ಲೇಖಕ: admin

ಗೋಣಿಕೊಪ್ಪಲು  ಸೆ.29 :  ಕೊಡಗು ಜಿಲ್ಲೆ ಸೇರಿದಂತೆ ರಾಜ್ಯವೇ ಬರದಿಂದ ತತ್ತರಿಸಿದೆ, ಇಂತಹ ಸಂದರ್ಭದಲ್ಲಿ ಕಾವೇರಿ ನದಿಯ ನೀರು ತಮಿಳುನಾಡಿಗೆ ಬಿಡಲು ಅದೇಶ ಮಾಡಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಲೋಪ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಾನವ ಸರಪಳಿ ನಿರ್ಮಿಸಿ ಗೋಣಿಕೊಪ್ಪಲಿನಲ್ಲಿ ಪ್ರತಿಭಟನೆ ನಡೆಸಿತು. ಕನ್ನಡ ಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ರೈತ ಸಂಘ ತನ್ನ ಬೆಂಬಲ ಸೂಚಿಸಿತು. ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜೈ ಬೋಪಯ್ಯ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಹುಟ್ಟಿದ ಕಾವೇರಿ ನದಿಯು ರಾಜ್ಯದ ಜನತೆಗೆ ನೀರು ಉಣಿಸುತ್ತಿದೆ. ಪರಿಸರ ಅಸಮತೋಲನದಿಂದ ನಿರ್ದಿಷ್ಟ ಪ್ರಮಾಣದಲ್ಲಿ ಮಳೆಯಾಗದೆ ಬರದ ಛಾಯೆ ಕಾಣಿಸಿಕೊಂಡಿದೆ. ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದರು, ತಮಿಳು ನಾಡಿಗೆ ನೀರು ಹರಿಯಬಿಟ್ಟಿದ್ದಾರೆ. ಕಾವೇರಿ ಪ್ರಾಧಿಕಾರದ ಅಧಿಕಾರಿಗಳು ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡಿ ಅವಲೋಕನ ಮಾಡಬೇಕಿತ್ತು.…

Read More

ಮಡಿಕೇರಿ ಸೆ.29 : ರಾಷ್ಟ್ರೀಯ ಹಸಿರು ಪಡೆ, ಇಕೋ ಕ್ಲಬ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಸ್ಕೌಟ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಹಯೋಗದಲ್ಲಿ ಕೊಡಗು ಅರಣ್ಯ ವೃತ್ತದ ವತಿಯಿಂದ 69 ನೇ ವನ್ಯಜೀವಿ ಸಪ್ತಾಹದ ಪ್ರಯುಕ್ತ ಅಕ್ಟೋಬರ್, 02 ರಂದು ಬೆಳಗ್ಗೆ 7 ಗಂಟೆಗೆ ನಗರದ ಅರಣ್ಯ ಭವನದಿಂದ ವೃಕ್ಷೋದ್ಯಾನದವರೆಗೆ ನಡಿಗೆ ಜಾಥ ಮತ್ತು ಸೈಕಲ್ ಜಾಥ ನಡೆಯಲಿದೆ ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.29 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳ ಹಾಗೂ ಸರ್ವೋದಯ ಸಮಿತಿ ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ವರ್ಷಾಚರಣೆ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವು ಅ.2 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ,…

