿತ ಅಂಥ ಸಾಧಕರನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಾ ಬರುತ್ತಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಮಾತ್ರ ರಾಜ್ಯೋತ್ಸವ ಸಂದಭ೯ ಇಂಥ ಸನ್ಮಾನ, ಗೌರವಾಪ೯ಣೆ ಕಂಡುಬರುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಗಮನ ಹರಿಸಿ ಸಾಧಕರನ್ನು ಗೌರವಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕೆಂದು ಕೋರಿದರು. ಕನ್ನಡ ಸಂಬಂಧಿತ…
ಲೇಖಕ: admin
ಮಡಿಕೇರಿ ನ.6 : ಕುಂಜಿಲದ ಖುತುಬುಲ್ ಆರಿಫೀನ್ ರಾತೀಬ್ ಸಂಘದ ಆಶ್ರಯದಲ್ಲಿ ನಡೆದ ರಾತೀಬ್ ಮಜ್ಲಿಸ್ ಸಂಭ್ರಮದಿಂದ ನಡೆಯಿತು. ಮಗ್ರಿಬ್, ಪಯ್-ನರಿ ಜುಮಾ ಮಸೀದಿಯಲ್ಲಿ ಮುಹಿಯುಧ್ಧೀನ್ ರಾತೀಬ್ ಹಾಗೂ ಇಶಾ ನಮಾಝಿನ ಬಳಿಕ ಸಭಾಂಗಣದಲ್ಲಿ ರಿಫಾಯಿಯ ಕುತ್ತ್ ರಾತೀಬ್ ಹಾಗೂ ಮುದರ್ರಿಸ್ ನಿಝಾರ್ ಅಹ್ಸನಿ ದುವಾ ನಡೆಸಿ ತಬರ್ರುಕ್ ವಿತರಣೆ ನೀಡಲಾಯಿತು ಎಂದು ರಾತೀಬ್ ಸಂಗಾಟಕರು ತಿಳಿಸಿದರು. ವರದಿ : ಸಾಜಿದ್ ಪಯ್ಯಡಿ
ಮಡಿಕೇರಿ ನ.6 : ನಗರದ ವ್ಯಾoಡಮ್ ಎಂಟರ್‌ಪ್ರೈಸಸ್ ನ 29ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಲಕ್ಕಿ ಡ್ರಾ ಕೂಪನ್ ನ್ನು ರಾಷ್ಟ್ರೀಯ ಹಾಕಿ ಪಟು ಮರಗೋಡಿನ ಜನಾರ್ಧನ ಅವರ ಪುತ್ರಿ ಚೈತ್ರಾ ಬಿಡುಗಡೆ ಮಾಡಿ ಶುಭಹಾರೈಸಿದರು. ಲಕ್ಕಿ ಡ್ರಾ ಕೂಪನ್ ನಲ್ಲಿ ಒಂದು ಲಕ್ಷಕ್ಕೂ ಮಿಗಿಲಾದ ಬಹುಮಾನವನ್ನು ಒಳಗೊಂಡಿದ್ದು, ಪ್ರಥಮ ಬಹುಮಾನ ಸ್ಕೂಟರ್, ದ್ವಿತೀಯ ಬಹುಮಾನ ರಿಫ್ರಿಜಿರೇಟರ್ ನೀಡಲಾಗುವುದೆಂದು ವ್ಯಾoಡಮ್ ಎಂಟರ್‌ಪ್ರೈಸಸ್ ಮಾಲೀಕ ದಮೋದರ್ ತಿಳಿಸಿದ್ದಾರೆ. ಚೈತ್ರಾ ಬೆಳೆಗಾವಿಯ ಕಿತ್ತೂರು ಸೈನಿಕ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಷ್ಟ್ರವನ್ನು ಪ್ರತಿನಿಧಿಸಿರುವವುದರಿಂದ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.
