ಮಡಿಕೇರಿ ನ.4 : ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್‍ಸಿ, ಎನ್‍ಐಟಿ, ಐಐಎಸ್‍ಇಆರ್, ಎಐಐಎಂಎಸ್, ಎನ್‍ಎಲ್‍ಯು, ಐಎನ್‍ಐ ಮತ್ತು ಐಯುಎಸ್‍ಎಲ್‍ಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ ಅವಧಿಯಲ್ಲಿ ಒಂದು ಬಾರಿ ತಲಾ ಎರಡು ಲಕ್ಷಗಳ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನ ಆಜಾದ್ ಭವನ ಎಫ್‍ಎಂಸಿ ಕಾಲೇಜು ಹತ್ತಿರ ಮಡಿಕೇರಿ ಇವರನ್ನು ಹಾಗೂ ದೂರವಾಣಿ ಸಂಖ್ಯೆ08272225528 ಹಾಗೂ 08272220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ನ.4 : ಪ್ರಸಕ್ತ(2023-24) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೋಷಕರ ವಾರ್ಷಿಕ ಆದಾಯ ರೂ.6 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್‍ಗೆ ಗರಿಷ್ಠ ರೂ.20 ಲಕ್ಷ ಹಾಗೂ ರೂ.6 ಲಕ್ಷದಿಂದ ರೂ.15 ಲಕ್ಷಗಳ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸ್‍ಗೆ ರೂ.10 ಲಕ್ಷ ಗರಿಷ್ಠ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. ಇಲಾಖಾ ವೆಬ್‍ಸೈಟ್ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕಚೇರಿಯನ್ನು ಹಾಗೂ ದೂ.ಸಂ.08272-225528 ಹಾಗೂ ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.
ಮಡಿಕೇರಿ ನ.4 : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ದಕ್ಷಿಣ ಪ್ರಾಂತ, ಮಡಿಕೇರಿ ವಿಭಾಗ ಹಾಗೂ ಮಡಿಕೇರಿ ಸೇವಾ ಭಾರತೀ ಸಂಯುಕ್ತ ಆಶ್ರಯದಲ್ಲಿ ನ.5 ರಂದು “ಕಾವೇರಿ ಸ್ವಾಸ್ಥ್ಯ ಸೇವಾಯಾತ್ರಾ” ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ವಾಲ್ನೂರು ಬಾಳೆಗುಂಡಿ ಗಿರಿಜನ ಕಾಲೋನಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ 1 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ತಪಾಸಣೆ, ಬಿಎಂಐ, ಪೌಷ್ಟಿಕಾಂಶದ ಮೌಲ್ಯ ಮಾಪನ, ಉಚಿತ ಔಷಧಿಗಳು, ಆರೋಗ್ಯ ಶಿಕ್ಷಣ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಶಿಬಿರ ಆಯೋಜಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಡಾ.ಹೆಚ್.ಜಿ.ಶ್ರೀಕಾಂತ್-99809 32300, ಡಾ.ಎಸ್.ಮಂಜುನಾಥ್-95916 79559 ಸಂಪರ್ಕಿಸಬಹುದಾಗಿದೆ.