Read More

ಮಡಿಕೇರಿ ಸೆ.29 : ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ “ಆದಮ್ ಕಪ್” ಜಿಲ್ಲಾ ಮಟ್ಟದ ಮುಕ್ತ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು, ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದರು. ಟೇಬಲ್ ಟೆನ್ನಿಸ್ ಅಸೋಸಿಯೇಷನ್‍ನ ಗೌರವಾಧ್ಯಕ್ಷ ಮೊಹಮ್ಮದ್ ಆಸೀಫ್ ಪ್ರಾಸ್ತವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆಯ ಬಗ್ಗೆಯೂ ಹೆಚ್ಚು ಆಸಕ್ತಿ ತೋರಬೇಕು ಎಂದರು. ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಚಕ್ರವರ್ತಿ, ಜನನಿ ಹೆಲ್ತ್ ಕೇರ್ ಸೆಂಟರ್‍ನ ಡಾ.ಎನ್.ಎಸ್.ನವೀನ್ ಹಾಗೂ ಡಾ.ಬಿ.ಕೆ.ರಾಜೇಶ್ವರಿ ಕ್ರೀಡೆಯ ಮಹತ್ವದ ಕುರಿತು ಮಾತನಾಡಿದರು. ಪ್ರಮುಖರಾದ ಸುಧಾ ಶಂಕರಪ್ರಸಾದ್ ಪ್ರಾರ್ಥಿಸಿ, ಆರ್ಥಿಕ ಸಲಹೆಗಾರರಾದ ಗೀತಾ ಗಿರೀಶ್ ನಿರೂಪಿಸಿ, ವಂದಿಸಿದರು.

Read More

ವಿರಾಜಪೇಟೆ ಸೆ.29 : ವಿರಾಜಪೇಟೆ ಐತಿಹಾಸಿಕ ಶ್ರೀ ಗೌರಿ ಗಣೇಶ ವಿಸರ್ಜನೋತ್ಸವು ವಿದ್ಯುತ್ ಅಲಂಕೃತ ಮಂಟಪದ ಶೋಭಾಯಾತ್ರೆಯೊಂದಿಗೆ ಸಂಭ್ರಮದಿಂದ ನಡೆಯಿತು. 22 ಮಂಟಪಗಳು ಗೌರಿ ಗಣೇಶ ಮೂರ್ತಿಗಳನ್ನು ಹೊತ್ತ ಶೋಭಾಯಾತ್ರೆ ನಗರದ ಮುಖ್ಯ ಬೀದಿಯಲ್ಲಿ ಮಳೆಯ ನಡುವೆಯೂ ಮೆರವಣಿಗೆ ನಡೆಸಿ ಪವಿತ್ರ ಗೌರಿ ಕೆರೆಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ವಿಸರ್ಜಿಸಲಾಯಿತು. ಸೆ.19ರಂದು ನಗರದ 22 ಸಮಿತಿಗಳ ಮೂಲಕ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶನಿಗೆ 10 ದಿನಗಳ ಕಾಲ ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆ ಸಲ್ಲಿಸಿ ವಿದ್ಯುತ್ ದೀಪಾಲಂಕೃತ ಹೂವಿನ ಭವ್ಯ ಮಂಟಪದಲ್ಲಿ ವಿಶೇಷ ವಾಧ್ಯಗೋಷ್ಠಿಯೋಂದಿಗೆ ಮಂಟಪಗಳು ಮೆರವಣಿಗೆಯಲ್ಲಿ ಸಾಗಿ ಬಂದವು. ನಗರದ ಶ್ರೀ ಗಣಪತಿ ದೇವಸ್ಥಾನ ಗಡಿಯಾರ ಕಂಬದ ಬಳಿ, ಜೈನರ ಬೀದಿ ಶ್ರೀ ಬಸವೇಶ್ವರ ದೇವಸ್ಥಾನ, ವಿಘ್ನೇಶ್ವರ ಸೇವಾ ಸಮಿತಿ ಅರಸುನಗರ, ವಿನಾಯಕ ಯುವಕ ಭಕ್ತ ಮಂಡಳಿ ಅಂಗಾಳ ಪರಮೇಶ್ವರಿ ದೇವಸ್ಥಾನ, ವಿಜಯ ವಿನಾಯಕ ಉತ್ಸವ ಸಮಿತಿ ದಕ್ಕನಿಮೊಹಲ್ಲಾ, ಕಾವೇರಿ ಗಣೇಶ ಉತ್ಸವ ಸಮಿತಿ ಮೂರ್ನಾಡು ರಸ್ತೆ, ನೇತಾಜಿ ಉತ್ಸವ ಸಮಿತಿ…