ಮಡಿಕೇರಿ ನ.5 : ನಿವೃತ್ತ ಪೊಲೀಸ್ ಅಧಿಕಾರಿಯ ಮನೆಗೇ ನುಗ್ಗಿದ ಚೋರನೊಬ್ಬ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ತಾಳಿ ಸರವನ್ನು ಕದ್ದೊಯ್ಯಲು ಯತ್ನಿಸಿದ ಘಟನೆ ಮಡಿಕೇರಿ ನಗರದ ಹೃದಯ ಭಾಗದಲ್ಲಿ ನಡೆದಿದೆ. ನಗರದ ಐಡಿಬಿಐ ಬ್ಯಾಂಕ್ ಎದುರು ವಾಸವಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಸಿ.ಪ್ರಭಾಕರ್ ಅವರ ಮನೆಗೆ ಇಂದು ಸಂಜೆ 6.40 ರ ವೇಳೆಗೆ ಲಗ್ಗೆ ಇಟ್ಟ ಕಳ್ಳ ಪತ್ನಿ ಸಾಕಮ್ಮ ಅವರ ತಲೆಯ ಭಾಗಕ್ಕೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದ್ದಾನೆ. ನಂತರ ಕುತ್ತಿಗೆಯಲ್ಲಿದ್ದ ತಾಳಿ ಸರವನ್ನು ಕಸಿಯಲು ಯತ್ನಿಸಿದ್ದಾನೆ. ಆದರೆ ಸಾಕಮ್ಮ ಜೋರಾಗಿ ಕಿರುಚಿಕೊಂಡ ಕಾರಣ ಆತ ಬಂದ ದಾರಿಗೆ ಸುಂಕವಿಲ್ಲವೆಂದು ಕಾಲಿಗೆ ಬುದ್ದಿ ಹೇಳಿದ್ದಾನೆ. ಸರ ಸಾಕಮ್ಮ ಅವರ ಕುತ್ತಿಗೆಯಲ್ಲೇ ಉಳಿದಿದೆ. ವಾಯು ವಿಹಾರಕ್ಕೆಂದು ಹೋಗಿದ್ದ ಪತಿ ಪ್ರಭಾಕರ್ ಅವರು ಮನೆಗೆ ಮರಳಿದಾಗ ಪತ್ನಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಸ್ಥಳೀಯರ ಸಹಕಾರದಿಂದ ಸಾಕಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಚೋರ ಮನೆಯ ಹಿಂಬಾಗಿಲಿನಿಂದ ಒಳ ಪ್ರವೇಶಿಸಿರುವ…
ಚೆಟ್ಟಳ್ಳಿ ನ.5 : ಚೆಟ್ಟಳ್ಳಿಯ ಅವರ್ ಕ್ಲಬ್ ವತಿಯಿಂದ ವಿವಾಹಿತ ಮಹಿಳೆಯರ ಮುಕ್ತ ನಾಕೌಟ್ ಕ್ರಿಕೆಟ್ ಪಂದ್ಯಾವಳಿ ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು. ಕೌಟುಂಬಿಕ ಜಂಜಾಟ ಮತ್ತು ದಿನದ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಸಮವಸ್ತ್ರ ತೊಟ್ಟ ಮಹಿಳೆಯರು ನಾವೇನು ಪುರುಷರಿಗಿಂತ ಕಡಿಮೆ ಇಲ್ಲ ಎಂಬಂತೆ ಕ್ರಿಕೆಟ್ ಬ್ಯಾಟ್ ಹಿಡಿದು ಸಿಕ್ಸ್, ಫೋರ್ ಬಾರಿಸಿ ಸಂಭ್ರಮಿಸಿದರು. ಟೀಂ ಮಾಲ್ದಾರೆ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಟೀಂ ಮಾಸ್ಟರ್ ಬ್ಲಾಸ್ಟರ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. 6 ಓವರ್ ಗಳ ಪಂದ್ಯಾವಳಿಯಲ್ಲಿ 25 ವರ್ಷ ಮೇಲ್ಪಟ್ಟ ಒಟ್ಟು 15 ಮಹಿಳಾ ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮಾಸ್ಟರ್ ಬ್ಲಾಸ್ಟರ್ ತಂಡ ನಿಗಧಿತ 4 ಓವರ್ ಗಳಲ್ಲಿ 23 ರನ್ ಗಳನ್ನು ಗಳಿಸಿತು. ಈ ಅಲ್ಪಮೊತ್ತದ ಗುರಿಯನ್ನು ಬೆನ್ನತ್ತಿದ ಮಾಲ್ದಾರೆ ತಂಡ 2.3 ಎಸೆತಗಳಲ್ಲಿ ಗೆದ್ದು ಬೀಗಿತು. ಸಂಭ್ರಮ ಮತ್ತು ಕೋಕೇರಿ ತಂಡದ ನಡುವೆ ಸೆಣಸಾಟ ನಡೆದು ಕೋಕೇರಿ ಮೂರನೇ…