ವಿರಾಜಪೇಟೆ ನ.4 : ರಾಜ್ಯ ಸರಕಾರ ಕನ್ನಡ ಭಾಷೆ ಏಳಿಗೆಗಾಗಿ ದುಡಿಯುವ ಕೆಲಸ ನಿರಂತರವಾಗಿ ಮಾಡುತ್ತಿದೆ. ಕನ್ನಡ ಭಾಷೆಯ ರಕ್ಷಣೆಯಾದರೆ ಮಾತ್ರ ಕರ್ನಾಟಕ ರಾಜ್ಯವನ್ನು ಉಳಿಸಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ಕರ್ನಾಟಕ ಸಂಘದ ವತಿಯಿಂದ ವಿರಾಜಪೇಟೆ ಪುರಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ್ದ ಸ್ವರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕನ್ನಡ ಬೆಳವಣಿಗೆಯಲ್ಲಿ ಕೊಡಗಿನ ಜನರ ಮಹತ್ವದ ಕೊಡುಗೆ ಇದೆ. ಸಾಹಿತ್ಯ, ಸಂಸ್ಕೃತಿ, ಭಾಷೆಯಲ್ಲಿ ಕನ್ನಡಕ್ಕೆ ಅವರು ಆದ್ಯತೆ ನೀಡಿದ್ದಾರೆ. ಕನ್ನಡ ನಾಡಿನ ಐತಿಹ್ಯವನ್ನು ಉನ್ನತವಾಗಿ ಬೆಳೆಸಬೇಕು ಹಾಗೂ ಈ ಐತಿಹ್ಯವನ್ನು ಎಲ್ಲಾರಿಗೆ ಸಾರುವ ಕೆಲಸ ಆಗಬೇಕು. ಕನ್ನಡ ವಿಜಯನಗರ ರಾಜರ ಕಾಲದಿಂದಲೂ ವಿಜೃಂಭಿಸುತ್ತ ಬಂದಿದೆ. ಇದನ್ನು ಇಂದಿನ ಯುವ ಜನಾಂಗದಿಂದ ಮುಂದಿನ ಪೀಳಿಗೆಯವರಗೆ ಉಳಿಸಿ ಬೆಳೆಸುವ ಕೆಲಸ ಆಗಬೇಕು. ಸಿದ್ದರಾಮಯ್ಯ ಸರಕಾರ ಕನ್ನಡಕ್ಕೆ ಹೆಚ್ಚಿನ ಒತ್ತು ನೀಡಿದ್ದು ಇದಕ್ಕೆ ಈ ಬಾರಿಯ ಕನ್ನಡ…
ವಿರಾಜಪೇಟೆ ನ.4 : ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿರಾಜಪೇಟೆ ಕಾವೇರಿ ಪದವಿ ಕಾಲೇಜು ಕನ್ನಡ ಉಪನ್ಯಾಸಕ ಬಿ.ಬಿ.ಸುನೀಲ್ ಮಾತನಾಡಿ, ಕನ್ನಡ ಭಾಷೆಯು ಇತರ ಭಾಷೆಗಳಿಗಿಂತ ವಿಭಿನ್ನವಾಗಿದ್ದು, ವೈಶಿಷ್ಟ್ಯಪೂರ್ಣವಾಗಿದೆ. ಅನೇಕ ಶ್ರೇಷ್ಠ ಗ್ರಂಥಗಳು ಪ್ರಕಟಗೊಂಡಿದ್ದು, ಭಾರತೀಯ ಭಾಷೆಗಳಲ್ಲಿ ಎಂಟು ಜ್ಞಾನಪೀಠ ತನ್ನದಾಗಿಸಿಕೊಂಡಿದೆ. ವಿವಿಧ ಕಾಲಘಟ್ಟದಲ್ಲಿ ಕವಿಪುಂಗವರು ನೀಡಿದ ಕೊಡುಗೆಯಿಂದಾಗಿ ಕನ್ನಡದ ಸ್ಥಾನಮಾನ ಜಾಗತಿಕ ಮಟ್ಟದಲ್ಲಿ ಖ್ಯಾತಿಗಳಿಸಿದೆ. ಕನ್ನಡದ ಸಾಹಿತ್ಯ ಪ್ರಕಾರಗಳು, ನಮಗೆ ಈವರೆಗೆ ಲಭ್ಯವಾಗಿರುವ ಶಾಸನಗಳು, ಸಂಶೋಧನಾ ಕಾರ್ಯದಿಂದ ದೊರೆತ ಮಾಹಿತಿಗಳು ಭಾಷೆಯ ಹಿರಿಮೆಯನ್ನು ಸಾರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಐ.ಎಂ.ದಿಲನ್, ‘ಕರ್ನಾಟಕ’ ಎಂಬ ಹೆಸರಿನ ಮರುನಾಮಕರಣಗೊಂಡ ಸುವರ್ಣ ವರ್ಷದ ಈ ಸಂದರ್ಭಕ್ಕೆ ಸಾಕ್ಷಿಯಾದ ನಾವೇ ಧನ್ಯರು ಎಂದರು. ಭಾಷಾ ವಿಷಯದಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಕನ್ನಡ ಉಪನ್ಯಾಸಕ ಬಿ.ಇ.ಪ್ರದೀಪ್, ಗಣಕ ವಿಜ್ಞಾನ ಉಪನ್ಯಾಸಕಿ ಮಹೇಶ್ವರಿ ಇದ್ದರು.…