Read More

ವಿರಾಜಪೇಟೆ ಸೆ.29 : ನವದೆಹಲಿಯಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರ ಮಟ್ಟದ ಎನ್.ಸಿ.ಸಿ ಶಿಬಿರದ ಆಲ್ ಇಂಡಿಯಾ ತಲ್ ಸೈನಿಕ ಕ್ಯಾಂಪ್ ನಲ್ಲಿ ಹೆಲ್ತ್ ಅಂಡ್ ಹೈಜೀನ್ ವಿಭಾಗದಲ್ಲಿ ವಿರಾಜಪೇಟೆಯ ಎಂ.ಡಿ.ಆಯುಷ್ ಚಿನ್ನದ ಪದಕ ಪಡೆದಿದ್ದಾರೆ. ಇವರು ಕರ್ನಾಟಕ ಮತ್ತು ಗೋವಾ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದಾರೆ. ಪ್ರಸ್ತುತ ಆಯುಷ್ ದಿ ನೇಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್, ಮೈಸೂರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದು, 1 ಕಾರ್ ಆರ್ಮಿ ಆರ್ಟಿ ಬ್ಯಾಟರಿಯಲ್ಲಿ ಸರ್ಜಿಯಾಂಟ್ ಆಗಿದ್ದಾರೆ. ಇವರು ವಿರಾಜಪೇಟೆಯ ಡಾ. ಸುಪ್ರೀತ ಹಾಗೂ ಡಾ.ದೀಪಕ್ ದಂಪತಿಯ ಪುತ್ರ.

Read More

ಮಡಿಕೇರಿ ಸೆ.29 : ಕೊಡಗಿನ ಸಾಹಿತಿ, ನಿರ್ಮಾಪಕಿ, ಸಹ ನಿರ್ದೇಶಕಿ, ಹಾಗೂ ನಟಿ ಈರಮಂಡ ಹರಿಣಿ ವಿಜಯ್ ಅವರಿಗೆ ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ. ಈರಮಂಡ ಹರಿಣಿ ವಿಜಯ್ ಅವರ ಸಿನಿಮಾ, ಸಾಹಿತ್ಯ, ಕಲಾ ಸೇವೆ ಯನ್ನು ಪರಿಗಣಿಸಿ ಮೈಸೂರಿನ ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ವತಿಯಿಂದ ಪ್ರಶಸ್ತಿ ನೀಡಲಾಯಿತು. ಮೈಸೂರು ಪುರಭವನದಲ್ಲಿ ನಡೆದ ಸಾಂಸ್ಕೃತಿಕ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೇಲುಕೋಟೆಯ ವಂಗೀಪುರ ನಂಬಿಮಠದ ಶ್ರೀ ಇಲೈ ಆಳ್ವಾರ್ ಸ್ವಾಮೀಜಿ, ಬೆಂಗಳೂರು ಮಹಾಲಕ್ಷ್ಮಿಪುರಂ ನ ಡಾ.ಶ್ರೀ ರಾಜಶೇಖರ್ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ರಾಜ್ಯಾಧ್ಯಕ್ಷ ಡಾ. ಕಸ್ತೂರಿ ಚಂದ್ರು, ಉದ್ಯಮಿ ಹಾಗೂ ಸಮಾಜ ಸೇವಕ ಡಾ.ಸೀತಾರಾಮೇಗೌಡ, ವಿಪ್ರ ಮುಖಂಡರು ಹಾಗೂ ಸಮಾಜ ಸೇವಕ ಡಾ.ರಘು ರಾಮ್ ವಾಜಪೇಯಿ ಅವರು ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು. ಈ ಸಂದರ್ಭ ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮಾಜಿ ಶಾಸಕ ಮಾರುತಿ ರಾವ್ ಪವಾರ್, ಕರ್ನಾಟಕ ಸಾಂಸ್ಕೃತಿಕ…