ಮಡಿಕೇರಿ ನ.5 : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 140 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರ ನಗರದಿಂದ ಕೂಡ್ಲೂರು ರಸ್ತೆಯಲ್ಲಿ ಗಾಂಜಾ ದಂಧೆ ನಡೆಯುತ್ತಿರುವ ಕುರಿತು ದೊರೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಕುಶಾಲನಗರದ ನಿವಾಸಿಗಳಾದ ಗಣೇಶ (24) ಹಾಗೂ ದೀಪು (24) ಅವರುಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಸಿದ್ದಾರೆ. ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಜಗದೀಶ್.ಎಂ, ಕುಶಾಲನಗರ ಪಿಎಸ್‌ಐ ಮೋಹನ್ ರಾಜು.ಪಿ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ದಾಳಿ ನಡೆಸಲಾಯಿತು. ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ದಕ್ಷ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ನ.5 : ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯಂಗಳಕ್ಕೆ ಉರುಳಿ ಬಿದ್ದ ಘಟನೆ ಮಡಿಕೇರಿ-ಮೇಕೇರಿ ರಸ್ತೆಯ 1ನೇ ಮೈಲ್‌ನಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿ ಹೊಂದಿದ ಕಾರಿನಲ್ಲಿ ಮೂವರು ಪ್ರವಾಸಿಗರು ಮೇಕೇರಿ ಬಳಿಯ 1ನೇ ಮೈಲ್‌ನಲ್ಲಿರುವ ಹೋಂ ಸ್ಟೇ ಒಂದಕ್ಕೆ ಆಗಮಿಸಿದ್ದರು. ಹೋಂಸ್ಟೇಗೆ ತೆರಳುವ ಏರು ರಸ್ತೆಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆಯ ಪಕ್ಕದಲ್ಲೇ ಇರುವ ದಿ.ಸೈಯದ್ ಲತೀಫ್ ಎಂಬುವವರ ಮನೆಯ ಅಂಗಳಕ್ಕೆ ಉರುಳಿ ಬಿದ್ದಿದೆ. ಘಟನೆಯಿಂದ ಕಾರು ಜಖಂಗೊoಡಿದ್ದು, ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ನ.5 : ಸಂಪಾಜೆ ಸಮೀಪ ಅರಂತೋಡು ಭಾಗದಲ್ಲಿ ಅಡಿಕೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಅಡ್ತಲೆ ನಿವಾಸಿ ಮೋಹನ್ ಪಂಜದಬೈಲು ಅವರ ತೋಟದಿಂದ ಅಡಿಕೆ ಕಳ್ಳತನವಾಗಿದೆ. ಇಂಟರ್ ಮಂಗಳ ಅಡಿಕೆ ಬೆಳೆಯಲಾಗಿದ್ದು, ಕೈಗೆಟುಕುವಷ್ಟು ಎತ್ತರದಲ್ಲಿ ಅಡಿಕೆ ಗೊನೆಗಳಿವೆ. ಇವುಗಳನ್ನು ಮಾತ್ರವಲ್ಲದೆ ಇತರ ಮರಗಳಿಂದ ಕೂಡ ಹಣ್ಣಾದ ಅಡಿಕೆಗಳನ್ನು ಕಳ್ಳತನ ಮಾಡಲಾಗಿದೆ. ಮೋಹನ್ ಅವರು ಪೊಲೀಸರಿಗೆ ದೂರು ನೀಡಿದ್ದು, ಚೋರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇತರ ಬೆಳೆಗಾರರು ಕೂಡ ಒತ್ತಾಯಿಸಿದ್ದಾರೆ.