ವಿರಾಜಪೇಟೆ ನ.4 : ಓದುವ ಹವ್ಯಾಸವು ಬದುಕನ್ನು ಸುಂದರಗೊಳಿಸುತ್ತದೆ ಎಂದು ಮಡಿಕೇರಿಯ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ನಿರಂತರವಾಗಿ ಕಠಿಣ ಪರಿಶ್ರಮದಿಂದ ಅಭ್ಯಸಿಸಬೇಕು. ಕಾಲೇಜಿನಲ್ಲಿ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಸದಾ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು ಎಂದರು. ವಿದ್ಯಾರ್ಥಿಗಳ ಸೂಪ್ತ ಪ್ರತಿಭೆಯನ್ನು ಹೊರ ತೆಗುಯುವುದೇ ಕಾಲೇಜಿನ ಉದ್ದೇಶವಾಗಿರುತ್ತದೆ. ವಿದ್ಯಾರ್ಥಿಗಳು ಅಂಕಗಳನ್ನು ಪಡೆಯುದರ ಜೊತೆಗೆ ನೆಲ, ಜಲ, ಭಾಷೆ ಸಂಸ್ಕೃತಿ ಯನ್ನು ಉಳಿಸಿ ಬೆಳೆಸಬೇಕು. ಎಲ್ಲರೂ ಸಮಾನರೆಂಬ ಭಾವನೆ ಹೊಂದಬೇಕು ಎಂದು ತಿಳಿಸಿದರು. ಕರ್ನಾಟಕ ಭಾಷಾ ಅಲ್ಪ ಸಂಖ್ಯಾತರ ಒಕ್ಕೂಟದ ಅಧ್ಯಕ್ಷ ಪ್ರತೀಕ್ ಪೊನ್ನಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಕೌಶಲ್ಯ ಶಿಕ್ಷಣ ಅಗತ್ಯ ಎಂದ ಅವರು, ಯುವಕರು ರಾಷ್ಟ್ರದ ಏಳಿಗೆಗಾಗಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ,…
ಗೋಣಿಕೊಪ್ಪ ನ.4 : ಅಂಕಗಳು ಒದಿಗಷ್ಟೆ ಸಿಮಿತವಾಗದೆ ಮನೋ ನೆಮ್ಮದಿ, ಮನೋ ಧೃಡತೆ ಸಿಗುವ ಹವ್ಯಾಸವನ್ನು ಬೆಳೆಸಿಕೊಂಡಗ ಸಂಭ್ರಮ, ಸಂತೋಷದ ಜೀವನ ನಡೆಸಬಹುದು ಎಂದು ಕವಿ, ಸಾಹಿತಿ ಜಗದೀಶ್ ಜೋಡುಬೀಟಿ ತಿಳಿಸಿದರು. ಅರುವತ್ತೊಕ್ಲು ಸರ್ವದೈವತಾ ಇಂಗ್ಲಿಷ್ ಮಾದ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಅಂತರ್ ಶಾಲೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತನ್ನ ಆತ್ಮಶಕ್ತಿಯನ್ನು ಅರಿತುಕೊಳ್ಳಲಾಗದಷ್ಟು ನಿಶಕ್ತಿಯಾಗಿದ್ದಾನೆ. ಕೇವಲ ಪರೀಕ್ಷೆಗಳಿಗಾಗಿ ತೊಡಗಿಸಿಕೊಳ್ಳುವ ಅಂಕದ ಓದಿನಿಂದ ಈ ವ್ಯವಸ್ಥೆಯೆಂದು ರೂಪಗೊಳ್ಳುತ್ತಿದೆ. ಹೀಗಾಗಿ ಉನ್ನತ ಪದವಿ ಶಿಕ್ಷಣವನ್ನು ಪಡೆದುಕೊಂಡಿದ್ದರೂ ಆತ್ಮಹತ್ಯೆಗೆ ಶರಣಾಗುವುದನ್ನು ಕಾಣುತ್ತಿದ್ದೇವೆ. ಓದುವ ಹವ್ಯಾಸದ ಜತೆಗೆ ಕ್ರೀಡೆ, ಸಂಸ್ಕೃತಿ, ಸಾಹಿತ್ಯ ಇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಬದುಕಲು ಬೇಕಾದ ದೃಢತೆಯನ್ನು ಕಲ್ಪಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಅಡಕವಾಗಿರುತ್ತದೆ. ಅದನ್ನು ಹೊರಗೆಡವಲು ಉತ್ತಮ ವೇದಿಕೆ ಅವಶ್ಯಕತೆ ಇದೆ. ಅಂತಹ ವೇದಿಕೆಯನ್ನು ಅರುವತ್ತೂಕ್ಲು ಸರ್ವದೈವತ ಶಾಲೆ ಸೃಷ್ಟಿಸುತ್ತಿದೆ. ಜಾತ್ಯತೀತವಾಗಿ ನಿಂತು ಅಕ್ಷರ ಬಿತ್ತುವುದರ ಜತೆಗೆ…