Read More

ಮಡಿಕೇರಿ ಸೆ.29 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ನೂತನ ಯೋಜನಾ ಕಛೇರಿಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್.ಮಂಜುನಾಥ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು 2018-19 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೊಂದ ಸಾವಿರಾರು ಕುಟುಂಬಗಳ ನೆರವಿಗೆ ಬಂದು ಪರಿಹಾರ ಧನ ಒದಗಿಸಿದೆ. ಬ್ಯಾಂಕಿನಿಂದ ಪಡೆದ ಸಾಲ ಮರುಪಾವತಿಗೆ ತೊಂದರೆಯಾದ ಕುಟುಂಬಗಳಿಗೆ ನೆರವು ನೀಡಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರು ಬ್ಯಾಂಕಿನ ವ್ಯವಹಾರವನ್ನು ಉತ್ತಮ ರೀತಿಯಲ್ಲಿ ಮಾಡಿಕೊಂಡು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದರು. ಯೋಜನೆಯಲ್ಲಿ ಪಾಲುದಾರ ಕುಟುಂಬಗಳಿಗೆ ಪ್ರಗತಿ ರಕ್ಷಾ ಕವಚ ವಿಮೆ, ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ, ಮೈಕ್ರೋ ಬಚತ್ ವಿಮೆ, ಭೀಮಾ ಜ್ಯೋತಿ ವಿಮೆ ಮುಂತಾದ ಕಾರ್ಯಕ್ರಮಗಳ ಮೂಲಕ ನೆರವಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಅನುದಾನ ವಿತರಿಸಲಾಯಿತು. ಐಡಿಬಿಐ ಬ್ಯಾಂಕ್ ವ್ಯವಸ್ಥಾಪಕ ಮಿಥುನ್…

Read More

ಬೆಂಗಳೂರು ಸೆ.29 : ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ( ಕ್ರಿಕೆಟ್ ಫಾರ್ ಬ್ಲೈಂಡ್ ) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು (Cricket News) ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು. ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ.ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು. ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ…

Read More

ಮಡಿಕೇರಿ ಸೆ.29 : ನಲ್ವತ್ತೋಕ್ಲು ಚೋಕಂಡಳ್ಳಿ ಕಂದೂರಿ ಹಜ್ರತ್ ಮುಹಮ್ಮದ್ ಪೈಗಂಬರ ಮುಹಜ್ಜಿ ಸತ್ತಿನೊಂದಿಗೆ ಪ್ರಸಿದ್ಧಿ ಹೊಂದಿರುವ ಈದ್ ಮಿಲಾದ್ ಕಂದೂರಿ ಈ ಬಾರಿ ಅ.7 ಮತ್ತು 8 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಈದ್ ಮಿಲಾದ್ ಸಂರಕ್ಷಣ ಸಮಿತಿ ಕಾರ್ಯದರ್ಶಿ ಪಿ.ಎ.ಸಿರಾಜುದ್ದೀನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.7 ರಂದು ಅಸರ್ ನಮಾಜಿನ ಬಳಿಕ ಈದ್ ಮಿಲಾದ್ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಎಂ.ರಫಿ ಧ್ವಜಾರೋಹಣದ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಸಂಜೆ 7 ಗಂಟೆಗೆ ಇಶಾಹತುಸುನ್ನ ಸ್ಟೂಡೆಂಟ್ ಅಸೋಸಿಯೇಷನ್ ವತಿಯಿಂದ ಬುರ್ದ ಆಲಾಪನೆ ನಡೆಯಲಿದ್ದು, ರಾತ್ರಿ 8 ಗಂಟೆಗೆ ನಡೆಯಲಿರುವ ಮತ ಪ್ರವಚನ ಕಾರ್ಯಕ್ರಮವನ್ನು ಜನಾಬ್ ಸೈಯದ್ ಮಹದಿ ತಂಗಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಪ್ರಭಾಷಣಕಾರರಾಗಿ ಜನಾಬ್ ಮುಳ್ಳೂರ್‍ಕರ ಮುಹಮ್ಮದಲಿ ಸಖಾಫಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಅ.8 ರಂದು ಬೆಳಿಗ್ಗೆ 5 ಗಂಟೆಗೆ ಮೌಲಿದ್ ಪಾರಾಯಣ ನಡೆಯಲಿದ್ದು, ರಿಫಾಯಿ ರಾತೀಬ್ ಸಂಘದವರಿಂದ ಮನೆಗಳಿಗೆ ಸಂದರ್ಶನ, 10…

Read More