ಸುಂಟಿಕೊಪ್ಪ ನ.5 : ಹೆರೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕೃಷಿ ಫಸಲು ನಾಶ ಪಡಿಸುತ್ತಿರುವುದಲ್ಲದೆ ವಾಸದ ಮನೆಗಳತ್ತ ಆಗಮಿಸುತ್ತಿವೆ. ಆತಂಕಗೊಂಡಿರುವ ಗ್ರಾಮಸ್ಥರು ಕಾಡಾನೆಗಳನ್ನು ನಿಯಂತ್ರಿಸುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಮಳೆಯ ಅಭಾವದಿಂದ ಕೃಷಿ ಕಾರ್ಯಕ್ಕೆ ಹಿನ್ನಡೆಯಾಗಿದೆ. ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಇದ್ದು, ಕೃಷಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ನಡುವೆಯೇ ಇರುವ ಅಲ್ಪಸ್ವಲ್ಪ ಬೆಳೆಯನ್ನು ಕೂಡ ಕಾಡಾನೆಗಳು ತಿಂದು ತೇಗುತ್ತಿವೆ. ಅಲ್ಲದೆ ಮನೆಯಂಗಳಕ್ಕೆ ಕಾಡಾನೆಗಳ ಹಿಂಡು ಲಗ್ಗೆ ಇಡುತ್ತಿದ್ದು ಭಯದ ವಾತಾವರಣ ಆವರಿಸಿದೆ. ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಆನೆ ಕಂದಕಗಳನ್ನು ಮತ್ತು ಸೋಲಾರ್ ಬೇಲಿಯನ್ನು ನಿರ್ಮಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸುಂಟಿಕೊಪ್ಪ ನ.5 : ಮಾದಾಪುರದ ಎಸ್‌ಜೆಎಂ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಸಂತೆ ಗಮನ ಸೆಳೆಯಿತು. ನಿತ್ಯ ಶಾಲಾ ಆವರಣದಲ್ಲಿ ಪಾಠ ಪ್ರವಚನದಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ಇಂದು ಗ್ರಾಹಕರನ್ನು ತಮ್ಮತ್ತ ಸೆಳೆಯುವ ಪ್ರಯತ್ನದಲ್ಲಿ ತೊಡಗಿಸಿಕೊಂಡು ಸಂಭ್ರಮಿಸಿದರು. ತೋಟಗಳಲ್ಲಿ ಬೆಳೆದ ತರಕಾರಿ, ಸೊಪ್ಪು ಕಾಯಿ ಪಲ್ಯಗಳು, ಆಹಾರ ತಿಂಡಿ ತಿನ್ನಿಸುಗಳು, ಕಾಫಿ, ಟೀ ಸೇರಿದಂತೆ ತಂಪು ಪಾನೀಯಗಳ ವ್ಯಾಪಾರ ಬಲು ಜೋರಾಗಿ ನಡೆಸಿದರು. ಶಾಲಾಡಳಿತ ಮಂಡಳಿಯ ಪ್ರಮುಖರು, ಮುಖ್ಯೋಪಾದ್ಯಾಯರು, ಶಿಕ್ಷಕ, ಶಿಕ್ಷಕಿಯರು, ಪೋಷಕರು ಇದ್ದರು.