ಬೆಂಗಳೂರು ನ.4 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಡಾ.ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎನ್.ಬೋಸರಾಜು, ಸಿ.ಎಂ.ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು ಸೇರಿದಂತೆ ಮತ್ತಿತರರು ಇದ್ದರು.
ಮಡಿಕೇರಿ ನ.4 : ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಪ್ರತೀ ತಿಂಗಳಿಗೆ 500 ಯೂನಿಟ್ ರಕ್ತದ ಅಗತ್ಯವಿದ್ದು, ಹೀಗಾಗಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಜಿಲ್ಲೆಯಲ್ಲಿ ಅಗತ್ಯ ಇರುವವರಿಗೆ ರಕ್ತದ ಕೊರತೆ ಉಂಟಾಗದಂತೆ ಗಮನ ಹರಿಸಬೇಕು ಎಂದು ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಸಿ.ಕರುಂಬಯ್ಯ ಹೇಳಿದ್ದಾರೆ. ಮಡಿಕೇರಿ ಸಕಾ೯ರಿ ಪ್ರಥಮ ದಜೆ೯ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಘ, ಮಡಿಕೇರಿಯ ಭೋದಕ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಕೊಡಗು ಘಟಕಧ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು. ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೆಂಪು ರಕ್ತಕಣಗಳ ಅಗತ್ಯತೆ ಹಿಂದೆಂದಿಗಿಂತ ಹೆಚ್ಚಾಗಿದೆ. ಅಂತೆಯೇ ಪ್ರಸವ ಸಂದಭ೯ದಲ್ಲಿಯೂ ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ರಕ್ತದ ಬೇಡಿಕೆ ಕಂಡುಬರುತ್ತಿದೆ. ಪ್ರಸ್ತುತ ರಕ್ತನಿಧಿ ಕೇಂದ್ರದಲ್ಲಿ 200 ಯೂನಿಟ್ ಗಳಷ್ಟು ರಕ್ತ ಲಭ್ಯವಿದೆಯಾದರೂ ತುತು೯ ಸಂದಭ೯ದಲ್ಲಿ ರೋಗಿಗಳಿಗೆ ನೀಡಲು ರಕ್ತದ ಸಂಗ್ರಹ ಮತ್ತಷ್ಟು ಪ್ರಮಾಣದಲ್ಲಿ…
ಪುತ್ತೂರು ನ.4 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು.ಎಸ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು SIT ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ನವೆಂಬರ್ 9 ರಿಂದ 12 ರವರೆಗೆ ಆಂಧ್ರಪ್ರದೇಶ ಕಾಕಿನಾಡದ ಜವಾಹರ್‌ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸುರಂಪಲೆಮ್ ಆದಿತ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ದಕ್ಷಿಣವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರಫುಲ್ ಪ್ರತಿನಿಧಿಸಲಿದ್ದಾರೆ. ಸತತ ಎರಡನೇ ಬಾರಿ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.






